Just In
- 55 min ago
ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಖರೀದಿ ಮೇಲೆ ಹೊಸ ವರ್ಷದ ಆಫರ್
- 1 hr ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 2 hrs ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 3 hrs ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
Don't Miss!
- News
ಕೊವ್ಯಾಕ್ಸಿನ್ ಬಗ್ಗೆ ಎಚ್ಚರ: ಲಸಿಕೆಯು ಯಾರಿಗೆ ಸೂಕ್ತ, ಯಾರಿಗೆ ಸೂಕ್ತವಲ್ಲ?
- Finance
34,000 ರುಪಾಯಿ ತನಕ ಕಾರುಗಳ ಬೆಲೆ ಏರಿಕೆ ಮಾಡಿದ ಮಾರುತಿ ಸುಜುಕಿ
- Sports
ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ದಕ್ಷಿಣ ಆಫ್ರಿಕಾದಲ್ಲಿ ಬಿಡುಗಡೆಯಾಗಲಿದೆ ಮೇಡ್ ಇನ್ ಇಂಡಿಯಾ ಹ್ಯುಂಡೈ ಕ್ರೆಟಾ
ಹ್ಯುಂಡೈ ಕಂಪನಿಯು ಭಾರತದಲ್ಲಿ ಮಾತ್ರವಲ್ಲ ಜಗತ್ತಿನ ಪ್ರಮುಖ ರಾಷ್ಟ್ರಗಳಲ್ಲಿನ ಕಾರು ಮಾರಾಟದಲ್ಲಿ ಮುಂಚೂಣಿ ವಾಹನ ಮಾರಾಟ ಕಂಪನಿಯಾಗಿ ಹೊರಹೊಮ್ಮಿದ್ದು, ಭಾರತದಲ್ಲಿ ನಿರ್ಮಾಣವಾದ ವಿವಿಧ ಕಾರು ಮಾದರಿಗಳನ್ನು ರಫ್ತುಗೊಳಿಸುವ ಮೂಲಕ ರಫ್ತು ಪ್ರಮಾಣದಲ್ಲೂ ಅಗ್ರಸ್ಥಾನದಲ್ಲಿದೆ.

ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಯಾಗಿರುವ ನ್ಯೂ ಜನರೇಷನ್ ಕ್ರೆಟಾ ಕಾರು ಮಾದರಿಯು ಭರ್ಜರಿ ಮಾರಾಟವಾಗುತ್ತಿದ್ದು, ಹೊಸ ಕಾರು ಶೀಘ್ರದಲ್ಲೇ ದಕ್ಷಿಣ ಆಫ್ರಿಕಾದಲ್ಲೂ ಬಿಡುಗಡೆಗೆ ಸಿದ್ದವಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಭಾರತದಲ್ಲಿ ನಿರ್ಮಾಣವಾಗುವ ಮಾರುತಿ ಸುಜುಕಿ, ಹ್ಯುಂಡೈ, ಮಹೀಂದ್ರಾ ಪ್ರಮುಖ ಕಾರು ಮಾದರಿಗಳು ಹೆಚ್ಚಿನ ಬೇಡಿಕೆ ಹೊಂದಿದ್ದು, ಹ್ಯುಂಡೈ ಕಂಪನಿಯು ತನ್ನ ಜನಪ್ರಿಯ ಎಸ್ಯುವಿ ಕಾರು ಮಾದರಿಯಾದ ಕ್ರೆಟಾ ಆವೃತ್ತಿಯನ್ನು ಇದೀಗ ಅಂತರ್ರಾಷ್ಟ್ರೀಯ ಮಾರುಕಟ್ಟೆಗಳಿಗೆ ಬಿಡುಗಡೆ ಮಾಡಲಾಗುತ್ತಿದೆ.

ಕ್ರೆಟಾ ಕಾರು ಮಾದರಿಯು ಈಗಾಗಲೇ ಯುರೋಪ್ ಮತ್ತು ಆಫ್ರಿಕಾದ ಪ್ರಮುಖ 86 ರಾಷ್ಟ್ರಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಸಂಪೂರ್ಣವಾಗಿ ಭಾರತದಲ್ಲೇ ನಿರ್ಮಾಣಗೊಂಡ ರಫ್ತು ಮಾದರಿಯಾಗಿದೆ.

ಭಾರತದಿಂದ ಇದುವರೆಗೆ ಕ್ರೆಟಾ ಕಾರು ಮಾದರಿಯೊಂದೆ ಬರೋಬ್ಬರಿ 2 ಲಕ್ಷ ಯುನಿಟ್ ಮಾರಾಟಗೊಂಡ ದಾಖಲೆಯಿದ್ದು, ಶೀಘ್ರದಲ್ಲೇ ದಕ್ಷಿಣ ಆಫ್ರಿಕಾದಲ್ಲೂ ಹೊಸ ಕಾರಿನ ಮಾರಾಟವು ಚಾಲನೆ ಪಡೆದುಕೊಳ್ಳಲಿದೆ.

ದಕ್ಷಿಣ ಆಫ್ರಿಕಾದಲ್ಲಿ ಹ್ಯುಂಡೈ ನಿರ್ಮಾಣದ ಗ್ರಾಂಡ್ ಐ10, ಐ20 ಮತ್ತು ವೆನ್ಯೂ ಕಾರುಗಳು ಈಗಾಗಲೇ ಮಾರಾಟಗೊಳ್ಳತ್ತಿದ್ದು, ಇದೇ ಮೊದಲ ಬಾರಿಗೆ ಕ್ರೆಟಾ ಮಾದರಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಆದರೆ ದಕ್ಷಿಣ ಆಫ್ರಿಕಾದಲ್ಲಿ ಬಿಡುಗಡೆಯಾಗಲಿರುವ ಕ್ರೆಟಾ ಕಾರು ಮಾದರಿಯು ಭಾರತದಲ್ಲಿನ ಮಾದರಿಗಿಂತಲೂ ತುಸು ಭಿನ್ನವಾಗಿರಲಿದ್ದು, ಎಂಜಿನ್ ಆಯ್ಕೆ ಮತ್ತು ತಾಂತ್ರಿಕ ಅಂಶಗಳು ಅಲ್ಲಿನ ಮಾರುಕಟ್ಟೆಯ ಬೇಡಿಕೆಯನ್ನು ಆಧಾರಿಸಿ ಜೋಡಣೆ ಪಡೆದುಕೊಳ್ಳಲಿದೆ.

ಸದ್ಯ ದೇಶಿಯ ಮಾರುಕಟ್ಟೆಯಲ್ಲಿರುವ ಕ್ರೆಟಾ ಕಾರು ಮಾದರಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 9.81 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.32 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಪ್ರಮುಖ ಎಂಜಿನ್ ಆಯ್ಕೆ ಹೊಂದಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ನ್ಯೂ ಜನರೇಷನ್ ಕ್ರೆಟಾ ಕಾರು ಗ್ರಾಹಕರ ಬೇಡಿಕೆಯೆಂತೆ ಒಟ್ಟು 6 ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬಿಎಸ್-6 ವೈಶಿಷ್ಟ್ಯತೆಯ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಮತ್ತು ಪರ್ಫಾಮೆನ್ಸ್ ಪ್ರಿಯರಿಗಾಗಿ 1.4-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯ ಆಯ್ಕೆ ಹೊಂದಿದೆ.

1.5-ಲೀಟರ್ ಪೆಟ್ರೋಲ್ ಆವೃತ್ತಿಯು 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್ಪಿ, 144-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದ್ದಲ್ಲಿ 1.5-ಲೀಟರ್ ಡೀಸೆಲ್ ಮಾದರಿಯು ಸಹ 6-ಸ್ಪೀಡ್ ಮ್ಯಾನುವಲ್ ಅಥವಾ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 115-ಬಿಎಚ್ಪಿ, 250-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ಭಾರತದಲ್ಲಿ ಎರಡು ಹೊಸ ಎಸ್ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಇದಲ್ಲದೆ ಹ್ಯುಂಡೈ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಕ್ರೆಟಾ ಕಾರಿನಲ್ಲಿ ಹೊಸದಾಗಿ 7 ಸೀಟರ್ ಮಾದರಿಯನ್ನು ಸಹ ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಸಾಮಾನ್ಯ ಕಾರಿನ ಪ್ಲ್ಯಾಟ್ಫಾರ್ಮ್ ಅಡಿಯಲ್ಲೇ ಮೂರು ಸಾಲಿನ ಆಸನ ಸೌಲಭ್ಯವನ್ನು ಪಡೆದುಕೊಳ್ಳಲಿದೆ.