ಕೋವಿಡ್ 19: ವೆಂಟಿಲೆಟರ್ ಉತ್ಪಾದನೆಗೆ ಸಿದ್ದವಾದ ಹ್ಯುಂಡೈ ಇಂಡಿಯಾ

ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಹ್ಯುಂಡೈ ಇಂಡಿಯಾ ಕಂಪನಿಯು ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜೊತೆ ಕೈಜೋಡಿಸಿದ್ದು, ಹಣಕಾಸು ನೆರವು ನೀಡಿರುವುದಲ್ಲದೇ ವೈದ್ಯಕೀಯ ಉಪಕರಣಗಳ ಕೊರತೆಯನ್ನು ಸಹ ನೀಗಿಸುತ್ತಿದೆ.

ಕೋವಿಡ್ 19: ವೆಂಟಿಲೆಟರ್ ಉತ್ಪಾದನೆಗೆ ಸಿದ್ದವಾದ ಹ್ಯುಂಡೈ ಇಂಡಿಯಾ

ಹ್ಯುಂಡೈ ಇಂಡಿಯಾ ಕಂಪನಿಯು ವೈರಸ್ ವಿರುದ್ಧ ಹೋರಾಟಕ್ಕೆ ಕೇಂದ್ರ ಸರ್ಕಾರ ರೂ.5 ಕೋಟಿ ಧನಸಹಾಯ ಘೋಷಣೆ ಮಾಡಿರುವುದಲ್ಲದೇ ವೈದ್ಯಕೀಯ ಉಪಕರಣಗಳನ್ನು ಒದಗಿಸುವುದಾಗಿ ಹೇಳಿಕೊಂಡಿತ್ತು. ಇದೀಗ ಕೊಟ್ಟ ಮಾತಿನಂತೆ ವೈದ್ಯಕೀಯ ಉಪಕರಣಗಳ ತಯಾರಿಕಾ ಕಂಪನಿಗಳ ಜೊತೆಗೂಡಿ ವೆಂಟಿಲೆಟರ್ ಮತ್ತು ಏರ್ ಲಿಕ್ವಿಡ್ ಉತ್ಪಾದನೆ ಚಾಲನೆ ನೀಡಿದ್ದು, ಹೊಸ ವೆಂಟಿಲೆಟರ್‌ಗಳನ್ನು ಶೀಘ್ರದಲ್ಲೇ ಅಗತ್ಯ ವೈದ್ಯಕೀಯ ಸಂಶೋಧನಾ ಸಂಸ್ಥೆಗಳಿಗೆ ರವಾನೆ ಮಾಡಲಿದೆ.

ಕೋವಿಡ್ 19: ವೆಂಟಿಲೆಟರ್ ಉತ್ಪಾದನೆಗೆ ಸಿದ್ದವಾದ ಹ್ಯುಂಡೈ ಇಂಡಿಯಾ

ಇದಲ್ಲದೇ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಗೆ(ಐಸಿಎಂಆರ್) ನಿನ್ನೆಯಷ್ಟೇ 25 ಸಾವಿರ ಅಡ್ವಾನ್ಸ್ ಡಯಾಗ್ನೋಸ್ಟಿಕ್ ಕಿಟ್‌ಗಳನ್ನು ಒದಗಿಸಿದ್ದು, ಇದು ಅತಿ ಅವಧಿಯಲ್ಲಿ ಸೋಂಕಿತರಲ್ಲಿನ ರೋಗ ಪತ್ತೆಗೆ ನೆರವಾಗಲಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಕೋವಿಡ್ 19: ವೆಂಟಿಲೆಟರ್ ಉತ್ಪಾದನೆಗೆ ಸಿದ್ದವಾದ ಹ್ಯುಂಡೈ ಇಂಡಿಯಾ

ಇನ್ನು ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಲಾಕ್ ಡೌನ್ ವಿಧಿಸಲಾಗಿದ್ದು, ಎಲ್ಲಾ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಭಾರತ ಸೇರಿ ವಿಶ್ವದ ಹಲವು ರಾಷ್ಟ್ರಗಳ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದೆ.

ಕೋವಿಡ್ 19: ವೆಂಟಿಲೆಟರ್ ಉತ್ಪಾದನೆಗೆ ಸಿದ್ದವಾದ ಹ್ಯುಂಡೈ ಇಂಡಿಯಾ

ಇದರಿಂದ ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಗಿರುವ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಕೋವಿಡ್ 19: ವೆಂಟಿಲೆಟರ್ ಉತ್ಪಾದನೆಗೆ ಸಿದ್ದವಾದ ಹ್ಯುಂಡೈ ಇಂಡಿಯಾ

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಚಾಲನೆ ನೀಡಿವೆ.

ಕೋವಿಡ್ 19: ವೆಂಟಿಲೆಟರ್ ಉತ್ಪಾದನೆಗೆ ಸಿದ್ದವಾದ ಹ್ಯುಂಡೈ ಇಂಡಿಯಾ

ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗುತ್ತಿವೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಕೋವಿಡ್ 19: ವೆಂಟಿಲೆಟರ್ ಉತ್ಪಾದನೆಗೆ ಸಿದ್ದವಾದ ಹ್ಯುಂಡೈ ಇಂಡಿಯಾ

ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಆಟೋ ಕಂಪನಿಗಳು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲೇ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವುದಾಗಿ ಘೋಷಣೆ ಮಾಡಿವೆ.

ಕೋವಿಡ್ 19: ವೆಂಟಿಲೆಟರ್ ಉತ್ಪಾದನೆಗೆ ಸಿದ್ದವಾದ ಹ್ಯುಂಡೈ ಇಂಡಿಯಾ

ಇನ್ನು ಚೀನಾದಿಂದ ಶುರುವಾದ ಕರೋನಾ ವೈರಸ್ ದಾಳಿಯು ಇದೀಗ ಇಡೀ ವಿಶ್ವವನ್ನೇ ವ್ಯಾಪಿಸಿದ್ದು, ಇದುವರೆಗೆ 22 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿರುವುದಲ್ಲದೆ 1.54 ಲಕ್ಷ ಜನ ಪ್ರಾಣಕಳೆದುಕೊಂಡಿದ್ದಾರೆ. ಸೋಂಕಿತರಲ್ಲಿ ಇದುವರೆಗೆ ಸುಮಾರು 5.78 ಲಕ್ಷ ಜನ ಗುಣಮುಖರಾಗಿದ್ದು, ಶೇ.4 ರಷ್ಟು ಸೋಂಕು ಪಿಡಿತರ ಸ್ಥಿತಿ ಶೋಚನೀಯವಾಗಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಕೋವಿಡ್ 19: ವೆಂಟಿಲೆಟರ್ ಉತ್ಪಾದನೆಗೆ ಸಿದ್ದವಾದ ಹ್ಯುಂಡೈ ಇಂಡಿಯಾ

ಹೀಗಾಗೀ ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ವೈದ್ಯಕೀಯ ಉಪಕರಣಗಳ ಕೊರತೆಯು ಸೋಂಕಿತರ ಸಾವಿನ ಪ್ರಮಾಣ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಕೋವಿಡ್ 19: ವೆಂಟಿಲೆಟರ್ ಉತ್ಪಾದನೆಗೆ ಸಿದ್ದವಾದ ಹ್ಯುಂಡೈ ಇಂಡಿಯಾ

ಈ ಹಿನ್ನಲೆಯಲ್ಲಿ ಸದ್ಯ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ನಿರ್ಧರಿಸಲಾಗಿದ್ದು, ವೆಂಟಿಲೆಟರ್, ಮಾಸ್ಕ್‌, ಟೆಸ್ಟಿಂಗ್ ಕಿಟ್ ಉತ್ಪಾದನೆಗೆ ಪ್ರಮುಖ ಕಾರು ಕಂಪನಿಗಳು ಒಪ್ಪಿಗೆ ಸೂಚಿಸಿವೆ.

More from DriveSpark

Article Published On: Saturday, April 18, 2020, 15:14 [IST]
English summary
Hyundai Motor India to manufacture and supply ventilators. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+