ಐಸಿಎಂಆರ್ ಸಂಸ್ಥೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ವೈದ್ಯಕೀಯ ಉಪಕರಣಗಳನ್ನು ಒದಗಿಸಿದ ಹ್ಯುಂಡೈ

ಹ್ಯುಂಡೈ ಇಂಡಿಯಾ ಕಂಪನಿಯು ಈಗಾಗಲೇ ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾಗಿಯಾಗುವ ಮೂಲಕ ಸರ್ಕಾರದ ಪ್ರಯತ್ನಗಳಿಗೆ ಕೈಜೋಡಿಸಿದ್ದು, ಇದೀಗ ವೈದ್ಯಕೀಯ ಉಪಕರಣಗಳ ಕೊರತೆಯನ್ನು ನೀಗಿಸುತ್ತಿದೆ.

ಐಸಿಎಂಆರ್ ಸಂಸ್ಥೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ವೈದ್ಯಕೀಯ ಉಪಕರಣಗಳನ್ನು ಒದಗಿಸಿದ ಹ್ಯುಂಡೈ

ಹೌದು, ಹ್ಯುಂಡೈ ಇಂಡಿಯಾ ಕಂಪನಿಯು ವೈರಸ್ ವಿರುದ್ಧ ಹೋರಾಟಕ್ಕೆ ರೂ.5 ಕೋಟಿ ಧನಸಹಾಯ ಘೋಷಣೆ ಮಾಡಿರುವುದಲ್ಲದೇ ವೈದ್ಯಕೀಯ ಉಪಕರಣಗಳನ್ನು ಒದಗಿಸುವುದಾಗಿ ಹೇಳಿಕೊಂಡಿತ್ತು. ಇದೀಗ ಕೊಟ್ಟ ಮಾತಿನಂತೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಗೆ(ಐಸಿಎಂಆರ್) ಅಡ್ವಾನ್ಸ್ ಡಯಾಗ್ನೋಸ್ಟಿಕ್ ಕಿಟ್‌ಗಳನ್ನು ಒದಗಿಸಿದ್ದು, ಇದು ಅತಿ ಅವಧಿಯಲ್ಲಿ ಸೋಂಕಿತರಲ್ಲಿನ ರೋಗ ಪತ್ತೆಗೆ ನೆರವಾಗಲಿದೆ.

ಐಸಿಎಂಆರ್ ಸಂಸ್ಥೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ವೈದ್ಯಕೀಯ ಉಪಕರಣಗಳನ್ನು ಒದಗಿಸಿದ ಹ್ಯುಂಡೈ

ಇನ್ನು ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಲಾಕ್ ಡೌನ್ ವಿಧಿಸಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಭಾರತ ಸೇರಿ ವಿಶ್ವದ ಹಲವು ರಾಷ್ಟ್ರಗಳ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಐಸಿಎಂಆರ್ ಸಂಸ್ಥೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ವೈದ್ಯಕೀಯ ಉಪಕರಣಗಳನ್ನು ಒದಗಿಸಿದ ಹ್ಯುಂಡೈ

ಇದರಿಂದ ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಗಿರುವ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.

ಐಸಿಎಂಆರ್ ಸಂಸ್ಥೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ವೈದ್ಯಕೀಯ ಉಪಕರಣಗಳನ್ನು ಒದಗಿಸಿದ ಹ್ಯುಂಡೈ

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಚಾಲನೆ ನೀಡಿವೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಐಸಿಎಂಆರ್ ಸಂಸ್ಥೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ವೈದ್ಯಕೀಯ ಉಪಕರಣಗಳನ್ನು ಒದಗಿಸಿದ ಹ್ಯುಂಡೈ

ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗುತ್ತಿವೆ.

ಐಸಿಎಂಆರ್ ಸಂಸ್ಥೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ವೈದ್ಯಕೀಯ ಉಪಕರಣಗಳನ್ನು ಒದಗಿಸಿದ ಹ್ಯುಂಡೈ

ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಆಟೋ ಕಂಪನಿಗಳು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲೇ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವುದಾಗಿ ಘೋಷಣೆ ಮಾಡಿವೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಐಸಿಎಂಆರ್ ಸಂಸ್ಥೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ವೈದ್ಯಕೀಯ ಉಪಕರಣಗಳನ್ನು ಒದಗಿಸಿದ ಹ್ಯುಂಡೈ

ಇನ್ನು ಚೀನಾದಿಂದ ಶುರುವಾದ ಕರೋನಾ ವೈರಸ್ ದಾಳಿಯು ಇದೀಗ ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಇದುವರೆಗೆ 21 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದಲ್ಲದೆ 1.46 ಲಕ್ಷ ಜನ ಪ್ರಾಣಕಳೆದುಕೊಂಡಿದ್ದಾರೆ. ಸೋಂಕಿತರಲ್ಲಿ ಇದುವರೆಗೆ ಸುಮಾರು 5.53 ಲಕ್ಷ ಜನ ಗುಣಮುಖರಾಗಿದ್ದು, ಶೇ.4 ರಷ್ಟು ಸೋಂಕು ಪಿಡಿತರ ಸ್ಥಿತಿ ಶೋಚನೀಯವಾಗಿದೆ.

ಐಸಿಎಂಆರ್ ಸಂಸ್ಥೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ವೈದ್ಯಕೀಯ ಉಪಕರಣಗಳನ್ನು ಒದಗಿಸಿದ ಹ್ಯುಂಡೈ

ಹೀಗಾಗೀ ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ವೈದ್ಯಕೀಯ ಉಪಕರಣಗಳ ಕೊರತೆಯು ಸೋಂಕಿತರ ಸಾವಿನ ಪ್ರಮಾಣ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

MOST READ: ಅತಿ ಕಡಿಮೆ ಬೆಲೆಯಲ್ಲಿ 'ಏರ್ 100' ವೆಂಟಿಲೆಟರ್ ಪರಿಚಯಿಸಿದ ಮಹೀಂದ್ರಾ

ಐಸಿಎಂಆರ್ ಸಂಸ್ಥೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ವೈದ್ಯಕೀಯ ಉಪಕರಣಗಳನ್ನು ಒದಗಿಸಿದ ಹ್ಯುಂಡೈ

ಈ ಹಿನ್ನಲೆಯಲ್ಲಿ ಸದ್ಯ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ನಿರ್ಧರಿಸಲಾಗಿದ್ದು, ವೆಂಟಿಲೆಟರ್, ಮಾಸ್ಕ್‌, ಟೆಸ್ಟಿಂಗ್ ಕಿಟ್ ಉತ್ಪಾದನೆಗೆ ಪ್ರಮುಖ ಕಾರು ಕಂಪನಿಗಳು ಒಪ್ಪಿಗೆ ಸೂಚಿಸಿವೆ.

Most Read Articles

Kannada
English summary
Hyundai Motor Gives Advanced Diagnostic Kits To ICMR. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X