ಹ್ಯುಂಡೈ ಜೂನ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಕ್ರೆಟಾ
ಲಾಕ್‌ಡೌನ್‌ನಿಂದಾಗಿ ಬಹುತೇಕ ವಾಣಿಜ್ಯ ಚಟುವಟಿಕೆಗಳು ಹಿನ್ನಡೆ ಅನುಭವಿಸಿದ್ದು, ಲಾಕ್‌ಡೌನ್ ಸಡಿಲಿಕೆ ನಂತರವೂ ಆರ್ಥಿಕ ಸಂಕಷ್ಟ ತೀವ್ರಗೊಳ್ಳುತ್ತಿದೆ. ಇದರಿಂದ ಆಟೋ ಕಂಪನಿಗಳು ಸಹ ಭಾರೀ ನಷ್ಟ ಅನುಭವಿಸಿದ್ದು, ಹ್ಯುಂಡೈ ಕಂಪನಿಯ ಕಾರು ಮಾರಾಟದಲ್ಲೂ ಸಾಕಷ್ಟು ಇಳಿಕೆ ಕಂಡುಬಂದಿದೆ.

ಲಾಕ್‌ಡೌನ್ ಸಡಿಲಿಕೆ ನಂತರ ಹೊಸ ಸುರಕ್ಷಾ ಕ್ರಮಗಳೊಂದಿಗೆ ವಾಹನ ಉತ್ಪಾದನೆ ಮತ್ತು ಮಾರಾಟವನ್ನು ಪುನಾರಂಭಿಸಿರುವ ಬಹುತೇಕ ಆಟೋ ಕಂಪನಿಗಳು ವೈರಸ್ ಹರಡದಂತೆ ಹಲವು ಕಠಿಣ ಕ್ರಮಗಳೊಂದಿಗೆ ವ್ಯಾಪಾರ ವಹಿವಾಟು ನಡೆಸುತ್ತಿದ್ದು, ಹ್ಯುಂಡೈ ಕಂಪನಿಯು ಕೂಡಾ ಕಳೆದ ವರ್ಷಕ್ಕಿಂತಲೂ ಕಡಿಮೆ ಪ್ರಮಾಣದ ಮಾರಾಟ ದಾಖಲೆ ಕಂಡಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಕರೋನಾ ವೈರಸ್ ಹರಡುವುದಕ್ಕೂ ಮುನ್ನ ಇದ್ದ ಕಾರು ಮಾರಾಟ ಪ್ರಮಾಣಕ್ಕೂ ಈಗಿನ ಕಾರು ಮಾರಾಟ ಪ್ರಮಾಣಕ್ಕೂ ಹೋಲಿಕೆ ಮಾಡಿದ್ದಲ್ಲಿ ಇದು ತೀವ್ರವಾದ ಹಿನ್ನಡೆಯಾಗಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಇತರೆ ಕಾರುಗಳ ಕಂಪನಿಗಳಿಂತಲೂ ಹ್ಯುಂಡೈ ಕಂಪನಿಯು ಉತ್ತಮ ವ್ಯಾಪಾರ ವಹಿವಾಟು ನಡೆಸಿದೆ.

ಹ್ಯುಂಡೈ ಕಂಪನಿಯು ಲಾಕ್‌ಡೌನ್ ಸಡಿಲಿಕೆ ನಂತರ ಮೇ ಅವಧಿಯಲ್ಲಿ 12 ಸಾವಿರ ಕಾರುಗಳನ್ನು ಮಾರಾಟ ಮಾಡಿದ್ದು, ಜೂನ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಒಟ್ಟು 26,820 ಕಾರುಗಳನ್ನು ಮಾರಾಟ ಮೂಲಕ ಮುಂಚೂಣಿಯಲ್ಲಿದೆ. ಹ್ಯುಂಡೈ ಕಾರುಗಳ ಮಾರಾಟ ಪೈಕಿ ನ್ಯೂ ಜನರೇಷನ್ ಕ್ರೆಟಾ ಖರೀದಿಗೆ ಹೆಚ್ಚು ಬೇಡಿಕೆಯಿದ್ದು, ತದನಂತರ ಸ್ಥಾನದಲ್ಲಿ ವೆನ್ಯೂ, ಐ20, ಗ್ರಾಂಡ್ ಐ10 ನಿಯೋಸ್ ಕಾರುಗಳು ಹೆಚ್ಚು ಬೇಡಿಕೆ ಪಡೆದುಕೊಂಡಿವೆ.

ಕ್ರೆಟಾ ಕಾರು ಲಾಕ್‌ಡೌನ್ ಸಂಕಷ್ಟದಲ್ಲೂ ಹೊಸ ಕಾರು ಭರ್ಜರಿ ಬೇಡಿಕೆ ಪಡೆದುಕೊಂಡಿರುವುದು ಹ್ಯುಂಡೈ ಕಂಪನಿಗೆ ನೀರಿಕ್ಷೆಗೂ ಮೀರಿ ಲಾಭ ತಂದುಕೊಟ್ಟಿದ್ದು, 7,207 ಯುನಿಟ್‌ಗಳು ಮಾರಾಟಗೊಳ್ಳುವ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದೆ.

ತದನಂತರ ಸ್ಥಾನದಲ್ಲಿರುವ ವೆನ್ಯೂ, ಐ20, ಗ್ರಾಂಡ್ ಐ10 ನಿಯೋಸ್, ವೆರ್ನಾ, ಸ್ಯಾಂಟ್ರೋ ಮತ್ತು ಔರಾ ಕಾರುಗಳು ಸಹ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಹೊಸ ಕಾರುಗಳ ಮಾರಾಟ ಪ್ರಮಾಣವನ್ನು ಸುಧಾರಿಸಲು ಹಲವಾರು ಆಫರ್‌ಗಳನ್ನು ನೀಡಲಾಗುತ್ತಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ಕ್ರೆಟಾ ಕಾರು ದೆಹಲಿ ಎಕ್ಸ್‌ಶೋರೂಂ ಆರಂಭಿಕವಾಗಿ ರೂ. 9.99 ಲಕ್ಷ ಬೆಲೆ ಪಡೆದುಕೊಂಡಿದ್ದು, ಟಾಪ್ ಎಂಡ್ ಮಾದರಿಯು ರೂ. 17.20 ಲಕ್ಷ ಬೆಲೆ ಪಡೆದುಕೊಳ್ಳುವ ಮೂಲಕ ಕಿಯಾ ಸೆಲ್ಟೊಸ್‌ಗೆ ಸರಿಸಮನಾಗಿ ಮಾರುಕಟ್ಟೆ ಪ್ರವೇಶಿಸಿದೆ.

ಹೊಸ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 5 ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಕ್ರೆಟಾ ಆವೃತ್ತಿಯಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಮತ್ತು 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ತೆಗೆದುಹಾಕಲಾಗಿದ್ದು, ಸಾಮಾನ್ಯ ಮಾದರಿಯಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಹಾಗೂ ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಖರೀದಿಸಬಹುದಾಗಿದೆ.


Click it and Unblock the Notifications








