1 ಲಕ್ಷದ ಗಡಿ ದಾಟಿದ ಹ್ಯುಂಡೈ ವೆನ್ಯೂ ಎಸ್‌ಯುವಿ ಮಾರಾಟ

ಹ್ಯುಂಡೈ ಕಂಪನಿಯು ತನ್ನ ಜನಪ್ರಿಯ ವೆನ್ಯೂ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಕಳೆದ ವರ್ಷದ ಮೇ ತಿಂಗಳಲ್ಲಿ ಭಾರತದಲ್ಲಿ ಬಿಡುಗಡೆಗೊಳಿಸಿತ್ತು, ಈ ಹ್ಯುಂಡೈ ವೆನ್ಯೂ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾಗುವ ಎಸ್‍ಯುವಿಗಳಲ್ಲಿ ಒಂದಾಗಿದೆ.

1 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಹ್ಯುಂಡೈ ವೆನ್ಯೂ ಎಸ್‌ಯುವಿ

ದೇಶದ ಎರಡನೇ ಅತಿದೊಡ್ಡ ಕಾರು ತಯಾರಕ ಕಂಪನಿಯಾದ ಹ್ಯುಂಡೈ 2016ರ ಆಟೋ ಎಕ್ಸ್‌ಪೋದಲ್ಲಿ ಕಾರ್ಲಿನೊ ಕಾನ್ಸೆಪ್ಟ್ ಅನ್ನು ಅನಾವರಣಗೊಳಿಸಿದ್ದರು. ಇದೇ ಕಾನ್ಸೆಪ್ಟ್ ಅನ್ನು ವೆನ್ಯೂ ಎಸ್‍ಯುವಿಯಾಗಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸುತ್ತು. ಈ ಹ್ಯುಂಡೈ ವೆನ್ಯೂ ಬಿಡುಗಡೆಯಾದ ಮೊದಲ ಆರು ತಿಂಗಳಲ್ಲಿ 51,000 ಕ್ಕೂ ಹೆಚ್ಚು ಯುನಿಟ್ ಗಳು ಮಾರಾಟವಾಗಿತ್ತು. ಇದೀಗ ಹ್ಯುಂಡೈ ವೆನ್ಯೂ ಎಸ್‍ಯುವಿಯು ಮತ್ತೊಂದು ಹೊಸ ದಾಖಲೆಯನ್ನು ಮಾಡಿದೆ.

1 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಹ್ಯುಂಡೈ ವೆನ್ಯೂ ಎಸ್‌ಯುವಿ

ಒಂದು ವರ್ಷದಲ್ಲಿ ಹ್ಯುಂಡೈ ವೆನ್ಯೂ ಎಸ್‍ಯುವಿ 1 ಲಕ್ಷಕ್ಕೂ ಹೆಚ್ಚು ಯುನಿಟ್ ಗಳು ಮಾರಾಟವಾಗಿವೆ. ಇದರಲ್ಲಿ ಭಾರತದಲ್ಲಿ ವೆನ್ಯೂ ಎಸ್‍ಯುವಿಯ 97,400 ಯುನಿಟ್ ಗಳು ಮಾರಾಟವಾಗಿದ್ದರೆ, ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ 7,400ಕ್ಕೂ ಹೆಚ್ಚು ಯುನಿಟ್ ಗಳು ಮಾರಾಟವಾಗಿವೆ.

1 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಹ್ಯುಂಡೈ ವೆನ್ಯೂ ಎಸ್‌ಯುವಿ

ಹ್ಯುಂಡೈ ವೆನ್ಯೂ ಎಸ್‍‍ಯುವಿಯ ಮುಂಭಾಗದಲ್ಲಿ ಗ್ರಿಲ್, ಡ್ಯುಯಲ್ ಹೆಡ್‌ಲ್ಯಾಂಪ್ ಕ್ಲಸ್ಟರ್, ಲೈಟ್ ಸ್ಟ್ರಿಪ್, ಹೆಡ್‌ಲ್ಯಾಂಪ್ ಕ್ಲಸ್ಟರ್, ಎಲ್ಇಡಿ ಡಿಆರ್‌ಎಲ್ ಮತ್ತು 16-ಇಂಚಿನ ಟಯರ್‍‍ಗಳನ್ನು ಅಳವಡಿಸಲಾಗಿದೆ.

1 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಹ್ಯುಂಡೈ ವೆನ್ಯೂ ಎಸ್‌ಯುವಿ

ಈ ಎಸ್‍ಯುವಿಯಲ್ಲಿ ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್‌ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್‌ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್ ಮತ್ತು ಎರ್ಮಜೆನ್ಸಿ ಅಸಿಸ್ಟ್ ಸೇರಿದಂತೆ ಹಲವಾರು ಫೀಚರ್‍ಗಳನ್ನು ಹೊಂದಿದೆ.

1 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಹ್ಯುಂಡೈ ವೆನ್ಯೂ ಎಸ್‌ಯುವಿ

ಈ ಹ್ಯುಂಡೈ ವೆನ್ಯೂ 1.2-ಲೀಟರ್ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಆಯ್ಕೆಗಳಲ್ಲಿ ಲಭ್ಯವಿದೆ. ಇದರಲ್ಲಿ 1.2-ಲೀಟರ್ ಪೆಟ್ರೋಲ್ ಎಂಜಿನ್ ಪ್ರತಿ ಲೀಟರ್‌ಗೆ 17.3 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಹಿಂದಿನ ಬಿಎಸ್-4 ಮಾದರಿಗೆ ಹೋಲಿಸಿದರೆ 0.22 ಕಿ.ಮೀ ಮೈಲೇಜ್ ಕಡಿಮೆಯಾಗಿದೆ.

1 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಹ್ಯುಂಡೈ ವೆನ್ಯೂ ಎಸ್‌ಯುವಿ

ಇನ್ನು 1.0 ಟರ್ಬೊ ಪೆಟ್ರೋಲ್ ಎಂಜಿನ್ ಪ್ರತಿ ಲೀಟರ್‌ಗೆ 18.1 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಹಿಂದಿನ ಬಿಎಸ್-4, 1.0 ಟರ್ಬೊ ಪೆಟ್ರೋಲ್ ಎಂಜಿನ್ ಗೆ ಹೋಲಿಸಿದರೆ 0.17 ಕಿ.ಮೀ ಮೈಲೇಜ್ ನೀಡುತ್ತದೆ. ಬಿಎಸ್-6 ವೆನ್ಯೂ ಡೀಸೆಲ್ ಆವೃತ್ತಿಯು ಪ್ರತಿ ಲೀಟರ್‌ಗೆ 23.3 ಕಿ,ಮೀ ಮೈಲೇಜ್ ಅನ್ನು ನೀಡುತ್ತದೆ. ಹ್ಯುಂಡೈ ವೆನ್ಯೂ ಕಂಪನಿಯ ಬ್ಲೂ ಲಿಂಕ್ ಕನೆಕ್ಟಿವಿಟಿ ತಂತ್ರಜ್ಞಾನವನ್ನು ಹೊಂದಿದ ಭಾರತದ ಮೊದಲ ಕಾಂಪ್ಯಾಕ್ಟ್ ಎಸ್‍‍ಯುವಿಯಾಗಿದೆ.

1 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಹ್ಯುಂಡೈ ವೆನ್ಯೂ ಎಸ್‌ಯುವಿ

ದಕ್ಷಿಣ ಕೊರಿಯಾದಲ್ಲಿ ಸಹೋದರ ಸಂಸ್ಥೆಗಳಾಗಿರುವ ಹ್ಯುಂಡೈ ಮತ್ತು ಕಿಯಾ ಮೋಟಾರ್ಸ್ ಸಂಸ್ಥೆಗಳು ಭಾರತದಲ್ಲೂ ಕೂಡ ಎಂಜಿನ್ ಮತ್ತು ತಂತ್ರಜ್ಞಾನ ಎರವಲು ಪಡೆದುಕೊಂಡಿದೆ. ಹುಂಡೈ ವೆನ್ಯೂ ಎಸ್‍ಯುವಿಯು ಅತ್ಯಾಧುನಿಕ ಫೀಚರ್‍ಗಳನ್ನು ಹೊಂದಿದೆ. ಹೊಸ ಹ್ಯುಂಡೈ ವೆನ್ಯೂ ಎಸ್‍ಯುವಿಯು 5 ವೆರಿಯೆಂಟ್‌ಗಳಲ್ಲಿ ಲಭ್ಯವಿದೆ.

1 ಲಕ್ಷ ಯುನಿಟ್ ಮಾರಾಟ ದಾಖಲೆ ಕಂಡ ಹ್ಯುಂಡೈ ವೆನ್ಯೂ ಎಸ್‌ಯುವಿ

ಬಿಎಸ್-6 ಹ್ಯುಂಡೈ ವೆನ್ಯೂ ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಫೋರ್ಡ್ ಇಕೋಸ್ಪೋರ್ಟ್, ಮಹಿಂದ್ರಾ ಎಕ್ಸ್​ಯುವಿ 300 ಮತ್ತು ಕಿಯಾ ಸೆಲ್ಟೋಸ್ ಕಾರುಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Friday, June 26, 2020, 14:27 [IST]
English summary
Hyundai Venue Crosses The 1 Lakh Unit Sales Mark In A Year. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+