Just In
Don't Miss!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- News
ಭಾರತದಲ್ಲಿ ಬೇಕಾದಷ್ಟು ಲಸಿಕೆಯಿದೆ, ಆದರೆ... ಸಮಸ್ಯೆ ಬೇರೆಯೇ ಆಗಿದೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಟ್ಯುಸಾನ್ ಫೇಸ್‌ಲಿಫ್ಟ್ ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ ಹ್ಯುಂಡೈ
ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಹೈ ಎಂಡ್ ಕಾರು ಮಾದರಿಯಾದ ಟ್ಯುಸಾನ್ ಫೇಸ್‌ಲಿಫ್ಟ್ ಮಾದರಿಯನ್ನು 2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಳಿಸುವ ಮೂಲಕ ಜುಲೈನಲ್ಲಿ ಮಾರುಕಟ್ಟೆಗೆ ಪರಿಚಯಿಸಿತ್ತು. ಇದೀಗ ಹೊಸ ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ್ದು, ಜಾಹೀರಾತಿನಲ್ಲಿ ನಟ ರಣದೀಪ್ ಹೂಡಾ ಕಾಣಿಸಿಕೊಂಡಿದ್ದಾರೆ.

ಟ್ಯುಸಾನ್ ಫೇಸ್‌ಲಿಫ್ಟ್ ಹೊಸ ಎಸ್‌ಯುವಿ ಕಾರು ಮಾದರಿಯು ದುಬಾರಿ ಬೆಲೆಯೊಂದಿಗೆ ಹಲವಾರು ಸುಧಾರಿತ ತಂತ್ರಜ್ಞಾನ ಸೌಲಭ್ಯಗಳ ಪ್ರೇರಣೆ ಹೊಂದಿದ್ದು, ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಮೂರು ವೆರಿಯೆಂಟ್‌ಗಳಲ್ಲಿ ಬಿಡುಗಡೆ ಮಾಡಲಾಗಿದೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ.22.30 ಲಕ್ಷ ಬೆಲೆ ಹೊಂದಿದ್ದು, ಟ್ಯುಸಾನ್ ಕಾರು ಮಾದರಿಯು ಭಾರತದಲ್ಲಿ ಮಾರಾಟವಾಗುತ್ತಿರುವ ಹ್ಯುಂಡೈ ನಿರ್ಮಾಣದ ಹೈ ಎಂಡ್ ಆವೃತ್ತಿಯಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಎರಡು ಆವೃತ್ತಿಗಳಲ್ಲೂ ಲಭ್ಯವಿರುವ ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಜಿಎಲ್(ಒ), ಜಿಎಲ್ಎಸ್ ಮತ್ತು ಜಿಎಲ್ಎಸ್ 4ಡಬ್ಲ್ಯುಡಿ ವೆರಿಯೆಂಟ್‌ಗಳಲ್ಲಿ ಖರೀದಿ ಲಭ್ಯವಿದ್ದು, ಟಾಪ್ ಎಂಡ್ ವೆರಿಯೆಂಟ್‌ನಲ್ಲಿ ಮಾತ್ರ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದೆ.

ಇನ್ನುಳಿದ ಎರಡು ಆರಂಭಿಕ ವೆರಿಯೆಂಟ್‌ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎರಡು ಆಯ್ಕೆಗಳು ಲಭ್ಯವಿದ್ದು, ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿನೂತನ ತಾಂತ್ರಿಕ ಸೌಲಭ್ಯಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್
ಹೊಸ ಟ್ಯುಸಾನ್ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 2.0-ಲೀಟರ್ ಪೆಟ್ರೋಲ್ ಮತ್ತು 2.0-ಲೀಟರ್ ಡೀಸೆಲ್ ಎಂಜಿನ್ ನೀಡಲಾಗಿದ್ದು, ಪೆಟ್ರೋಲ್ ಮಾದರಿಯು 150-ಬಿಎಚ್‌ಪಿ, 192-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ ಡೀಸೆಲ್ ಮಾದರಿಯು 180-ಬಿಎಚ್‌ಪಿ, 400-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
ಹೊಸ ಕಾರಿನಲ್ಲಿ ಸ್ಟ್ಯಾಂಡರ್ಡ್ ಆಗಿ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ನೀಡಲಾಗಿದ್ದು, ಹೊಸದಾಗಿ ಪರಿಚಯಿಸಲಾಗಿರುವ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ದ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹ್ಯುಂಡೈ ಪ್ರೀಮಿಯಂ ಎಸ್‌ಯುವಿ ಕಾರಿನಲ್ಲಿ ಹೊಸದಾಗಿ ವಿನ್ಯಾಸಗೊಳಿಸಲಾದ ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ಎಸ್, ಬಲಿಷ್ಠ ನೋಟ ಹೊಂದಿರುವ ಕಾಸ್‌ಕ್ಯಾಡಿಂಗ್ ಫ್ರಂಟ್ ಗ್ರಿಲ್, ಹೊಸ ವಿನ್ಯಾಸದ ಫ್ರಂಟ್ ಅಂಡ್ ರಿಯರ್ ಬಂಪರ್, 18-ಇಂಚಿನ ಅಲಾಯ್ ವೀಲ್ಹ್, ಎಲ್ಇಡಿ ಟೈಲ್‌ಲೈಟ್, ನಂಬರ್ ಪ್ಲೇಟ್ ಹೌಸಿಂಗ್, ಸಿಲ್ವರ್ ಸ್ಕಫ್ ಪ್ಲೇಟ್, ರೈನ್ ಸೆನ್ಸಿಂಗ್ ವೈಫರ್ ಮತ್ತು ಟ್ವಿನ್ ಎಕ್ಸಾಸ್ಟ್ ಟಿಪ್ಸ್ ಪ್ರಮುಖ ಆಕರ್ಷಣೆಯಾಗಿದೆ.

ಹೊಸ ಕಾರಿನ ಒಳಭಾಗದಲ್ಲೂ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಲಾಗಿದ್ದು, ಮಡಿಕೆ ಮಾಡಬಹುದಾದ ಇನ್ಪೋಟೈನ್‌ಮೆಂಟ್ ಸಿಸ್ಟಂ, ಹೊಸ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 33 ಫೀಚರ್ಸ್‌ಗಳನ್ನು ಒಳಗೊಂಡ ಬ್ಲ್ಯೂ ಲಿಂಕ್ ಟೆಕ್ನಾಲಜಿಯು ಹೊಸ ಕಾರಿನ ಪ್ರಮುಖ ಆಕರ್ಷಣೆಯಾಗಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಅಂಡ್ರಾಯಿಡ್ ಆಟೋ ಮತ್ತು ಕಾರ್‌ಪ್ಲೇ ಮೂಲಕ ನಿಯಂತ್ರಣ ಮಾಡಬಹುದಾದ ಬ್ಲ್ಯೂ ಲಿಂಕ್ ತಂತ್ರಜ್ಞಾನವು ಹೊಸ ಕಾರಿಗೆ ಹೆಚ್ಚಿನ ಮಟ್ಟದ ಸುರಕ್ಷತೆ ನೀಡಲಿದ್ದು, ಇನ್ನುಳಿದಂತೆ ಹೊಸ ಕಾರಿನಲ್ಲಿ ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, ಸ್ಟೀರಿಂಗ್ ಮೌಟೆಂಡ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕ ಮತ್ತು ಪ್ರಯಾಣಿಕರ ಆಸನಗಳು, ರಿಮೋಟ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ಹಲವಾರು ಸುರಕ್ಷಾ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.