Just In
Don't Miss!
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Movies
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
- News
ಕೊರೊನಾ ನಿಯಂತ್ರಣದಲ್ಲಿ ವಿಫಲ: ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ
- Sports
ಐಎಸ್ಎಲ್: ಜೆಮ್ಷೆಡ್ಪುರ ವಿರುದ್ಧ ಕ್ಲೀನ್ ಶೀಟ್ ಗುರಿಯಲ್ಲಿ ಕೇರಳ ಬ್ಲಾಸ್ಟರ್ಸ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಜೆಟ್ ಬೆಲೆಯ ಎಲೆಕ್ಟ್ರಿಕ್ ಕಾರು ಯೋಜನೆಗೆ ಚಾಲನೆ ನೀಡಿದ ಹ್ಯುಂಡೈ
ಭಾರತ ಸೇರಿ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಎಲೆಕ್ಟ್ರಿಕ್ ಕಾರುಗಳಿಗೆ ಹೆಚ್ಚಿನ ಬೇಡಿಕೆ ಉಂಟಾಗುತ್ತಿದ್ದು, ಹ್ಯುಂಡೈ ಕಂಪನಿಯು ತನ್ನ ಪ್ರಮುಖ ಬ್ರಾಂಡ್ಗಳ ಅಡಿಯಲ್ಲಿ ಹೊಸ ಮಾದರಿಯ ಎಲೆಕ್ಟ್ರಿಕ್ ಕಾರುಗಳನ್ನು ಬಜೆಟ್ ಬೆಲೆಯಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

ದಕ್ಷಿಣ ಕೊರಿಯಾದ ಹ್ಯುಂಡೈ ಕಂಪನಿಯು ಈಗಾಗಲೇ ಪ್ರೀಮಿಯಂ ಎಲೆಕ್ಟ್ರಿಕ್ ಎಸ್ಯುವಿ ಮಾದರಿಯಾದ ಕೊನಾ ಕಾರನ್ನು ಮಾರಾಟ ಮಾಡುತ್ತಿದ್ದು, ಹೆಚ್ಚಿನ ಮೈಲೇಜ್ ಮತ್ತು ಪ್ರೀಮಿಯಂ ಫೀಚರ್ಸ್ ಹೊಂದಿರುವ ಕೊನಾ ಇವಿ ಕಾರು ತುಸು ದುಬಾರಿ ಎನ್ನಿಸಲಿದೆ. ಆದರೆ ದೇಶಿಯ ಮಾರುಕಟ್ಟೆಯಲ್ಲಿ ದುಬಾರಿ ಬೆಲೆ ವಾಹನಗಳಿಂತಲೂ ಬಜೆಟ್ ಬೆಲೆಯಲ್ಲಿ ಉತ್ತಮ ಮೈಲೇಜ್ ಹೊಂದಿರುವ ಇವಿ ವಾಹನಗಳಿಗೆ ಹೆಚ್ಚು ಬೇಡಿಕೆ ಹರಿದುಬರುತ್ತಿದ್ದು, ಹ್ಯುಂಡೈ ಕಂಪನಿಯು ಹೊಸ ಇವಿ ಕಾರುಗಳನ್ನು ಎಲ್ಲಾ ವರ್ಗದ ಗ್ರಾಹಕರನ್ನು ಗಮದಲ್ಲಿಟ್ಟುಕೊಂಡು ವಿವಿಧ ಮಾದರಿಯ ಇವಿ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದೆ.

ಸುಧಾರಿತ ತಂತ್ರಜ್ಞಾನ ಸೌಲಭ್ಯಗಳೊಂದಿಗೆ ಕೈಗೆಟುವ ಬೆಲೆಯಲ್ಲಿ ಬಿಡುಗಡೆಯಾಗಲಿರುವ ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರುಗಳು ಇವಿ ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದ್ದು, ಮಾಧ್ಯಮ ಸಂದರ್ಶನವೊಂದರಲ್ಲಿ ಭವಿಷ್ಯದ ಯೋಜನೆ ಬಗೆಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

2025ರ ವೇಳೆಗೆ ಜಾಗತಿಕ ಮಾರುಕಟ್ಟೆಯಲ್ಲಿ 30ಕ್ಕೂ ಹೆಚ್ಚು ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಹೊಂದಲಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಗ್ರಾಹಕರ ಬೇಡಿಕೆಯೆಂತೆ 10ಕ್ಕೂ ಹೆಚ್ಚು ಎಲೆಕ್ಟ್ರಿಕ್ ಮಾದರಿಗಳನ್ನು ಮಾರಾಟ ಮಾಡಲಿದ್ದು, ಎಲ್ಜಿ ಕಂಪನಿ ಜೊತೆಗೂಡಿ ಬ್ಯಾಟರಿ ಸೌಲಭ್ಯಕ್ಕಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡುತ್ತಿದೆ.

ಸದ್ಯ ಎಲೆಕ್ಟ್ರಿಕ್ ಕಾರು ಮಾದರಿಗಳ ಮುಖ್ಯ ತಾಂತ್ರಿಕ ಅಂಶವಾಗಿ ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯಕ್ಕಾಗಿ ಸಂಪೂರ್ಣವಾಗಿ ಚೀನಿ ಮತ್ತು ಥೈವಾನ್ ಮಾರುಕಟ್ಟೆಯನ್ನು ನೆಚ್ಚಿಕೊಂಡಿರುವುದೇ ಇವಿ ಕಾರುಗಳ ಬೆಲೆ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಬೆಲೆ ಪಡೆದುಕೊಂಡಿರುವುದಕ್ಕೆ ಪ್ರಮುಖ ಕಾರಣವಾಗಿದೆ. ಈ ಹಿನ್ನಲೆ ಬೆಲೆ ಇಳಿಕೆಗಾಗಿ ಭಾರತದಲ್ಲಿ ಪೂರ್ಣ ಪ್ರಮಾಣದ ಲೀಥಿಯಂ ಅಯಾನ್ ಬ್ಯಾಟರಿ ಉತ್ಪಾದನಾ ಘಟಕಗಳಿಗೆ ಹಲವು ಆಟೋ ಕಂಪನಿಗಳು ಸಹಭಾಗೀತ್ವದ ಯೋಜನೆಯನ್ನು ಕೈಗೊಂಡಿದ್ದು, ಮೇಡ್ ಇನ್ ಇಂಡಿಯಾ ಬ್ಯಾಟರಿ ಲಭ್ಯವಾದಲ್ಲಿ ಇವಿ ಕಾರುಗಳ ಬೆಲೆಯಲ್ಲಿ ಗಣನೀಯವಾಗಿ ಇಳಿಕೆ ಮಾಡಬಹುದುದಾಗಿದೆ.

ಈ ಮೂಲಕ ಪ್ರೀಮಿಯಂ ಎಲೆಕ್ಟ್ರಿಕ್ ಕಾರುಗಳ ಜೊತೆಗೆ ಬಜೆಟ್ ಬೆಲೆಯ ಎಲೆಕ್ಟ್ರಿಕ್ ವಾಹನಗಳನ್ನು ಸಹ ಮಾರಾಟ ಮಾಡಲಿರುವ ಹ್ಯುಂಡೈ ಕಂಪನಿಯು ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿದ್ದು, ಮೊದಲ ಬಾರಿಗೆ ಬಜೆಟ್ ಬೆಲೆಯ ಎಲೆಕ್ಟ್ರಿಕ್ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ದಕ್ಷಿಣ ಕೊರಿಯಾದಲ್ಲಿ ಹೊಸ ಬಜೆಟ್ ಬೆಲೆಯ ಕಂಪ್ಯಾಕ್ಟ್ ಎಸ್ಯುವಿ ಎಲೆಕ್ಟ್ರಿಕ್ ಕಾರಿನ ಪ್ರಾಥಮಿಕ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಚಾಲನೆ ನೀಡಲಾಗಿದ್ದು, ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಾಗಿ ಶೀಘ್ರದಲ್ಲೇ ಭಾರತದಲ್ಲೂ ಟೆಸ್ಟಿಂಗ್ ನಡೆಸುವ ಸಾಧ್ಯತೆಗಳಿವೆ.
MOST READ: ಭಾರತದಲ್ಲಿ ಎರಡು ಹೊಸ ಎಸ್ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ವೆನ್ಯೂ ಕಾರಿನ ವಿನ್ಯಾಸವನ್ನು ಆಧರಿಸಿರುವ ಹೊಸ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಸದ್ಯಕ್ಕೆ ಎಎಕ್ಸ್1 ಎನ್ನುವ ಕೋಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಹೊಸ ಕಾರು ರೂ. 10 ಲಕ್ಷದಿಂದ ರೂ. 14 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳು ನೀರಿಕ್ಷೆಯಿದೆ.

ಹೊಸ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿರುವ ಹೊರತಾಗಿ ತಾಂತ್ರಿಕ ಮಾಹಿತಿಗಳ ಸಿಕ್ಕಿಲ್ಲವಾದರೂ ಹೊಸ ಕಾರು ಪ್ರತಿ ಚಾರ್ಜ್ಗೆ 300 ರಿಂದ 350 ಕಿ.ಮೀ ಮೈಲೇಜ್ ರೇಂಜ್ ಪಡೆದುಕೊಳ್ಳಲಿದ್ದು, ಅತಿ ಕಡಿಮೆ ಅವಧಿಯಲ್ಲಿ ಪೂರ್ಣಪ್ರಮಾಣದ ಚಾರ್ಜಿಂಗ್ ಸೌಲಭ್ಯಕ್ಕಾಗಿ ಡಿಸಿ ಫಾಸ್ಟ್ ಚಾರ್ಜಿಂಗ್ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಮಾಹಿತಿಗಳ ಪ್ರಕಾರ ಹೊಸ ಎಲೆಕ್ಟ್ರಿಕ್ ಕಾರು ಮುಂಬರುವ 2022ರ ದೆಹಲಿ ಆಟೋ ಎಕ್ಸ್ಪೋದಲ್ಲಿ ಅನಾವರಣಗೊಳ್ಳಲಿದ್ದು, ತದನಂತರವಷ್ಟೇ ಹೊಸ ಕಾರು ಮಾರಾಟಕ್ಕೆ ಲಭ್ಯವಾಗಿದೆ. ಜೊತೆಗೆ ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ಸೌಲಭ್ಯವು ಹೆಚ್ಚಳವಾಗಬೇಕಿದ್ದು, ಇದೇ ಕಾರಣಕ್ಕೆ ಹಲವಾರು ಆಟೋ ಉತ್ಪಾದನಾ ಕಂಪನಿಗಳು ಇವಿ ವಾಹನಗಳ ಮಾರಾಟವನ್ನು ಆರಂಭಿಸಲು ಹಿಂದೇಟು ಹಾಕುತ್ತಿವೆ.