ಬಿಎಸ್-6 ನಿಯಮ ಜಾರಿಗೆ ದಿನಗಣನೆ- ಹೊಸ ಮಾದರಿಯ ಇಂಧನ ಮಾರಾಟಕ್ಕೆ ಭರ್ಜರಿ ಸಿದ್ದತೆ

ಏಪ್ರಿಲ್ 1ರಿಂದ ದೇಶಾದ್ಯಂತ ಬಿಎಸ್-6 ಎಮಿಷನ್ ನಿಯಮವು ಕಡ್ಡಾಯವಾಗಿ ಜಾರಿಗೆ ಬರುತ್ತಿದ್ದು, ಹೊಸ ನಿಯಮ ಪಾಲನೆಗೆ ಸಿದ್ದವಾಗುತ್ತಿರುವ ಇಂಧನ ಮಾರಾಟ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದಲ್ಲೂ ಮಹತ್ವದ ಬದಲಾವಣೆಯನ್ನು ಪರಿಚಯಿಸುತ್ತಿವೆ.

ಬಿಎಸ್-6 ನಿಯಮ ಜಾರಿಗೆ ದಿನಗಣನೆ- ಹೊಸ ಮಾದರಿಯ ಇಂಧನ ಮಾರಾಟಕ್ಕೆ ಭರ್ಜರಿ ಸಿದ್ದತೆ

ದೇಶಾದ್ಯಂತ ಹೆಚ್ಚುತ್ತಿರುವ ಮಾಲಿನ್ಯ ತಡೆಗಾಗಿ ಬಿಎಸ್-6 ಎಮಿಷನ್ ನಿಯಮವನ್ನು ಜಾರಿಗೆ ತರಲಾಗುತ್ತಿದ್ದು, ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲೂ ಈಗಾಗಲೇ ಸಾಕಷ್ಟು ಬದಲಾವಣೆ ತರಲಾಗಿದೆ. ಏಪ್ರಿಲ್ 1ರಿಂದ ಕಡ್ಡಾಯವಾಗಿ ಬಿಎಸ್-6 ವೈಶಿಷ್ಟ್ಯತೆಗಳನ್ನು ಹೊಂದಿರುವ ವಾಹನಗಳ ಮಾರಾಟಕ್ಕೆ ಮಾತ್ರವೇ ಅವಕಾಶ ನೀಡಲಾಗಿದ್ದು, ಹೊಸ ವಾಹನ ಎಂಜಿನ್ ವೈಶಿಷ್ಟ್ಯತೆಗೆ ಅನುಗುಣವಾಗಿ ಇಂಧನ ಮಾರಾಟದಲ್ಲೂ ಬದಲಾವಣೆ ತರಲಾಗುತ್ತಿದೆ.

ಬಿಎಸ್-6 ನಿಯಮ ಜಾರಿಗೆ ದಿನಗಣನೆ- ಹೊಸ ಮಾದರಿಯ ಇಂಧನ ಮಾರಾಟಕ್ಕೆ ಭರ್ಜರಿ ಸಿದ್ದತೆ

ಭಾರತದಲ್ಲಿ ಪ್ರಮುಖ ಇಂಧನ ಮಾರಾಟ ಸಂಸ್ಥೆಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್, ಭಾರತ್ ಪೆಟ್ರೋಲಿಯಂ ಸೇರಿದಂತೆ ವಿವಿಧ ಇಂಧನ ಪೂರೈಕೆ ಸಂಸ್ಥೆಗಳು ಏಪ್ರಿಲ್ 1ರಿಂದ ಹೊಸ ಮಾದರಿಯ ಇಂಧನ ಪೂರೈಕೆಗೆ ಸಿದ್ದಗೊಂಡಿವೆ.

ಬಿಎಸ್-6 ನಿಯಮ ಜಾರಿಗೆ ದಿನಗಣನೆ- ಹೊಸ ಮಾದರಿಯ ಇಂಧನ ಮಾರಾಟಕ್ಕೆ ಭರ್ಜರಿ ಸಿದ್ದತೆ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಂಪನಿಯ ಅಧೀನ ಕಾರ್ಯನಿರ್ವಹಿಸುತ್ತಿರುವ 28 ಸಾವಿರ ಪೆಟ್ರೋಲ್ ಬಂಕ್‌ಗಳಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಜೋರಾಗಿದ್ದು, ಏಪ್ರಿಲ್ 1ರಿಂದ ಪೂರ್ಣ ಪ್ರಮಾಣದಲ್ಲಿ ಹೊಸ ನಿಯಮದ ಪ್ರಕಾರವೇ ಇಂಧನ ಮಾರಾಟ ಮಾಡಲಿವೆ.

ಬಿಎಸ್-6 ನಿಯಮ ಜಾರಿಗೆ ದಿನಗಣನೆ- ಹೊಸ ಮಾದರಿಯ ಇಂಧನ ಮಾರಾಟಕ್ಕೆ ಭರ್ಜರಿ ಸಿದ್ದತೆ

ಬಿಎಸ್-6 ಇಂಧನ ಮಾದರಿಯು ಬಿಎಸ್-4 ಮಾದರಿಗಿಂತಲೂ ಸುಧಾರಿತ ಗುಣಲಕ್ಷಣಗಳನ್ನು ಹೊಂದಿದ್ದು, ಹೊಸ ಇಂಧನ ಮಾದರಿಯ ಬಳಕೆಯಿಂದ ವಾಹನಗಳಲ್ಲಿನ ಮಾಲಿನ್ಯ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಲಿದೆ. ಹೀಗಾಗಿ ಹೊಸ ಮಾದರಿಯ ಇಂಧನ ಪೂರೈಕೆಗೆ ಪೂರಕವಾಗಿ ಸಂಸ್ಕರಣಾ ಘಟಕಗಳನ್ನು ಸಹ ಉನ್ನತೀಕರಿಸಲಾಗುತ್ತಿದ್ದು, ಇದಕ್ಕಾಗಿ ಇಂಧನ ಮಾರಾಟ ಸಂಸ್ಥೆಗಳು ಭಾರೀ ಪ್ರಮಾಣದ ಹೂಡಿಕೆ ಮಾಡಿವೆ.

ಬಿಎಸ್-6 ನಿಯಮ ಜಾರಿಗೆ ದಿನಗಣನೆ- ಹೊಸ ಮಾದರಿಯ ಇಂಧನ ಮಾರಾಟಕ್ಕೆ ಭರ್ಜರಿ ಸಿದ್ದತೆ

ಮತ್ತೆ ಬೆಲೆ ಹೆಚ್ಚಳ ಬಿಸಿ

ಹೊಸ ನವೀಕರಣದಿಂದಾಗಿ ಇಂಧನ ದರದಲ್ಲೂ ಸಾಕಷ್ಟು ಏರಿಕೆಯಾಗಲಿದ್ದು, ಪ್ರತಿ ಲೀಟರ್ ಬೆಲೆಯಲ್ಲಿ ಎಷ್ಟು ಏರಿಕೆ ಮಾಡಲಾಗುತ್ತಿದೆ ಎನ್ನುವ ಅಧಿಕೃತ ಮಾಹಿತಿ ಇದುವರೆಗೂ ಲಭ್ಯವಾಗಿಲ್ಲ.

ಬಿಎಸ್-6 ನಿಯಮ ಜಾರಿಗೆ ದಿನಗಣನೆ- ಹೊಸ ಮಾದರಿಯ ಇಂಧನ ಮಾರಾಟಕ್ಕೆ ಭರ್ಜರಿ ಸಿದ್ದತೆ

ಆದರೆ ಕೆಲವು ಮಾಹಿತಿಗಳ ಪ್ರಕಾರ, ಪ್ರತಿ ಲೀಟರ್ ಪೆಟ್ರೋಲ್ ಬೆಲೆಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬೆಲೆಗಿಂತ ಹೆಚ್ಚುವರಿಯಾಗಿ ಎರಡರಿಂದ ರಿಂದ ಮೂರು ರೂಪಾಯಿ ತನಕ ಬೆಲೆ ಏರಿಕೆಯಾಗಬಹುದೆಂದು ಅಂದಾಜಿಸಲಾಗಿದೆ.

ಬಿಎಸ್-6 ನಿಯಮ ಜಾರಿಗೆ ದಿನಗಣನೆ- ಹೊಸ ಮಾದರಿಯ ಇಂಧನ ಮಾರಾಟಕ್ಕೆ ಭರ್ಜರಿ ಸಿದ್ದತೆ

ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಹೊಸ ಮಾದರಿಯ ಇಂಧನದಲ್ಲಿ ಪಿಪಿಎಂ ಸಲ್ಫರ್ ಅಂಶವನ್ನು ಗಣನೀಯ ಪ್ರಮಾಣದಲ್ಲಿ ಇಳಿಕೆ ಮಾಡಲಾಗಿದ್ದು, ಮಾಲಿನ್ಯ ಪ್ರಮಾಣವನ್ನು ತಗ್ಗಿಸಲು ಗುಣಮಟ್ಟದ ತೈಲ ಬಳಕೆಯು ಸದ್ಯದ ಪರಿಸ್ಥಿತಿಯಲ್ಲಿ ಅನಿವಾರ್ಯವಾಗಿ ಪರಿಣಮಿಸಿದೆ.

ಬಿಎಸ್-6 ನಿಯಮ ಜಾರಿಗೆ ದಿನಗಣನೆ- ಹೊಸ ಮಾದರಿಯ ಇಂಧನ ಮಾರಾಟಕ್ಕೆ ಭರ್ಜರಿ ಸಿದ್ದತೆ

ಪ್ರಸ್ತುತ ಮಾರುಕಟ್ಟೆಯಲ್ಲಿ ಕೆಲವು ಆಯ್ದ ಪೆಟ್ರೋಲ್ ಬಂಕ್‌ಗಳಲ್ಲಿ ಈಗಾಗಲೇ ಬಿಎಸ್-6 ಇಂಧನದ ಜೊತೆಗೆ ಸುಧಾರಿತ ಮಾದರಿಯ 99 ಆಕ್ಟೆನ್ ಪೆಟ್ರೋಲ್ ಮಾದರಿಯನ್ನು ಸಹ ಮಾರಾಟ ಮಾಡಲಾಗುತ್ತಿದ್ದು, ಇದು ಪ್ರತಿ ಲೀಟರ್‌ಗೆ ರೂ. 103ರಿಂದ ರೂ.105 ಬೆಲೆ ಹೊಂದಿದೆ.

ಬಿಎಸ್-6 ನಿಯಮ ಜಾರಿಗೆ ದಿನಗಣನೆ- ಹೊಸ ಮಾದರಿಯ ಇಂಧನ ಮಾರಾಟಕ್ಕೆ ಭರ್ಜರಿ ಸಿದ್ದತೆ

ಸೂಪರ್ ಕಾರುಗಳು ಮತ್ತು ಐಷಾರಾಮಿ ಕಾರುಗಳಲ್ಲಿ 99 ಆಕ್ಟೆನ್ ಇಂಧನ ಮಾದರಿಯ ಬಳಕೆಗೆ ಹೆಚ್ಚು ಬೇಡಿಕೆಯಿದ್ದು, ಇಂಧನ ದಕ್ಷತೆಯ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಸುಧಾರಿತ ಮಾದರಿಯ ಇಂಧನಗಳನ್ನು ಬಳಕೆ ಮಾಡಲಾಗುತ್ತಿದೆ.

ಬಿಎಸ್-6 ನಿಯಮ ಜಾರಿಗೆ ದಿನಗಣನೆ- ಹೊಸ ಮಾದರಿಯ ಇಂಧನ ಮಾರಾಟಕ್ಕೆ ಭರ್ಜರಿ ಸಿದ್ದತೆ

ಇದರ ಭಾಗವಾಗಿ ಇದೀಗ ಬಿಎಸ್-6 ಇಂಧನ ಮಾದರಿಯನ್ನು ಕಡ್ಡಾಯವಾಗಿ ಮಾರಾಟಗೊಳಿಸಲು ಸಿದ್ದತೆ ನಡೆಸಲಾಗುತ್ತಿದ್ದು, ಬಿಎಸ್-6 ವೈಶಿಷ್ಟ್ಯತೆಯಿಂದಾಗಿ ಇಂಧನ ಬೆಲೆ ಮಾತ್ರವಲ್ಲದೇ ವಾಹನಗಳ ಬೆಲೆಯಲ್ಲೂ ಸಾಕಷ್ಟು ಏರಿಕೆಯಾಗಿದೆ.

ಬಿಎಸ್-6 ನಿಯಮ ಜಾರಿಗೆ ದಿನಗಣನೆ- ಹೊಸ ಮಾದರಿಯ ಇಂಧನ ಮಾರಾಟಕ್ಕೆ ಭರ್ಜರಿ ಸಿದ್ದತೆ

ಬಿಎಸ್-6 ನಿಯಮದಿಂದಾಗಿ ಈ ಹಿಂದಿನ ಬಿಎಸ್-4 ವಾಹನಗಳ ಬೆಲೆಯು ಹೊಸ ಎಂಜಿನ್ ಜೋಡಣೆ ನಂತರ ಪೆಟ್ರೋಲ್ ಕಾರುಗಳ ಬೆಲೆಯಲ್ಲಿ ರೂ. 10 ಸಾವಿರದಿಂದ ರೂ. 50 ಸಾವಿರ ಹೆಚ್ಚಳವಾಗಿದ್ದು, ಡೀಸೆಲ್ ಕಾರುಗಳ ಬೆಲೆಯಲ್ಲಿ ರೂ. 40 ಸಾವಿರದಿಂದ ರೂ. 1.20 ಲಕ್ಷದ ತನಕ ದುಬಾರಿಯಾಗಿವೆ.

Article Published On: Friday, March 20, 2020, 12:59 [IST]
English summary
Indian Oil 28000 petrol pumps ready with BS6 fuel. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+