ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಹೊಸ ಶಕ್ತಿ ತುಂಬಲಿದೆ ಹ್ಯುಂಡೈ

ಕರೋನಾ ವೈರಸ್ ಮಹಾಮಾರಿಯು ಇಡೀ ಜಗತ್ತಿನಾದ್ಯಂತ ಆವರಿಸಿಕೊಂಡಿದ್ದು, ಭಾರತದಲ್ಲೂ ಈಗಾಗಲೇ 920 ಜನರಲ್ಲಿ ಸೋಂಕು ಪತ್ತೆಯಾಗಿರುವುದಲ್ಲದೆ 20 ಜನರ ಜೀವ ಪಡೆದಿದೆ. ಹೀಗಾಗಿ ವೈರಸ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಗ್ಗಿಸಲು ಹಲವಾರು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಕಾರ್ಪೋರೆಟ್ ಕಂಪನಿಗಳು ಸಹ ವೈರಸ್ ವಿರುದ್ದದ ಹೋರಾಟಕ್ಕೆ ಸಹಾಯ ಹಸ್ತ ಚಾಚಿವೆ.

ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಹೊಸ ಶಕ್ತಿ ತುಂಬಲಿದೆ ಹ್ಯುಂಡೈ

ಕರೋನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ. ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬುತ್ತಿದ್ದಾರೆ.

ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಹೊಸ ಶಕ್ತಿ ತುಂಬಲಿದೆ ಹ್ಯುಂಡೈ

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಯ ಜೊತೆಗೆ ಧನಸಹಾಯವನ್ನು ಕೂಡಾ ಮಾಡುತ್ತಿವೆ.

ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಹೊಸ ಶಕ್ತಿ ತುಂಬಲಿದೆ ಹ್ಯುಂಡೈ

ಹ್ಯುಂಡೈ ಇಂಡಿಯಾ ಕಂಪನಿಯು ಕೂಡಾ ವಿಶೇಷ ಘೋಷಣೆ ಒಂದನ್ನು ಮಾಡಿದ್ದು, ಪ್ರಾಥಮಿಕ ಹಂತದಲ್ಲೇ ವೈರಸ್ ಪತ್ತೆ ಮಾಡಬಲ್ಲ 25 ಸಾವಿರ ಅಡ್ವಾನ್ಸ್ ಟೆಸ್ಟಿಂಗ್ ಕಿಟ್‌ಗಳನ್ನು ನೀಡುವುದಾಗಿ ಹೇಳಿಕೊಂಡಿದೆ.

ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಹೊಸ ಶಕ್ತಿ ತುಂಬಲಿದೆ ಹ್ಯುಂಡೈ

ಅಡ್ವಾನ್ಸ್ ಟೆಸ್ಟಿಂಗ್ ಕಿಟ್‌ಗಳಲ್ಲಿ ವೈರಸ್ ಹೊಂದಿರುವ ವ್ಯಕ್ತಿಯನ್ನು ಪ್ರಾಥಮಿಕ ಹಂತದಲ್ಲೇ ಪತ್ತೆಹಚ್ಚಬಹುದಾಗಿದ್ದು, ಅಗತ್ಯವಿರುವ ರಾಜ್ಯ ಸರ್ಕಾರಗಳಿಗೆ ಶೀಘ್ರದಲ್ಲೇ 25 ಸಾವಿರ ಟೆಸ್ಟಿಂಗ್ ಕಿಟ್‌ಗಳನ್ನು ನೀಡಲಿದೆ. ದಕ್ಷಿಣ ಕೋರಿಯಾ ಸರ್ಕಾರಕ್ಕೂ ಸುಮಾರು 1 ಲಕ್ಷ ಟೆಸ್ಟಿಂಗ್ ಕಿಟ್‌ಗಳನ್ನು ನೀಡಿರುವ ಹ್ಯುಂಡೈ ಕಂಪನಿಯು ಅಲ್ಲಿಂದಲೇ ಭಾರತಕ್ಕೂ 25 ಸಾವಿರ ಯುನಿಟ್ ವಿತರಣೆ ಮಾಡಲಿದ್ದು, ಕೋರಿಯಾ ಮತ್ತು ಭಾರತದಲ್ಲಿ ಮಾತ್ರವಲ್ಲದೆ ಕಾರು ಮಾರಾಟ ವ್ಯಾಪ್ತಿಯನ್ನು ಹೊಂದಿರುವ 193 ರಾಷ್ಟ್ರಗಳಿಗೂ ಇಂತಿಷ್ಟು ಟೆಸ್ಟಿಂಗ್ ಕಿಟ್‌ಗಳನ್ನು ಉಚಿತವಾಗಿ ನೀಡುತ್ತಿದೆ.

ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಹೊಸ ಶಕ್ತಿ ತುಂಬಲಿದೆ ಹ್ಯುಂಡೈ

ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನೀತಿಯಡಿ ವಾಣಿಜ್ಯ ಚಟುವಟಿಕೆಯೊಂದಿಗೆ ಸಾಮಾಜಿಕ ಜವಾಬ್ದಾರಿ ಕೂಡಾ ಪ್ರಮುಖವಾಗಿದೆ ಎಂದು ಸ್ಪಷ್ಟಪಡಿಸಿರುವ ಹ್ಯುಂಡೈ ಸಂಸ್ಥೆಯು ಸಂಕಷ್ಟದಲ್ಲಿದ್ದಾಗ ಸರ್ಕಾರದ ಜೊತೆಯಿರುವುದು ನಮ್ಮ ಕರ್ತವ್ಯ ಎಂದು ತನ್ನ ಪ್ರಕಟನೆಯನ್ನು ಹೊರಡಿಸಿದೆ.

ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಹೊಸ ಶಕ್ತಿ ತುಂಬಲಿದೆ ಹ್ಯುಂಡೈ

ಇನ್ನು ದೇಶದ ಪ್ರಮುಖ ಆಟೋ ಉತ್ಪಾದನಾ ಕಂಪನಿಗಳಲ್ಲಿ ಒಂದಾಗಿರುವ ಬಜಾಜ್ ಗ್ರೂಪ್ ಕೂಡಾ ಕೋರನಾ ವೈರಸ್ ವಿರುದ್ಧ ಹೋರಾಟಕ್ಕೆ ಭಾರೀ ಪ್ರಮಾಣ ದೇಣಿಗೆ ನೀಡಿದ್ದು, ರೂ. 100 ಕೋಟಿ ಮೌಲ್ಯದ ವೈದ್ಯಕೀಯ ಉಪಕರಣಗಳನ್ನು ಒದಗಿಸುವುದಾಗಿ ಘೋಷಣೆ ಮಾಡಿದೆ.

MOST READ: ಅತಿ ಕಡಿಮೆ ಬೆಲೆಯ ವೆಂಟಿಲೆಟರ್‌ಗಳ ಉತ್ಪಾದನೆಗೆ ಚಾಲನೆ ನೀಡಿದ ಮಹೀಂದ್ರಾ

ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಹೊಸ ಶಕ್ತಿ ತುಂಬಲಿದೆ ಹ್ಯುಂಡೈ

ಸುಮಾರು 200ಕ್ಕೂ ಹೆಚ್ಚು ಎನ್‌ಜಿಓ ಸಂಸ್ಥೆಗಳ ಮೂಲಕ ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಹೊಸ ಶಕ್ತಿ ತುಂಬಲಿದೆ ಹ್ಯುಂಡೈ

ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಬಜಾಜ್ ಕಂಪನಿಯು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲೇ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವುದಾಗಿ ಘೋಷಣೆ ಮಾಡಿದೆ. ಇನ್ನು ಬಜಾಜ್ ಮಾತ್ರವಲ್ಲದೇ ಪ್ರಮುಖ ಆಟೋ ಕಂಪನಿಗಳು ವಿವಿಧ ಮಾದರಿಯ ನೆರವು ಘೋಷಣೆ ಮಾಡಿವೆ.

MOST READ: ಅತಿ ಕಡಿಮೆ ಬೆಲೆಯ ವೆಂಟಿಲೆಟರ್‌ಗಳ ಉತ್ಪಾದನೆಗೆ ಚಾಲನೆ ನೀಡಿದ ಮಹೀಂದ್ರಾ

ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಹೊಸ ಶಕ್ತಿ ತುಂಬಲಿದೆ ಹ್ಯುಂಡೈ

ಟಿವಿಎಸ್ ಮೋಟಾರ್ ಮತ್ತು ಅದರ ಅಂಗಸಂಸ್ಥೆಯಾದ ಸುಂದರಂ ಕ್ಲೈಟನ್ ಕಂಪನಿಯು ಕೂಡಾ ಕರೋನಾ ವಿರುದ್ಧ ಹೋರಾಟಕ್ಕಾಗಿ ಸರ್ಕಾರಕ್ಕೆ ರೂ.30 ಕೋಟಿ ಧನಸಹಾಯ ಘೋಷಣೆ ಮಾಡಿದ್ದು, ಇದರೊಂದಗೆ 10 ಲಕ್ಷ ಫೇಸ್ ಮಾಸ್ಕ್‌ಗಳನ್ನು ಸಿದ್ದಪಡಿಸುವುದಾಗಿ ಹೇಳಿಕೊಂಡಿದೆ.

ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಹೊಸ ಶಕ್ತಿ ತುಂಬಲಿದೆ ಹ್ಯುಂಡೈ

ಟಿವಿಎಸ್ ಮೋಟಾರ್ ಕಂಪನಿಯ ಸಾಮಾಜಿಕ ಸೇವಾ ವಿಭಾಗದ ಶ್ರೀನಿವಾಸನ್ ಸರ್ವಿಸ್ ಟ್ರಸ್ಟ್ ಮೂಲಕ ಅಗತ್ಯ ನೆರವು ನೀಡಲಾಗುತ್ತಿದ್ದು, ರೂ.30 ಧನಸಹಾಯದಲ್ಲೇ ವೆಂಟಿಲೆಟರ್‌ಗಳನ್ನು ನಿರ್ಮಾಣ ಮಾಡಿ ಅಗತ್ಯವಿರುವ ಸರ್ಕಾರಿ ಆಸ್ಪತ್ರೆಗಳಿಗೆ ಸರಬರಾಜು ಮಾಡಲಿದೆ. ಜೊತೆಗೆ ಗ್ರಾಮೀಣ ಭಾಗದಲ್ಲಿ ಸ್ವಚ್ಚತೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಶ್ರೀನಿವಾಸನ್ ಸರ್ವಿಸ್ ಟ್ರಸ್ಟ್ ಸಂಸ್ಥೆಯು ಹೊಸರು ಮತ್ತು ಮೈಸೂರಿನಲ್ಲಿ 10 ಟ್ರಕ್‌ಗಳ ಮೂಲಕ ನಂಜು ನಿರೋಧಕ(ಡಿಸ್ ಇನ್ಫೆಕ್ಷನ್) ರಾಸಾಯನಿಕವನ್ನು ಸಿಂಪರಣೆ ಮಾಡುತ್ತಿದೆ.

Most Read Articles

Kannada
English summary
Hyundai Motor India orders Covid-19 testing kit from South Korea details. Read in Kannada.
Story first published: Saturday, March 28, 2020, 16:00 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X