ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- ಮೊದಲ ಶೋರೂಂಗೆ ಚಾಲನೆ ನೀಡಿದ ಸಿಟ್ರನ್

ಯುರೋಪ್ ಮಾರುಕಟ್ಟೆಯ ಎರಡನೇ ಅತಿದೊಡ್ಡ ಕಾರು ಉತ್ಪಾದನಾ ಸಂಸ್ಥೆಯಾಗಿರುವ ಪಿಎಸ್‌ಎ ಗ್ರೂಪ್‌‌ನ ಅಂಗಸಂಸ್ಥೆ ಸಿಟ್ರನ್ ಬ್ರಾಂಡ್ ಭಾರತದಲ್ಲಿ ಹೊಸ ಕಾರು ಉತ್ಪಾದನಾ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡುತ್ತಿದ್ದು, ಇದಕ್ಕೂ ಮುನ್ನ ಅಹಮದಾಬಾದ್‌ನಲ್ಲಿ ತನ್ನ ಮೊದಲ ಕಾರು ಮಾರಾಟ ಮಳಿಗೆಗೆ ಚಾಲನೆ ನೀಡಿದೆ.

ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- ಮೊದಲ ಶೋರೂಂಗೆ ಚಾಲನೆ ನೀಡಿದ ಸಿಟ್ರನ್

ಮೊದಲ ಹಂತವಾಗಿ ಭಾರತದಲ್ಲಿ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸಿರುವ ಸಿಟ್ರನ್ ಸಂಸ್ಥೆಯ ಸ್ಥಳೀಯವಾಗಿಯೇ ಉತ್ಪಾದನೆಗಾಗಿ ಭಾರೀ ಪ್ರಮಾಣದ ಹೂಡಿಕೆ ಮಾಡಿದ್ದು, ಮೊದಲ ಹಂತವಾಗಿ ದೇಶದ ಆಯ್ದ ಪ್ರಮುಖ 10 ನಗರಗಳಲ್ಲಿ ಮಾತ್ರವೇ ಕಾರು ಮಾರಾಟಕ್ಕೆ ಚಾಲನೆ ನೀಡಲು ನಿರ್ಧರಿಸಿದೆ. ಸಿಟ್ರನ್ ಹೊಸ ಕಾರುಗಳು ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುವ ಸುಳಿವು ನೀಡಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಮಾದರಿಯ ಎಸ್‌ಯುವಿ, ಹ್ಯಾಚ್‌ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿದೆ.

ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- ಮೊದಲ ಶೋರೂಂಗೆ ಚಾಲನೆ ನೀಡಿದ ಸಿಟ್ರನ್

ಭಾರತದಲ್ಲಿ ಸಿಕೆ ಬಿರ್ಲಾ ಗ್ರೂಪ್ ಜೊತೆಗೂಡಿ ಹೊಸ ಕಾರು ಉತ್ಪಾದನಾ ಮತ್ತು ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿರುವ ಪಿಎಸ್ಎ ಗ್ರೂಪ್ ಸಂಸ್ಥೆಯು ಗ್ರಾಹಕರನ್ನು ಆಕರ್ಷಿಸಲು ಮುಂದಾಗಿದ್ದು, ಮೊದಲ ಹಂತದಲ್ಲಿ ಬಿಡುಗಡೆಗೊಳ್ಳಲಿರುವ ನಗರಗಳಲ್ಲಿ ವಿಶೇಷ ಕಾರ್ಯಾಗಾರಗಳನ್ನು ನಡೆಸುತ್ತಿದೆ.

ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- ಮೊದಲ ಶೋರೂಂಗೆ ಚಾಲನೆ ನೀಡಿದ ಸಿಟ್ರನ್

ಇದಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿರುವ ಸಿಟ್ರನ್ ಸಂಸ್ಥೆಯು ಸಿ5 ಏರ್‌ಕ್ರಾಸ್ ನಂತರ ಮತ್ತಷ್ಟು ಹೊಸ ಕಾರುಗಳನ್ನು ಪರಿಚಯಿಸಲಿದ್ದು, ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆಯೊಂದಿಗೆ ಹೊಸ ಕಾರುಗಳನ್ನು ಉತ್ಪಾದನೆ ಮಾಡಿ ಮಾರಾಟ ಮಾಡುವುದಾಗಿ ಹೇಳಿಕೊಂಡಿದೆ.

ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- ಮೊದಲ ಶೋರೂಂಗೆ ಚಾಲನೆ ನೀಡಿದ ಸಿಟ್ರನ್

ಯುರೋಪ್ ಮಾರುಕಟ್ಟೆಯಲ್ಲಿ ಪಿಎಸ್ಎ ಗ್ರೂಪ್ ಸಂಸ್ಥೆಯು ಸಿಟ್ರನ್, ಫ್ಯೂಜೊ ಮತ್ತು ಡಿಎಸ್ ಬ್ರಾಂಡ್ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಇದರಲ್ಲಿ ಸಿಟ್ರನ್ ನಿರ್ಮಾಣದ ಸಿ5 ಏರ್‌ಕ್ರಾಸ್ ಸದ್ಯ ಭಾರತದಲ್ಲಿ ಬಿಡುಗಡೆಯಾಗುತ್ತಿದೆ. ಮೂಲಗಳ ಪ್ರಕಾರ, ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ ಬಿಡುಗಡೆಯಾದ ಕೆಲ ದಿನಗಳ ನಂತರ ಸಿ3 ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಯಾಗಲಿದ್ದು, ದೇಶಿಯ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹೊಸ ಕಾರುಗಳು ಮಹತ್ವದ ಬದಲಾಣೆಗಳೊಂದಿಗೆ ಅಭಿವೃದ್ದಿಗೊಂಡಿವೆ.

ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- ಮೊದಲ ಶೋರೂಂಗೆ ಚಾಲನೆ ನೀಡಿದ ಸಿಟ್ರನ್

ಸಿ5 ಏರ್‌ಕ್ರಾಸ್ ಕಾರು ಮಾದರಿಯು ಬಿಎಸ್-6 ಪ್ರೇರಿತ 1.5-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯನ್ನು ಹೊಂದಿರಲಿದ್ದರೆ ಡೀಸೆಲ್ ಎಂಜಿನ್ ಮಾದರಿಯು 1.5-ಲೀಟರ್ ಜೊತೆಗೆ ಪರ್ಫಾಮೆನ್ಸ್ ಉದ್ದೇಶಕ್ಕಾಗಿ 2.0-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿರಲಿದೆ.

ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- ಮೊದಲ ಶೋರೂಂಗೆ ಚಾಲನೆ ನೀಡಿದ ಸಿಟ್ರನ್

ಜೊತೆಗೆ ಹೊಸ ಕಾರುಗಳನ್ನು ಪರಿಚಯಿಸುವುದಕ್ಕೂ ಮುನ್ನ ದೇಶದ 80 ಪ್ರಮುಖ ನಗರಗಳಲ್ಲಿ 'ಎಕ್ಸ್‌ಪಿರೆನ್ಸ್ ಸ್ಟೋರ್'ಗಳನ್ನು ತೆರೆಯಲಿದ್ದು, ಈ ಮೂಲಕ ಗ್ರಾಹಕರನ್ನು ಹೊಸ ಕಾರ್ ಬ್ರಾಂಡ್‌ನತ್ತ ಸೆಳೆಯುವ ಮಾರುಕಟ್ಟೆ ತಂತ್ರಗಳನ್ನು ರೂಪಿಸುತ್ತಿದೆ.

ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- ಮೊದಲ ಶೋರೂಂಗೆ ಚಾಲನೆ ನೀಡಿದ ಸಿಟ್ರನ್

ಇದಲ್ಲದೇ ಬೆಲೆಗಳಲ್ಲಿ ತುಸು ದುಬಾರಿ ಎನ್ನಿಸಲಿರುವ ಪಿಎಸ್ಎ ಗ್ರೂಪ್ ಕಾರುಗಳ ಬೆಲೆಯನ್ನು ತಗ್ಗಿಸುವ ಉದ್ದೇಶದಿಂದ ಚೆನ್ನೈನಲ್ಲಿ ಅಸೆಂಬ್ಲಿ ಯೂನಿಟ್ ಅನ್ನು ಸಹ ತೆರೆಯಲಾಗಿದ್ದು, ಸ್ಥಳೀಯವಾಗಿ ಲಭ್ಯವಾಗುವ ತಾಂತ್ರಿಕ ಬಿಡಿಭಾಗಗಳನ್ನು ಬಳಕೆ ಮಾಡಿಕೊಂಡು ಲಾಭಾಂಶ ಮತ್ತು ಕಾರಿನ ಬೆಲೆ ಇಳಿಕೆಗೆ ಸಹಕಾರಿಯಾಗುವಂತೆ ಯೋಜನೆ ಹಮ್ಮಿಕೊಂಡಿದೆ.

ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- ಮೊದಲ ಶೋರೂಂಗೆ ಚಾಲನೆ ನೀಡಿದ ಸಿಟ್ರನ್

ಈ ಮೂಲಕ ವಿನೂತನ ವಿನ್ಯಾಸ ಮತ್ತು ವಿಶೇಷ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಸಿಟ್ರನ್ ಎಸ್‌ಯುವಿ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುವುವ ನೀರಿಕ್ಷೆಯಲ್ಲಿದ್ದು, ಸಿ5 ಏರ್‌ಕ್ರಾಸ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 16 ಲಕ್ಷದಿಂದ ರೂ.20 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- ಮೊದಲ ಶೋರೂಂಗೆ ಚಾಲನೆ ನೀಡಿದ ಸಿಟ್ರನ್

ಇನ್ನು ಸಿಟ್ರನ್ ಸಂಸ್ಥೆಯು ಸದ್ಯ ಕಾರು ಉತ್ಪಾದನಾ ಘಟಕ ನಿರ್ಮಾಣ ಯೋಜನೆಯನ್ನು ಪೂರ್ಣಗೊಳಿಸಿದ್ದು, ಸಿಬ್ಬಂದಿ ನೇಮಕ, ಮಾರುಕಟ್ಟೆ ಅಧ್ಯಯನ ಮತ್ತು ಕಾರು ಮಾರಾಟಕ್ಕೆ ಅನುಕೂಲಕರ ಪ್ರದೇಶಗಳಲ್ಲಿ ಅಧಿಕೃತ ಮಾರಾಟ ಮಳಿಗೆಗಳ ನಿರ್ಮಾಣದ ಮೇಲೆ ಹೆಚ್ಚು ಹೂಡಿಕೆ ಮಾಡುತ್ತಿದೆ.

Most Read Articles

Kannada
English summary
French based car maker, PSA Group is all set to enter in Indian market with Citroen car brand in India later this year. Ahead of its Indian entry, PSA Group is setting up dealerships in metro cities across India.
Story first published: Thursday, February 20, 2020, 20:19 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X