ವೈರಸ್ ಭೀತಿ: ಕಾರು ಮಾರಾಟಕ್ಕಾಗಿ ಪ್ರತ್ಯೇಕ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಜೆಎಲ್ಆರ್

ಮಹಾಮಾರಿ ವೈರಸ್‌ನಿಂದಾಗಿ ಆಟೋ ಉದ್ಯಮವು ಭಾರೀ ನಷ್ಟ ಅನುಭವಿಸುತ್ತಿದ್ದು, ಇದೀಗ ಪರಿಸ್ಥಿತಿಗೆ ಅನುಗುಣವಾಗಿ ವಿನಾಯ್ತಿ ಪಡೆದುಕೊಂಡಿರುವ ಆಟೋ ಉದ್ಯಮಕ್ಕೂ ಹೊಸ ಸುರಕ್ಷಾ ಮಾರ್ಗಸೂಚಿ ಅಡಿ ಚಾಲನೆ ಸಿಕ್ಕಿದೆ.

ಕಾರು ಮಾರಾಟಕ್ಕಾಗಿ ಪ್ರತ್ಯೇಕ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಜೆಎಲ್ಆರ್

ಟಾಟಾ ಮೋಟಾರ್ಸ್ ಅಡಿಯಲ್ಲಿ ಕಾರ್ಯನಿರ್ವಹಣೆ ಮಾಡುತ್ತಿರುವ ಬ್ರಿಟಿಷ್ ಕಾರು ಉತ್ಪಾದನಾ ಕಂಪನಿ ಜೆಎಲ್ಆರ್(ಜಾಗ್ವಾರ್, ಲ್ಯಾಂಡ್ ರೋವರ್ ಮತ್ತು ರೇಂಜ್ ರೋವರ್) ಕೂಡಾ ಹೊಸ ಸುರಕ್ಷಾ ಮಾರ್ಗಸೂಚಿ ಅಡಿಯಲ್ಲಿ ಕಾರು ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶ ಪಡೆದುಕೊಂಡಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಗರಿಷ್ಠ ಸುರಕ್ಷಾ ಮಾರ್ಗಗಳನ್ನು ಅನುಸರಿಸಿಕೊಂಡು ಉದ್ಯಮ ವ್ಯವಹಾರಗಳನ್ನು ಮುನ್ನಡೆಸುತ್ತಿದೆ.

ಕಾರು ಮಾರಾಟಕ್ಕಾಗಿ ಪ್ರತ್ಯೇಕ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಜೆಎಲ್ಆರ್

ಹೊಸ ಸುರಕ್ಷಾ ಮಾರ್ಗಸೂಚಿ ಅಡಿ ನಿರ್ಮಾಣದ ಮೊದಲ ಕಾರನ್ನು ಈಗಾಗಲೇ ಪ್ರದರ್ಶನಗೊಳಿಸಿರುವ ಜೆಎಲ್ಆರ್ ಕಂಪನಿಯು ಉದ್ಯೋಗಿಗಳಿಗೆ ಮತ್ತು ಗ್ರಾಹಕರಿಗೆ ಗರಿಷ್ಠ ಸುರಕ್ಷತೆ ಒದಗಿಸಲು ಕಂಪನಿಯು ಬದ್ಧವಾಗಿದೆ ಎಂದಿದೆ.

ಕಾರು ಮಾರಾಟಕ್ಕಾಗಿ ಪ್ರತ್ಯೇಕ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಜೆಎಲ್ಆರ್

ಇಂಗ್ಲೆಂಡ್‌ನಲ್ಲಿರುವ ಸೊಲಿಹುಲ್ ಕಾರು ಉತ್ಪಾದನಾ ಘಟಕವನ್ನು ತೆರೆದಿರುವ ಜೆಎಲ್‌ಆರ್ ಕಂಪನಿಯು ಇಲ್ಲಿಂದಲೇ ವಿಶ್ವದ ಪ್ರಮುಖ ರಾಷ್ಟ್ರಗಳಿಗೆ ಕಾರು ಉತ್ಪನ್ನಗಳನ್ನು ರಫ್ತುಗೊಳಿಸುತ್ತಿದ್ದು, ವೈರಸ್ ಭೀತಿ ಹಿನ್ನಲೆಯಲ್ಲಿ ಗರಿಷ್ಠ ಸುರಕ್ಷಾ ಕ್ರಮಗಳನ್ನು ಅಳವಡಿಸಿಕೊಳ್ಳುವ ಮೂಲಕ ರಫ್ತು ಪ್ರಕ್ರಿಯೆಗೆ ಚಾಲನೆ ನೀಡಿದೆ.

ಕಾರು ಮಾರಾಟಕ್ಕಾಗಿ ಪ್ರತ್ಯೇಕ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಜೆಎಲ್ಆರ್

ಭಾರತದಲ್ಲೂ ಐಷಾರಾಮಿ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಜೆಎಲ್ಆರ್ ಕಂಪನಿಯು ಗ್ರಾಹಕರು ಮತ್ತು ಉದ್ಯೋಗಿಗಳ ಸುರಕ್ಷಿತ ದೃಷ್ಠಿಯಿಂದ ನೇರ ಕಾರು ಮಾರಾಟದ ಬದಲಾಗಿ ಆನ್‌ಲೈನ್ ಕಾರು ಮಾರಾಟಕ್ಕೆ ಹೆಚ್ಚು ಒತ್ತು ನೀಡುತ್ತಿದೆ.

ಕಾರು ಮಾರಾಟಕ್ಕಾಗಿ ಪ್ರತ್ಯೇಕ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಜೆಎಲ್ಆರ್

ಕಾರು ಮಾರಾಟ ಮತ್ತು ಗ್ರಾಹಕರ ಸೇವೆಗಳಿಗಾಗಿ 'ಫೈಂಡ್ ಮಿ ಎ ಕಾರ್' ಮತ್ತು 'ಫೈಂಡ್ ಮಿ ಎ ಎಸ್‌ಯುವಿ' ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳನ್ನು ತೆರೆದಿದ್ದು, ಇದರ ಮೂಲಕವೇ ಕಾರು ಮಾರಾಟ ಮತ್ತು ಗ್ರಾಹಕರ ಸೇವೆಗಳನ್ನು ಒದಗಿಸಲಿದೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಕಾರು ಮಾರಾಟಕ್ಕಾಗಿ ಪ್ರತ್ಯೇಕ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಜೆಎಲ್ಆರ್

ಸದ್ಯ ವಾಹನಗಳ ಉತ್ಪಾದನೆಗೆ ಅನುಮತಿ ಪಡೆದುಕೊಂಡಿರುವ ಆಟೋ ಕಂಪನಿಗಳು ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಉತ್ಪಾದನಾ ಚಟುವಟಿಕೆಗಳನ್ನು ಕೈಗೊಂಡಿದ್ದು, ಉದ್ಯೋಗದ ಸ್ಥಳದಲ್ಲಿ ಸಾಮಾಜಿಕ ಅಂತರದ ಜೊತೆ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್ ಮತ್ತು ಹ್ಯಾಂಡ್ ಗ್ಲೌಸ್ ಬಳಕೆಯು ಕಡ್ಡಾಯಗೊಳಿಸಿವೆ.

ಕಾರು ಮಾರಾಟಕ್ಕಾಗಿ ಪ್ರತ್ಯೇಕ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಜೆಎಲ್ಆರ್

ಇನ್ನು ಇಡೀ ಜಗತ್ತನ್ನೇ ಆತಂಕಕ್ಕೆ ದೂಡಿರುವ ಮಹಾಮಾರಿ ಕರೋನಾ ವಿರುದ್ದ ಹೋರಾಟಕ್ಕೆ ವಿಶ್ವದ ಪ್ರಮುಖ ರಾಷ್ಟ್ರಗಳು ಒಂದಾಗಿ ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರದ ಪ್ರಯತ್ನಗಳಿಗೆ ಆಟೋ ಉತ್ಪಾದನಾ ಕಂಪನಿಗಳು ಕೂಡಾ ಅತಿ ಹೆಚ್ಚು ದೇಣಿಗೆ ನೀಡುವ ಮೂಲಕ ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿಯನ್ನು ಮೇರೆದಿವೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಕಾರು ಮಾರಾಟಕ್ಕಾಗಿ ಪ್ರತ್ಯೇಕ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ತೆರೆದ ಜೆಎಲ್ಆರ್

ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಜೆಎಲ್ಆರ್ ಸೇರಿದಂತೆ ಹಲವು ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುತ್ತಿವೆ.

Most Read Articles

Kannada
English summary
Jaguar Land Rover India Introduces New Online Sales & Service Platform For Customers. Read in Kannada.
Story first published: Friday, May 22, 2020, 20:17 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X