Just In
- 6 hrs ago
ವಾಣಿಜ್ಯ ವಾಹನಗಳ ಖರೀದಿಗಾಗಿ ಹಲವು ಆಕರ್ಷಕ ಸಾಲಸೌಲಭ್ಯಗಳಿಗೆ ಚಾಲನೆ ನೀಡಿದ ಟಾಟಾ
- 6 hrs ago
2021ರ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್ಯುವಿ ವೆರಿಯೆಂಟ್ ಮಾಹಿತಿ ಬಹಿರಂಗ
- 7 hrs ago
ವಿದೇಶಿ ಮಾರುಕಟ್ಟೆಗೂ ಲಗ್ಗೆಯಿಟ್ಟ ಮೇಡ್ ಇನ್ ಇಂಡಿಯಾ ಹೋಂಡಾ ಹೈನೆಸ್ ಸಿಬಿ 350
- 7 hrs ago
ಎಂಟೇ ನಿಮಿಷಗಳಲ್ಲಿ ರಸ್ತೆ ಗುಂಡಿಗಳನ್ನು ಸರಿ ಪಡಿಸಲಿದೆ ಜೆಸಿಬಿಯ ಈ ಹೊಸ ಯಂತ್ರ
Don't Miss!
- News
Biden Inauguration live updates: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡನ್ ಪದಗ್ರಹಣದ ನೇರಪ್ರಸಾರ
- Finance
ಸಿಯೆಟ್ ಲಿಮಿಟೆಡ್ ಲಾಭದ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಳ
- Sports
ಐಎಸ್ಎಲ್: ಹೈದರಾಬಾದ್ ಜಯಕ್ಕೆ ಅಡ್ಡಿಯಾದ ಕಳಿಂಗ ವಾರಿಯರ್ಸ್
- Education
AAI Recruitment 2021: 7 ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಅಂಧ ವ್ಯಕ್ತಿಯ ಬಾಳಿಗೆ ಬೆಳಕಾದ ಕಿಚ್ಚ ಸುದೀಪ ಚಾರಿಟೇಬಲ್ ಸೊಸೈಟಿ
- Lifestyle
ಜ. 25ಕ್ಕೆ ಕುಂಭ ರಾಶಿಗೆ ಬುಧನ ಸಂಚಾರ: 12 ರಾಶಿಗಳ ಮೇಲೆ ಇದರ ಪ್ರಭಾವವೇನು?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಎಸ್-6 ಎಂಜಿನ್‍ನಲ್ಲಿ ಬಿಡುಗಡೆಯಾಯ್ತು 2020ರ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರು
ಹ್ಯುಂಡೈ ಮೋಟಾರ್ಸ್ ಇಂಡಿಯಾ ಕಂಪನಿಯು ತನ್ನ ಹೊಸ ವೆರ್ನಾ ಫೇಸ್‌ಲಿಫ್ಟ್ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಹೊಸ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.9.31 ಲಕ್ಷಗಳಾಗಿದೆ.

ಹೊಸ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಕಾರು ಎಸ್, ಎಸ್ ಪ್ಲಸ್, ಎಸ್ಎಕ್ಸ್ ಮತ್ತು ಎಸ್ಎಕ್ಸ್ (ಒ) ಎಂಬ ನಾಲ್ಕು ರೂಪಾಂತರಗಳಲ್ಲಿ ಬಿಡುಗಡೆಯಾಗಲಿದೆ. ಎಲ್ಲಾ ರೂಪಾಂತರಗಳು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿರಲಿದೆ. ಇದರಲ್ಲಿ ಕ್ರೆಟಾ ಕಾರಿನಲ್ಲಿರುವ ಮಾದರಿಯ 1.5 ಲೀಟರ್ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ.

1.5 ಲೀಟರ್ ಲೀಟರ್ ಹೊರತಾಗಿ ಟಾಪ್-ಸ್ಪೆಕ್ ಎಸ್‌ಎಕ್ಸ್ (ಒ) ರೂಪಾಂತರದಲ್ಲಿ ಪ್ರತ್ಯೇಕವಾಗಿ 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಟಾಪ್ ಸ್ಪೆಕ್ ಕಾರಿನ ಬೆಲೆಯು ಭಾರತೀಯ ಎಕ್ಸ್ ಶೋರೂಂ ಪ್ರಕಾರ ರೂ.13.95 ಲಕ್ಷಗಳಾಗಿದೆ. ಈ ಎಲ್ಲಾ ಎಂಜಿನ್ ಆಯ್ಕೆಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗಿದೆ.

1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಗಳು ಕ್ರಮವಾಗಿ 115 ಬಿಹೆಚ್‍ಪಿ ಪವರ್ ಮತ್ತು 144 ಎನ್ಎಂ ಟಾರ್ಕ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವರ್ ಗೇರ್‌ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಇನ್ನು 1.0-ಲೀಟರ್ ಟರ್ಬೊ-ಪೆಟ್ರೋಲ್ 120 ಬಿಹೆಚ್‌ಪಿ ಪವರ್ ಮತ್ತು 172 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7 ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ.

ಹೊಸ ವಿನ್ಯಾಸದ 8.0-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಂ ನೀಡಲಾಗಿದೆ. ಇದರೊಂದಿಗೆ ಹೊಸ ಫುಲ್ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, ಫ್ಲಕ್ಸ್ ವುಡ್ ಡ್ಯಾಶ್‌ಬೋರ್ಡ್, ಅಲ್ಯುಮಿನಿಯಂ ಟ್ರಿಮ್, ಹೊಸ ಮಾದರಿಯ ಎಸಿ ವೆಂಟ್ಸ್ ಮತ್ತು ಸೀಟ್ ಗಳ ಡಿಸೈನ್ ಬದಲಾವಣೆಗೊಳಿಸಲಾಗಿದೆ.

ಇದರೊಂದಿಗೆ ಹ್ಯಾಂಡ್ಸ್-ಫ್ರೀ ಟೈಲ್‌ಗೇಟ್ ಓಪನಿಂಗ್, ವೈರ್‌ಲೆಸ್ ಮೊಬೈಲ್ ಫೋನ್ ಚಾರ್ಜರ್ ಮತ್ತು ಸನ್‌ರೂಫ್. ಮತ್ತೊಂದು ದೊಡ್ಡ ಸೇರ್ಪಡೆ ಎಂದರೆ 45 ಫೀಚರ್ಸ್‍ಗಳೊಂದಿಗೆ ಬ್ರಾಂಡ್‌ನ ಬ್ಲೂ ಲಿಂಕ್ ಕನೆಕ್ಟಿವಿಟಿ ಸೂಟ್ ಆಗಿದೆ.
MOST READ: ಹೊಸ ಐ20 ಕಾರಿನ ವಾಕ್‍ರೌಂಡ್ ವೀಡಿಯೋ ಬಿಡುಗಡೆಗೊಳಿಸಿದ ಹ್ಯುಂಡೈ

ಹೊಸ ವೆರ್ನಾ ಫೇಸ್‌ಲಿಫ್ಟ್ ಕಾರಿನ ಮುಂಭಾಗದ ಗ್ರಿಲ್ ಸ್ಲಾಟ್ ನಲ್ಲಿಯು ಸಾಕಷ್ಟು ಬದಲಾವಣೆಯನ್ನು ಮಾಡಲಾಗಿದೆ. ಈ ಹೊಸ ಕಾರಿನ ಮುಂಭಾಗ ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ. ಟೈಲ್ ಲ್ಯಾಂಪ್, ಬೂಟ್ ಲಿಡ್ ಮತ್ತು ಸ್ಪೋರ್ಟಿ ಮಾದರಿಯ ಕ್ರೊಮ್ ನೀಡಿರುವುದು ಕೂಡಾ ಪ್ರಮುಖ ಬದಲಾವಣೆಯಾಗಿದೆ.
MOST READ: ಬಿಎಸ್-6 ಎಂಜಿನ್‍ನಲ್ಲಿ ಬಿಡುಗಡೆಯಾಯ್ತು ಮಾರುತಿ ಸುಜುಕಿ ಸೆಲೆರಿಯೊ ಎಕ್ಸ್

ಇನ್ನು ಹೊಸ ವೆರ್ನಾ ಫೇಸ್‌ಲಿಫ್ಟ್ ಕಾರಿನಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ರೇರ್ ಪಾರ್ಕಿಂಗ್ ಸೆನ್ಸಾರ್ ಮತ್ತು ಮುಂಭಾಗದ ಸೀಟ್ ಬೆಲ್ಟ್ ರಿಮೈಂಡರ್ ಅನ್ನು ಹೊಂದಿದೆ. ಹೆಚ್ಚಿನ ರೂಪಾಂತರಗಳು ಒಟ್ಟು ಆರು ಏರ್‌ಬ್ಯಾಗ್‌ಗಳು, ಇಎಸ್‍ಸಿ, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್(ಟಾಪ್ ವೆರಿಯೆಂಟ್ ನಲ್ಲಿ ಮಾತ್ರ) ಮತ್ತು ಟಯರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಂ ಅನ್ನು ಹೊಂದಿದೆ.
MOST READ: ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಮಾರುತಿ ಸುಜುಕಿ ಜಿಮ್ನಿ ಹೀಗಿರಲಿದೆ

ಹೊಸ ವೆರ್ನಾ ಫೇಸ್‌ಲಿಫ್ಟ್ ಕಾರು ದೇಶಿಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಸಿಯಾಜ್, ಹೋಂಡಾ ಸಿಟಿ, ಸ್ಕೋಡಾ ರ‍್ಯಾಪಿಡ್ ಮತ್ತು ವೋಕ್ಸ್‌ವ್ಯಾಗನ್ ವೆಂಟೊ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ.