ಹೊಸ ಹ್ಯುಂಡೈ ವೆನ್ಯೂ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಹ್ಯುಂಡೈ ಕಂಪನಿಯು ವೆನ್ಯೂ ಎಸ್‍‍ಯುವಿಯು ಭಾರತೀಯ ಮಾರುಕಟ್ಟೆಯ ಕಾಂಪ್ಯಾಕ್ಟ್ ಎಸ್‍ಯುವಿ ಸೆಗ್‍‍ಮೆಂಟಿನಲ್ಲಿ ಮಾರುತಿ ಸುಜುಕಿ ಕಂಪನಿಯ ವಿಟಾರಾ ಬ್ರೆಝಾ ಎಸ್‍‍ಯುವಿಯ ನಂತರ ಅತಿ ಹೆಚ್ಚು ಮಾರಾಟವಾಗುವ ಎಸ್‍‍ಯುವಿಯಾಗಿದೆ.

ಹೊಸ ಹ್ಯುಂಡೈ ವೆನ್ಯೂ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಹ್ಯುಂಡೈ ವೆನ್ಯೂ 1.2-ಲೀಟರ್ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಆಯ್ಕೆಗಳಲ್ಲಿ ಲಭ್ಯವಿದೆ. ಇದೀಗ ಹೊಸ ಹ್ಯುಂಡೈ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿಯು ಬಹಿರಂಗವಾಗಿದೆ. ಇದರಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಪ್ರತಿ ಲೀಟರ್‌ಗೆ 17.3 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ 0.22 ಕಿ.ಮೀ ಮೈಲೇಜ್ ಕಡಿಮೆಯಾಗಿದೆ. ಇನ್ನು 1.0 ಟರ್ಬೊ ಪೆಟ್ರೋಲ್ ಎಂಜಿನ್ ಪ್ರತಿ ಲೀಟರ್‌ಗೆ 18.1 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಹಿಂದಿನ ಬಿಎಸ್-4, 1.0 ಟರ್ಬೊ ಪೆಟ್ರೋಲ್ ಎಂಜಿನ್ ಗೆ ಹೋಲಿಸಿದರೆ 0.17 ಕಿ.ಮೀ ಮೈಲೇಜ್ ನೀಡುತ್ತದೆ.

ಹೊಸ ಹ್ಯುಂಡೈ ವೆನ್ಯೂ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಇನ್ನು ಇತ್ತೀಚೆಗೆ ಡೀಸೆಲ್ ಆವೃತ್ತಿಯ ಮೈಲೇಜ್ ಮಾಹಿತಿಯು ಕೂಡ ಬಹಿರಂಗವಾಗಿತ್ತು. ಇದರ ಪ್ರಕಾರ ಬಿಎಸ್-6 ವೆನ್ಯೂ ಡೀಸೆಲ್ ಆವೃತ್ತಿಯು ಪ್ರತಿ ಲೀಟರ್‌ಗೆ 23.3 ಕಿ,ಮೀ ಮೈಲೇಜ್ ಅನ್ನು ನೀಡುತ್ತದೆ. ಹ್ಯುಂಡೈ ವೆನ್ಯೂ ಕಂಪನಿಯ ಬ್ಲೂ ಲಿಂಕ್ ಕನೆಕ್ಟಿವಿಟಿ ತಂತ್ರಜ್ಞಾನವನ್ನು ಹೊಂದಿದ ಭಾರತದ ಮೊದಲ ಕಾಂಪ್ಯಾಕ್ಟ್ ಎಸ್‍‍ಯುವಿಯಾಗಿದೆ.

MOST READ: ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಬಿಡುಗಡೆಯಾಗಲಿದೆ ಬಿಎಸ್-6 ಹ್ಯುಂಡೈ ಐ20 ಕಾರು

ಹೊಸ ಹ್ಯುಂಡೈ ವೆನ್ಯೂ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ದಕ್ಷಿಣ ಕೊರಿಯಾದಲ್ಲಿ ಸಹೋದರ ಸಂಸ್ಥೆಗಳಾಗಿರುವ ಹ್ಯುಂಡೈ ಮತ್ತು ಕಿಯಾ ಮೋಟಾರ್ಸ್ ಸಂಸ್ಥೆಗಳು ಭಾರತದಲ್ಲೂ ಕೂಡಾ ಎಂಜಿನ್ ಮತ್ತು ತಂತ್ರಜ್ಞಾನ ಎರವಲು ಪಡೆದುಕೊಂಡಿದೆ.

ಹೊಸ ಹ್ಯುಂಡೈ ವೆನ್ಯೂ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಕಳೆದ ವರ್ಷದ ಅಗಸ್ಟ್‌ನಲ್ಲಿ ಬಿಡುಗಡೆ ಮಾಡಲಾದ ಸೆಲ್ಟೊಸ್ ಡೀಸೆಲ್ ಎಂಜಿನ್ ಮಾದರಿಯನ್ನೇ ಇದೀಗ ಹ್ಯುಂಡೈ ಹೊಸ ಕಾರುಗಳಿಗೂ ಬಳಕೆ ಮಾಡಿಕೊಳ್ಳುತ್ತಿದೆ. ಬಿಎಸ್-6 ನಿಯಮದಿಂದಾಗಿ 1.4-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಲಾಗಿದ್ದು, ಇದರ ಜೊತೆಗೆ 1.6-ಲೀಟರ್ ಡೀಸೆಲ್ ಎಂಜಿನ್ ಅನ್ನು ಸಹ ಸ್ಥಗಿತಗೊಳಿಸಲಾಗಿದೆ.

MOST READ: ಬಿಡುಗಡೆಯಾಗಲಿದೆ ಹಮ್ಮರ್ ಎಲೆಕ್ಟ್ರಿಕ್ ಎಸ್‍ಯುವಿ

ಹೊಸ ಹ್ಯುಂಡೈ ವೆನ್ಯೂ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಹುಂಡೈ ವೆನ್ಯೂ ಎಸ್‍ಯುವಿಯು ಅತ್ಯಾಧುನಿಕ ಫೀಚರ್‍ಗಳನ್ನು ಹೊಂದಿದೆ. ಹೊಸ ಹ್ಯುಂಡೈ ವೆನ್ಯೂ ಎಸ್‍ಯುವಿಯು 5 ವೆರಿಯೆಂಟ್‌ಗಳಲ್ಲಿ ಲಭ್ಯವಿದೆ.

ಹೊಸ ಹ್ಯುಂಡೈ ವೆನ್ಯೂ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಈ ಎಸ್‍‍ಯುವಿಯ ಮುಂಭಾಗದಲ್ಲಿ ಗ್ರಿಲ್, ಡ್ಯುಯಲ್ ಹೆಡ್‌ಲ್ಯಾಂಪ್ ಕ್ಲಸ್ಟರ್, ಲೈಟ್ ಸ್ಟ್ರಿಪ್, ಹೆಡ್‌ಲ್ಯಾಂಪ್ ಕ್ಲಸ್ಟರ್, ಎಲ್ಇಡಿ ಡಿಆರ್‌ಎಲ್ ಮತ್ತು 16-ಇಂಚಿನ ಟಯರ್‍‍ಗಳನ್ನು ಅಳವಡಿಸಲಾಗಿದೆ.

MOST READ: ಮಾರಾಟದಲ್ಲಿ ಶೂನ್ಯ ಸಾಧನೆ ಮಾಡಿದ ಎಂಜಿ ಮೋಟಾರ್

ಹೊಸ ಹ್ಯುಂಡೈ ವೆನ್ಯೂ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಈ ಎಸ್‍ಯುವಿಯಲ್ಲಿ ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್‌ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್‌ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್ ಮತ್ತು ಎರ್ಮಜೆನ್ಸಿ ಅಸಿಸ್ಟ್ ಸೇರಿದಂತೆ ಹಲವಾರು ಫೀಚರ್‍ಗಳನ್ನು ಹೊಂದಿದೆ.

ಹೊಸ ಹ್ಯುಂಡೈ ವೆನ್ಯೂ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಬಿಎಸ್-6 ಹ್ಯುಂಡೈ ವೆನ್ಯೂ ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಫೋರ್ಡ್ ಇಕೋಸ್ಪೋರ್ಟ್, ಮಹಿಂದ್ರಾ ಎಕ್ಸ್​ಯುವಿ 300 ಮತ್ತು ಕಿಯಾ ಸೆಲ್ಟೋಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

Most Read Articles

Kannada
English summary
BS6 Hyundai Venue 1.0 petrol MT delivers 18.1kpl. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X