ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಇಸುಝು ವಿ-ಕ್ರಾಸ್

ಮಾಹಾಮಾರಿ ಕರೋನಾ ವೈರಸ್‌ನಿಂದಾಗಿ ಆಟೋ ಉದ್ಯಮವು ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ವೈರಸ್ ಪರಿಣಾಮ ಹಲವಾರು ಹೊಸ ವಾಹನಗಳ ಬಿಡುಗಡೆ ಯೋಜನೆಯು ಮುಂಡೂಡಿಕೆಯಾಗಿದ್ದಲ್ಲಿ ಇನ್ನು ಕೆಲವು ವಾಹನಗಳ ಬಿಡುಗಡೆಯ ಯೋಜನೆಯನ್ನೇ ಸ್ಥಗಿತಗೊಳಿಸಲಾಗಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಇಸುಝು ವಿ-ಕ್ರಾಸ್

ವೈರಸ್ ಭೀತಿಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನ ಮಾದರಿಗಳನ್ನು ಹೊರತುಪಡಿಸಿ ಹೊಸ ವಾಹನ ಬಿಡುಗಡೆಯನ್ನು ಮುಂದೂಡಿಕೆ ಮಾಡಲಾಗುತ್ತಿದ್ದು, ಕೆಲ ಹೊಸ ವಾಹನ ಮಾದರಿಗಳ ಬಿಡುಗಡೆಯ ಯೋಜನೆಯನ್ನು ಈಗಾಗಲೇ ಕೈಬಿಡಲಾಗಿದೆ. ಇಸುಝು ಕೂಡಾ ಲಾಕ್‌ಡೌನ್ ಸಂಕಷ್ಟದಿಂದಾಗಿ ಕೆಲವು ಹೊಸ ವಾಹನಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡಿದ್ದು, ಕಳೆದ ಜೂನ್ ತಿಂಗಳನಲ್ಲಿ ಬಿಡುಗಡೆಯಾಗಬೇಕಿದ್ದ ಬಿಎಸ್-6 ವಿ-ಕ್ರಾಸ್ ಪಿಕ್‌ಅಪ್ ಟ್ರಕ್ ಮಾದರಿಯನ್ನು ಇದೀಗ ಬಿಡುಗಡೆಗಾಗಿ ಸಿದ್ದಗೊಳ್ಳುತ್ತಿದೆ.

ಬಿಡುಗಡೆಗಾಗಿ ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಇಸುಝು ವಿ-ಕ್ರಾಸ್

ಏಪ್ರಿಲ್ 1ರಿಂದ ಜಾರಿಗೆ ಬಂದ ಬಿಎಸ್-6 ನಿಯಮ ಅನುಸಾರವಾಗಿ ಹೊಸ ಎಂಜಿನ್ ಹೊಂದಿರುವ ವಿ-ಕ್ರಾಸ್ ಪಿಕ್‌ಅಪ್ ಎಸ್‌ಯುವಿ ಮಾದರಿಯು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದ್ದು, ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಇದೀಗ ಪೂರ್ಣಗೊಳಿಸಲಾಗುತ್ತಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಇಸುಝು ವಿ-ಕ್ರಾಸ್

ನಮ್ಮ ಬೆಂಗಳೂರಿನ ನೈಸ್ ರಸ್ತೆಯಲ್ಲಿ ಹೊಸ ಪಿಕ್‌ಅಪ್ ಎಸ್‌ಯುವಿ ರೋಡ್ ಟೆಸ್ಟಿಂಗ್ ಮಾಡುವಾಗ ಡ್ರೈವ್‌ಸ್ಪಾರ್ಕ್ ತಂಡಕ್ಕೆ ಎಕ್ಸ್‌ಕ್ಲೂಸಿವ್ ಚಿತ್ರಗಳು ಲಭ್ಯವಾಗಿದ್ದು, ಹೊಸ ಎಂಜಿನ್‌ನೊಂದಿಗೆ ಕಾರಿನ ವಿನ್ಯಾಸದಲ್ಲೂ ವಿ-ಕ್ರಾಸ್ ಪಿಕ್‌ಅಪ್ ಈ ಬಾರಿ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿರಲಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಇಸುಝು ವಿ-ಕ್ರಾಸ್

ಹೊಸ ಪಿಕ್ಅಪ್ ಎಸ್‌ಯುವಿಯ ಒಳಭಾಗದಲ್ಲಿನ ಬದಲಾದ ತಾಂತ್ರಿಕ ಅಂಶಗಳ ಕುರಿತಾಗಿ ಅಷ್ಟಾಗಿ ಲಭ್ಯವಾಗಿಲ್ಲವಾದರೂ ಹೊರಭಾಗದಲ್ಲಿನ ವಿನ್ಯಾಸದಲ್ಲಿ ಕೆಲವು ಪ್ರಮುಖ ಬದಲಾವಣೆ ಪರಿಚಯಿಸಲಾಗಿದ್ದು, ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರಿಲ್, ಟೈಲ್‌ಗೆಟ್ ವಿಭಾಗವನ್ನು ಬದಲಾವಣೆ ಮಾಡಲಾಗಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಇಸುಝು ವಿ-ಕ್ರಾಸ್

ಬಿಎಸ್-6 ವಿ-ಕ್ರಾಸ್ ಮಾದರಿಯು ಈ ಬಾರಿ ಬಿಎಸ್-4 ಮಾದರಿಯೆಂತೆ ಎರಡು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗಲಿದ್ದು, ಗ್ರಾಹಕರ ತಮ್ಮ ಬೇಡಿಕೆಗೆ ಅನುಗುಣವಾಗಿ 1.9-ಲೀಟರ್ ಡೀಸೆಲ್ ಮತ್ತು 2.5-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಆಯ್ಕೆ ಮಾಡಬಹುದಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಇಸುಝು ವಿ-ಕ್ರಾಸ್

ಇದರಲ್ಲಿ 1.9-ಲೀಟರ್ ಡೀಸೆಲ್ ಮಾದರಿಯೇ ಟಾಪ್ ಎಂಡ್ ಮಾದರಿಯಾಗಿ ಮಾರಾಟವಾಗಲಿದ್ದು, ಸಿಕ್ಸ್ ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಆಯ್ಕೆಯೊಂದಿಗೆ 148-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬರಲಿರುವ ಹೊಸ ವಿಮಾ ನೀತಿ..

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಇಸುಝು ವಿ-ಕ್ರಾಸ್

2.5-ಲೀಟರ್ ಡೀಸೆಲ್ ಮಾದರಿಯು ಫೈವ್ ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 135-ಬಿಎಚ್‌ಪಿ ಮತ್ತು 320-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದು, ಎರಡು ಮಾದರಿಗಳಲ್ಲೂ 4x4 ಡ್ರೈವ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ.

ನಮ್ಮ ಬೆಂಗಳೂರಿನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ಬಿಎಸ್-6 ಇಸುಝು ವಿ-ಕ್ರಾಸ್

ಹೊಸ ಎಂಜಿನ್‌ನಿಂದಾಗಿ ಪಿಕ್‌ಅಪ್ ಎಸ್‌ಯುವಿ ಬೆಲೆಯಲ್ಲೂ ತುಸು ದುಬಾರಿಯಾಗಲಿದ್ದು, ಪ್ರಸ್ತುತ ಮಾದರಿಗಿಂತಲೂ ಹೆಚ್ಚುವರಿಯಾಗಿ ರೂ. 60 ಸಾವಿರದಿಂದ ರೂ. 1 ಲಕ್ಷದಷ್ಟು ಹೆಚ್ಚುವರಿ ಬೆಲೆಯೊಂದಿಗೆ ಇದೇ ಅಕ್ಟೋಬರ್ ವೇಳೆಗೆ ಬಿಡುಗಡೆಯಾಗಲಿದೆ.

Most Read Articles

Kannada
Read more on ಇಸುಝು isuzu
English summary
Isuzu V Cross BS6 Production Ready Model Spotted Testing Ahead Of Launch. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X