ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ತೆರೆದ ಹ್ಯುಂಡೈ

ಜಗತ್ತಿನಾದ್ಯಂತ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಬೇಡಿಕೆಗೆ ಅನುಗುಣವಾಗಿ ವಾಹನ ಉತ್ಪಾದನಾ ಕಂಪನಿಗಳು ಭವಿಷ್ಯ ಯೋಜನೆಗಳಿಗಾಗಿ ಮಹತ್ವದ ನಿರ್ಧಾರ ಕೈಗೊಳ್ಳುತ್ತಿವೆ. ಹ್ಯುಂಡೈ ಮೋಟಾರ್ಸ್ ಇದೇ ನಿಟ್ಟಿನಲ್ಲಿ ಹೊಸ ಯೋಜನೆಗೆ ಚಾಲನೆ ನೀಡಿದ್ದು, ಇವಿ ವಾಹನಗಳಿಗೆ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ಸಿದ್ದಪಡಿಸುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ತೆರೆದ ಹ್ಯುಂಡೈ

ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಿದಂತೆ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಎಲೆಕ್ಟ್ರಿಕ್ ಕಾರುಗಳನ್ನು ಅಭಿವೃದ್ದಿಪಡಿಸುತ್ತಿರುವ ಹ್ಯುಂಡೈ ಕಂಪನಿಯು ಕೊನಾ ಎಲೆಕ್ಟ್ರಿಕ್ ಕಾರು ಮಾದರಿಯೊಂದಿಗೆ ಈಗಾಗಲೇ ಸಾಕಷ್ಟು ಬೇಡಿಕೆ ಪಡೆದುಕೊಂಡಿದೆ. ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹ್ಯುಂಡೈ ಹೊಸ ಇವಿ ವಾಹನ ಮಾದರಿಗಳು ಹೊಸ ಸಂಚಲನ ಸೃಷ್ಠಿಸಲಿದ್ದು, ಅಂತರಾಷ್ಟ್ರೀಯ ಗುಣಮಟ್ಟದೊಂದಿಗೆ ಹೊಸ ಇವಿ ವಾಹನ ಮಾದರಿಗಳನ್ನು ಸಿದ್ದಪಡಿಸುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ತೆರೆದ ಹ್ಯುಂಡೈ

ಹೊಸ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ಎಲೆಕ್ಟ್ರಿಕ್-ಗ್ಲೋಬಲ್ ಮಾಡ್ಯುಲರ್ ಪ್ಲಾಟ್‌ಫಾರ್ಮ್ (ಇ-ಜಿಎಂಪಿ) ಅನ್ನು ಅನಾವರಣಗೊಳಿಸಿದ್ದು, ಹೊಸ ಪ್ಲ್ಯಾಟ್‌ಫಾರ್ಮ್ ಅನ್ನು ವಿಶೇಷವಾಗಿ ಬ್ಯಾಟರಿ ಎಲೆಕ್ಟ್ರಿಕ್ ವೆಹಿಕಲ್ (ಬಿಇವಿ) ಅಭಿವೃದ್ದಿಗಾಗಿ ಬಳಕೆ ಮಾಡಿಕೊಳ್ಳಲಿದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ತೆರೆದ ಹ್ಯುಂಡೈ

2021ರಿಂದ ಹೊಸ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಹೊಸ ಬ್ಯಾಟರಿ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಲಿರುವ ಹ್ಯುಂಡೈ ಕಂಪನಿಯು ಹೊಸ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದಿಗೊಳಿಸಲಿರುವ ವಾಹನಗಳನ್ನು ಹೆಚ್ಚಿನ ಮಟ್ಟದ ಬ್ಯಾಟರಿ ರೇಂಜ್, ಅತಿ ಅವಧಿಯಲ್ಲಿ ಪೂರ್ಣಪ್ರಮಾಣದ ಚಾರ್ಜಿಂಗ್ ಮತ್ತು ಹೆಚ್ಚಿನ ಮಟ್ಟದ ಎಂಜಿನ್ ಕಾರ್ಯಕ್ಷಮತೆಯನ್ನು ಖಾತ್ರಿಪಡಿಸುತ್ತದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ತೆರೆದ ಹ್ಯುಂಡೈ

ಹೊಸ ಪ್ಲ್ಯಾಟ್‌ಫಾರ್ಮ್ ಅಡಿ ನಿರ್ಮಾಣದ ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳು ಪ್ರತಿ ಚಾರ್ಜ್‌ಗೆ ಕನಿಷ್ಠ 500 ಕಿ.ಮೀ ಗಿಂತಲೂ ಅಧಿಕ ಮೈಲೇಜ್‌ನೊಂದಿಗೆ ರಸ್ತೆಗಿಳಿಯಲಿದ್ದು, ಬೆಲೆಯಲ್ಲೂ ಕೂಡಾ ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭಾರೀ ಪೈಪೋಟಿ ನೀಡಲಿವೆ. ಇದಕ್ಕಾಗಿ ಹೊಸ ಪ್ಲ್ಯಾಟ್‌ಫಾರ್ಮ್ ಅಭಿವೃದ್ದಿಯ ಮೇಲೆ ಭಾರೀ ಪ್ರಮಾಣದ ಹೂಡಕೆ ಮಾಡುತ್ತಿರುವ ಹ್ಯುಂಡೈ ಕಂಪನಿಯು 2025ರ ವೇಳೆ ಒಟ್ಟು 16 ವಿವಿಧ ಎಲೆಕ್ಟ್ರಿಕ್ ಕಾರು ಮಾರಾಟ ಮಾಡುವ ಗುರಿಹೊಂದಿದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ತೆರೆದ ಹ್ಯುಂಡೈ

ಇನ್ನು ಭಾರತ ಸೇರಿ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಹೆಚ್ಚಿನ ಬೇಡಿಕೆ ಉಂಟಾಗುತ್ತಿದ್ದು, ಹ್ಯುಂಡೈ ಕಂಪನಿಯು ತನ್ನ ಪ್ರಮುಖ ಬ್ರಾಂಡ್‌ಗಳ ಅಡಿಯಲ್ಲಿ ಹೊಸ ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ಬಜೆಟ್ ಬೆಲೆಯಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ತೆರೆದ ಹ್ಯುಂಡೈ

ಹ್ಯುಂಡೈ ಕಂಪನಿಯು ಈಗಾಗಲೇ ಪ್ರೀಮಿಯಂ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಾದ ಕೊನಾ ಕಾರನ್ನು ಮಾರಾಟ ಮಾಡುತ್ತಿದ್ದು, ಹೆಚ್ಚಿನ ಮೈಲೇಜ್ ಮತ್ತು ಪ್ರೀಮಿಯಂ ಫೀಚರ್ಸ್ ಹೊಂದಿರುವ ಕೊನಾ ಇವಿ ಕಾರು ತುಸು ದುಬಾರಿ ಎನ್ನಿಸಲಿದೆ. ಆದರೆ ದೇಶಿಯ ಮಾರುಕಟ್ಟೆಯಲ್ಲಿ ದುಬಾರಿ ಬೆಲೆ ವಾಹನಗಳಿಂತಲೂ ಬಜೆಟ್ ಬೆಲೆಯಲ್ಲಿ ಉತ್ತಮ ಮೈಲೇಜ್ ಹೊಂದಿರುವ ಇವಿ ವಾಹನಗಳಿಗೆ ಹೆಚ್ಚು ಬೇಡಿಕೆ ಹರಿದುಬರುತ್ತಿದ್ದು, ಹ್ಯುಂಡೈ ಕಂಪನಿಯು ಹೊಸ ಇವಿ ಕಾರುಗಳನ್ನು ಎಲ್ಲಾ ವರ್ಗದ ಗ್ರಾಹಕರನ್ನು ಗಮದಲ್ಲಿಟ್ಟುಕೊಂಡು ವಿವಿಧ ಮಾದರಿಯ ಇವಿ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ತೆರೆದ ಹ್ಯುಂಡೈ

ಸುಧಾರಿತ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ಕೈಗೆಟುವ ಬೆಲೆಯಲ್ಲಿ ಬಿಡುಗಡೆಯಾಗಲಿರುವ ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರುಗಳು ಇವಿ ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದ್ದು, ಮಾಧ್ಯಮ ಸಂದರ್ಶನವೊಂದರಲ್ಲಿ ಭವಿಷ್ಯದ ಯೋಜನೆ ಬಗೆಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿಗಾಗಿ ಪ್ರತ್ಯೇಕ ಪ್ಲ್ಯಾಟ್‌ಫಾರ್ಮ್ ತೆರೆದ ಹ್ಯುಂಡೈ

ಎಲ್‌ಜಿ ಎಲೆಕ್ಟ್ರಿಕ್ ಕಂಪನಿ ಜೊತೆಗೂಡಿ ಬ್ಯಾಟರಿ ಸೌಲಭ್ಯಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿರುವ ಹ್ಯುಂಡೈ ಕಂಪನಿಯು ಹೊಸ ಬ್ಯಾಟರಿ ಮಾದರಿಗಳನ್ನು ಕಿಯಾ ಮೋಟಾರ್ಸ್ ಸಹ ಬಳಕೆ ಮಾಡಿಕೊಳ್ಳಲಿದ್ದು, ಶೀಘ್ರದಲ್ಲೇ ಹ್ಯುಂಡೈ ನಿರ್ಮಾಣದ ಹೊಸ ಎಲೆಕ್ಟ್ರಿಕ್ ಕಾರು ಮಾದರಿಗಳು ರಸ್ತೆಗಿಳಿಯಲಿವೆ.

Most Read Articles

Kannada
English summary
Hyundai Revealed Its First Dedicated Battery-EV Platform E-GMP. Read in Kannada.
Story first published: Wednesday, December 2, 2020, 19:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X