ಲಾಕ್‌ಡೌನ್ ಸಂಕಷ್ಟದಲ್ಲೂ 26,820 ಕಾರುಗಳನ್ನು ಮಾರಾಟ ಮಾಡಿದ ಹ್ಯುಂಡೈ

ಲಾಕ್‌ಡೌನ್‌ನಿಂದಾಗಿ ಬಹುತೇಕ ವಾಣಿಜ್ಯ ಚಟುವಟಿಕೆಗಳು ಹಿನ್ನಡೆ ಅನುಭವಿಸಿದ್ದು, ಲಾಕ್‌ಡೌನ್ ಸಡಿಲಿಕೆ ನಂತರವು ಆರ್ಥಿಕ ಸಂಕಷ್ಟ ತೀವ್ರಗೊಳ್ಳುತ್ತಿದೆ. ಇದರಿಂದ ಆಟೋ ಕಂಪನಿಗಳು ಸಹ ಭಾರೀ ನಷ್ಟ ಅನುಭವಿಸಿದ್ದು, ಹ್ಯುಂಡೈ ಕಾರು ಮಾರಾಟ ಸಾಕಷ್ಟು ಇಳಿಕೆ ಕಂಡುಬಂದಿದೆ.

ಲಾಕ್‌ಡೌನ್ ಸಂಕಷ್ಟದಲ್ಲೂ 21,320 ಕಾರುಗಳನ್ನು ಮಾರಾಟ ಮಾಡಿದ ಹ್ಯುಂಡೈ

ಲಾಕ್‌ಡೌನ್ ಸಡಿಲಿಕೆ ನಂತರ ಹೊಸ ಸುರಕ್ಷಾ ಕ್ರಮಗಳೊಂದಿಗೆ ವಾಹನ ಉತ್ಪಾದನೆ ಮತ್ತು ಮಾರಾಟವನ್ನು ಪುನಾರಂಭಿಸಿರುವ ಆಟೋ ಕಂಪನಿಗಳು ವೈರಸ್ ಹರಡದಂತೆ ಹಲವು ಕಠಿಣ ಕ್ರಮಗಳೊಂದಿಗೆ ವ್ಯಾಪಾರ ವಹಿವಾಟು ನಡೆಸುತ್ತಿದ್ದು, ಹ್ಯುಂಡೈ ಕಂಪನಿಯು ಕೂಡಾ ಸಂಕಷ್ಟ ಸಮಯದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಲಾಕ್‌ಡೌನ್ ಸಂಕಷ್ಟದಲ್ಲೂ 21,320 ಕಾರುಗಳನ್ನು ಮಾರಾಟ ಮಾಡಿದ ಹ್ಯುಂಡೈ

ಕರೋನಾ ವೈರಸ್ ಹರಡುವುದಕ್ಕೂ ಮುನ್ನ ಇದ್ದ ಕಾರು ಮಾರಾಟ ಪ್ರಮಾಣಕ್ಕೂ ಈಗಿನ ಕಾರು ಮಾರಾಟ ಪ್ರಮಾಣಕ್ಕೂ ಹೋಲಿಕೆ ಮಾಡಿದ್ದಲ್ಲಿ ಇದು ತೀವ್ರವಾದ ಹಿನ್ನಡೆಯಾಗಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಇತರೆ ಕಾರುಗಳ ಕಂಪನಿಗಳಿಂತಲೂ ಹ್ಯುಂಡೈ ಉತ್ತಮ ವ್ಯಾಪಾರ ವಹಿವಾಟು ನಡೆಸಿದೆ.

ಲಾಕ್‌ಡೌನ್ ಸಂಕಷ್ಟದಲ್ಲೂ 21,320 ಕಾರುಗಳನ್ನು ಮಾರಾಟ ಮಾಡಿದ ಹ್ಯುಂಡೈ

ಹ್ಯುಂಡೈ ಕಂಪನಿಯು ಲಾಕ್‌ಡೌನ್ ಸಡಿಲಿಕೆ ನಂತರ ಮೇ ಅವಧಿಯಲ್ಲಿ 12 ಸಾವಿರ ಕಾರುಗಳನ್ನು ಮಾರಾಟ ಮಾಡಿದ್ದು, ಇದೀಗ ಜೂನ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಒಟ್ಟು 26,820 ಕಾರುಗಳನ್ನು ಮಾರಾಟ ಮೂಲಕ ಮುಂಚೂಣಿಯಲ್ಲಿದೆ.

ಲಾಕ್‌ಡೌನ್ ಸಂಕಷ್ಟದಲ್ಲೂ 21,320 ಕಾರುಗಳನ್ನು ಮಾರಾಟ ಮಾಡಿದ ಹ್ಯುಂಡೈ

ಹ್ಯುಂಡೈ ಕಾರುಗಳ ಮಾರಾಟ ಪೈಕಿ ನ್ಯೂ ಜನರೇಷನ್ ಕ್ರೆಟಾ ಖರೀದಿಗೆ ಹೆಚ್ಚು ಬೇಡಿಕೆಯಿದ್ದು, ತದನಂತರ ಸ್ಥಾನದಲ್ಲಿ ವೆನ್ಯೂ ಮತ್ತು ಗ್ರಾಂಡ್ ಐ10 ನಿಯೋಸ್ ಕಾರುಗಳು ಹೆಚ್ಚು ಬೇಡಿಕೆ ಪಡೆದುಕೊಂಡಿವೆ. ಕ್ರೆಟಾ ಕಾರು ಲಾಕ್‌ಡೌನ್ ಸಂಕಷ್ಟದಲ್ಲೂ ಹೊಸ ಕಾರು ಭರ್ಜರಿ ಬೇಡಿಕೆ ಪಡೆದುಕೊಂಡಿರುವುದು ಹ್ಯುಂಡೈ ಕಂಪನಿಗೆ ನೀರಿಕ್ಷೆಗೂ ಮೀರಿ ಲಾಭ ತಂದುಕೊಟ್ಟಿದೆ.

ಲಾಕ್‌ಡೌನ್ ಸಂಕಷ್ಟದಲ್ಲೂ 21,320 ಕಾರುಗಳನ್ನು ಮಾರಾಟ ಮಾಡಿದ ಹ್ಯುಂಡೈ

ಹೊಸ ಕ್ರೆಟಾ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ. 9.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಟಾಪ್ ಎಂಡ್ ಮಾದರಿಯು ರೂ. 17.20 ಲಕ್ಷ ಬೆಲೆ ಪಡೆದುಕೊಳ್ಳುವ ಮೂಲಕ ಕಿಯಾ ಸೆಲ್ಟೊಸ್‌ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸಿದೆ.

ಲಾಕ್‌ಡೌನ್ ಸಂಕಷ್ಟದಲ್ಲೂ 21,320 ಕಾರುಗಳನ್ನು ಮಾರಾಟ ಮಾಡಿದ ಹ್ಯುಂಡೈ

ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಲಾಕ್‌ಡೌನ್ ಸಂಕಷ್ಟದಲ್ಲೂ 21,320 ಕಾರುಗಳನ್ನು ಮಾರಾಟ ಮಾಡಿದ ಹ್ಯುಂಡೈ

ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.

ಲಾಕ್‌ಡೌನ್ ಸಂಕಷ್ಟದಲ್ಲೂ 21,320 ಕಾರುಗಳನ್ನು ಮಾರಾಟ ಮಾಡಿದ ಹ್ಯುಂಡೈ

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್‌ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಲಾಕ್‌ಡೌನ್ ಸಂಕಷ್ಟದಲ್ಲೂ 21,320 ಕಾರುಗಳನ್ನು ಮಾರಾಟ ಮಾಡಿದ ಹ್ಯುಂಡೈ

ಇದರಲ್ಲಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯು 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ 140-ಬಿಎಚ್‌ಪಿ ಉತ್ಪಾದನೆ ಮಾಡಲಿದ್ದು, ಕ್ರೆಟಾ ಆವೃತ್ತಿಯಲ್ಲೇ ಇದು ಹೈ ಎಂಡ್ ಆವೃತ್ತಿಯಾಗಿ ಮಾರಾಟಗೊಳ್ಳಲಿದೆ. ಹಾಗೆಯೇ ಹೊಸ ಕಾರಿನಲ್ಲಿ ಹಲವಾರು ಐಷಾರಾಮಿ ಫೀಚರ್ಸ್‌ಗಳ ಜೊತೆಗೆ ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

More from DriveSpark

Article Published On: Friday, July 3, 2020, 8:45 [IST]
English summary
Hyundai India Sells 26,820 Units In 2020 June. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+