ಕ್ರೆಟಾ ಕಾರಿಗೆ ಭರ್ಜರಿ ಬೇಡಿಕೆ- ಕಾರು ಉತ್ಪಾದನೆಯನ್ನು ಹೆಚ್ಚಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ಲಾಕ್‌ಡೌನ್ ಸಂಕಷ್ಟದ ನಡುವೆಯೂ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಸುರಕ್ಷಾ ಮಾರ್ಗಸೂಚಿಯನ್ನು ಅಳವಡಿಸಿಕೊಂಡೆ ಕಾರು ಉತ್ಪಾದನಾ ಪ್ರಮಾಣವನ್ನು ತೀವ್ರಗೊಳಿಸಿದೆ.

ಕ್ರೆಟಾ ಕಾರಿಗೆ ಭರ್ಜರಿ ಬೇಡಿಕೆ- ಕಾರು ಉತ್ಪಾದನೆಯನ್ನು ಹೆಚ್ಚಿಸಿದ ಹ್ಯುಂಡೈ

ಚೆನ್ನೈ ಹೊರವಲಯದಲ್ಲಿರುವ ಕಾರು ಉತ್ಪಾದನಾ ಘಟಕದಲ್ಲಿ ಸದ್ಯ ಎರಡು ಶಿಫ್ಟ್‌ಗಳಲ್ಲಿ ಮಾತ್ರ ಕಾರು ಉತ್ಪಾದನೆ ಮಾಡುತ್ತಿರುವ ಹ್ಯುಂಡೈ ಕಂಪನಿಯು ಇದೀಗ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಉತ್ಪಾದನಾ ಪ್ರಮಾಣವನ್ನು ತೀವ್ರಗೊಳಿಸುತ್ತಿದ್ದು, ನೈಟ್ ಶಿಫ್ಟ್‌ನಲ್ಲೂ ಇನ್ಮುಂದೆ ಕಾರು ಉತ್ಪಾದನೆಯನ್ನು ಕೈಗೊಳ್ಳಲು ನಿರ್ಧರಿಸಿದೆ. ಕಳೆದ ವಾರವಷ್ಟೇ ಕಾರು ಉತ್ಪಾದನಾ ಘಟಕದಲ್ಲಿ ಇಬ್ಬರು ಸಿಬ್ಬಂದಿಗೆ ಕರೋನಾ ವೈರಸ್ ದೃಡಗೊಂಡ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಕಾರು ಉತ್ಪಾದನೆಯನ್ನು ಬಂದ್ ಮಾಡಿದ್ದ ಹ್ಯುಂಡೈ ಕಂಪನಿಯು ಕಾರು ಘಟಕವನ್ನು ಸ್ಯಾನಿಟೈಜ್ ಮಾಡಿಸಿದ ನಂತರ ಉತ್ಪಾದನೆಯನ್ನು ಪುನಾರಂಭಿಸಿದೆ.

ಕ್ರೆಟಾ ಕಾರಿಗೆ ಭರ್ಜರಿ ಬೇಡಿಕೆ- ಕಾರು ಉತ್ಪಾದನೆಯನ್ನು ಹೆಚ್ಚಿಸಿದ ಹ್ಯುಂಡೈ

ಜೊತೆಗೆ ಲಾಕ್‌ಡೌನ್ ಸಂದರ್ಭದಲ್ಲಿ ಉದ್ಯೋಗಿಗಳ ತೊಂದರೆಯಾಗದಂತೆ ಚೆನ್ನೈನ ಪ್ರಮುಖ ಹೋಟೆಲ್, ರೆಸಾರ್ಟ್‌ಗಳಲ್ಲಿ ಉದ್ಯೋಗಿ ವಸತಿ ಸೌಲಭ್ಯ ಕಲ್ಪಿಸಿರುವ ಹ್ಯುಂಡೈ ಕಂಪನಿಯು ತನ್ನ ಉದ್ಯೋಗಿಗಳು ಸೋಂಕಿಗೆ ತುತ್ತಾಗದಂತೆ ಎಚ್ಚರವಹಿಸುತ್ತಿದೆ.

ಕ್ರೆಟಾ ಕಾರಿಗೆ ಭರ್ಜರಿ ಬೇಡಿಕೆ- ಕಾರು ಉತ್ಪಾದನೆಯನ್ನು ಹೆಚ್ಚಿಸಿದ ಹ್ಯುಂಡೈ

ಯಾವುದೇ ಒಬ್ಬ ಉದ್ಯೋಗಿಯಲ್ಲೂ ವೈರಸ್ ಪತ್ತೆಯಾದರೂ ಅದು ಕಾರು ಉತ್ಪಾದನೆಯ ಮೇಲೆ ಪರಿಣಾಮ ಬೀರಲಿದೆ ಎನ್ನುವ ಉದ್ದೇಶದಿಂದ ಉದ್ಯೋಗಿಗಳಿಗೆ ಪ್ರತ್ಯೇಕ ವಸತಿ ಕಲ್ಪಿಸಲಾಗಿದ್ದು, ಹೊಸ ಕಾರುಗಳಿಗೆ ಬೇಡಿಕೆ ಹೆಚ್ಚಿರುವ ಹಿನ್ನಲೆಯಲ್ಲಿ ನೈಟ್ ಶಿಫ್ಟ್ ಆರಂಭಿಸಲಾಗುತ್ತಿದೆ.

ಕ್ರೆಟಾ ಕಾರಿಗೆ ಭರ್ಜರಿ ಬೇಡಿಕೆ- ಕಾರು ಉತ್ಪಾದನೆಯನ್ನು ಹೆಚ್ಚಿಸಿದ ಹ್ಯುಂಡೈ

ಇನ್ನು ಹೊಸ ಸುರಕ್ಷಾ ಕ್ರಮಗಳೊಂದಿಗೆ ವಾಹನ ಉತ್ಪಾದನೆ ಮತ್ತು ಮಾರಾಟವನ್ನು ಪುನಾರಂಭಿಸಿರುವ ಬಹುತೇಕ ಆಟೋ ಕಂಪನಿಗಳು ವೈರಸ್ ಹರಡದಂತೆ ಹಲವು ಕಠಿಣ ಕ್ರಮಗಳೊಂದಿಗೆ ವ್ಯಾಪಾರ ವಹಿವಾಟು ನಡೆಸುತ್ತಿದ್ದು, ಹ್ಯುಂಡೈ ಕಂಪನಿಯು ಕೂಡಾ ಕಳೆದ ವರ್ಷಕ್ಕಿಂತಲೂ ಕಡಿಮೆ ಪ್ರಮಾಣದ ಮಾರಾಟ ದಾಖಲೆ ಕಂಡಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಕ್ರೆಟಾ ಕಾರಿಗೆ ಭರ್ಜರಿ ಬೇಡಿಕೆ- ಕಾರು ಉತ್ಪಾದನೆಯನ್ನು ಹೆಚ್ಚಿಸಿದ ಹ್ಯುಂಡೈ

ಕರೋನಾ ವೈರಸ್ ಹರಡುವುದಕ್ಕೂ ಮುನ್ನ ಇದ್ದ ಕಾರು ಮಾರಾಟ ಪ್ರಮಾಣಕ್ಕೂ ಈಗಿನ ಕಾರು ಮಾರಾಟ ಪ್ರಮಾಣಕ್ಕೂ ಹೋಲಿಕೆ ಮಾಡಿದ್ದಲ್ಲಿ ಇದು ತೀವ್ರವಾದ ಹಿನ್ನಡೆಯಾಗಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಇತರೆ ಕಾರುಗಳ ಕಂಪನಿಗಳಿಂತಲೂ ಹ್ಯುಂಡೈ ಕಂಪನಿಯು ಉತ್ತಮ ವ್ಯಾಪಾರ ವಹಿವಾಟು ನಡೆಸಿದೆ.

ಕ್ರೆಟಾ ಕಾರಿಗೆ ಭರ್ಜರಿ ಬೇಡಿಕೆ- ಕಾರು ಉತ್ಪಾದನೆಯನ್ನು ಹೆಚ್ಚಿಸಿದ ಹ್ಯುಂಡೈ

ಹ್ಯುಂಡೈ ಕಂಪನಿಯು ಲಾಕ್‌ಡೌನ್ ಸಡಿಲಿಕೆ ನಂತರ ಮೇ ಅವಧಿಯಲ್ಲಿ 12 ಸಾವಿರ ಕಾರುಗಳನ್ನು ಮಾರಾಟ ಮಾಡಿದ್ದು, ಜೂನ್ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಒಟ್ಟು 26,820 ಕಾರುಗಳನ್ನು ಮಾರಾಟ ಮೂಲಕ ಮುಂಚೂಣಿಯಲ್ಲಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಕ್ರೆಟಾ ಕಾರಿಗೆ ಭರ್ಜರಿ ಬೇಡಿಕೆ- ಕಾರು ಉತ್ಪಾದನೆಯನ್ನು ಹೆಚ್ಚಿಸಿದ ಹ್ಯುಂಡೈ

ಹ್ಯುಂಡೈ ಕಾರುಗಳ ಮಾರಾಟ ಪೈಕಿ ನ್ಯೂ ಜನರೇಷನ್ ಕ್ರೆಟಾ ಖರೀದಿಗೆ ಹೆಚ್ಚು ಬೇಡಿಕೆಯಿದ್ದು, ತದನಂತರ ಸ್ಥಾನದಲ್ಲಿ ವೆನ್ಯೂ, ಐ20, ಗ್ರಾಂಡ್ ಐ10 ನಿಯೋಸ್ ಕಾರುಗಳು ಹೆಚ್ಚು ಬೇಡಿಕೆ ಪಡೆದುಕೊಂಡಿವೆ.

ಕ್ರೆಟಾ ಕಾರಿಗೆ ಭರ್ಜರಿ ಬೇಡಿಕೆ- ಕಾರು ಉತ್ಪಾದನೆಯನ್ನು ಹೆಚ್ಚಿಸಿದ ಹ್ಯುಂಡೈ

ಕ್ರೆಟಾ ಕಾರು ಲಾಕ್‌ಡೌನ್ ಸಂಕಷ್ಟದಲ್ಲೂ ಹೊಸ ಕಾರು ಭರ್ಜರಿ ಬೇಡಿಕೆ ಪಡೆದುಕೊಂಡಿರುವುದು ಹ್ಯುಂಡೈ ಕಂಪನಿಗೆ ನೀರಿಕ್ಷೆಗೂ ಮೀರಿ ಲಾಭ ತಂದುಕೊಟ್ಟಿದ್ದು, 7,207 ಯುನಿಟ್‌ಗಳು ಮಾರಾಟಗೊಳ್ಳುವ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದೆ.

MOST READ: ಕರೋನಾ ವೈರಸ್ ಎಫೆಕ್ಟ್: ಕಾರಿಗೂ ಬಂತು ಪೋರ್ಟಬಲ್ ಟಾಯ್ಲೆಟ್‌

ಕ್ರೆಟಾ ಕಾರಿಗೆ ಭರ್ಜರಿ ಬೇಡಿಕೆ- ಕಾರು ಉತ್ಪಾದನೆಯನ್ನು ಹೆಚ್ಚಿಸಿದ ಹ್ಯುಂಡೈ

ತದನಂತರ ಸ್ಥಾನದಲ್ಲಿರುವ ವೆನ್ಯೂ, ಐ20, ಗ್ರಾಂಡ್ ಐ10 ನಿಯೋಸ್, ವೆರ್ನಾ, ಸ್ಯಾಂಟ್ರೋ ಮತ್ತು ಔರಾ ಕಾರುಗಳು ಸಹ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಹೊಸ ಕಾರುಗಳ ಮಾರಾಟ ಪ್ರಮಾಣವನ್ನು ಸುಧಾರಿಸಲು ಹಲವಾರು ಆಫರ್‌ಗಳನ್ನು ನೀಡಲಾಗುತ್ತಿದೆ.

Article Published On: Wednesday, July 15, 2020, 11:32 [IST]
English summary
Hyundai To Begin Third Shift At Production Facility. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+