ಕೊನಾ ಎಲೆಕ್ಟ್ರಿಕ್ ಕಾರು ಖರೀದಿ ಮೇಲೆ ವಿಶೇಷ ಆಫರ್ ಘೋಷಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ಲಾಕ್‌ಡೌನ್ ತೆರವುಗೊಂಡ ನಂತರ ಕಾರು ಮಾರಾಟ ಸುಧಾರಿಸಲು ಹಲವಾರು ಹೊಸ ಯೋಜನೆಗಳಿಗೆ ಚಾಲನೆ ನೀಡಿದ್ದಲ್ಲದೆ ನೀರಿಕ್ಷಿತ ಮಟ್ಟದ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಸಾಮಾನ್ಯ ಕಾರುಗಳಿಗೆ ಮಾತ್ರವಲ್ಲದೆ ಎಲೆಕ್ಟ್ರಿಕ್ ಕಾರು ಮಾದರಿಯ ಮಾರಾಟ ಸುಧಾರಣೆಗೂ ಕೆಲವು ಪ್ರಮುಖ ಯೋಜನೆ ರೂಪಿಸಿದೆ.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿ ಮೇಲೆ ವಿಶೇಷ ಆಫರ್ ಘೋಷಿಸಿದ ಹ್ಯುಂಡೈ

ಹೌದು, ಹ್ಯುಂಡೈ ಕಂಪನಿಯು ವಿವಿಧ ಮಾದರಿಯ ಸಾಮಾನ್ಯ ಕಾರುಗಳ ಜೊತೆಗೆ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯನ್ನು ಸಹ ಮಾರಾಟ ಮಾಡುತ್ತಿದ್ದು, ಲಾಕ್‌ಡೌನ್ ಮೊದಲು ಉತ್ತಮ ಬೇಡಿಕೆ ಪಡೆದುಕೊಂಡಿದ್ದ ಕೊನಾ ಇವಿ ಕಾರು ಸದ್ಯದ ಪರಿಸ್ಥಿತಿಯಲ್ಲಿ ತುಸು ಹಿನ್ನಡೆ ಅನುಭವಿಸುತ್ತಿದೆ. ಹೀಗಾಗಿ ಹೊಸ ಎಲೆಕ್ಟ್ರಿಕ್ ಕಾರಿನ ಮಾರಾಟವನ್ನು ಸುಧಾರಿಸುವ ನಿಟ್ಟಿನಲ್ಲಿ ಕೆಲವು ಆಫರ್‌ಗಳನ್ನು ಘೋಷಣೆ ಮಾಡಲಾಗಿದ್ದು, ಸೀಮಿತ ಅವಧಿಯೊಳಗೆ ಹೊಸ ಕಾರು ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿ ವಾರಂಟಿ ಆಫರ್ ನೀಡುತ್ತಿದೆ.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿ ಮೇಲೆ ವಿಶೇಷ ಆಫರ್ ಘೋಷಿಸಿದ ಹ್ಯುಂಡೈ

ಹ್ಯುಂಡೈ ಕೊನಾ ಇವಿ ಕಾರಿನ ಬ್ಯಾಟರಿ ಮೇಲೆ ಸದ್ಯ ಮೂರು ವರ್ಷ ಅಥವಾ ಅನ್‌ಲಿಮಿಟೆಡ್ ಕಿ.ಮೀ, ನಾಲ್ಕು ವರ್ಷ ಅಥವಾ 60 ಸಾವಿರ ಕಿ.ಮೀ, ಐದು ವರ್ಷ ಅಥವಾ 50 ಸಾವಿರ ಕಿ.ಮೀ ವಾರಂಟಿ ಆಫರ್ ಅನ್ನು ಸಾಮಾನ್ಯವಾಗಿ ನೀಡಲಾಗುತ್ತಿದ್ದು, ಹೊಸ ಆಫರ್‌ನಲ್ಲಿ ಎಂಟು ವರ್ಷ ಅಥವಾ 1.60 ಲಕ್ಷ ಕಿ.ಮೀ ಮೇಲೆ ಆಫರ್ ಪಡೆದುಕೊಳ್ಳಬಹುದಾಗಿದೆ.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿ ಮೇಲೆ ವಿಶೇಷ ಆಫರ್ ಘೋಷಿಸಿದ ಹ್ಯುಂಡೈ

ಬ್ಯಾಟರಿ ಪ್ಯಾಕ್ ಮೇಲಿನ ಎಂಟು ವರ್ಷ ಅಥವಾ 1.60 ಲಕ್ಷ ಕಿ.ಮೀ ಮೇಲೆ ಆಫರ್ ಅನ್ನು ಸೀಮಿತ ಅವಧಿಗೆ ಘೋಷಣೆ ಮಾಡಲಾಗಿದ್ದು, ಎಲೆಕ್ಟ್ರಿಕ್ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಇದೊಂದು ಅತ್ಯುತ್ತಮ ಅವಕಾಶ ಎನ್ನಬಹುದು.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿ ಮೇಲೆ ವಿಶೇಷ ಆಫರ್ ಘೋಷಿಸಿದ ಹ್ಯುಂಡೈ

ಇನ್ನು ಕೊನಾ ಎಲೆಕ್ಟ್ರಿಕ್ ಕಾರು ಅತಿ ಕಡಿಮೆ ನಿರ್ವಹಣಾ ವೆಚ್ಚದಿಂದಾಗಿ ಗ್ರಾಹಕರ ಮೆಚ್ಚುಗೆಗೆ ಕಾರಣವಾಗಿದ್ದು, ಸಾಮಾನ್ಯ ಕಾರುಗಳಿಂತಲೂ ಶೇ.80ರಷ್ಟು ಕಡಿಮೆ ರನ್ನಿಂಗ್ ಕಾಸ್ಟ್ ಹೊಂದಿರುವ ಕೊನಾ ಕಾರು ಪ್ರತಿ ಕಿ.ಮೀ ಗೆ ರೂ.1 ಕ್ಕಿಂತಲೂ ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬರಲಿರುವ ಹೊಸ ವಿಮಾ ನೀತಿ..

ಕೊನಾ ಎಲೆಕ್ಟ್ರಿಕ್ ಕಾರು ಖರೀದಿ ಮೇಲೆ ವಿಶೇಷ ಆಫರ್ ಘೋಷಿಸಿದ ಹ್ಯುಂಡೈ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎರಡು ಮಾದರಿಯ ಬ್ಯಾಟರಿ ಆಯ್ಕೆಯನ್ನು ಹೊಂದಿರುವ ಕೊನಾ ಎಲೆಕ್ಟ್ರಿಕ್ ಕಾರು 64kWh ಮತ್ತು 39.2kWh ಬ್ಯಾಟರಿ ವೈಶಿಷ್ಟ್ಯತೆಗಳನ್ನು ಹೊಂದಿದ್ದು, ಭಾರತದಲ್ಲಿ ಸದ್ಯಕ್ಕೆ 39.2kWh ಬ್ಯಾಟರಿ ಹೊಂದಿರುವ ಮಾದರಿಯನ್ನು ಮಾತ್ರವೇ ಮಾರಾಟ ಮಾಡಲಾಗುತ್ತಿದೆ.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿ ಮೇಲೆ ವಿಶೇಷ ಆಫರ್ ಘೋಷಿಸಿದ ಹ್ಯುಂಡೈ

ಕೇವಲ 52 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್‌ ಮಾಡಬಲ್ಲ ಡಿಸಿ ಫಾಸ್ಟ್ ಚಾರ್ಜರ್ ಸೌಲಭ್ಯವು ಈ ಕಾರಿನಲ್ಲಿದ್ದು, 39.2kWh ಬ್ಯಾಟರಿ ಸಾಮರ್ಥ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲದು.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಕೊನಾ ಎಲೆಕ್ಟ್ರಿಕ್ ಕಾರು ಖರೀದಿ ಮೇಲೆ ವಿಶೇಷ ಆಫರ್ ಘೋಷಿಸಿದ ಹ್ಯುಂಡೈ

ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಪರ್ಫಾಮೆನ್ಸ್ ಕಾರುಗಳಂತೆಯೇ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.

ಕೊನಾ ಎಲೆಕ್ಟ್ರಿಕ್ ಕಾರು ಖರೀದಿ ಮೇಲೆ ವಿಶೇಷ ಆಫರ್ ಘೋಷಿಸಿದ ಹ್ಯುಂಡೈ

ಕೊನಾ ಇವಿ ಕಾರು 155 ಕಿ.ಮಿ ಟಾಪ್ ಸ್ಪೀಡ್ ಸೌಲಭ್ಯವನ್ನು ಹೊಂದಿದ್ದು, ಪೂರ್ಣ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜ್‌ ಆಗಲು ಕನಿಷ್ಠ 8 ಗಂಟೆ ತೆಗೆದುಕೊಳ್ಳಲಿದೆ. ಹೀಗಾಗಿ ಕೋನಾ ಕಾರಿನಲ್ಲಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ಆಕರ್ಷಕವಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಕೊನಾ ಎಲೆಕ್ಟ್ರಿಕ್ ಕಾರು ಖರೀದಿ ಮೇಲೆ ವಿಶೇಷ ಆಫರ್ ಘೋಷಿಸಿದ ಹ್ಯುಂಡೈ

ಕೊನಾ ಇವಿ ಕಾರಿನ ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಹೊಸ ಕಾರು ತುಸು ದುಬಾರಿ ಎನ್ನಿಸಲಿದ್ದು, ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 23.90 ಲಕ್ಷಕ್ಕೆ ನಿಗದಿಪಡಿಸಲಾಗಿದ್ದು, ಹೊಸ ಕಾರಿನ ಮೇಲೆ ರೂ.1.50 ಲಕ್ಷ ತನಕ ತೆರಿಗೆ ವಿನಾಯ್ತಿ ಸಹ ಸಿಗಲಿದೆ.

Article Published On: Thursday, July 30, 2020, 20:19 [IST]
English summary
Hyundai Launches Wonder Warranty Scheme For Its Kona EV.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+