ಶೀಘ್ರದಲ್ಲೇ ಕಾರು ಉತ್ಪಾದನೆಗೆ ಚಾಲನೆ ನೀಡಲಿದೆ ಹ್ಯುಂಡೈ ಇಂಡಿಯಾ

ಕರೋನಾ ವೈರಸ್ ಮಟ್ಟ ಹಾಕುವುದಕ್ಕಾಗಿ ಸದ್ಯ ಮೂರನೇ ಹಂತದ ಲಾಕ್‌ಡೌನ್ ವಿಧಿಸಿರುವ ಕೇಂದ್ರ ಸರ್ಕಾರವು ಆರ್ಥಿಕ ಪುನಶ್ಚೇತನಕ್ಕಾಗಿ ಕೈಗಾರಿಕಾ ವಲಯಕ್ಕೆ ಕೆಲವು ವಿನಾಯ್ತಿಗಳನ್ನು ಘೋಷಿಸಿದ್ದು, ಆಟೋ ಕಂಪನಿಗಳು ಕೂಡಾ ಹೊಸ ಮಾರ್ಗಸೂಚಿ ಅನುಸಾರವಾಗಿ ವಾಹನ ಉತ್ಪಾದನೆಗೆ ಸಿದ್ದವಾಗಿವೆ.

ಶೀಘ್ರದಲ್ಲೇ ಕಾರು ಉತ್ಪಾದನೆಗೆ ಚಾಲನೆ ನೀಡಲಿದೆ ಹ್ಯುಂಡೈ ಇಂಡಿಯಾ

ಹ್ಯುಂಡೈ ಕೂಡಾ ಕೇಂದ್ರ ಸರ್ಕಾರದ ಹೊಸ ಮಾರ್ಗಸೂಚಿ ಪ್ರಕಾರ ಕಾರು ಉತ್ಪಾದನೆಗೆ ಸಿದ್ದವಾಗಿದ್ದು, ಮೇ 6ರಿಂದ ಚೆನ್ನೈ ಹೊರವಲಯದಲ್ಲಿರುವ ಕಾರು ಉತ್ಪಾದನಾ ಘಟಕದಲ್ಲಿ ಉತ್ಪಾದನಾ ಪ್ರಕ್ರಿಯೆಯನ್ನು ಪುನಾರಂಭಿಸಲು ಸಿದ್ದತೆ ನಡೆಸಿದೆ. ಹೊಸ ಸುರಕ್ಷಾ ಮಾರ್ಗಸೂಚಿ ಅನುಸಾರವಾಗಿ ಕಾರು ಉತ್ಪಾದನೆಗೆ ಸಿದ್ದವಾಗಿರುವ ಹ್ಯುಂಡೈ ಕಂಪನಿಯು ಉದ್ಯೋಗಿಗಳಿಗೆ ಗರಿಷ್ಠ ಸುರಕ್ಷಾ ಮಾರ್ಗಗಳನ್ನು ಸಿದ್ದಪಡಿಸಿಕೊಂಡಿದೆ.

ಶೀಘ್ರದಲ್ಲೇ ಕಾರು ಉತ್ಪಾದನೆಗೆ ಚಾಲನೆ ನೀಡಲಿದೆ ಹ್ಯುಂಡೈ ಇಂಡಿಯಾ

ಇದಲ್ಲದೇ ವಾಹನ ಮತ್ತು ಬಿಡಿಭಾಗಗಳ ಉತ್ಪಾದನೆಗೆ ಮರುಚಾಲನೆ ನೀಡಿರುವ ವಿವಿಧ ಆಟೋ ಕಂಪನಿಗಳು ಸಹ ಸೋಂಕು ಹರಡದಂತೆ ಈಗಾಗಲೇ ಹಲವಾರು ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ನಿರ್ದಿಷ್ಟ ಪ್ರಮಾಣದ ಉದ್ಯೋಗಿಗಳೊಂದಿಗೆ ಉತ್ಪಾದನಾ ಚಟುವಟಿಕೆಗಳನ್ನು ಆರಂಭಿಸಲಾಗಿದೆ.

MOST READ: ಲಾಕ್‌ಡೌನ್ ಎಫೆಕ್ಟ್: ನಿಯಮ ಉಲ್ಲಂಘಿಸಿದ ಜಿಲ್ಲಾಧಿಕಾರಿ ಕಾರನ್ನೇ ತಡೆದ ಕಾನ್ಸ್‌ಸ್ಟೆಬಲ್..!

ಶೀಘ್ರದಲ್ಲೇ ಕಾರು ಉತ್ಪಾದನೆಗೆ ಚಾಲನೆ ನೀಡಲಿದೆ ಹ್ಯುಂಡೈ ಇಂಡಿಯಾ

ಮಾರುತಿ ಸುಜುಕಿ, ಬಜಾಜ್ ಆಟೋ, ಟಿವಿಎಸ್, ಟೊಯೊಟಾ, ಮಹೀಂದ್ರಾ ಸೇರಿದಂತೆ ಬಿಡಿಭಾಗಗಳ ಉತ್ಪಾದನಾ ಕಂಪನಿಗಳಾದ ಲುಮ್ಯಾಕ್ಸ್, ಸೆಟ್ಕೋ, ಪ್ರಿಕೊಲ್ ಮತ್ತು ಅಪೊಲೋ ಕಂಪನಿಗಳು ಕೂಡಾ ಉತ್ಪಾದನಾ ಚಟುವಟಿಕೆಗೆ ಮರುಚಾಲನೆ ನೀಡಿವೆ.

ಶೀಘ್ರದಲ್ಲೇ ಕಾರು ಉತ್ಪಾದನೆಗೆ ಚಾಲನೆ ನೀಡಲಿದೆ ಹ್ಯುಂಡೈ ಇಂಡಿಯಾ

ಕೇಂದ್ರ ಸರ್ಕಾರ ನೀಡಿರುವ ಹೊಸ ಗೈಡ್‌ಲೆನ್ಸ್ ಪ್ರಕಾರ, ಹಸಿರು ವಲಯದಲ್ಲಿರುವ ಮುನ್ಸಿಪಲ್ ಕಾರ್ಪೊರೇಶನ್ ಮಿತಿ ಹೊರಗಿನ ಕೈಗಾರಿಕಾ ಸಂಸ್ಥೆಗಳಿಗೆ ಕಾರ್ಯಾಚರಣೆಯನ್ನು ಪುನರಾರಂಭಿಸಲು ಅನುಮತಿ ನೀಡಲಾಗುತ್ತಿದ್ದು, ಗರಿಷ್ಠ ಪ್ರಮಾಣದ ಸುರಕ್ಷಾ ಸಾಧನಗಳನ್ನು ಬಳಕೆ ಮಾಡುವುದು ಕಡ್ಡಾಯವಾಗಿದೆ.

MOST READ: ಲಾಕ್‌ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..

ಶೀಘ್ರದಲ್ಲೇ ಕಾರು ಉತ್ಪಾದನೆಗೆ ಚಾಲನೆ ನೀಡಲಿದೆ ಹ್ಯುಂಡೈ ಇಂಡಿಯಾ

ಸದ್ಯ ಉತ್ಪಾದನೆಗೆ ಅನುಮತಿ ಪಡೆದುಕೊಂಡಿರುವ ಕೈಗಾರಿಕಾ ಸಂಸ್ಥೆಗಳು ಕೇವಲ ಶೇ.33 ರಷ್ಟು ಪ್ರಮಾಣದ ಉದ್ಯೋಗಿಗಳೊಂದಿಗೆ ಉತ್ಪಾದನಾ ಚಟುವಟಿಕೆಗಳನ್ನು ಕೈಗೊಳ್ಳಬಹುದಾಗಿದ್ದು, ಉದ್ಯೋಗದ ಸ್ಥಳದಲ್ಲಿ ಸಾಮಾಜಿಕ ಅಂತರದ ಜೊತೆ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್ ಮತ್ತು ಹ್ಯಾಂಡ್ ಗ್ಲೌಸ್ ಬಳಕೆಯು ಕಡ್ಡಾಯವಾಗಿರಲಿದೆ.

ಶೀಘ್ರದಲ್ಲೇ ಕಾರು ಉತ್ಪಾದನೆಗೆ ಚಾಲನೆ ನೀಡಲಿದೆ ಹ್ಯುಂಡೈ ಇಂಡಿಯಾ

ಒಟ್ಟಿನಲ್ಲಿ ಇಷ್ಟು ದಿನಗಳ ಕಾಲ ಯಾವುದೇ ಉತ್ಪಾದನಾ ಚಟುವಟಿಕೆಗಳಿಲ್ಲದೆ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದ ಕೈಗಾರಿಕೆ ವಲಯಕ್ಕೆ ಇದೀಗ ನೀಡಿರುವ ಕೆಲವು ವಿನಾಯ್ತಿಗಳಿಂದ ಉತ್ಪಾದನೆಗೆ ಮತ್ತೆ ಚಾಲನೆ ಸಿಕ್ಕಿರುವುದು ತುಸು ಸಮಾಧಾನ ತಂದಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಶೀಘ್ರದಲ್ಲೇ ಕಾರು ಉತ್ಪಾದನೆಗೆ ಚಾಲನೆ ನೀಡಲಿದೆ ಹ್ಯುಂಡೈ ಇಂಡಿಯಾ

ಆದರೆ ಉತ್ಪಾದನಾ ಸ್ಥಳದಲ್ಲಿ ಗರಿಷ್ಠ ಪ್ರಮಾಣದ ಸುರಕ್ಷತೆಯನ್ನು ತೆಗೆದುಕೊಳ್ಳಬೇಕಿರುವುದು ಆಯಾ ಕಂಪನಿಗಳ ಆದ್ಯ ಕರ್ತವ್ಯವಾಗಿದ್ದು, ಆಟೋ ಉತ್ಪಾದನಾ ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಗರಿಷ್ಠ ಸುರಕ್ಷತೆ ನೀಡುವ ಖಾತ್ರಿ ವ್ಯಕ್ತಪಡಿಸಿವೆ.

ಶೀಘ್ರದಲ್ಲೇ ಕಾರು ಉತ್ಪಾದನೆಗೆ ಚಾಲನೆ ನೀಡಲಿದೆ ಹ್ಯುಂಡೈ ಇಂಡಿಯಾ

ಇನ್ನು ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡಿ ಪೂರೈಕೆ ಮಾಡುತ್ತಿವೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಶೀಘ್ರದಲ್ಲೇ ಕಾರು ಉತ್ಪಾದನೆಗೆ ಚಾಲನೆ ನೀಡಲಿದೆ ಹ್ಯುಂಡೈ ಇಂಡಿಯಾ

ಆಟೋ ಉತ್ಪಾದನಾ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದ್ದರಿಂದ ವೈದ್ಯಕೀಯ ಉಪಕರಣಗಳ ಉತ್ಪಾದನೆ ಹೆಚ್ಚಿನ ಒತ್ತುನೀಡಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ದೇಣಿಗೆ ಜೊತೆಗೆ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್, ಪ್ರೋಟೆಕ್ವಿಟ್ ಕ್ಲಾಥ್, ರ‍್ಯಾಪಿಡ್ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಉತ್ಪನ್ನಗಳನ್ನು ಸಿದ್ದಪಡಿಸುತ್ತಿವೆ.

More from DriveSpark

Article Published On: Monday, May 4, 2020, 19:22 [IST]
English summary
Hyundai to reopen Chennai factory from May 6. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+