Just In
- 1 hr ago Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- 14 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 16 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 16 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
Don't Miss!
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- News ಲೋಕಸಭೆ ಚುನಾವಣೆ : ಶೇ 100ರಷ್ಟು ಮತದಾನವಾದರೆ ಸಿಗಲಿದೆ ಪ್ರಶಸ್ತಿ
- Sports IPL 2024: ಮತ್ತೊಂದು ರೋಚಕ ಪಂದ್ಯದಲ್ಲಿ SRH vs RCB ಕದನ; ಪಂದ್ಯದ ವಿವರ, ಸಂಭಾವ್ಯ ಆಡುವ 11ರ ಬಳಗ
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಹ್ಯುಂಡೈ ಪಾಲಿಸೆಡ್ ಐಷಾರಾಮಿ ಎಸ್ಯುವಿ ಬಿಡುಗಡೆಯಾಗುವುದು ಪಕ್ಕಾ..!
ಹ್ಯುಂಡೈ ಇಂಡಿಯಾ ಕಂಪನಿಯಯು ಮುಂಬರುವ ದಿನಗಳಲ್ಲಿ ವಿವಿಧ ಮಾದರಿಯ ಹಲವು ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಆಮದು ನೀತಿ ಅಡಿ ಐಷಾರಾಮಿ ಎಸ್ಯುವಿ ಮತ್ತು ಎಂಪಿವಿ ಕಾರುಗಳನ್ನು ಬಿಡುಗಡೆ ಮಾಡಲುವ ಯೋಜನೆಯಲ್ಲಿದೆ.
ಹೊಸ ಕಾರುಗಳ ಮಾರಾಟದಲ್ಲಿ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಬೆಳವಣಿಗೆ ಸಾಧಿಸುತ್ತಿರುವ ಹ್ಯುಂಡೈ ಕಂಪನಿಯು ಮಧ್ಯಮ ಗಾತ್ರದ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಸಾಕಷ್ಟು ಮುನ್ನಡೆ ಸಾಧಿಸಿದ್ದು, ಇದೀಗ ಮಾರುಕಟ್ಟೆ ವಿಸ್ತರಣೆಗಾಗಿ ಪ್ರೀಮಿಯಂ ಮಾದರಿಯ ಎಂಪಿವಿ ಮತ್ತು ಎಸ್ಯುವಿ ಕಾರುಗಳ ಮಾರಾಟದತ್ತ ಎದುರು ನೋಡುತ್ತಿದೆ. ಮಾರುಕಟ್ಟೆಯಲ್ಲಿ ಸದ್ಯ ಭಾರೀ ಜನಪ್ರಿಯತೆ ಹೊಂದಿರುವ ಟೊಯೊಟಾ ಫಾರ್ಚೂನರ್ ಮತ್ತು ಇನೋವಾ ಕ್ರಿಸ್ಟಾ ಕಾರುಗಳಿಗೆ ಪೈಪೋಟಿಯಾಗಿ ಹ್ಯುಂಡೈ ಹೊಸ ಕಾರುಗಳು ಮಾರುಕಟ್ಟೆಯನ್ನು ಪ್ರವೇಶಿಸಲಿವೆ.
ಹ್ಯುಂಡೈ ಕಂಪನಿಯು ಪ್ರೀಮಿಯಂ ಮಾದರಿಯ ಎಂಪಿವಿ ಮತ್ತು ಎಸ್ಯುವಿ ಕಾರುಗಳ ಬಿಡುಗಡೆಗಾಗಿ ಈಗಾಗಲೇ ಹಲವು ಸುತ್ತಿನ ಮಾರುಕಟ್ಟೆ ಅಧ್ಯಯನ ನಡೆಸಿದ್ದು, ಫುಲ್ ಸೈಜ್ ಎಸ್ಯುವಿ ಮತ್ತು ಎಂಪಿವಿ ಕಾರುಗಳತ್ತ ಗಮನಹರಿಸುತ್ತಿದೆ.
ಭಾರತದಲ್ಲಿ ಪ್ರೀಮಿಯಂ ಆವೃತ್ತಿಗಳ ಮಾರಾಟಕ್ಕೆ ಉತ್ತಮ ಮಾರುಕಟ್ಟೆ ಇರುವುದಾಗಿ ಹೇಳಿಕೊಂಡಿರುವ ಹ್ಯುಂಡೈ ಕಂಪನಿಯು ಯುರೋಪ್ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಲ್ಲಿರುವ 7 ಸೀಟರ್ ಎಸ್ಯುವಿ ಮತ್ತು 9 ಸೀಟರ್ ಎಂಪಿವಿ ಕಾರನ್ನು ಪರಿಚಯಿಸುವುದಾಗಿ ಹೇಳಿಕೊಂಡಿದೆ.
ಮಾಹಿತಿಗಳ ಪ್ರಕಾರ, ಎಸ್ಯುವಿ ಮಾದರಿಯಾಗಿ ಪಾಲಿಸೆಡ್ ಮತ್ತು ಎಂಪಿವಿ ಆವೃತ್ತಿಯಾಗಿ ಸ್ಟಾರೆಕ್ಸ್ ಕಾರುಗಳನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಪಾಲಿಸೆಡ್ ಕಾರು ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರುಗಳಿಗೆ ಪೈಪೋಟಿ ನೀಡಲಿದ್ದರೆ ಸ್ಟಾರೆಕ್ಸ್ ಎಂಪಿವಿ ಕಾರು ಟೊಯೊಟಾ ಇನೋವಾ ಕ್ರಿಸ್ಟಾ ಮತ್ತು ಕಿಯಾ ಕಾರ್ನಿವಾಲ್ ಕಾರುಗಳ ನಡುವಿನ ಸ್ಥಾನದೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.
ಹೀಗಾಗಿ ಹೊಸ ಕಾರುಗಳು ಭಾರತದಲ್ಲಿ ಉತ್ತಮ ಪೈಪೋಟಿ ನೀಡುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಕೇಂದ್ರ ಸರ್ಕಾರವು ಕಳೆದ ವರ್ಷ ಜಾರಿಗೆ ತಂದಿರುವ ಆಮದು ನೀತಿಯಲ್ಲಿನ ತಿದ್ದುಪಡಿ ಕೂಡಾ ಹ್ಯುಂಡೈ ಸೇರಿದಂತೆ ಹಲವು ವಿದೇಶಿ ವಾಹನ ಕಂಪನಿಗಳಿಗೆ ವರದಾನವಾಗಿದೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಆಮದು ನೀತಿಯಡಿ ವಿದೇಶಿ ಮಾರುಕಟ್ಟೆಗಳಿಂದ ವಾಹನ ಕಂಪನಿಗಳು ತಮ್ಮದೆ ಉತ್ಪಾದನೆಯ 2500 ವಾಹನಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡಬಹುದಾಗಿದ್ದು, ಇದೀಗ ಹ್ಯುಂಡೈ ಸೇರಿದಂತೆ ಹಲವು ಕಾರು ಕಂಪನಿಗಳು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಕೆಲವು ಕಾರು ಮಾದರಿಗಳನ್ನು ಸೀಮಿತ ಪ್ರಮಾಣದಲ್ಲಿ ಮಾರಾಟಕ್ಕೆ ಮುಂದಾಗಿವೆ.
ಮಾಹಿತಿಗಳ ಪ್ರಕಾರ, ಹೊಸ ಕಾರುಗಳನ್ನು 2021-22ರ ಹಣಕಾಸು ವರ್ಷದ ಅವಧಿಯೊಳಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಹ್ಯುಂಡೈ ಕಂಪನಿಯು ಬಿಡುಗಡೆಗೂ ಮುನ್ನ ಎಂಜಿನ್ ಆಯ್ಕೆ ಮತ್ತು ಬೆಲೆ ವಿಚಾರದಲ್ಲಿ ಮಾರುಕಟ್ಟೆ ಅಧ್ಯಯನವನ್ನು ಪರಿಣಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಿದೆ.
ಹೊಸ ಕಾರುಗಳು ಮೇಲೆ ಹೇಳಿದಂತೆ ಐಷಾರಾಮಿ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದ್ದು, ಬೆಲೆಯಲ್ಲೂ ಕೂಡಾ ತುಸು ದುಬಾರಿಯಾಗಿರಲಿವೆ. ಪಾಲಿಸೆಡ್ ಕಾರು ಎಕ್ಸ್ಶೋರೂಂ ಪ್ರಕಾರ ರೂ.28 ಲಕ್ಷದಿಂದ ರೂ.32 ಲಕ್ಷ ಬೆಲೆ ಹೊಂದಿದ್ದರೆ ಸ್ಟಾರೆಕ್ಸ್ ಕಾರು ಎಕ್ಸ್ಶೋರೂಂ ಪ್ರಕಾರ ರೂ. 24 ಲಕ್ಷದಿಂದ ರೂ.30 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.
ಎಂಜಿನ್ ಸಾಮರ್ಥ್ಯ
ಪಾಲಿಸೆಡ್ ಎಸ್ಯುವಿ ಮಾದರಿಯು ವಿದೇಶಿ ಮಾರುಕಟ್ಟೆಗಳಲ್ಲಿ 3.8-ಲೀಟರ್ ಪೆಟ್ರೋಲ್ ಎಂಜಿನ್ನೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗುವಾಗ ಕಿಯಾ ಕಾರ್ನಿವಾಲ್ನಲ್ಲಿ ನೀಡಲಾಗಿರುವ 200-ಬಿಎಚ್ಪಿ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿವೆ.