ಕೊನಾ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ

ದಕ್ಷಿಣ ಕೊರಿಯಾದ ಕಾರು ಉತ್ಪಾದನಾ ಕಂಪನಿಯಾದ ಹ್ಯುಂಡೈ ಮೋಟಾರ್ಸ್ ತನ್ನ ಜನಪ್ರಿಯ ಕೊನಾ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಭಾರತ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಮಾರಾಟ ಮಾಡುತ್ತಿದ್ದು, ಹೊಸ ಎಲೆಕ್ಟ್ರಿಕ್ ಕಾರು ಮಾರಾಟವು ಇದೀಗ ಹೊಸ ಮೈಲಿಗಲ್ಲು ಸಾಧಿಸಿದೆ.

ಕೊನಾ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ

ಕೊನಾ ಎಲೆಕ್ಟ್ರಿಕ್ ಕಾರು ಮಾರಾಟ ಆರಂಭಿಸಿದ ಕೇವಲ ವರ್ಷದೊಳಗೆ 1 ಲಕ್ಷ ಯುನಿಟ್ ಮಾರಾಟ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದು, ಭಾರತದಲ್ಲೂ ಇದುವರೆಗೆ ಸುಮಾರು 2 ಸಾವಿರಕ್ಕೂ ಅಧಿಕ ಕೊನಾ ಇವಿ ಕಾರುಗಳು ಮಾರಾಟಗೊಂಡಿವೆ. ದುಬಾರಿ ಬೆಲೆ ನಡುವೆಯು ಅತ್ಯುತ್ತಮ ತಾಂತ್ರಿಕ ಅಂಶಗಳು ಮತ್ತು ಮೈಲೇಜ್ ವಿಚಾರವಾಗಿ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ವೆರಿಯೆಂಟ್‌ಗಳೊಂದಿಗೆ ಗ್ರಾಹಕರನ್ನು ಸೆಳೆಯುವ ವಿಶ್ವಾಸದಲ್ಲಿದೆ.

ಕೊನಾ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ

ಹೊಸ ಕೊನಾ ಎಲೆಕ್ಟ್ರಿಕ್ ಕಾರು ಅತಿ ಕಡಿಮೆ ನಿರ್ವಹಣಾ ವೆಚ್ಚದಿಂದಾಗಿ ಕಾರು ಮಾಲೀಕರ ಮೆಚ್ಚುಗೆ ಕಾರಣವಾಗಿದ್ದು, ಸಾಮಾನ್ಯ ಕಾರುಗಳಿಂತ ಶೇ.80ರಷ್ಟು ಕಡಿಮೆ ರನ್ನಿಂಗ್ ಕಾಸ್ಟ್ ಹೊಂದಿರುವ ಕೊನಾ ಕಾರು ಪ್ರತಿ ಕಿ.ಮೀ ಗೆ ರೂ.1 ಕ್ಕಿಂತಲೂ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದೆ.

ಕೊನಾ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎರಡು ಮಾದರಿಯ ಬ್ಯಾಟರಿ ಆಯ್ಕೆಯನ್ನು ಹೊಂದಿರುವ ಕೊನಾ ಎಲೆಕ್ಟ್ರಿಕ್ ಕಾರು 64kWh ಮತ್ತು 39.2kWh ಬ್ಯಾಟರಿ ವೈಶಿಷ್ಟ್ಯತೆಗಳನ್ನು ಹೊಂದಿದ್ದು, ಭಾರತದಲ್ಲಿ ಸದ್ಯಕ್ಕೆ 39.2kWh ಬ್ಯಾಟರಿ ಹೊಂದಿರುವ ಮಾದರಿಯನ್ನು ಮಾತ್ರವೇ ಮಾರಾಟ ಮಾಡಲಾಗುತ್ತಿದೆ.

ಕೊನಾ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ

ಕೇವಲ 52 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್‌ ಮಾಡಬಲ್ಲ ಡಿಸಿ ಫಾಸ್ಟ್ ಚಾರ್ಜರ್ ಸೌಲಭ್ಯವು ಈ ಕಾರಿನಲ್ಲಿದ್ದು, 39.2kWh ಬ್ಯಾಟರಿ ಸಾಮರ್ಥ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲದು.

ಕೊನಾ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ

ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಪರ್ಫಾಮೆನ್ಸ್ ಕಾರುಗಳಂತೆಯೇ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಕೊನಾ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ

ಕೊನಾ ಕಾರು 155 ಕಿ.ಮಿ ಟಾಪ್ ಸ್ಪೀಡ್ ಸೌಲಭ್ಯವನ್ನು ಹೊಂದಿದ್ದು, ಪೂರ್ಣ ಪ್ರಮಾಣದಲ್ಲಿ ಬ್ಯಾಟರಿ ಚಾರ್ಜ್‌ ಆಗಲು ಕನಿಷ್ಠ 8 ಗಂಟೆ ತೆಗೆದುಕೊಳ್ಳಲಿದೆ. ಹೀಗಾಗಿ ಕೋನಾ ಕಾರಿನಲ್ಲಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ಆಕರ್ಷಕವಾಗಿದೆ.

ಕೊನಾ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ

ವಾರಂಟಿ ಮತ್ತು ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಹೊಸ ಕಾರು ತುಸು ದುಬಾರಿ ಎನ್ನಿಸಲಿದ್ದು, ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 23.90 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಹಾಗೆಯೇ ಹೊಸ ಕಾರಿನ ಮೇಲೆ ರೂ.1.50 ಲಕ್ಷ ತೆರಿಗೆ ವಿನಾಯ್ತಿ ಸಹ ಸಿಗಲಿದ್ದು, ಬ್ಯಾಟರಿ ಮೇಲೆ 8 ವರ್ಷಗಳ ವಾರಂಟಿ ನೀಡಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಕೊನಾ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ

ಕೊನಾ ಕಾರು ಬೆಲೆ ದುಬಾರಿಯಾಗಿದ್ದರೂ ಸಹ ಉತ್ತಮ ಮೈಲೇಜ್ ಮತ್ತು ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಖರೀದಿಗೆ ಉತ್ತಮ ಎನ್ನಿಸಲಿದ್ದು, ಸ್ಪೋರ್ಟಿ ವಿನ್ಯಾಸದ ಜೊತೆಗೆ ಕಾಸ್‌ಕ್ಲಾಡಿಂಗ್ ಫ್ರಂಟ್ ಗ್ರಿಲ್, ಬಾಡಿ ಕಲರ್ ಬಂಪರ್, ಸ್ಲಿಕ್ ಎಲ್ಇಡಿ ಟೈಲ್ ಲೈಟ್ಸ್, ಶಾರ್ಪ್ ಶೋಲ್ಡ್‌ರ್ ಲೈನ್ಸ್, ರಿಯರ್ ಸ್ಪಾಯ್ಲರ್ ನೀಡಿರುವುದು ಹೊಸ ಕಾರಿಗೆ ಮತ್ತಷ್ಟು ಆಕರ್ಷಣೆಯಾಗುವಂತೆ ಮಾಡಿದೆ.

Article Published On: Friday, July 17, 2020, 14:00 [IST]
English summary
Hyundai Sold One Lakh Units Of Kona EV. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+