2020ರ ಕೊನಾ ಎಲೆಕ್ಟ್ರಿಕ್ ಕಾರು ಆವೃತ್ತಿಯ ಮೈಲೇಜ್ ಪ್ರಮಾಣವನ್ನು ಹೆಚ್ಚಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ತನ್ನ ವಿನೂತನ ವಿನ್ಯಾಸದ ಕೊನೆ ಎಲೆಕ್ಟ್ರಿಕ್ ಎಸ್‌ಯುವಿ ಕಾರನ್ನು ಭಾರತ ಸೇರಿದಂತೆ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದ್ದು, ಹೊಸ ಕಾರಿನ ಅಧಿಕೃತ ಮೈಲೇಜ್ ಪ್ರಮಾಣದಲ್ಲಿ ಭಾರೀ ಬದಲಾವಣೆ ಪರಿಚಯಿಸಿದೆ.

2020ರ ಕೊನಾ ಎಲೆಕ್ಟ್ರಿಕ್ ಕಾರು ಆವೃತ್ತಿಯ ಮೈಲೇಜ್ ಪ್ರಮಾಣವನ್ನು ಹೆಚ್ಚಿಸಿದ ಹ್ಯುಂಡೈ

2019ರ ಆರಂಭದಿಂದಲೇ ಯುರೋಪಿನ್ ಮಾರುಕಟ್ಟೆಗಳಲ್ಲಿ ಖರೀದಿಗೆ ಲಭ್ಯವಿರುವ ಕೊನಾ ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಕೆಲವೇ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿತ್ತು. ಸದ್ಯ ವಿದೇಶಿ ಮಾರುಕಟ್ಟೆಗಳಲ್ಲಿ ಎರಡು ಪ್ರಮುಖ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ಕೊನಾ ಕಾರು ಭಾರತದಲ್ಲಿ ಕೇವಲ ಒಂದೇ ವೆರಿಯೆಂಟ್ ಅನ್ನು ಹೊಂದಿದ್ದು, ಶೀಘ್ರದಲ್ಲೇ 2020ರ ಕೊನಾ ಆವೃತ್ತಿಯು ಸಹ ಮಾರುಕಟ್ಟೆ ಪ್ರವೇಶಿಸುತ್ತಿದೆ.

2020ರ ಕೊನಾ ಎಲೆಕ್ಟ್ರಿಕ್ ಕಾರು ಆವೃತ್ತಿಯ ಮೈಲೇಜ್ ಪ್ರಮಾಣವನ್ನು ಹೆಚ್ಚಿಸಿದ ಹ್ಯುಂಡೈ

ಹೊಸ ಕೊನಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ ಮೈಲೇಜ್ ರೇಂಜ್ ಪ್ರಮಾಣವನ್ನು 449 ಕಿ.ಮೀ ನಿಂದ 484 ಕಿ.ಮೀ ಗೆ ಹೆಚ್ಚಿಸಲಾಗಿದ್ದು, 64 kWh ಬ್ಯಾಟರಿ ಪ್ಯಾಕ್‌ನೊಂದಿಗೆ 204-ಬಿಎಚ್‌ಪಿ ಉತ್ಪದನಾ ಗುಣಹೊಂದಿದೆ.

2020ರ ಕೊನಾ ಎಲೆಕ್ಟ್ರಿಕ್ ಕಾರು ಆವೃತ್ತಿಯ ಮೈಲೇಜ್ ಪ್ರಮಾಣವನ್ನು ಹೆಚ್ಚಿಸಿದ ಹ್ಯುಂಡೈ

ಸದ್ಯ ಭಾರತದಲ್ಲಿ ಮಾರಾಟವಾಗುತ್ತಿರುವ ಕೊನಾ ಕಾರು 39.2 kWh ಬ್ಯಾಟರಿ ಪ್ಯಾಕ್‌ನೊಂದಿಗೆ ಗರಿಷ್ಠ 136-ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮೀ ಮೈಲೇಜ್ ಪಡೆದುಕೊಂಡಿದೆ.

2020ರ ಕೊನಾ ಎಲೆಕ್ಟ್ರಿಕ್ ಕಾರು ಆವೃತ್ತಿಯ ಮೈಲೇಜ್ ಪ್ರಮಾಣವನ್ನು ಹೆಚ್ಚಿಸಿದ ಹ್ಯುಂಡೈ

ಇದೀಗ ಯುರೋಪ್ ಮಾರುಕಟ್ಟೆಯಲ್ಲಿ ಬಿಡುಗಡೆಗೆ ಸಿದ್ದವಾಗಿರುವ 2020ರ ಆವೃತ್ತಿಯು ಹಲವು ಹೊಸ ಬದಲಾಣೆಗಳೊಂದಿಗೆ ಬಿಡುಗಡೆಯಾಗುತ್ತಿದ್ದು, ದೇಶಿಯ ಮಾರುಕಟ್ಟೆಯಲ್ಲಿರುವ ಆವೃತ್ತಿಯು ಸಹ ಮುಂಬರುವ ದಿನಗಳಲ್ಲಿ ಬದಲಾವಣೆಗಳನ್ನು ಪಡೆದುಕೊಳ್ಳುವ ನೀರಿಕ್ಷೆಯಿದೆ. ಆದರೆ ಸದ್ಯಕ್ಕೆ ಭಾರತದಲ್ಲಿ ಹಳೆಯ ಕೊನಾ ಮಾದರಿಯನ್ನೇ ಮಾರಾಟ ಮಾಡಲು ನಿರ್ಧರಿಸಿರುವ ಹ್ಯುಂಡೈ ಕಂಪನಿಯು ಮುಂದಿನ ಒಂದು ವರ್ಷದೊಳಗೆ ಮತ್ತೆರಡು ಹೊಸ ಬಜೆಟ್ ಬೆಲೆಯ ಎಲೆಕ್ಟ್ರಿಕ್ ಕಾರು ಆವೃತ್ತಿಗಳನ್ನು ಬಿಡುಗಡೆ ಮಾಡುವ ಇರಾದೆಯಲ್ಲಿದೆ.

2020ರ ಕೊನಾ ಎಲೆಕ್ಟ್ರಿಕ್ ಕಾರು ಆವೃತ್ತಿಯ ಮೈಲೇಜ್ ಪ್ರಮಾಣವನ್ನು ಹೆಚ್ಚಿಸಿದ ಹ್ಯುಂಡೈ

ಕೊನಾ ಕಾರು ಪ್ರೀಮಿಯಂ ಫೀಚರ್ಸ್ ಮತ್ತು ಅತ್ಯುತ್ತಮ ಮೈಲೇಜ್‌ನೊಂದಿಗೆ ಖರೀದಿಗೆ ಲಭ್ಯವಿರಲಿದ್ದರೂ ಬಿಡುಗಡೆಯಾಗಲಿರುವ ಹೊಸ ಇವಿ ಕಾರುಗಳನ್ನು ಮಧ್ಯಮ ಗಾತ್ರದ ಶ್ರೇಣಿಯಲ್ಲಿ ಮಾರಾಟಗೊಳಿಸಲು ನಿರ್ಧರಿಸಿರುವುದು ಭಾರೀ ಸದ್ದು ಮಾಡುವ ನೀರಿಕ್ಷೆಯಿದೆ.

2020ರ ಕೊನಾ ಎಲೆಕ್ಟ್ರಿಕ್ ಕಾರು ಆವೃತ್ತಿಯ ಮೈಲೇಜ್ ಪ್ರಮಾಣವನ್ನು ಹೆಚ್ಚಿಸಿದ ಹ್ಯುಂಡೈ

ಕೊನಾ ಎಲೆಕ್ಟ್ರಿಕ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್‌ಶೋರೂಂ ಪ್ರಕಾರ ರೂ. 23.90 ಲಕ್ಷ ಬೆಲೆ ಹೊಂದಿದ್ದು, ಬಿಡುಗಡೆಯಾಗಲಿರುವ ಹೊಸ ಇವಿ ಕಾರುಗಳು ರೂ.10 ಲಕ್ಷದಿಂದ ರೂ.15 ಲಕ್ಷ ಬೆಲೆ ಅಂತರದೊಂದಿಗೆ 250ರಿಂದ 320 ಕಿ.ಮೀ ಮೈಲೇಜ್ ಹೊಂದಿರಲಿವೆ.

2020ರ ಕೊನಾ ಎಲೆಕ್ಟ್ರಿಕ್ ಕಾರು ಆವೃತ್ತಿಯ ಮೈಲೇಜ್ ಪ್ರಮಾಣವನ್ನು ಹೆಚ್ಚಿಸಿದ ಹ್ಯುಂಡೈ

ಇನ್ನು ಹೊಸ ಕೊನಾ ಎಲೆಕ್ಟ್ರಿಕ್ ಕಾರು ಪರ್ಫಾಮೆನ್ಸ್‌ನಲ್ಲೂ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.

2020ರ ಕೊನಾ ಎಲೆಕ್ಟ್ರಿಕ್ ಕಾರು ಆವೃತ್ತಿಯ ಮೈಲೇಜ್ ಪ್ರಮಾಣವನ್ನು ಹೆಚ್ಚಿಸಿದ ಹ್ಯುಂಡೈ

ಸದ್ಯ ವಿದೇಶಿ ಮಾರುಕಟ್ಟೆಗಳಿಂದ ಕೊನಾ ಕಾರನ್ನು ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡುತ್ತಿರುವುದರಿಂದ ಹೊಸ ಕಾರು ತುಸು ದುಬಾರಿ ಎನ್ನಿಸಲಿದ್ದು,ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯಿಂದಾಗಿ ಹೊಸ ಕಾರಿನ ಮೇಲೆ ರೂ.1.50 ಲಕ್ಷ ತೆರಿಗೆ ವಿನಾಯ್ತಿ ಮತ್ತು ಬ್ಯಾಟರಿ ಮೇಲೆ 8 ವರ್ಷಗಳ ವಾರಂಟಿ ಸಿಗಲಿದೆ.

Article Published On: Monday, March 9, 2020, 16:02 [IST]
English summary
Hyundai Kona EV Range Increased By 484 KM's. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+