ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕಂಪನಿಯ 'ಕ್ಲಿಕ್ ಟು ಬೈ' ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌

ಕರೋನಾ ವೈರಸ್ ಮಾಹಾಮಾರಿ ಅಟ್ಟಹಾಸವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಆಟೋ ಉದ್ಯಮದಲ್ಲಿ ಸುರಕ್ಷಿತ ವ್ಯಾಪಾರ-ವಹಿವಾಟು ಇದೀಗ ಹೊಸ ಸವಾಲಾಗಿ ಪರಿಣಮಿಸಿದೆ. ಇದರಿಂದ ಬಹುತೇಕ ಆಟೋ ಕಂಪನಿಗಳು ಆನ್‌ಲೈನ್ ವಹಿವಾಟಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಗ್ರಾಹಕರು ಕೂಡಾ ವೈರಸ್ ಭಯದಿಂದಾಗಿ ಆನ್‌ಲೈನ್ ಪ್ಲ್ಯಾಟ್‌‌‌ಫಾರ್ಮ್‌ನತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.

ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕಂಪನಿಯ 'ಕ್ಲಿಕ್ ಟು ಬೈ' ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌

ಲಾಕ್‌ಡೌನ್ ವಿನಾಯ್ತಿ ನಂತರ ವಾಹನ ಮಾರಾಟದಲ್ಲಿ ಹಲವು ಹೊಸ ಬದಲಾಣೆಗಳನ್ನು ಪರಿಚಯಿಸಿರುವ ಆಟೋ ಕಂಪನಿಗಳು ಸುರಕ್ಷಿತ ವ್ಯಾಪಾರ-ವಹಿವಾಟು ನಡೆಸುತ್ತಿದ್ದು, ಸಂಕಷ್ಟದ ಪರಿಸ್ಥಿತಿಯಲ್ಲೂ ಹೊಸ ಕಾರುಗಳ ಮಾರಾಟ ಪ್ರಮಾಣದಲ್ಲಿ ತುಸು ಚೇತರಿಕೆ ಕಂಡುಬರುತ್ತಿದೆ. ಕಾರು ಮಾರಾಟದಲ್ಲಿ ಎರಡನೇ ಅತಿದೊಡ್ಡ ಕಂಪನಿಯಾಗಿ ಹೊರಹೊಮ್ಮಿರುವ ಹ್ಯುಂಡೈ ಕೂಡಾ ಇದೀಗ ಇದೀಗ ಕಾರುಗಳ ಮಾರಾಟದಲ್ಲಿ ಗಮನಸೆಳೆಯುತ್ತಿದ್ದು, ಮೇ 4 ರಿಂದ ಇದುವರೆಗೆ ಸುಮಾರು 40 ಸಾವಿರ ಬುಕ್ಕಿಂಗ್‌ಗಳನ್ನು ಕ್ಲಿಕ್ ಟು ಬೈ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕ ಪಡೆದುಕೊಂಡಿದೆ.

ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕಂಪನಿಯ 'ಕ್ಲಿಕ್ ಟು ಬೈ' ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌

ಜೊತೆಗೆ ಹೊಸ ಕಾರುಗಳ ಕುರಿತಾಗಿ ಹೆಚ್ಚಿನ ಮಾಹಿತಿ ಕ್ಲಿಕ್ ಟು ಬೈ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗೆ ಸುಮಾರು 15 ಲಕ್ಷ ಜನ ಹೊಸ ವೆಬ್‌ತಾಣಕ್ಕೆ ಭೇಟಿ ನೀಡಿದ್ದು, ಇದು ಆನ್‌ಲೈನ್ ಕಾರು ಮಾರಾಟಕ್ಕೆ ಹೆಚ್ಚಿನ ಬೇಡಿಕೆ ಇರುವುದನ್ನು ಸ್ಪಷ್ಟಪಡಿಸುತ್ತದೆ.

ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕಂಪನಿಯ 'ಕ್ಲಿಕ್ ಟು ಬೈ' ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌

ಇನ್ನು ಕ್ಲಿಕ್ ಟು ಬೈ ನಲ್ಲಿ ಕಾರು ಖರೀದಿಸುವ ಗ್ರಾಹಕರಿಗೆ ಐಸಿಐಸಿಐ ಬ್ಯಾಂಕ್ ಜೊತೆಗೂಡಿ ಹೊಸ ಲೋನ್ ಆಫರ್ ನೀಡುತ್ತಿದ್ದು, ಕಾರು ಖರೀದಿ ಮಾಡಿದ ಆರಂಭದ ಮೂರು ತಿಂಗಳಲ್ಲಿ ಅತಿ ಕಡಿಮೆ ಇಎಂಐ, ಧೀರ್ಘಾವಧಿಯ ಸಾಲಸೌಲಭ್ಯ ಮತ್ತು ಶೇ.100 ರಷ್ಟು ಆನ್‌ರೋಡ್ ಸಾಲ ಸೌಲಭ್ಯ ನೀಡಲಾಗುತ್ತಿದೆ.

ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕಂಪನಿಯ 'ಕ್ಲಿಕ್ ಟು ಬೈ' ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌

ಹ್ಯುಂಡೈ ಕಂಪನಿಯು ಕೇವಲ ಐಸಿಐಸಿಐ ಬ್ಯಾಂಕ್‌ನೊಂದಿಗೆ ಮಾತ್ರವಲ್ಲದೆ ಹೆಚ್‌ಡಿಎಫ್‌ಸಿ ಸೇರಿದಂತೆ ವಿವಿಧ ಬ್ಯಾಂಕ್‌ಗಳೊಂದಿಗೆ ಹಲವಾರು ಲೋನ್ ಆಫರ್ ನೀಡುತ್ತಿದ್ದು, ಹೊಸ ವಾಹನ ಖರೀದಿದಾರರಿಗೆ ಇಎಂಐ ಹೊರೆ ತಗ್ಗಿಸಲು ಅತಿ ಸುಲಭವಾದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕಂಪನಿಯ 'ಕ್ಲಿಕ್ ಟು ಬೈ' ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌

ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ಮೂಲಕ ಕಾರು ಖರೀದಿ ಪ್ರಕ್ರಿಯೆಯೂ ವೈರಸ್ ಭೀತಿ ನಡುವೆ ಉತ್ತಮ ಬೆಳವಣಿಯಾಗಿದ್ದು, ಹ್ಯುಂಡೈ ಸೇರಿದಂತೆ ಹಲವು ವಾಹನ ಕಂಪನಿಗಳು ಪ್ರತ್ಯೇಕ ಆನ್‌ಲೈನ್ ಮಾರಾಟ ಮಳಿಗೆಗಳನ್ನು ತೆರೆದಿವೆ.

ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕಂಪನಿಯ 'ಕ್ಲಿಕ್ ಟು ಬೈ' ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌

ಹ್ಯುಂಡೈ ಕಂಪನಿಯು ಲಾಕ್‌ಡೌನ್ ಸಡಿಲಿಕೆ ನಂತರ ಮೇ ಅವಧಿಯಲ್ಲಿ 12 ಸಾವಿರ ಕಾರುಗಳನ್ನು ಮಾರಾಟ ಮಾಡಿದ್ದು, ಇದೀಗ ಜೂನ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಒಟ್ಟು 26,820 ಕಾರುಗಳನ್ನು ಮಾರಾಟ ಮೂಲಕ ಮುಂಚೂಣಿಯಲ್ಲಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕಂಪನಿಯ 'ಕ್ಲಿಕ್ ಟು ಬೈ' ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌

ಹ್ಯುಂಡೈ ಕಾರುಗಳ ಮಾರಾಟ ಪೈಕಿ ನ್ಯೂ ಜನರೇಷನ್ ಕ್ರೆಟಾ ಖರೀದಿಗೆ ಹೆಚ್ಚು ಬೇಡಿಕೆಯಿದ್ದು, ತದನಂತರ ಸ್ಥಾನದಲ್ಲಿ ವೆನ್ಯೂ, ಗ್ರಾಂಡ್ ಐ10 ನಿಯೋಸ್, ಸ್ಯಾಂಟ್ರೊ ಕಾರುಗಳು ಹೆಚ್ಚು ಬೇಡಿಕೆ ಪಡೆದುಕೊಂಡಿವೆ. ಕ್ರೆಟಾ ಕಾರು ಲಾಕ್‌ಡೌನ್ ಸಂಕಷ್ಟದಲ್ಲೂ ಹೊಸ ಕಾರು ಭರ್ಜರಿ ಬೇಡಿಕೆ ಪಡೆದುಕೊಂಡಿರುವುದು ಹ್ಯುಂಡೈ ಕಂಪನಿಗೆ ನೀರಿಕ್ಷೆಗೂ ಮೀರಿ ಲಾಭ ತಂದುಕೊಟ್ಟಿದೆ.

Article Published On: Tuesday, July 7, 2020, 10:59 [IST]
English summary
Hyundai registers more than 15 lakh visitors on online sales platform. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+