Just In
- 1 hr ago ಟಾಟಾ ಆಲ್ಟ್ರೊಜ್ ಕಾರಿಗಾಗಿ ಕ್ಯೂ ನಿಂತ ಜನ: ಮಾರಾಟದಲ್ಲಿ ಭಾರೀ ಬೆಳವಣಿಗೆ
- 2 hrs ago Mahindra Thar ಪ್ರೀಯರಿಗೆ ಶಾಕ್: ಬುಕ್ ಮಾಡಿದರೆ ಇಷ್ಟು ಬೇಗ ಕೈ ಸೇರುತ್ತಾ ಈ ಆಫ್ರೋಡ್ ಕಿಂಗ್!
- 2 hrs ago BYD Seal: ಚೀನಾ ಮಾಲೀಕತ್ವದ 'ಬಿವೈಡಿ ಸೀಲ್' ಎಲೆಕ್ಟ್ರಿಕ್ ಕಾರಿನ ವಿಡಿಯೋ ರಿವ್ಯೂ
- 4 hrs ago BYD Seal Review: 580 ಕಿ.ಮೀ ಓಡುವ ಬಿವೈಡಿ ಸೀಲ್ ಎಲೆಕ್ಟ್ರಿಕ್ ಕಾರಿನ ವಿಮರ್ಶೆ.. ಹೇಗಿದೆ ಗೊತ್ತಾ?
Don't Miss!
- Sports IPL-2024: ಕೆಕೆಆರ್ ವಿರುದ್ಧ ಪಂದ್ಯದಲ್ಲಿ ಆರ್ಸಿಬಿ ನಾಯಕನಿಗೆ ಬಿತ್ತು ಭಾರೀ ದಂಡ; ಕಾರಣವೇನು?
- News 2024 ರ ಲೋಕಸಭಾ ಚುನಾವಣೆಯ ಫಲಿತಾಂಶ; ಬಿಜೆಪಿ ಲೆಕ್ಕಾಚಾರದಲ್ಲಿ ಕಾಂಗ್ರೆಸ್ಗೆ ಎಷ್ಟು ಸ್ಥಾನ?
- Finance Namma metro: ಬಿಎಂಆರ್ಸಿಎಲ್ಗೆ ಬಂತು ಹರಿದು ಬಂದು ಐತಿಹಾಸಿಕ ಆದಾಯ!
- Lifestyle 85ರ ವಯಸ್ಸಲ್ಲೂ ಕುಕ್ಕಿಂಗ್ ಚಾನಲ್ ತೆರೆದ ಅಜ್ಜಿ..! ಈಗ 5 ಲಕ್ಷ ಚಂದಾದಾರರು.!
- Technology Samsung: ಗ್ರೀನ್ ಲೈನ್ ಸಮಸ್ಯೆ ಎದುರಿಸುತ್ತಿರುವವರಿಗೆ ಸ್ಯಾಮ್ಸಂಗ್ನಿಂದ ಫ್ರೀ ಡಿಸ್ಪ್ಲೇ...
- Movies Exclusive; ನಾಗಾಭರಣ ಕಾನೂನು ಸಮರಕ್ಕೆ ಡೋಂಟ್ಕೇರ್; ಲಂಡನ್ನಲ್ಲಿ 'ಕೆಂಪೇಗೌಡ' ಸಿನಿಮಾ ರಿಜಿಸ್ಟರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂಟಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ ಪಡೆದುಕೊಳ್ಳಲಿದೆ ಹ್ಯುಂಡೈ ವೆನ್ಯೂ
ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ವೆನ್ಯೂ ಕಾರು ಅತಿ ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳ ಪೈಕಿ ಅಗ್ರಸ್ಥಾನದಲ್ಲಿದ್ದು, ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಸುಧಾರಿತ ತಂತ್ರಜ್ಞಾನ ಸೌಲಭ್ಯ ಜೋಡಣೆ ಮಾಡಲಾಗುತ್ತಿದೆ.
ವೆನ್ಯೂ ಕಾರು ಸದ್ಯ ಡೀಸೆಲ್, ಪೆಟ್ರೋಲ್ ಮತ್ತು ಟರ್ಬೋ ಪೆಟ್ರೋಲ್ ಮಾದರಿಗಳೊಂದಿಗೆ ಖರೀದಿಗೆ ಲಭ್ಯವಿದ್ದು, ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್, ಮ್ಯಾನುವಲ್ ಆವೃತ್ತಿಗಳನ್ನು ಪಡೆದುಕೊಂಡಿದೆ. ಇದೀಗ ಹೊಸ ಕಾರಿನಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಿತ ಇಂಟೆಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ (ಐಎಂಟಿ) ಆಯ್ಕೆ ನೀಡಲಾಗುತ್ತಿದ್ದು, ಇದು ಮ್ಯಾನುವಲ್ ಕಾರು ಚಾಲನೆಯನ್ನು ಮತ್ತಷ್ಟು ಸರಳಗೊಳಿಸುವುದಲ್ಲದೆ ಇಂಧನ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.
ಇಂಟೆಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ (ಐಎಂಟಿ) ತಂತ್ರಜ್ಞಾನವನ್ನು ಹ್ಯುಂಡೈ ಮತ್ತು ಸಹೋದರ ಕಂಪನಿ ಕಿಯಾ ಮೋಟಾರ್ಸ್ ಜಂಟಿಯಾಗಿ ಅಭಿವೃದ್ದಿಗೊಳಿಸಿದ್ದು, ಹೊಸ ಟ್ರಾನ್ಸ್ಮಿಷನ್ ಅನ್ನು ಈಗಾಗಲೇ ಕಿಯಾ ರಿಯೋ ಕಾರಿನಲ್ಲಿ ಬಳಕೆ ಮಾಡಲಾಗಿದೆ.
ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿರುವ ಕಿಯಾ ಮತ್ತೊಂದು ಬಹುನೀರಿಕ್ಷಿತ ಸೊನೆಟ್ ಕಾನ್ಸೆಪ್ಟ್ ಕಾರಿನಲ್ಲೂ ಇಂಟೆಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ (ಐಎಂಟಿ) ಬಳಕೆ ಮಾಡಲು ನಿರ್ಧರಿಸಲಾಗಿದ್ದು, ಸೊನೆಟ್ ನಂತರ ಹ್ಯುಂಡೈ ವೆನ್ಯೂನಲ್ಲೂ ಬಳಕೆ ಮಾಡಲು ಯೋಜಿಸಲಾಗಿದೆ.
ಸ್ಮಾರ್ಟ್ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ ವಾಹನಗಳಿಗೆ ಇಂಟೆಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ (ಐಎಂಟಿ) ಆಯ್ಕೆ ಅತ್ಯುತ್ತಮ ಆಯ್ಕೆಯಾಗಲಿದ್ದು, ಹೊಸ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆಯ ವೆನ್ಯೂ ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸಲಿದೆ.
MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!
ಹೊಸ ಇಂಟೆಲಿಜೆಂಟ್ ಮ್ಯಾನುಯಲ್ ಟ್ರಾನ್ಸ್ಮಿಷನ್ (ಐಎಂಟಿ) ಪ್ರೇರಿತ ವೆನ್ಯೂ ಕಾರು ಮಾದರಿಯು ಫೇಸ್ಲಿಫ್ಟ್ ಮಾದರಿಯಲ್ಲಿ ಜೋಡಣೆ ಮಾಡುವ ಸಾಧ್ಯತೆಗಳಿದ್ದು, ಕಿಯಾ ಸೊನೆಟ್ ಬಿಡುಗಡೆಯ ನಂತರವೇ ವೆನ್ಯೂ ಕಾರಿನಲ್ಲಿ ಹೊಸ ಗೇರ್ಬಾಕ್ಸ್ ಆಯ್ಕೆ ಲಭ್ಯವಾಗಲಿದೆ.
ಇನ್ನು ಕಂಪ್ಯಾಕ್ಟ್ ಎಸ್ಯುವಿ ಮಾದರಿಯಲ್ಲೇ ಪವರ್ಪುಲ್ ಎಂಜಿನ್ ಆಯ್ಕೆ ಹೊಂದಿರುವ ವೆನ್ಯೂ ಕಾರಿನಲ್ಲಿ 1.0-ಲೀಟರ್ ಟರ್ಬೋ ಮಾದರಿಯು ಅತಿ ಹೆಚ್ಚು ಬೇಡಿಕೆಯ ವೆರಿಯೆಂಟ್ ಆಗಿ ಹೊರಹೊಮ್ಮಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡ್ಯುಯಲ್ ಕ್ಲಚ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 118-ಬಿಎಚ್ಪಿ ಮತ್ತು 172-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು
ಇನ್ನುಳಿದ 1.2-ಲೀಟರ್ ಕಪ್ಪಾ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 82-ಬಿಎಚ್ಪಿ, 115-ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದಲ್ಲಿ, 1.5-ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 99-ಬಿಎಚ್ಪಿ, 240-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
ಇನ್ನುಳಿದಂತೆ ತಾಂತ್ರಿಕವಾಗಿ ಅತ್ಯುತ್ತಮ ಕಾರು ಮಾದರಿಯಾಗಿ ಹೊರಹೊಮ್ಮಿರುವ ವೆನ್ಯೂ ಕಾರು 33 ಫೀಚರ್ಸ್ಗಳನ್ನು ಹೊಂದಿರುವ ಬ್ಯೂ ಲಿಂಕ್ ಕನೆಕ್ಟಿವಿಟಿ ಸೌಲಭ್ಯವನ್ನು ಸಹ ಹೊಂದಿದ್ದು, ಹೊಸ ಕಾರಿಗೆ ಗರಿಷ್ಠ ಭದ್ರತೆಯನ್ನು ದೊರೆಯಲಿದೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್
ಹೊಸ ಕಾರಿನಲ್ಲಿ ಪ್ರೀಮಿಯಂ ಸೌಲಭ್ಯಗಳ ಜೊತೆಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕ್ರೂಸ್ ಕಂಟ್ರೋಲ್, ಫ್ರಂಟ್ ವೀಲ್ಹ್ ಡಿಸ್ಕ್ ಬ್ರೇಕ್, ಆರು ಏರ್ಬ್ಯಾಗ್, ಹಿಲ್ ಅಸಿಸ್ಟ್ ಕಂಟ್ರೋಲ್, ಬ್ರೇಕ್ ಅಸಿಸ್ಟ್ ಕಂಟ್ರೋಲ್, ಎಬಿಎಸ್, ಇಬಿಡಿ, ಇಎಸ್ಸಿ, ವಿಎಸ್ಎಂ, ಸ್ಪೀಡ್ ಸೆನ್ಸಾರಿಂಗ್ ಆಟೋ ಡೋರ್ ಲಾಕ್, ISOFIX ಸೀಟ್, ಹೊಂದಿರುವ ವೆನ್ಯೂ ಕಾರು ಕಂಪ್ಯಾಕ್ಟ್ ಎಸ್ಯುವಿ ಕಾರುಗಳಲ್ಲೇ ವಿಶೇಷ ಎನ್ನಿಸಲಿದೆ.