'ಸ್ಮಾರ್ಟ್ ಕಾರ್ಸ್ ಫಾರ್ ಸ್ಮಾರ್ಟ್ ಇಂಡಿಯಾ' ಅಭಿಯಾನಕ್ಕೆ ಚಾಲನೆ ನೀಡಿದ ಹ್ಯುಂಡೈ

ಕರೋನಾ ವೈರಸ್‌ನಿಂದಾಗಿ ಕಾರು ಮಾರಾಟದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದ ಆಟೋ ಕಂಪನಿಗಳು ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ವಾಹನ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಆಫರ್‌ಗಳು ಮತ್ತು ಸರಳ ಸಾಲ ಸೌಲಭ್ಯಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ.

'ಸ್ಮಾರ್ಟ್ ಕಾರ್ಸ್ ಫಾರ್ ಸ್ಮಾರ್ಟ್ ಇಂಡಿಯಾ' ಅಭಿಯಾನಕ್ಕೆ ಚಾಲನೆ ನೀಡಿದ ಹ್ಯುಂಡೈ

ಲಾಕ್‌ಡೌನ್‌ನಿಂದಾಗಿ ಏಪ್ರಿಲ್, ಮೇ ಮತ್ತು ಜೂನ್ ಅವಧಿಯಲ್ಲಿ ಭಾರೀ ಪ್ರಮಾಣದ ಮಾರಾಟ ಕುಸಿತ ಕಂಡಿದ್ದ ಆಟೋ ಕಂಪನಿಗಳು ಜುಲೈ ಮತ್ತು ಅಗಸ್ಟ್ ಅವಧಿಯಲ್ಲಿನ ವಾಹನ ಮಾರಾಟದಲ್ಲಿ ಸಾಕಷ್ಟು ಸುಧಾರಣೆ ಕಂಡಿದ್ದು, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಅವಧಿಯಲ್ಲಿನ ಮಾರಾಟದಲ್ಲಿ ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿಟ್ಟುಕೊಂಡಿವೆ. ಈ ನಿಟ್ಟಿನಲ್ಲಿ ಗ್ರಾಹಕರನ್ನು ಸೆಳೆಯುತ್ತಿರುವ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್‌ಗಳನ್ನು ನೀಡುತ್ತಿದ್ದು, ಹ್ಯುಂಡೈ ಕೂಡಾ ಹೊಸ ಅಭಿಯಾನ ಕೈಗೊಂಡಿದೆ.

'ಸ್ಮಾರ್ಟ್ ಕಾರ್ಸ್ ಫಾರ್ ಸ್ಮಾರ್ಟ್ ಇಂಡಿಯಾ' ಅಭಿಯಾನಕ್ಕೆ ಚಾಲನೆ ನೀಡಿದ ಹ್ಯುಂಡೈ

ಹ್ಯುಂಡೈ ಇಂಡಿಯಾ ಕಂಪನಿಯು ಭಾರತದಲ್ಲಿ ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದು, ಆಕರ್ಷಕ ಬೆಲೆಯೊಂದಿಗೆ ಅತ್ಯುತ್ತಮ ವಿನ್ಯಾಸ, ಗುಣಮಟ್ಟ, ವೈಶಿಷ್ಟ್ಯತೆ ಮತ್ತು ಸುರಕ್ಷಿತ ಉತ್ಪನ್ನಗಳನ್ನು ಸಿದ್ದಪಡಿಸುವಲ್ಲಿ ಯಶಸ್ವಿಯಾಗಿದೆ.

'ಸ್ಮಾರ್ಟ್ ಕಾರ್ಸ್ ಫಾರ್ ಸ್ಮಾರ್ಟ್ ಇಂಡಿಯಾ' ಅಭಿಯಾನಕ್ಕೆ ಚಾಲನೆ ನೀಡಿದ ಹ್ಯುಂಡೈ

ಇದೇ ಕಾರಣಕ್ಕೆ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿರುವ ಹ್ಯುಂಡೈ ಕಂಪನಿಯು ಕರೋನಾ ವೈರಸ್ ಪರಿಣಾಮ ಕುಸಿದಿದ್ದ ವಾಹನ ಮಾರಾಟವನ್ನು ಸರಿದಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮುಂಬರುವ ಹಬ್ಬದ ಋುತುಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

'ಸ್ಮಾರ್ಟ್ ಕಾರ್ಸ್ ಫಾರ್ ಸ್ಮಾರ್ಟ್ ಇಂಡಿಯಾ' ಅಭಿಯಾನಕ್ಕೆ ಚಾಲನೆ ನೀಡಿದ ಹ್ಯುಂಡೈ

ಇದಕ್ಕಾಗಿಯೇ ಸ್ಮಾರ್ಟ್ ಕಾರ್ಸ್ ಫಾರ್ ಸ್ಮಾರ್ಟ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿರುವ ಹ್ಯುಂಡೈ ಕಂಪನಿಯು ಸ್ಯಾಂಟ್ರೋ, ಗ್ರ್ಯಾಂಡ್ ಐ10 ನಿಯೊಸ್ ಮತ್ತು ಔರಾ ಕಾರುಗಳ ಮಾರಾಟದ ಮೇಲೆ ಹೆಚ್ಚಿನ ಒತ್ತು ನೀಡುತ್ತಿದೆ. ಹೊಸ ಅಭಿಯಾನದ ಮೂಲಕ ಗ್ರಾಹಕರನ್ನು ಸೆಳೆಯಲು ಹಲವಾರು ಆಫರ್‌ಗಳನ್ನು ನೀಡುತ್ತಿದ್ದು, ಗ್ರಾಹಕರಲ್ಲಿ ವಿಶ್ವಾಸಾರ್ಹ ಬ್ರಾಂಡ್ ಆಗಿ ಪರಿಣಮಿಸುವಂತೆ ಅಭಿಯಾನ ಕೈಗೊಳ್ಳುತ್ತಿದೆ.

'ಸ್ಮಾರ್ಟ್ ಕಾರ್ಸ್ ಫಾರ್ ಸ್ಮಾರ್ಟ್ ಇಂಡಿಯಾ' ಅಭಿಯಾನಕ್ಕೆ ಚಾಲನೆ ನೀಡಿದ ಹ್ಯುಂಡೈ

ಇನ್ನು ಕರೋನಾ ವೈರಸ್ ಪರಿಣಾಮ ಕಳೆದ ಕೆಲ ತಿಂಗಳ ಹಿಂದೆ ಸಂಪೂರ್ಣವಾಗಿ ನೆಲಕಚ್ಚಿದ್ದ ಹೊಸ ವಾಹನಗಳ ಮಾರಾಟ ಪ್ರಮಾಣವು ಇದೇ ಕರೋನಾ ವೈರಸ್ ಪರಿಣಾಮವೇ ಭಾರೀ ಪ್ರಮಾಣದಲ್ಲಿ ಬೇಡಿಕೆ ಹೆಚ್ಚಳವಾಗಲು ಕಾರಣವಾಗಿದ್ದು, ಹ್ಯುಂಡೈ ಸೇರಿದಂತೆ ಬಹುತೇಕ ಕಾರು ಕಂಪನಿಗಳು ವಾಹನ ಮಾದರಿಗಳ ಮಾರಾಟವು ಕಳೆದ ವರ್ಷಕ್ಕಿಂತಲೂ ದುಪ್ಪಟ್ಟು ಹೆಚ್ಚಳವಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

'ಸ್ಮಾರ್ಟ್ ಕಾರ್ಸ್ ಫಾರ್ ಸ್ಮಾರ್ಟ್ ಇಂಡಿಯಾ' ಅಭಿಯಾನಕ್ಕೆ ಚಾಲನೆ ನೀಡಿದ ಹ್ಯುಂಡೈ

ಹೌದು, ಹ್ಯುಂಡೈ ನಿರ್ಮಾಣದ ಕಾರುಗಳ ಮಾರಾಟ ಪ್ರಮಾಣವು ಈ ವರ್ಷದ ಅಗಸ್ಟ್ ತಿಂಗಳಿನಲ್ಲಿ ಶೇ. 20ರಷ್ಟು ಏರಿಕೆಯಾಗಿದ್ದು, ಅಗಸ್ಟ್ ತಿಂಗಳಿನಲ್ಲಿ ಒಟ್ಟು 45,809 ಯುನಿಟ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಎರಡನೇ ಅತಿ ದೊಡ್ಡ ಕಾರು ಮಾರಾಟ ಕಂಪನಿಯಾಗಿ ಹೊರಹೊಮ್ಮಿದೆ. 2019ರ ಅಗಸ್ಟ್ ಅವಧಿಯಲ್ಲಿ 38,205 ಯನಿಟ್ ಕಾರು ಮಾರಾಟ ಮಾಡಿದ್ದ ಹ್ಯುಂಡೈ ಕಂಪನಿಯು ಇದೀಗ 45,809 ಯುನಿಟ್ ಮಾರಾಟ ಮಾಡಿದೆ.

'ಸ್ಮಾರ್ಟ್ ಕಾರ್ಸ್ ಫಾರ್ ಸ್ಮಾರ್ಟ್ ಇಂಡಿಯಾ' ಅಭಿಯಾನಕ್ಕೆ ಚಾಲನೆ ನೀಡಿದ ಹ್ಯುಂಡೈ

ಕರೋನಾ ವೈರಸ್‌ನಿಂದಾಗಿ ಆರಂಭದಲ್ಲಿ ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಬಹುತೇಕ ಆಟೋ ಕಂಪನಿಗಳು ಇದೀಗ ಕರೋನಾ ವೈರಸ್‌ನಿಂದಾಗಿ ಹೊಸ ವಾಹನಗಳ ಮಾರಾಟದಲ್ಲಿ ಅತ್ಯಧಿಕ ಬೇಡಿಕೆ ಪಡೆದುಕೊಳ್ಳುತ್ತಿದ್ದು, ವೈರಸ್ ಭೀತಿಯಿಂದಾಗಿ ಬಹುತೇಕರು ಸ್ವಂತ ವಾಹನಗಳ ಬಳಕೆಗೆ ಆದ್ಯತೆ ನೀಡುತ್ತಿರುವುದು ಈ ಬೆಳವಣಿಗೆ ಪ್ರಮುಖ ಕಾರಣವಾಗಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

'ಸ್ಮಾರ್ಟ್ ಕಾರ್ಸ್ ಫಾರ್ ಸ್ಮಾರ್ಟ್ ಇಂಡಿಯಾ' ಅಭಿಯಾನಕ್ಕೆ ಚಾಲನೆ ನೀಡಿದ ಹ್ಯುಂಡೈ

ಹ್ಯುಂಡೈ ನಿರ್ಮಾಣದ ಪ್ರಮುಖ ಕಾರು ಮಾದರಿಗಳ ಮಾರಾಟದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದ್ದು, ವೆನ್ಯೂ, ಕ್ರೆಟಾ, ವೆರ್ನಾ, ಔರಾ, ಸ್ಯಾಂಟ್ರೊ, ಗ್ರಾಂಡ್ ಐ10 ನಿಯೋಸ್, ಐ20, ಎಲಾಂಟ್ರಾ, ಟ್ಯುಸಾನ್ ಮತ್ತು ಕೊನಾ ಇವಿ ಕಾರುಗಳು ಉತ್ತಮ ಬೇಡಿಕೆ ಪಡೆದುಕೊಂಡಿವೆ.

Most Read Articles

Kannada
English summary
Hyundai Launches Smart Cars for Smart India Campaign. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X