ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಹ್ಯುಂಡೈ ನೆಕ್ಸ್ಟ್ ಎಲೆಕ್ಟ್ರಿಕ್ ಕಾರು..!

ವಿಶ್ವದ ಎಂಟನೇ ಅತಿ ದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಹ್ಯುಂಡೈ ತನ್ನ ಭವಿಷ್ಯದ ಕಾರು ಮಾದರಿಗಳ ಮಾರಾಟದಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ಜಾಗತಿಕ ಮಾರುಕಟ್ಟೆಗಳಲ್ಲಿ ಎಲೆಕ್ಟ್ರಿಕ್ ಮತ್ತು ನೈಟ್ರೊಜನ್ ಕಾರುಗಳ ಬಿಡುಗಡೆಗೆ ಹೆಚ್ಚು ಉತ್ಸುಕವಾಗಿದೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಹ್ಯುಂಡೈ ನೆಕ್ಸ್ಟ್ ಎಲೆಕ್ಟ್ರಿಕ್ ಕಾರು..!

ಭಾರತದಲ್ಲಿ ಈಗಾಗಲೇ ಕೊನಾ ಎಸ್‌ಯುವಿ ಬಿಡುಗಡೆಗೊಳಿಸುವ ಮೂಲಕ ಮಾಲಿನ್ಯ ತಡೆಯುವ ತಡೆಯುವ ನಿಟ್ಟಿನಲ್ಲಿ ಹೊಸ ಹೆಜ್ಜೆಯಿರಿಸಿದ್ದು, ಮುಂಬರುವ ದಿನಗಳಲ್ಲಿ ಮತ್ತಷ್ಟು ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುವ ಯೋಜನೆಯಲ್ಲಿದೆ. ಸದ್ಯ ಮಾರುಕಟ್ಟೆಯಲ್ಲಿರುವ ಕೊನಾ ಕಾರು ಖರೀದಿಸಲು ಬಹುತೇಕ ಕಾರು ಖರೀದಿದಾರರಿಗೆ ಆಸಕ್ತಿ ಇದ್ದರೂ ಸಹ ದುಬಾರಿ ಬೆಲೆಯಿಂದಾಗಿ ಹಿಂದೇಟು ಹಾಕುತ್ತಿದ್ದು, ಶೀಘ್ರದಲ್ಲೇ ಮಧ್ಯಮ ವರ್ಗದ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಕೈಗೆಟುಕುವ ಬೆಲೆಯಲ್ಲಿ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಹ್ಯುಂಡೈ ನೆಕ್ಸ್ಟ್ ಎಲೆಕ್ಟ್ರಿಕ್ ಕಾರು..!

ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಖರೀದಿಗೆ ಲಭ್ಯವಿರುವ ಬಹುತೇಕ ಎಲೆಕ್ಟ್ರಿಕ್ ಕಾರುಗಳು ರೂ.20 ಲಕ್ಷಕ್ಕಿಂತಲೂ ಹೆಚ್ಚು ಬೆಲೆಯೊಂದಿಗೆ ಮಾರಾಟವಾಗುತ್ತಿದ್ದು, ಅಗ್ಗದ ಬೆಲೆಯಲ್ಲಿ ಲಭ್ಯವಿರುವ ಟಾಟಾ ಮತ್ತು ಮಹೀಂದ್ರಾ ಎಲೆಕ್ಟ್ರಿಕ್ ಕಾರುಗಳು ಕಡಿಮೆ ಬೆಲೆ ಹೊಂದಿದ್ದರು ಅತಿ ಕಡಿಮೆ ಮೈಲೇಜ್ ಹೊಂದಿರುವುದು ಗ್ರಾಹಕರನ್ನು ಆಕರ್ಷಿಸುವಲ್ಲಿ ವಿಫಲವಾಗುತ್ತಿವೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಹ್ಯುಂಡೈ ನೆಕ್ಸ್ಟ್ ಎಲೆಕ್ಟ್ರಿಕ್ ಕಾರು..!

ಈ ನಿಟ್ಟಿನಲ್ಲಿ ಮಾರುಕಟ್ಟೆ ಅಧ್ಯಯನ ನಡೆಸಿರುವ ಹ್ಯುಂಡೈ ಸಂಸ್ಥೆಯು ಶೀಘ್ರದಲ್ಲೇ ರೂ.10 ಲಕ್ಷದೊಳಗೆ ಪ್ರತಿ ಚಾರ್ಜ್‌ಗೆ 250 ಕಿ.ಮೀ ನಿಂದ 300 ಕಿ.ಮೀ ಮೈಲೇಜ್ ನೀಡಬಲ್ಲ ಸಣ್ಣ ಗಾತ್ರದ ಕಾರುಗಳನ್ನು ಬಿಡುಗಡೆಗೊಳಿಸುವುದಾಗಿ ಭರವಸೆ ನೀಡಿದೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಹ್ಯುಂಡೈ ನೆಕ್ಸ್ಟ್ ಎಲೆಕ್ಟ್ರಿಕ್ ಕಾರು..!

ಇದಲ್ಲದೇ ಆಟೋ ಮಾರುಕಟ್ಟೆಯಲ್ಲಿ ಅದೆಷ್ಟೋ ಗ್ರಾಹಕರಿಗೆ ಎಲೆಕ್ಟ್ರಿಕ್ ಕಾರು ಖರೀದಿಸುವ ಆಸಕ್ತಿ ಇದ್ದರೂ ಕೂಡಾ ದೂರದ ಪ್ರಯಾಣದ ವೇಳೆ ಎದುರಾಗಬಹುದಾದ ಚಾರ್ಜಿಂಗ್ ಸಮಸ್ಯೆಯಿಂದಾಗಿ ಎಲೆಕ್ಟ್ರಿಕ್ ಕಾರುಗಳ ಖರೀದಿಗೆ ಹಿಂದೇಟು ಹಾಕುತ್ತಿರುವುದು ಸುಳ್ಳಲ್ಲ. ಇದಕ್ಕಾಗಿ ಹೊಸ ಪರಿಹಾರ ಕಂಡುಕೊಂಡಿರುವ ಹ್ಯುಂಡೈ ಸಂಸ್ಥೆಯು ಫಾಸ್ಟ್‌ಚಾರ್ಜಿಂಗ್ ಸೌಲಭ್ಯದ ಜೊತೆಗೆ ವೆಹಿಕಲ್ ಟು ವೆಹಿಕಲ್ ಚಾರ್ಜಿಂಗ್ ಸೌಲಭ್ಯವನ್ನು ಸಹ ಪರಿಚಯಿಸುತ್ತಿದೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಹ್ಯುಂಡೈ ನೆಕ್ಸ್ಟ್ ಎಲೆಕ್ಟ್ರಿಕ್ ಕಾರು..!

ಅಂದರೆ, ಪ್ರಯಾಣದ ವೇಳೆ ಎಲೆಕ್ಟ್ರಿಕ್ ಕಾರಿನ ಚಾರ್ಜ್ ಖಾಲಿಯಾದಲ್ಲಿ ಮತ್ತೊಂದು ಎಲೆಕ್ಟ್ರಿಕ್ ಕಾರಿನ ಮೂಲಕ ಒಂದಿಷ್ಟು ಚಾರ್ಜ್ ಮಾಡಿಕೊಂಡು ಪ್ರಯಾಣವನ್ನು ಮುಂದುವರಿಸಬಹುದಾದ ಸೌಲಭ್ಯ ಇದಾಗಿದ್ದು, ಇದರಿಂದ ಚಾರ್ಜಿಂಗ್ ಸಮಸ್ಯೆಗೆ ಇದು ತಾತ್ಕಾಲಿಕ ಪರಿಹಾರವಾಗಲಿದೆ ಎನ್ನಬಹುದು.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಹ್ಯುಂಡೈ ನೆಕ್ಸ್ಟ್ ಎಲೆಕ್ಟ್ರಿಕ್ ಕಾರು..!

ಇನ್ನು ಕೊನಾ ಕಾರು 39.2kWh ಬ್ಯಾಟರಿ ಸಾಮರ್ಥ್ಯದೊಂದಿಗೆ ಪ್ರತಿ ಚಾರ್ಜ್‌ಗೆ ಗರಿಷ್ಠ 452 ಕಿ.ಮಿ ಮೈಲೇಜ್ ಹಿಂದಿರುಗಿಸಬಲ್ಲ ವೈಶಿಷ್ಟ್ಯತೆಯನ್ನು ಹೊಂದಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 23.90 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಹಾಗೆಯೇ ಹೊಸ ಕಾರಿನ ಮೇಲೆ ರೂ.1.50 ಲಕ್ಷ ತೆರಿಗೆ ವಿನಾಯ್ತಿ ಸಹ ಸಿಗಲಿದ್ದು, ಬ್ಯಾಟರಿ ಮೇಲೆ 8 ವರ್ಷಗಳ ವಾರಂಟಿ ನೀಡಲಾಗಿದೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಹ್ಯುಂಡೈ ನೆಕ್ಸ್ಟ್ ಎಲೆಕ್ಟ್ರಿಕ್ ಕಾರು..!

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎರಡು ಮಾದರಿಯ ಬ್ಯಾಟರಿ ಆಯ್ಕೆಯನ್ನು ಹೊಂದಿರುವ ಕೊನಾ ಎಲೆಕ್ಟ್ರಿಕ್ ಕಾರು 64kWh ಮತ್ತು 39.2kWh ಬ್ಯಾಟರಿ ವೈಶಿಷ್ಟ್ಯತೆಗಳನ್ನು ಹೊಂದಿದೆ. ಇದರಲ್ಲಿ ಸದ್ಯಕ್ಕೆ 39.2kWh ಬ್ಯಾಟರಿ ಸಾಮಾರ್ಥ್ಯ ಮಾದರಿಯನ್ನು ಮಾತ್ರವೇ ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, 52 ನಿಮಿಷಗಳಲ್ಲಿ ಶೇ.80 ರಷ್ಟು ಬ್ಯಾಟರಿ ಚಾರ್ಜ್‌ ಆಗಬಲ್ಲ ಫಾಸ್ಟ್ ಚಾರ್ಜರ್ ಸೌಲಭ್ಯ ಈ ಕಾರಿನಲ್ಲಿದೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಹ್ಯುಂಡೈ ನೆಕ್ಸ್ಟ್ ಎಲೆಕ್ಟ್ರಿಕ್ ಕಾರು..!

ಹ್ಯುಂಡೈ ಹೊಸ ಎಲೆಕ್ಟ್ರಿಕ್ ಕಾರು ಸಾಮಾನ್ಯ ಕಾರುಗಳಂತೆಯೇ ಪರ್ಫಾಮೆನ್ಸ್‌ನಲ್ಲೂ ಉತ್ತಮ ಮುನ್ನಡೆ ಕಾಯ್ದುಕೊಂಡಿದ್ದು, 100kW ಫ್ರಂಟ್ ವೀಲ್ಹ್ ಮೋಟಾರ್ ಪವರ್ ಮೂಲಕ 131-ಬಿಎಚ್‌ಪಿ ಮತ್ತು 395-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಕೇವಲ 9.7-ಸೇಕೆಂಡುಗಳಲ್ಲಿ ಸೊನ್ನೆಯಿಂದ 100ಕಿ.ಮಿ ವೇಗ ತಲುಪಬಲ್ಲದು.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಹ್ಯುಂಡೈ ನೆಕ್ಸ್ಟ್ ಎಲೆಕ್ಟ್ರಿಕ್ ಕಾರು..!

ಕ್ರೆಟಾ ಕಾರಿಗಿಂತಲೂ ತುಸು ಕಡಿಮೆ ಉದ್ದಳತೆ ಹೊಂದಿರುವ ಕೋನಾ ಎಲೆಕ್ಟ್ರಿಕ್ ಕಾರು ಹಲವು ಪ್ರೀಮಿಯಂ ಸೌಲಭ್ಯಗಳನ್ನು ಹೊತ್ತು ಬಂದಿದ್ದು, 4,180-ಎಂಎಂ ಉದ್ದ, 1,800-ಎಂಎಂ ಅಗಲ, 1,570-ಎಂಎಂ ಎತ್ತರ ಮತ್ತು 2,600-ಎಂಎಂ ವೀಲ್ಹ್‌ಬೇಸ್‌ನೊಂದಿಗೆ 332-ಲೀಟರ್ ಸಾಮರ್ಥ್ಯದ ಲಗೇಜ್ ಸ್ಪೆಸ್ ಪಡೆದುಕೊಂಡಿದೆ.

ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಹ್ಯುಂಡೈ ನೆಕ್ಸ್ಟ್ ಎಲೆಕ್ಟ್ರಿಕ್ ಕಾರು..!

ಇದೀಗ ಹ್ಯುಂಡೈ ಸಂಸ್ಥೆಯು ಬಿಡುಗಡೆಗೊಳಿಸಲು ನಿರ್ಧರಿಸಿರುವ ಸಣ್ಣ ಗಾತ್ರದ ಎಲೆಕ್ಟ್ರಿಕ್ ಕಾರು ಸಹ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸುವ ಸಾಧ್ಯತೆಗಳಿದ್ದು, ಹೊಸ ಕಾರು 2020ರ ಮಧ್ಯಂತರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.

Most Read Articles

Kannada
English summary
Hyundai To Launch New Electric Car In India For Less Than Rs.10 Lakh. Read in Kannada.
Story first published: Friday, January 24, 2020, 18:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X