ಭಾರತದಲ್ಲಿ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಬಿಡುಗಡೆಯ ಮಾಹಿತಿ ಬಹಿರಂಗ

ಎಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರುತ್ತಿರುವ ಹೊಸ ಬಿಎಸ್-6 ಎಮಿಷನ್ ನಿಯಮದ ಪ್ರಕಾರ ಬಹುತೇಕ ಕಾರು ಮಾದರಿಗಳನ್ನು ಉನ್ನತೀಕರಿಸಿರುವ ಹ್ಯುಂಡೈ ಸಂಸ್ಥೆಯು ಶೀಘ್ರದಲ್ಲೇ ವೆರ್ನಾ ಫೇಸ್‌ಲಿಫ್ಟ್ ಆವೃತ್ತಿಯನ್ನು ಸಹ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರು ಮಾರ್ಚ್ 26ಕ್ಕೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಭಾರತದಲ್ಲಿ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಬಿಡುಗಡೆಯ ಮಾಹಿತಿ ಬಹಿರಂಗ

ಸದ್ಯ ಹ್ಯುಂಡೈ ಸಂಸ್ಥೆಯು ಮಾರ್ಚ್ 16ರಂದು ಕ್ರೆಟಾ ನ್ಯೂ ಜನರೇಷನ್ ಆವೃತ್ತಿಯನ್ನು ಬಿಡುಗಡೆ ಮಾಡುವುದಾಗಿ ಖಚಿತಪಡಿಸಿದ್ದು, ಕ್ರೆಟಾ ನಂತರ ವೆರ್ನಾ ಫೇಸ್‌ಲಿಫ್ಟ್ ಕೂಡಾ ಮಾರುಕಟ್ಟೆಗೆ ಪ್ರವೇಶಿಸಲಿದೆ. ಈ ಬಾರಿ ವೆರ್ನಾ ಸೆಡಾನ್ ಫೇಸ್‌ಲಿಫ್ಟ್ ಆವೃತ್ತಿಯು ಬಿಎಸ್-6 ಎಂಜಿನ್ ಪ್ರೇರಿತ ಹೊಸ ಮಾದರಿಯ ಎಂಜಿನ್ ಆಯ್ಕೆಯನ್ನು ಪಡೆದುಕೊಳ್ಳುವುದರ ಜೊತೆಗೆ ಕಾರಿನ ಹೊರ ಭಾಗದ ವಿನ್ಯಾಸದಲ್ಲೂ ಕೂಡಾ ಸಾಕಷ್ಟು ಬದಲಾವಣೆ ಪಡೆದುಕೊಳ್ಳಲಿದೆ.

ಭಾರತದಲ್ಲಿ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಬಿಡುಗಡೆಯ ಮಾಹಿತಿ ಬಹಿರಂಗ

ಬಿಡುಗಡೆಗೂ ಮುನ್ನ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ವಿವಿಧ ಹಂತದ ರೋಡ್ ಟೆಸ್ಟಿಂಗ್ ನಡೆಸಿರುವ ಹ್ಯುಂಡೈ ಸಂಸ್ಥೆಯು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಆವೃತ್ತಿಗಿಂತ ವಿಭಿನ್ನ ವಿನ್ಯಾಸದೊಂದಿಗೆ ಹೊಸ ಎಂಜಿನ್ ಆಯ್ಕೆ ನೀಡುವ ಸುಳಿವು ನೀಡಿದೆ.

ಭಾರತದಲ್ಲಿ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಬಿಡುಗಡೆಯ ಮಾಹಿತಿ ಬಹಿರಂಗ

ರೋಡ್ ಟೆಸ್ಟಿಂಗ್‌ ವೇಳೆ ಕಂಡುಬಂದಿರುವ ವೆರ್ನಾ ಮಾದರಿಯ ಮುಂಭಾಗದ ಗ್ರಿಲ್ ಸ್ಲಾಟ್ ಸಾಕಷ್ಟು ಬದಲಾವಣೆ ಹೊಂದಿದ್ದು, ವಿದೇಶಿ ಮಾರುಕಟ್ಟೆಗಳಲ್ಲಿ ಸದ್ಯ ಮಾರಾಟದಲ್ಲಿರುವ ಸೊನಾಟಾ ಸೆಡಾನ್ ಮಾದರಿಯ ಹೋಲಿಕೆಯನ್ನು ಪಡೆದುಕೊಂಡಿರುವುದು ಪ್ರಮುಖ ಆಕರ್ಷಣೆಯಾಗಲಿದೆ.

ಭಾರತದಲ್ಲಿ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಬಿಡುಗಡೆಯ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಕಾರು ಮಾದರಿಯ ಹೆಡ್‌ಲ್ಯಾಂಪ್ ಸೌಲಭ್ಯವು ಸಹ ಕಾರಿನ ನೋಟಕ್ಕೆ ಮತ್ತಷ್ಟು ಬಲಿಷ್ಠತೆಯನ್ನು ತುಂಬಲಿದ್ದು, ಮೂರು ಲೈಟ್‌ಗಳೂ ಪ್ರತ್ಯೇಕ ಹೋಸ್ ವಿನ್ಯಾಸವನ್ನು ಪಡೆದುಕೊಂಡಿರುವುದು ಪ್ರೀಮಿಯಂ ಹೆಚ್ಚಿಸಿದೆ. ಜೊತೆಗೆ ಎಲ್ಇಡಿ ಹೆಡ್‌ಲ್ಯಾಂಪ್ ಭೀಮ್, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಮತ್ತು ಸನ್‌ರೂಫ್ ಇದರಲ್ಲಿದ್ದು,ಕಾರಿನ ಹಿಂಭಾಗದ ತಾಂತ್ರಿಕ ವಿನ್ಯಾಸದಲ್ಲೂ ಮಹತ್ವದ ಬದಲಾವಣೆಗಳನ್ನು ತರಲಾಗಿದೆ.

ಭಾರತದಲ್ಲಿ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಬಿಡುಗಡೆಯ ಮಾಹಿತಿ ಬಹಿರಂಗ

ಇನ್ನು ಟೈಲ್ ಲ್ಯಾಂಪ್, ಬೂಟ್ ಲಿಡ್ ಮತ್ತು ಸ್ಪೋರ್ಟಿ ಮಾದರಿಯ ಕ್ರೊಮ್ ನೀಡಿರುವುದು ಕೂಡಾ ಮಹತ್ವದ ಬದಲಾವಣೆ ಕಾರಣವಾಗಿದ್ದು, ಕಾರಿನ ಹೊರವಿನ್ಯಾಸದ ಹೊರತಾಗಿ ಇಂಟಿರಿಯರ್ ಮಾಹಿತಿ ಲಭ್ಯವಾಗಿಲ್ಲವಾದರೂ ಪ್ರಸ್ತುತ ಮಾದರಿಗಿಂತಲೂ ಅತ್ಯುತ್ತಮ ಫೀರ್ಚಸ್ ಹೊಂದಿರುವುದು ಬಹುತೇಕ ಖಚಿತವಾಗಿದೆ.

ಭಾರತದಲ್ಲಿ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಬಿಡುಗಡೆಯ ಮಾಹಿತಿ ಬಹಿರಂಗ

ಸದ್ಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆರ್ನಾ ಮಾದರಿಯು 1.6-ಲೀಟರ್ ಡೀಸೆಲ್ ಮತ್ತು 1.6-ಲೀಟರ್ ಪೆಟ್ರೋಲ್ ಜೊತೆಗೆ 1.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಬಿಎಸ್-6 ನಿಯಮಾವಳಿಗೆ ಅನುಗುಣವಾಗಿ ಕೆಲವು ಮಹತ್ವದ ಬದಲಾವಣೆಗಳನ್ನು ತರಲಾಗಿದೆ.

ಭಾರತದಲ್ಲಿ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಬಿಡುಗಡೆಯ ಮಾಹಿತಿ ಬಹಿರಂಗ

ಹೊಸ ಎಮಿಷನ್‌ ನಿಯಮದಿಂದಾಗಿ ಹಳೆಯ ಎಂಜಿನ್ ಆಯ್ಕೆಗಳಿಗೆ ಗುಡ್‌ಬೈ ಹೇಳಿರುವ ಹ್ಯುಂಡೈ ಸಂಸ್ಥೆಯು ಹೊಸದಾಗಿ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಗಳನ್ನು ಪರಿಚಯಿಸುತ್ತಿದ್ದು, ಇದೇ ಎಂಜಿನ್ ಮಾದರಿಯು ವೆರ್ನಾದಲ್ಲಿ ಮಾತ್ರವಲ್ಲ ಕ್ರೆಟಾ ಮತ್ತು ವೆನ್ಯೂನಲ್ಲೂ ಬಳಕೆ ಮಾಡಲಾಗಿದೆ.

ಭಾರತದಲ್ಲಿ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಬಿಡುಗಡೆಯ ಮಾಹಿತಿ ಬಹಿರಂಗ

ವೆನ್ಯೂ ಕಾರಿನಲ್ಲಿ ಡೀಸೆಲ್ ಮಾದರಿಯು ಮಾತ್ರವೇ 1.5-ಲೀಟರ್ ಎಂಜಿನ್ ಹೊಂದಿದ್ದು, ಇನ್ನುಳಿದಂತೆ 1.2-ಲೀಟರ್ ಕಪ್ಪಾ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಬಳಕೆ ಮಾಡಲಾಗಿದೆ. ಈ ಎಂಜಿನ್ ಹೊರತುಪಡಿಸಿ ಕ್ರೆಟಾ ಮತ್ತು ವೆರ್ನಾ ಕಾರುಗಳಲ್ಲಿ ಸ್ಟ್ಯಾಂಡರ್ಡ್ ಆಗಿ 1.5-ಲೀಟರ್ ಡೀಸೆಲ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ದೊರೆಯಲಿದೆ.

ಭಾರತದಲ್ಲಿ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಬಿಡುಗಡೆಯ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ ನೀಡಲಾಗುತ್ತಿರುವ 1.5-ಲೀಟರ್ ಎಂಜಿನ್ ಮಾದರಿಯು ಈಗಾಗಲೇ ಕಿಯಾ ಸೆಲ್ಟೊಸ್‌ನಲ್ಲಿ ಬಳಕೆ ಮಾಡಲಾಗಿದ್ದು, ಹ್ಯುಂಡೈ ಸಹೋದರ ಸಂಸ್ಥೆಯಾಗಿರುವ ಕಿಯಾ ಇದೀಗ ಹೊಸ ಎಂಜಿನ್ ಅನ್ನು ಹ್ಯುಂಡೈ ಕಾರುಗಳ ಜೊತೆ ಹಂಚಿಕೊಳ್ಳುತ್ತಿರುವುದು ಮಹತ್ವದ ಬದಲಾವಣೆಗೆ ಕಾರಣವಾಗಿದೆ.

ಭಾರತದಲ್ಲಿ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್ ಬಿಡುಗಡೆಯ ಮಾಹಿತಿ ಬಹಿರಂಗ

ಬಿಎಸ್-6 ಎಂಜಿನ್‌ನಿಂದಾಗಿ ಹ್ಯುಂಡೈ ಕಾರುಗಳ ಮಾಲಿನ್ಯ ಪ್ರಮಾಣವು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಹೊಸ ತಂತ್ರಜ್ಞಾನ ಪ್ರೇರಿತ ಎಂಜಿನ್‌ನಿಂದಾಗಿ ಹೊಸ ಬೆಲೆಯಲ್ಲೂ ಕೂಡಾ ಸಾಕಷ್ಟು ಏರಿಕೆಯಾಗಲಿದೆ.

Article Published On: Thursday, February 27, 2020, 16:04 [IST]
English summary
Hyundai Verna facelift india launch on March 26, 2020. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+