ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಉತ್ಪನ್ನಗಳ ಬಿಡುಗಡೆಗೆ ಸಿದ್ದವಾಗಿದ್ದು, ಎರಡು ಹೊಸ ಎಸ್‌ಯುವಿ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಎಂಟ್ರಿ ಲೆವಲ್ ಕಾರು ಮಾದರಿಗಳಿಂದ ಹಿಡಿದು ಮಧ್ಯಮ ಗಾತ್ರದ ಎಸ್‌ಯುವಿ ಮಾದರಿಗಳ ತನಕ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಹ್ಯುಂಡೈ ಕಂಪನಿಯು ಎಸ್‌ಯುವಿ ಶ್ರೇಣಿಯನ್ನು ವಿಸ್ತರಿಸುವ ಯೋಜನೆಯಲ್ಲಿದ್ದು, ಮಾಹಿತಿಗಳ ಪ್ರಕಾರ ಹ್ಯುಂಡೈ ಕಂಪನಿಯು ಎಂಜಿ ಹೆಕ್ಟರ್ ಪ್ಲಸ್ ಮತ್ತು ಟಾಟಾ ಗ್ರಾವಿಟಾಸ್ ಕಾರುಗಳಿಗೆ ಪೈಪೋಟಿ ಕ್ರೆಟಾ 7 ಸೀಟರ್ ಮತ್ತು ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರು ಮಾದರಿಗಳಿಗೆ ಪೈಪೋಟಿಯಾಗಿ ಪಾಲಿಸೆಡ್ ಎಸ್‌ಯುವಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹ್ಯುಂಡೈ ಕಂಪನಿಯು ಪ್ರೀಮಿಯಂ ಮಾದರಿಯ ಎಂಪಿವಿ ಮತ್ತು ಎಸ್‌ಯುವಿ ಕಾರುಗಳ ಬಿಡುಗಡೆಗಾಗಿ ಈಗಾಗಲೇ ಹಲವು ಸುತ್ತಿನ ಮಾರುಕಟ್ಟೆ ಅಧ್ಯಯನ ನಡೆಸಿದ್ದು, ಫುಲ್ ಸೈಜ್ ಎಸ್‌ಯುವಿ ಮತ್ತು ಎಂಪಿವಿ ಕಾರುಗಳತ್ತ ಗಮನಹರಿಸುತ್ತಿದೆ.

ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಭಾರತದಲ್ಲಿ ಪ್ರೀಮಿಯಂ ಕಾರು ಆವೃತ್ತಿಗಳ ಮಾರಾಟಕ್ಕೆ ಉತ್ತಮ ಮಾರುಕಟ್ಟೆ ಇರುವುದಾಗಿ ಹೇಳಿಕೊಂಡಿರುವ ಹ್ಯುಂಡೈ ಕಂಪನಿಯು, ಯುರೋಪ್ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಲ್ಲಿರುವ ಹೊಸ 7 ಸೀಟರ್ ಎಸ್‌ಯುವಿ ಮತ್ತು 9 ಸೀಟರ್ ಎಂಪಿವಿ ಕಾರನ್ನು ಪರಿಚಯಿಸುವುದಾಗಿ ಖಚಿತಪಡಿಸಿದೆ.

ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಮಾಹಿತಿಗಳ ಪ್ರಕಾರ, ಐಷಾರಾಮಿ ಎಸ್‌ಯುವಿ ಮಾದರಿಯಾಗಿ ಪಾಲಿಸೆಡ್ ಮತ್ತು ಎಂಪಿವಿ ಆವೃತ್ತಿಯಾಗಿ ಸ್ಟಾರೆಕ್ಸ್ ಕಾರುಗಳನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಪಾಲಿಸೆಡ್ ಕಾರು ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರುಗಳಿಗೆ ಪೈಪೋಟಿ ನೀಡಲಿದ್ದರೆ ಸ್ಟಾರೆಕ್ಸ್ ಎಂಪಿವಿ ಕಾರು ಟೊಯೊಟಾ ಇನೋವಾ ಕ್ರಿಸ್ಟಾ ಮತ್ತು ಕಿಯಾ ಕಾರ್ನಿವಾಲ್ ಕಾರುಗಳ ನಡುವಿನ ಸ್ಥಾನದೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹಾಗೆಯೇ ಕ್ರೆಟಾ ಕಾರು ಮಾದರಿಯಲ್ಲೇ ಬಿಡುಗಡೆ ಮಾಡಲಾಗುತ್ತಿರುವ 7 ಸೀಟರ್ ಮಾದರಿಯು ಕೂಡಾ ಎಸ್‌ಯುವಿ ಕಾರು ಮಾದರಿಗಳಿಗೆ ಮಾತ್ರವಲ್ಲ ಎಂಪಿವಿ ಕಾರು ಖರೀದಿದಾರರನ್ನು ಸಹ ಸೆಳೆಯಲಿದ್ದು, 5 ಸೀಟರ್ ಮಾದರಿಗಿಂತ 7 ಸೀಟರ್ ಮಾದರಿಯು ಹೆಚ್ಚುವರಿ ರೂ.1 ಲಕ್ಷದಿಂದ ರೂ.2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.

ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

2+3+2 ಆಸನ ಸೌಲಭ್ಯ ಪಡೆದುಕೊಳ್ಳಲಿರುವ 7 ಸೀಟರ್ ಕ್ರೆಟಾ ಮಾದರಿಯು ಸಾಮಾನ್ಯ ಕಾರಿನಲ್ಲಿರುವಂತೆಯೇ ಎಂಜಿನ್ ಆಯ್ಕೆ ಹೊಂದಿಲಿದ್ದು, ಹೊಸ ಕಾರು ತುಸು ದುಬಾರಿ ಬೆಲೆ ಹೊಂದಿರಲಿದೆ. ಮುಂಬರುವ ಅಕ್ಟೋಬರ್ ಅಥವಾ ನವೆಂಬರ್ ಹೊತ್ತಿಗೆ ಹೊಸ ಕಾರು ಬಿಡುಗಡೆಯಾಗಲಿದ್ದು, ದುಬಾರಿ ಬೆಲೆಯ ಎಂಪಿವಿ ಕಾರುಗಳಿಗೆ ಹೊಸ ಕಾರು ಪೈಪೋಟಿ ನೀಡಲಿದೆ.

ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಇನ್ನು ಪಾಲಿಸೆಡ್ ಎಸ್‌ಯುವಿ ಮಾದರಿಯು ಭಾರತದಲ್ಲಿ ಜನಪ್ರಿಯವಾಗಿರುವ ಫುಲ್ ಸೈಜ್ ಎಸ್‌ಯುವಿ ಮಾದರಿಗಳಾದ ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರು ಮಾದರಿಗಳಿಗೆ ಪೈಪೋಟಿ ನೀಡಲಿದ್ದು, ವಿದೇಶಿ ಮಾರುಕಟ್ಟೆಗಳಲ್ಲಿ ಪಾಲಿಸೆಡ್ ಕಾರು ವಿಶೇಷ ಎಂಜಿನ್ ಸೌಲಭ್ಯದೊಂದಿಗೆ ಮಾರಾಟವಾಗುತ್ತಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಈ ಕಾರು ಭಾರತದಲ್ಲೂ ಯಶಸ್ವಿಯಾಗುವ ಬಗೆಗೆ ಮಾರುಕಟ್ಟೆ ಅಧ್ಯಯನ ನಡೆಸಿರುವ ಹ್ಯುಂಡೈ ಕಂಪನಿಯು ಹೊಸ ಕಾರನ್ನು ರೂ. 30 ಲಕ್ಷದಿಂದ ರೂ.35 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರಿನ ಎಂಜಿನ್ ಮಾಹಿತಿ ಬಗೆಗೆ ಖಚಿತ ಮಾಹಿತಿಯಿಲ್ಲ

ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಪಾಲಿಸೆಡ್ ಎಸ್‌ಯುವಿ ಮಾದರಿಯು ಸದ್ಯ ವಿದೇಶಿ ಮಾರುಕಟ್ಟೆಗಳಲ್ಲಿ 3.8-ಲೀಟರ್ ವಿ-6 ಪೆಟ್ರೋಲ್ ಎಂಜಿನ್‌ನೊಂದಿಗೆ ಮಾರಾಟವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾಗುವಾಗ ಪಾಲಿಸೆಡ್ ಕಾರು ಕಿಯಾ ಕಾರ್ನಿವಾಲ್‌ ಕಾರಿನಲ್ಲಿ ಬಳಕೆ ಮಾಡಲಾಗಿರುವ 200-ಬಿಎಚ್‌ಪಿ ಪ್ರೇರಿತ 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಇನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಆಮದು ನೀತಿ ಅಡಿಯಲ್ಲಿ ವಿದೇಶಿ ಮಾರುಕಟ್ಟೆಗಳಿಂದ ವಾಹನ ಕಂಪನಿಗಳು ತಮ್ಮದೆ ಉತ್ಪಾದನೆಯ 2500 ವಾಹನಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡಬಹುದಾಗಿದ್ದು, ಇದೀಗ ಹ್ಯುಂಡೈ ಸೇರಿದಂತೆ ಹಲವು ಕಾರು ಕಂಪನಿಗಳು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಕೆಲವು ಕಾರು ಮಾದರಿಗಳನ್ನು ಸೀಮಿತ ಪ್ರಮಾಣದಲ್ಲಿ ಮಾರಾಟಕ್ಕೆ ಮುಂದಾಗಿವೆ.

Most Read Articles

Kannada
English summary
Hyundai Planning To Launch Two New SUVs In India Soon. Read in Kannada.
Story first published: Friday, August 28, 2020, 14:03 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X