ಹೊಸ ಎಂಜಿನ್ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್

ಮುಂಬರುವ ಎಪ್ರಿಲ್ 1ರಿಂದ ಜಾರಿಗೆ ಬರುತ್ತಿರುವ ಹೊಸ ಬಿಎಸ್-6 ಎಮಿಷನ್ ನಿಯಮದ ಪ್ರಕಾರ ಬಹುತೇಕ ಕಾರು ಮಾದರಿಗಳನ್ನು ಉನ್ನತೀಕರಿಸಿರುವ ಹ್ಯುಂಡೈ ಸಂಸ್ಥೆಯು ಶೀಘ್ರದಲ್ಲೇ ವೆರ್ನಾ ಫೇಸ್‌ಲಿಫ್ಟ್ ಆವೃತ್ತಿಯನ್ನು ಸಹ ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ಹೊಸ ಎಂಜಿನ್ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್

ಸದ್ಯ ಹ್ಯುಂಡೈ ಸಂಸ್ಥೆಯು ಇದೇ ತಿಂಗಳ ಕೊನೆಯಲ್ಲಿ ಕ್ರೆಟಾ ನ್ಯೂ ಜನರೇಷನ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಕ್ರೆಟಾ ನಂತರ ವೆರ್ನಾ ಫೇಸ್‌ಲಿಫ್ಟ್ ಕೂಡಾ ಮಾರುಕಟ್ಟೆಗೆ ಪ್ರವೇಶಿಸಲಿದೆ. ಈ ಬಾರಿ ವೆರ್ನಾ ಸೆಡಾನ್ ಫೇಸ್‌ಲಿಫ್ಟ್ ಆವೃತ್ತಿಯು ಬಿಎಸ್-6 ಎಂಜಿನ್ ಪ್ರೇರಿತ ಹೊಸ ಮಾದರಿಯ ಎಂಜಿನ್ ಆಯ್ಕೆಯನ್ನು ಪಡೆದುಕೊಳ್ಳುವುದರ ಜೊತೆಗೆ ಕಾರಿನ ಹೊರ ಭಾಗದ ವಿನ್ಯಾಸದಲ್ಲೂ ಕೂಡಾ ಸಾಕಷ್ಟು ಬದಲಾವಣೆ ಪಡೆದುಕೊಳ್ಳಲಿದೆ.

ಹೊಸ ಎಂಜಿನ್ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್

ಬಿಡುಗಡೆಗೂ ಮುನ್ನ ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ರೋಡ್ ಟೆಸ್ಟಿಂಗ್ ನಡೆಸಿರುವ ಹ್ಯುಂಡೈ ಸಂಸ್ಥೆಯು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಆವೃತ್ತಿಗಿಂತ ವಿಭಿನ್ನ ವಿನ್ಯಾಸದೊಂದಿಗೆ ಹೊಸ ಎಂಜಿನ್ ಆಯ್ಕೆ ನೀಡುವ ಸುಳಿವು ನೀಡಿದೆ.

ಹೊಸ ಎಂಜಿನ್ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ವೆರ್ನಾ ಮಾದರಿಯು ಮುಂಭಾಗದ ಗ್ರಿಲ್ ಸ್ಲಾಟ್ ಸಾಕಷ್ಟು ಬದಲಾವಣೆ ಹೊಂದಿದ್ದು, ವಿದೇಶಿ ಮಾರುಕಟ್ಟೆಗಳಲ್ಲಿ ಸದ್ಯ ಮಾರಾಟದಲ್ಲಿರುವ ಸೊನಾಟಾ ಸೆಡಾನ್ ಮಾದರಿಯ ಹೋಲಿಕೆಯನ್ನು ಪಡೆದುಕೊಂಡಿರುವುದು ಬಹಿರಂಗವಾಗಿದೆ.

ಹೊಸ ಎಂಜಿನ್ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್

ಹೊಸ ಕಾರು ಮಾದರಿಯ ಹೆಡ್‌ಲ್ಯಾಂಪ್ ಸೌಲಭ್ಯವು ಕಾರಿನ ನೋಟಕ್ಕೆ ಮತ್ತಷ್ಟು ಬಲಿಷ್ಠತೆಯನ್ನು ತುಂಬಲಿದ್ದು, ಮೂರು ಲೈಟ್‌ಗಳೂ ಪ್ರತ್ಯೇಕ ಹೋಸ್ ವಿನ್ಯಾಸವನ್ನು ಪಡೆದುಕೊಂಡಿರುವುದು ಪ್ರೀಮಿಯಂಗೆ ಮತ್ತಷ್ಟು ಪೂರಕವಾಗಿದೆ. ಹಾಗೆಯೇ ಎಲ್ಇಡಿ ಹೆಡ್‌ಲ್ಯಾಂಪ್ ಭೀಮ್, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್ ಮತ್ತು ಸನ್‌ರೂಫ್ ಇದರಲ್ಲಿದ್ದು,ಕಾರಿನ ಹಿಂಭಾಗದ ತಾಂತ್ರಿಕ ವಿನ್ಯಾಸದಲ್ಲೂ ಮಹತ್ವದ ಬದಲಾವಣೆಗಳನ್ನು ತರಲಾಗಿದೆ.

ಹೊಸ ಎಂಜಿನ್ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್

ಜೊತೆಗೆ ಟೈಲ್ ಲ್ಯಾಂಪ್, ಬೂಟ್ ಲಿಡ್ ಮತ್ತು ಸ್ಪೋರ್ಟಿ ಮಾದರಿಯ ಕ್ರೊಮ್ ನೀಡಿರುವುದು ಕೂಡಾ ಮಹತ್ವದ ಬದಲಾವಣೆ ಕಾರಣವಾಗಿದ್ದು, ಕಾರಿನ ಹೊರವಿನ್ಯಾಸದ ಹೊರತಾಗಿ ಇಂಟಿರಿಯರ್ ಮಾಹಿತಿ ಲಭ್ಯವಾಗಿಲ್ಲವಾದರೂ ಪ್ರಸ್ತುತ ಮಾದರಿಗಿಂತಲೂ ಅತ್ಯುತ್ತಮ ಫೀರ್ಚಸ್ ಹೊಂದಿರುವುದು ಬಹುತೇಕ ಖಚಿತವಾಗಿದೆ.

ಹೊಸ ಎಂಜಿನ್ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್

ಸದ್ಯ ಮಾರುಕಟ್ಟೆಯಲ್ಲಿ ಹ್ಯುಂಡೈ ವೆರ್ನಾ ಮಾದರಿಯು 1.6-ಲೀಟರ್ ಡೀಸೆಲ್ ಮತ್ತು 1.6-ಲೀಟರ್ ಪೆಟ್ರೋಲ್ ಜೊತೆಗೆ 1.4-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಫೇಸ್‌ಲಿಫ್ಟ್ ಆವೃತ್ತಿಯಲ್ಲಿ ಬಿಎಸ್-6 ನಿಯಮಾವಳಿಗೆ ಅನುಗುಣವಾಗಿ ಕೆಲವು ಮಹತ್ವದ ಬದಲಾವಣೆಗಳನ್ನು ತರಲಾಗಿದೆ.

ಹೊಸ ಎಂಜಿನ್ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್

ಹೊಸ ಎಮಿಷನ್‌ನಿಂದಾಗಿ ಹಳೆಯ ಎಂಜಿನ್ ಆಯ್ಕೆಗಳಿಗೆ ಗುಡ್‌ಬೈ ಹೇಳಿರುವ ಹ್ಯುಂಡೈ ಸಂಸ್ಥೆಯು ಹೊಸದಾಗಿ 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಗಳನ್ನು ಪರಿಚಯಿಸುತ್ತಿದ್ದು, ಇದೇ ಎಂಜಿನ್ ಮಾದರಿಯು ವೆರ್ನಾದಲ್ಲಿ ಮಾತ್ರವಲ್ಲ ಕ್ರೆಟಾ ಮತ್ತು ವೆನ್ಯೂನಲ್ಲೂ ಬಳಕೆ ಮಾಡಲಾಗಿದೆ.

ಹೊಸ ಎಂಜಿನ್ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್

ವೆನ್ಯೂ ಕಾರಿನಲ್ಲಿ ಡೀಸೆಲ್ ಮಾದರಿಯು ಮಾತ್ರವೇ 1.5-ಲೀಟರ್ ಎಂಜಿನ್ ಹೊಂದಿದ್ದು, ಇನ್ನುಳಿದಂತೆ 1.2-ಲೀಟರ್ ಕಪ್ಪಾ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಬಳಕೆ ಮಾಡಲಾಗಿದೆ. ಈ ಎಂಜಿನ್ ಹೊರತುಪಡಿಸಿ ಕ್ರೆಟಾ ಮತ್ತು ವೆರ್ನಾ ಕಾರುಗಳಲ್ಲಿ ಸ್ಟ್ಯಾಂಡರ್ಡ್ ಆಗಿ 1.5-ಲೀಟರ್ ಡೀಸೆಲ್ ಮತ್ತು 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ದೊರೆಯಲಿದೆ.

ಹೊಸ ಎಂಜಿನ್ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್

ಹೊಸ ಕಾರಿನಲ್ಲಿ ನೀಡಲಾಗುತ್ತಿರುವ 1.5-ಲೀಟರ್ ಎಂಜಿನ್ ಮಾದರಿಯು ಈಗಾಗಲೇ ಕಿಯಾ ಸೆಲ್ಟೊಸ್‌ನಲ್ಲಿ ಬಳಕೆ ಮಾಡಲಾಗಿದ್ದು, ಹ್ಯುಂಡೈ ಸಹೋದರ ಸಂಸ್ಥೆಯಾಗಿರುವ ಕಿಯಾ ಇದೀಗ ಹೊಸ ಎಂಜಿನ್ ಅನ್ನು ಹ್ಯುಂಡೈ ಕಾರುಗಳ ಜೊತೆ ಹಂಚಿಕೊಳ್ಳುತ್ತಿರುವುದು ಮಹತ್ವದ ಬದಲಾವಣೆಗೆ ಕಾರಣವಾಗಿದೆ.

ಹೊಸ ಎಂಜಿನ್ ಬದಲಾವಣೆಯೊಂದಿಗೆ ಬಿಡುಗಡೆಯಾಗಲಿದೆ ಹ್ಯುಂಡೈ ವೆರ್ನಾ ಫೇಸ್‌ಲಿಫ್ಟ್

ಬಿಎಸ್-6 ಎಂಜಿನ್‌ನಿಂದಾಗಿ ಹ್ಯುಂಡೈ ಕಾರುಗಳ ಮಾಲಿನ್ಯ ಪ್ರಮಾಣವು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಹೊಸ ತಂತ್ರಜ್ಞಾನ ಪ್ರೇರಿತ ಎಂಜಿನ್‌ನಿಂದಾಗಿ ಹೊಸ ಬೆಲೆಯಲ್ಲೂ ಕೂಡಾ ಸಾಕಷ್ಟು ಏರಿಕೆಯಾಗಲಿದೆ.

Source: Zigwheels

Article Published On: Thursday, February 20, 2020, 8:45 [IST]
English summary
India-spec Hyundai Verna Facelift Spied. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+