ಕಿಯಾ ಸೆಲ್ಟೋಸ್ ಡೀಸೆಲ್ ಎಂಜಿನ್‍ನೊಂದಿಗೆ ಬಿಡುಗಡೆಯಾಗಲಿದೆ ಹೊಸ ವೆನ್ಯೂ
ದೇಶಿಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆನ್ಯೂ ಅತಿ ಹೆಚ್ಚು ಮಾರಾಟವಾಗುತ್ತಿರುವ ಕಾರುಗಳಲ್ಲಿ ಒಂದಾಗಿದೆ. ಬಹುಬೇಡಿಕೆಯ ಹ್ಯುಂಡೈ ವೆನ್ಯೂ ಕಾರ್ ಅನ್ನು ಬಿಎಸ್-6 ಆವೃತ್ತಿಯಲ್ಲಿ ಬಿಡುಗಡೆಗೊಳಿಸಲು ಹ್ಯುಂಡೈ ಕಂಪನಿಯು ಸಜ್ಜಾಗುತ್ತಿದೆ.

ಹ್ಯುಂಡೈ ವೆನ್ಯೂನ ಬಿಎಸ್-6 ಆವೃತ್ತಿಯಲ್ಲಿ ಕಿಯಾ ಸೆಲ್ಟೋಸ್ ಕಾರಿನಲ್ಲಿರುವಂತಹ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಿದೆ. ಬಿಎಸ್-6 ವೆನ್ಯೂ ಕಾರಿನ ಬುಕ್ಕಿಂಗ್ ಅನ್ನು ಹ್ಯುಂಡೈ ಕಂಪನಿಯು ಪ್ರಾರಂಭಿಸಿದೆ. ಇನ್ನು ಪಸ್ತುತ ಪೆಟ್ರೋಲ್ ಆವೃತ್ತಿಯ ಹ್ಯುಂಡೈ ವೆನ್ಯೂನಲ್ಲಿರುವ 1.2 ಲೀಟರಿನ ಕಪ್ಪಾ ಎನ್‍ಎ ನಾಲ್ಕು ಸಿಲಿಂಡರ್ ಮತ್ತು 1.0 ಲೀಟರ್ ಟಿ-ಜಿಡಿ ಟರ್ಬೊ ಮೂರು ಸಿಲಿಂಡರ್ ಎಂಜಿನ್ ಅನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುತ್ತದೆ.

ಪೆಟ್ರೋಲ್ ಆವೃತ್ತಿಯ ಎಂಜಿನ್‍ನಲ್ಲಿ ಇತರೆ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ. ಆದರೆ ಡೀಸೆಲ್ ಆವೃತ್ತಿಯಲ್ಲಿ ಪ್ರಸ್ತುತ ಇರುವ 1.4 ಲೀಟರ್ ಎಂಜಿನ್ ಅನ್ನು ಬದಲಾಯಿಸಿ ಕಿಯಾ ಸೆಲ್ಟೋಸ್‍ನಲ್ಲಿರುವ 1.5 ಲೀಟರ್ ಮಾದರಿಯ ಎಂಜಿನ್ ಅನ್ನು ಅಳವಡಿಸಲಾಗುವುದು.

ಹ್ಯುಂಡೈ ವೆನ್ಯೂ ಬಿಎಸ್-6 ಡೀಸೆಲ್ ಆವೃತ್ತಿಯು ಹೆಚ್ಚುವರಿ ಫೀಚರ್ಸ್‍ಗಳನ್ನು ಹೊಂದಿರಲಿದೆ. ಹೊಸ ಹ್ಯುಂಡೈ ವೆನ್ಯೂ ಇ, ಎಸ್, ಎಸ್‌ಎಕ್ಸ್ ಮತ್ತು ಎಸ್‌ಎಕ್ಸ್ (ಒ) ಎಂಬ ನಾಲ್ಕು ರೂಪಾಂತರಗಳಲ್ಲಿ ಲಭ್ಯವಿರಲಿದೆ.

ಬಿಎಸ್-6 ಹ್ಯುಂಡೈ ವೆನ್ಯೂ ಕಾರು ಎರಡು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ) ಮತ್ತು ಯುಎಸ್‌ಬಿ ಚಾರ್ಜಿಂಗ್ ಫೀಚರ್ ಅನ್ನು ಹೊಂದಿರುತ್ತದೆ. ಈ ಹ್ಯುಂಡೈ ವೆನ್ಯೂವನ್ನು ಭಾರತ, ನೇಪಾಳ, ಭೂತಾನ್ ಮತ್ತು ಮಾರಿಷ್ ದೇಶಗಳಲ್ಲಿ ಮಾರಾಟ ಮಾಡಲಾಗುತ್ತಿದೆ.

ಹ್ಯುಂಡೈ ವೆನ್ಯೂ ಎಸ್‍ಯುವಿಯನ್ನು ಶೀಘ್ರದಲ್ಲೇ ದಕ್ಷಿಣ ಆಫ್ರಿಕಾಕ್ಕೆ ರಫ್ತು ಮಾಡಲಾಗುವುದು ಎಂದು ಕಂಪನಿ ಹೇಳಿದೆ. ವೆನ್ಯೂ ದೇಶಿಯ ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕಂಪನಿಯ ಮೊದಲ ಕಾಂಪ್ಯಾಕ್ಟ್ ಎಸ್‍ಯುವಿಯಾಗಿದೆ.

ಕಂಪನಿಯ ಬ್ಲೂ ಲಿಂಕ್ ಕನೆಕ್ಟಿವಿಟಿ ತಂತ್ರಜ್ಞಾನವನ್ನು ಹೊಂದಿದ ಭಾರತದ ಮೊದಲ ಕಾಂಪ್ಯಾಕ್ಟ್ ಎಸ್‍ಯುವಿಯಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹ್ಯುಂಡೈ ವೆನ್ಯೂ ಕಾರಿನ ಆರಂಭಿಕ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.6.5 ಲಕ್ಷಗಳಾಗಿದೆ.

ಹ್ಯುಂಡೈ ವೆನ್ಯೂ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡ ಮೊದಲ ಎಸ್‍ಯುವಿಯಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಹ್ಯುಂಡೈ ವೆನ್ಯೂ ಕಾರಿನಲ್ಲಿರುವ 1.4-ಲೀಟರ್ ಡೀಸೆಲ್ ಎಂಜಿನ್ 89 ಬಿಎಚ್‌ಪಿ ಪವರ್ ಮತ್ತು 220 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಈ ಎಂಜಿನ್‍ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅನ್ನು ಅಳವಡಿಸಲಾಗಿದೆ. ಹ್ಯುಂಡೈ ವೆನ್ಯೂ ಕಾರಿನಲ್ಲಿ ಬ್ಲೂ ಲಿಂಕ್ ಪ್ಯಾಕೇಜ್, ಎರ್ಮಜೆನ್ಸಿ ಅಸಿಸ್ಟ್, ಕಾರು ಟ್ರಾಕಿಂಗ್ ಸೇರಿದಂತೆ ಹಲವಾರು ಸುರಕ್ಷಾ ಫೀಚರ್ಸ್‌ಗಳನ್ನು ನೀಡಲಾಗಿದೆ.

ಈ ಎಸ್‍ಯುವಿಯ ಮುಂಭಾಗದಲ್ಲಿ ಗ್ರಿಲ್, ಡ್ಯುಯಲ್ ಹೆಡ್‌ಲ್ಯಾಂಪ್ ಕ್ಲಸ್ಟರ್, ಲೈಟ್ ಸ್ಟ್ರಿಪ್, ಹೆಡ್‌ಲ್ಯಾಂಪ್ ಕ್ಲಸ್ಟರ್, ಎಲ್ಇಡಿ ಡಿಆರ್‌ಎಲ್ ಮತ್ತು 16-ಇಂಚಿನ ಟಯರ್‍ಗಳನ್ನು ಅಳವಡಿಸಲಾಗಿದೆ.

ಬಿಎಸ್-6 ಹ್ಯುಂಡೈ ವೆನ್ಯೂ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಫೋರ್ಡ್ ಇಕೋಸ್ಪೋರ್ಟ್, ಮಹಿಂದ್ರಾ ಎಕ್ಸ್ಯುವಿ 300 ಮತ್ತು ಕಿಯಾ ಸೆಲ್ಟೋಸ್ ಕಾರುಗಳಿಗೆ ಪೈಪೋಟಿ ನೀಡಲಿದೆ.


Click it and Unblock the Notifications








