ಫಾರ್ಚೂನರ್ ಕಾರಿಗೆ ಭರ್ಜರಿ ಪೈಪೋಟಿ ನೀಡಲಿದೆ ಹ್ಯುಂಡೈ ಪಾಲಿಸೆಡ್ ಎಸ್‌ಯುವಿ

ದೇಶದ ಎರಡನೇ ಅತಿದೊಡ್ಡ ಕಾರು ಉತ್ಪಾದನಾ ಮತ್ತು ಮಾರಾಟ ಕಂಪನಿಯಾಗಿ ಹೊರಹೊಮ್ಮಿರುವ ಹ್ಯುಂಡೈ ಮುಂಬರುವ ದಿನಗಳಲ್ಲಿ ವಿವಿಧ ಮಾದರಿಯ ಹಲವು ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಆಮದು ನೀತಿ ಅಡಿ ಐಷಾರಾಮಿ ಎಸ್‌ಯುವಿ ಮತ್ತು ಎಂಪಿವಿ ಕಾರುಗಳನ್ನು ಬಿಡುಗಡೆ ಮಾಡಲಿದೆ.

ಫಾರ್ಚೂನರ್ ಕಾರಿಗೆ ಭರ್ಜರಿ ಪೈಪೋಟಿ ನೀಡಲಿದೆ ಹ್ಯುಂಡೈ ಪಾಲಿಸೆಡ್ ಎಸ್‌ಯುವಿ

ಕಳೆದ ಕೆಲವು ವರ್ಷಗಳಿಂದ ಹೊಸ ಕಾರುಗಳ ಮಾರಾಟದಲ್ಲಿ ನಿರಂತರವಾಗಿ ಬೆಳವಣಿಗೆ ಸಾಧಿಸುತ್ತಿರುವ ಹ್ಯುಂಡೈ ಕಂಪನಿಯು ಮಧ್ಯಮ ಗಾತ್ರದ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಸಾಕಷ್ಟು ಮುನ್ನಡೆ ಸಾಧಿಸಿದ್ದು, ಇದೀಗ ಮಾರುಕಟ್ಟೆ ವಿಸ್ತರಣೆಗಾಗಿ ಪ್ರೀಮಿಯಂ ಮಾದರಿಯ ಎಂಪಿವಿ ಮತ್ತು ಎಸ್‌ಯುವಿ ಕಾರುಗಳ ಮಾರಾಟದತ್ತ ಎದುರು ನೋಡುತ್ತಿದೆ. ಮಾರುಕಟ್ಟೆಯಲ್ಲಿ ಸದ್ಯ ಭಾರೀ ಜನಪ್ರಿಯತೆ ಹೊಂದಿರುವ ಟೊಯೊಟಾ ಫಾರ್ಚೂನರ್ ಮತ್ತು ಇನೋವಾ ಕ್ರಿಸ್ಟಾ ಕಾರುಗಳಿಗೆ ಪೈಪೋಟಿಯಾಗಿ ಹ್ಯುಂಡೈ ಹೊಸ ಕಾರುಗಳು ಮಾರುಕಟ್ಟೆಯನ್ನು ಪ್ರವೇಶಿಸಲಿವೆ.

ಫಾರ್ಚೂನರ್ ಕಾರಿಗೆ ಭರ್ಜರಿ ಪೈಪೋಟಿ ನೀಡಲಿದೆ ಹ್ಯುಂಡೈ ಪಾಲಿಸೆಡ್ ಎಸ್‌ಯುವಿ

ಹೊಸ ಕಾರುಗಳ ಬಿಡುಗಡೆ ಕುರಿತಂತೆ ಕ್ರೆಟಾ ನ್ಯೂ ಜನರೇಷನ್ ಆವೃತ್ತಿಯ ಬಿಡುಗಡೆಯ ವೇಳೆ ಮಾಹಿತಿ ಹಂಚಿಕೊಂಡಿದ್ದ ಹ್ಯುಂಡೈ ಕಂಪನಿಯು ಪ್ರೀಮಿಯಂ ಮಾದರಿಯ ಎಂಪಿವಿ ಮತ್ತು ಎಸ್‌ಯುವಿ ಕಾರುಗಳ ಬಿಡುಗಡೆಗಾಗಿ ಮಾರುಕಟ್ಟೆ ಅಧ್ಯಯನ ನಡೆಸುತ್ತಿರುವುದಾಗಿ ಹೇಳಿಕೊಂಡಿತ್ತು.

ಫಾರ್ಚೂನರ್ ಕಾರಿಗೆ ಭರ್ಜರಿ ಪೈಪೋಟಿ ನೀಡಲಿದೆ ಹ್ಯುಂಡೈ ಪಾಲಿಸೆಡ್ ಎಸ್‌ಯುವಿ

ಭಾರತದಲ್ಲಿ ಪ್ರೀಮಿಯಂ ಆವೃತ್ತಿಗಳ ಮಾರಾಟಕ್ಕೆ ಉತ್ತಮ ಮಾರುಕಟ್ಟೆ ಇರುವುದಾಗಿ ಹೇಳಿಕೊಂಡಿರುವ ಹ್ಯುಂಡೈ ಸಂಸ್ಥೆಯು ಯುರೋಪ್ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯಲ್ಲಿರುವ ಫುಲ್ ಸೈಜ್ 7 ಸೀಟರ್ ಎಸ್‌ಯುವಿ ಮತ್ತು 9 ಸೀಟರ್ ಎಂಪಿವಿ ಕಾರನ್ನು ಪರಿಚಯಿಸುವುದಾಗಿ ಹೇಳಿಕೊಂಡಿದೆ.

ಫಾರ್ಚೂನರ್ ಕಾರಿಗೆ ಭರ್ಜರಿ ಪೈಪೋಟಿ ನೀಡಲಿದೆ ಹ್ಯುಂಡೈ ಪಾಲಿಸೆಡ್ ಎಸ್‌ಯುವಿ

ಮಾಹಿತಿಗಳ ಪ್ರಕಾರ ಎಸ್‌ಯುವಿ ಮಾದರಿಯಾಗಿ ಪಾಲಿಸೆಡ್ ಮತ್ತು ಎಂಪಿವಿ ಆವೃತ್ತಿಯಾಗಿ ಸ್ಟಾರೆಕ್ಸ್ ಕಾರುಗಳನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಪಾಲಿಸೆಡ್ ಕಾರು ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರುಗಳಿಗೆ ಪೈಪೋಟಿ ನೀಡಲಿದ್ದರೆ ಸ್ಟಾರೆಕ್ಸ್ ಎಂಪಿವಿ ಕಾರು ಟೊಯೊಟಾ ಇನೋವಾ ಕ್ರಿಸ್ಟಾ ಮತ್ತು ಕಿಯಾ ಕಾರ್ನಿವಾಲ್ ಕಾರುಗಳ ನಡುವಿನ ಸ್ಥಾನದೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

ಫಾರ್ಚೂನರ್ ಕಾರಿಗೆ ಭರ್ಜರಿ ಪೈಪೋಟಿ ನೀಡಲಿದೆ ಹ್ಯುಂಡೈ ಪಾಲಿಸೆಡ್ ಎಸ್‌ಯುವಿ

ಹೀಗಾಗಿ ಹೊಸ ಕಾರುಗಳು ಭಾರತದಲ್ಲಿ ಉತ್ತಮ ಪೈಪೋಟಿ ನೀಡುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದು, ಕೇಂದ್ರ ಸರ್ಕಾರವು ಕಳೆದ ವರ್ಷ ಜಾರಿಗೆ ತಂದಿರುವ ಆಮದು ನೀತಿಯಲ್ಲಿನ ತಿದ್ದುಪಡಿ ಕೂಡಾ ಹ್ಯುಂಡೈ ಸೇರಿದಂತೆ ಹಲವು ವಿದೇಶಿ ವಾಹನ ಕಂಪನಿಗಳಿಗೆ ವರದಾನವಾಗಿದೆ.

ಫಾರ್ಚೂನರ್ ಕಾರಿಗೆ ಭರ್ಜರಿ ಪೈಪೋಟಿ ನೀಡಲಿದೆ ಹ್ಯುಂಡೈ ಪಾಲಿಸೆಡ್ ಎಸ್‌ಯುವಿ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಆಮದು ನೀತಿಯಡಿ ವಿದೇಶಿ ಮಾರುಕಟ್ಟೆಗಳಿಂದ ವಾಹನ ಕಂಪನಿಗಳು ತಮ್ಮದೆ ಉತ್ಪಾದನೆಯ 2500 ವಾಹನಗಳನ್ನು ಯಾವುದೇ ಹೆಚ್ಚುವರಿ ಷರತ್ತುಗಳಿಲ್ಲದೆ ಆಮದು ಮಾಡಿಕೊಂಡು ಭಾರತದಲ್ಲಿ ಮಾರಾಟ ಮಾಡಬಹುದಾಗಿದ್ದು, ಇದೀಗ ಹ್ಯುಂಡೈ ಸೇರಿದಂತೆ ಹಲವು ಕಾರು ಕಂಪನಿಗಳು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಕೆಲವು ಕಾರು ಮಾದರಿಗಳನ್ನು ಸೀಮಿತ ಪ್ರಮಾಣದಲ್ಲಿ ಮಾರಾಟಕ್ಕೆ ಮುಂದಾಗಿವೆ.

ಫಾರ್ಚೂನರ್ ಕಾರಿಗೆ ಭರ್ಜರಿ ಪೈಪೋಟಿ ನೀಡಲಿದೆ ಹ್ಯುಂಡೈ ಪಾಲಿಸೆಡ್ ಎಸ್‌ಯುವಿ

ಮಾಹಿತಿಗಳ ಪ್ರಕಾರ, ಹೊಸ ಕಾರುಗಳನ್ನು 2021-22 ಹಣಕಾಸು ವರ್ಷದ ಅವಧಿಯೊಳಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಹ್ಯುಂಡೈ ಕಂಪನಿಯು ಬಿಡುಗಡೆಗೂ ಎಂಜಿನ್ ಆಯ್ಕೆ ಮತ್ತು ಬೆಲೆ ವಿಚಾರದಲ್ಲಿ ಮಾರುಕಟ್ಟೆ ಅಧ್ಯಯನವನ್ನು ಪರಿಣಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಿದೆ.

ಫಾರ್ಚೂನರ್ ಕಾರಿಗೆ ಭರ್ಜರಿ ಪೈಪೋಟಿ ನೀಡಲಿದೆ ಹ್ಯುಂಡೈ ಪಾಲಿಸೆಡ್ ಎಸ್‌ಯುವಿ

ಹೊಸ ಕಾರುಗಳು ಮೇಲೆ ಹೇಳಿದಂತೆ ಐಷಾರಾಮಿ ಸೌಲಭ್ಯಗಳೊಂದಿಗೆ ಬಿಡುಗಡೆಯಾಗಲಿದ್ದು, ಬೆಲೆಯಲ್ಲೂ ಕೂಡಾ ತುಸು ದುಬಾರಿಯಾಗಿರಲಿವೆ. ಪಾಲಿಸೆಡ್ ಕಾರು ಎಕ್ಸ್‌ಶೋರೂಂ ಪ್ರಕಾರ ರೂ.28 ಲಕ್ಷದಿಂದ ರೂ.32 ಲಕ್ಷ ಬೆಲೆ ಹೊಂದಿದ್ದರೆ ಸ್ಟಾರೆಕ್ಸ್ ಕಾರು ಎಕ್ಸ್‌ಶೋರೂಂ ಪ್ರಕಾರ ರೂ. 24 ಲಕ್ಷದಿಂದ ರೂ.30 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

Most Read Articles

Kannada
English summary
Hyundai Palisade SUV Could Come To India: Will Rival Ford Endeavour. Read in Kannada.
Story first published: Thursday, March 26, 2020, 15:18 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X