ಹೊಸ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಗೊಂಡ ಹ್ಯುಂಡೈ ವೆನ್ಯೂ

ಹ್ಯುಂಡೈ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಪ್ರಮುಖ ಕಾರು ಆವೃತ್ತಿಗಳ ಎಂಜಿನ್ ಆಯ್ಕೆಯಲ್ಲಿ ಭಾರೀ ಬದಲಾವಣೆ ಪರಿಚಯಿಸುತ್ತಿದ್ದು, ಜನಪ್ರಿಯ ಕಂಪ್ಯಾಕ್ಟ್ ಎಸ್‌ಯುವಿ ಆವೃತ್ತಿಯಾದ ವೆನ್ಯೂ ಮಾದರಿಯಲ್ಲೂ ಹೊಸ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ.

ಹೊಸ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಗೊಂಡ ಹ್ಯುಂಡೈ ವೆನ್ಯೂ

ಎಪ್ರಿಲ್ 1ರಿಂದ ಜಾರಿಗೆ ಬರುತ್ತಿರುವ ಬಿಎಸ್-6 ಎಮಿಷನ್‌ ಪ್ರಕಾರ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಪ್ರಮುಖ ಕಾರುಗಳ ಎಂಜಿನ್ ಆಯ್ಕೆಗಳನ್ನು ಬದಲಾವಣೆಗೊಳಿಸುತ್ತಿದ್ದು, ಹ್ಯುಂಡೈ ಕೂಡಾ ಈ ಹಿಂದಿನ 1.4-ಲೀಟರ್ ಡೀಸೆಲ್ ಮತ್ತು 1.6-ಲೀಟರ್ ಎಂಜಿನ್‌ಗಳನ್ನು ಸ್ಥಗಿತಗೊಳಿಸಿದೆ. ಇದರಿಂದಾಗಿ ಹಳೆಯ ಎಂಜಿನ್‌ಗೆ ಪರ್ಯಾಯವಾಗಿ 1.5-ಲೀಟರ್ ಡೀಸೆಲ್ ಎಂಜಿನ್ ಅಭಿವೃದ್ದಿಗೊಳಿಸಿದ್ದು, ಇದೀಗ ವೆನ್ಯೂ ಕೂಡಾ ಹೊಸ ಎಂಜಿನ್ ಆಯ್ಕೆಯೊಂದಿಗೆ ಮುಂದಿನ ಒಂದು ವಾರದೊಳಗೆ ಖರೀದಿಗೆ ಲಭ್ಯವಾಗುತ್ತಿದೆ.

ಹೊಸ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಗೊಂಡ ಹ್ಯುಂಡೈ ವೆನ್ಯೂ

1.5-ಲೀಟರ್ ಮಾದರಿಯು 4 ಸಿಲಿಂಡರ್ ಮೂಲಕ 99-ಬಿಎಚ್‌ಪಿ ಮತ್ತು 240-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಇಂಧನ ದಕ್ಷತೆಯಲ್ಲೂ ಇದು ಗಮನಸೆಳೆಯಲಿದೆ.

ಹೊಸ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಗೊಂಡ ಹ್ಯುಂಡೈ ವೆನ್ಯೂ

ಈ ಮೂಲಕ ವೆನ್ಯೂ ಕಾರಿನಲ್ಲಿ ಇನ್ಮುಂದೆ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ ಖರೀದಿಗೆ ಲಭ್ಯವಿರಲಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆವೃತ್ತಿಯು ಸಹ ಖರೀದಿಗೆ ಲಭ್ಯವಿರಲಿದೆ.

ಹೊಸ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಗೊಂಡ ಹ್ಯುಂಡೈ ವೆನ್ಯೂ

ಈ ಮೂಲಕ ಹೊಸ ವೆನ್ಯೂ ಡೀಸೆಲ್ ಮಾದರಿಯು ಕ್ರೆಟಾ ಮತ್ತು ಸೆಲ್ಟೊಸ್ ಡೀಸೆಲ್ ಕಾರುಗಳಿಗೆ ಸರಿಸಮನಾಗಿದ್ದು, ಹೊಸ ಪೆಟ್ರೋಲ್ ಎಂಜಿನ್‌ನಲ್ಲೂ ಮಹತ್ವದ ಬದಲಾವಣೆಯೊಂದಿಗೆ ದುಬಾರಿ ಬೆಲೆ ಪಡೆದುಕೊಂಡಿದೆ. 1.2-ಲೀಟರ್ ಕಪ್ಪಾ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು ಈ ಹಿಂದಿನಂತೆಯೇ ಮುಂದುವರಿಸಲಾಗಿದ್ದರೂ ಹೊಸ ಎಮಿಷನ್ ನಿಯಮದಿಂದಾಗಿ ಪರ್ಫಾಮೆನ್ಸ್‌ನಲ್ಲಿ ತುಸು ಹೆಚ್ಚಳ ಮಾಡಲಾಗಿದೆ.

ಹೊಸ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಗೊಂಡ ಹ್ಯುಂಡೈ ವೆನ್ಯೂ

ಇದರಲ್ಲಿ ಹೊಸದಾಗಿ ಪರಿಚಯಿಸಿರುವ 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಸದ್ಯ ಮಾರುಕಟ್ಟೆಯಲ್ಲಿರುವ ಸೆಲ್ಟೊಸ್‌ನಿಂದ ಎರವಲು ಪಡೆಯಲಾಗಿದ್ದು,ಕಾರು ಮಾದರಿಯ ಅನುಗುಣವಾಗಿ ಹಾರ್ಸ್ ಪವರ್ ಉತ್ಪಾದನೆಯಲ್ಲಿ ಬದಲಾವಣೆ ಮಾಡಲಾಗಿದೆ.

ಹೊಸ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಗೊಂಡ ಹ್ಯುಂಡೈ ವೆನ್ಯೂ

ಬಿಎಸ್-6 ವೆನ್ಯೂ ಕಾರು ಬಿಎಸ್-6 ನಂತರ ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 6.70 ಲಕ್ಷದಿಂದ(ಪೆಟ್ರೋಲ್) ಟಾಪ್ ಎಂಡ್ ಮಾದರಿಯು ರೂ.11.50 ಲಕ್ಷ(ಪೆಟ್ರೋಲ್) ಬೆಲೆ ಪಡೆದುಕೊಂಡಿದ್ದು, 1.5-ಲೀಟರ್ ಮಾದರಿಯು ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ. 8.09 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.11.49 ಲಕ್ಷ ಬೆಲೆ ಹೊಂದಿದೆ.

ಹೊಸ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಗೊಂಡ ಹ್ಯುಂಡೈ ವೆನ್ಯೂ

ಹೊಸ ಎಂಜಿನ್ ನಂತರ ವೆನ್ಯೂ ಕಾರು ರೂ. 19 ಸಾವಿರದಿಂದ ರೂ.55 ಸಾವಿರದಷ್ಟು ಹೆಚ್ಚಳವಾಗಿದ್ದು, ಎಂಜಿನ್ ಹೊರತಾಗಿ ಹೊಸ ಕಾರಿನಲ್ಲಿ ಯಾವುದೇ ಹೆಚ್ಚುವರಿ ತಾಂತ್ರಿಕ ಅಂಶಗಳನ್ನು ಬದಲಾವಣೆ ಮಾಡಲಾಗಿಲ್ಲ.

ಹೊಸ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಗೊಂಡ ಹ್ಯುಂಡೈ ವೆನ್ಯೂ

ವೆನ್ಯೂ ಸದ್ಯ ಹ್ಯುಂಡೈ ನಿರ್ಮಾಣದ ಇತರೆ ಕಾರುಗಳಿಂತಲೂ ಅತಿ ವಿನೂತನ ತಂತ್ರಜ್ಞಾನ ಸೌಲಭ್ಯಗಳನ್ನು ಹೊತ್ತು ಬಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು 5 ವೆರಿಯೆಂಟ್‌ಗಳಲ್ಲಿ ಲಭ್ಯವಿರುವ ಹೊಸ ಕಾರು ಹಲವು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದೆ.

ಹೊಸ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಗೊಂಡ ಹ್ಯುಂಡೈ ವೆನ್ಯೂ

ಪ್ರೀಮಿಯಂ ಸೌಲಭ್ಯಗಳ ಜೊತೆಗೆ ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್‌ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್‌ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್, ISOFIX ಸೀಟ್, ಹೊಂದಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ.

Article Published On: Thursday, March 19, 2020, 19:57 [IST]
English summary
South Korean carmaker Hyundai Motor has introduced a new 1.5-liter diesel engine option for Venue SUV in India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+