ಇಂಟಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ ಪಡೆದುಕೊಳ್ಳಲಿದೆ ಹ್ಯುಂಡೈ ವೆನ್ಯೂ

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ವೆನ್ಯೂ ಕಾರು ಅತಿ ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳ ಪೈಕಿ ಅಗ್ರಸ್ಥಾನದಲ್ಲಿದ್ದು, ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಸುಧಾರಿತ ತಂತ್ರಜ್ಞಾನ ಸೌಲಭ್ಯ ಜೋಡಣೆ ಮಾಡಲಾಗುತ್ತಿದೆ.

ಇಂಟಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ ಪಡೆದುಕೊಳ್ಳಲಿದೆ ವೆನ್ಯೂ

ವೆನ್ಯೂ ಕಾರು ಸದ್ಯ ಡೀಸೆಲ್, ಪೆಟ್ರೋಲ್ ಮತ್ತು ಟರ್ಬೋ ಪೆಟ್ರೋಲ್ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್, ಮ್ಯಾನುವಲ್ ಆವೃತ್ತಿಗಳನ್ನು ಪಡೆದುಕೊಂಡಿದೆ. ಇದೀಗ ಹೊಸ ಕಾರಿನಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಇಂಟೆಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ (ಐಎಂಟಿ) ಆಯ್ಕೆ ನೀಡಲಾಗುತ್ತಿದ್ದು, ಇದು ಮ್ಯಾನುವಲ್ ಕಾರು ಚಾಲನೆಯನ್ನು ಮತ್ತಷ್ಟು ಸರಳಗೊಳಿಸುವುದಲ್ಲದೆ ಇಂಧನ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.

ಇಂಟಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ ಪಡೆದುಕೊಳ್ಳಲಿದೆ ವೆನ್ಯೂ

ಇಂಟೆಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ (ಐಎಂಟಿ) ತಂತ್ರಜ್ಞಾನವನ್ನು ಹ್ಯುಂಡೈ ಮತ್ತು ಸಹೋದರ ಕಂಪನಿ ಕಿಯಾ ಮೋಟಾರ್ಸ್ ಜಂಟಿಯಾಗಿ ಅಭಿವೃದ್ದಿಗೊಳಿಸಿದ್ದು, ಹೊಸ ಟ್ರಾನ್ಸ್‌ಮಿಷನ್ ಅನ್ನು ಈಗಾಗಲೇ ಕಿಯಾ ರಿಯೋ ಕಾರಿನಲ್ಲಿ ಬಳಕೆ ಮಾಡಲಾಗಿದೆ.

ಇಂಟಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ ಪಡೆದುಕೊಳ್ಳಲಿದೆ ವೆನ್ಯೂ

ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿರುವ ಕಿಯಾ ಮತ್ತೊಂದು ಬಹುನೀರಿಕ್ಷಿತ ಸೊನೆಟ್ ಕಾನ್ಸೆಪ್ಟ್ ಕಾರಿನಲ್ಲೂ ಇಂಟೆಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ (ಐಎಂಟಿ) ಬಳಕೆ ಮಾಡಲು ನಿರ್ಧರಿಸಲಾಗಿದ್ದು, ಸೊನೆಟ್ ನಂತರ ಹ್ಯುಂಡೈ ವೆನ್ಯೂನಲ್ಲೂ ಬಳಕೆ ಮಾಡಲು ಯೋಜಿಸಲಾಗಿದೆ.

ಇಂಟಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ ಪಡೆದುಕೊಳ್ಳಲಿದೆ ವೆನ್ಯೂ

ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ ವಾಹನಗಳಿಗೆ ಇಂಟೆಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ (ಐಎಂಟಿ) ಆಯ್ಕೆ ಅತ್ಯುತ್ತಮ ಆಯ್ಕೆಯಾಗಲಿದ್ದು, ಹೊಸ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯ ವೆನ್ಯೂ ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸಲಿದೆ.

MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಇಂಟಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ ಪಡೆದುಕೊಳ್ಳಲಿದೆ ವೆನ್ಯೂ

ಹೊಸ ಇಂಟೆಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ (ಐಎಂಟಿ) ಪ್ರೇರಿತ ವೆನ್ಯೂ ಕಾರು ಮಾದರಿಯು ಫೇಸ್‌ಲಿಫ್ಟ್ ಮಾದರಿಯಲ್ಲಿ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಕಿಯಾ ಸೊನೆಟ್ ಬಿಡುಗಡೆಯ ನಂತರವೇ ವೆನ್ಯೂ ಕಾರಿನಲ್ಲಿ ಹೊಸ ಗೇರ್‌ಬಾಕ್ಸ್ ಆಯ್ಕೆ ಲಭ್ಯವಾಗಲಿದೆ.

ಇಂಟಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ ಪಡೆದುಕೊಳ್ಳಲಿದೆ ವೆನ್ಯೂ

ಇನ್ನು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಪವರ್‌ಪುಲ್ ಎಂಜಿನ್ ಆಯ್ಕೆ ಹೊಂದಿರುವ ವೆನ್ಯೂ ಕಾರಿನಲ್ಲಿ 1.0-ಲೀಟರ್ ಟರ್ಬೋ ಮಾದರಿಯು ಅತಿ ಹೆಚ್ಚು ಬೇಡಿಕೆಯ ವೆರಿಯೆಂಟ್ ಆಗಿ ಹೊರಹೊಮ್ಮಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 118-ಬಿಎಚ್‌ಪಿ ಮತ್ತು 172-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಇಂಟಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ ಪಡೆದುಕೊಳ್ಳಲಿದೆ ವೆನ್ಯೂ

ಇನ್ನುಳಿದ 1.2-ಲೀಟರ್ ಕಪ್ಪಾ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 82-ಬಿಎಚ್‌ಪಿ, 115-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 99-ಬಿಎಚ್‌ಪಿ, 240-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಇಂಟಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ ಪಡೆದುಕೊಳ್ಳಲಿದೆ ವೆನ್ಯೂ

ಇನ್ನುಳಿದಂತೆ ತಾಂತ್ರಿಕವಾಗಿ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿರುವ ವೆನ್ಯೂ ಕಾರು 33 ಫೀಚರ್ಸ್‌ಗಳನ್ನು ಹೊಂದಿರುವ ಬ್ಯೂ ಲಿಂಕ್ ಕನೆಕ್ಟಿವಿಟಿ ಸೌಲಭ್ಯವನ್ನು ಸಹ ಹೊಂದಿದ್ದು, ಹೊಸ ಕಾರಿಗೆ ಗರಿಷ್ಠ ಭದ್ರತೆಯನ್ನು ದೊರೆಯಲಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಇಂಟಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ ಪಡೆದುಕೊಳ್ಳಲಿದೆ ವೆನ್ಯೂ

ಹೊಸ ಕಾರಿನಲ್ಲಿ ಪ್ರೀಮಿಯಂ ಸೌಲಭ್ಯಗಳ ಜೊತೆಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್‌ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್‌ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್, ISOFIX ಸೀಟ್, ಹೊಂದಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ.

Most Read Articles

Kannada
English summary
Hyundai Venue Will Get Intelligent Manual Transmission (iMT). Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X