ಕರೋನಾ ವೈರಸ್ ಎಫೆಕ್ಟ್: ಉದ್ಯೋಗ ಕಡಿತಕ್ಕೆ ಮುಂದಾದ ಜಾಗ್ವಾರ್ ಲ್ಯಾಂಡ್ ರೋವರ್

ಟಾಟಾ ಮೋಟಾರ್ಸ್ ಕಂಪನಿ ಸ್ವಾಧೀನಪಡಿಸಿಕೊಂಡಿರುವ ಜಾಗ್ವಾರ್ ಲ್ಯಾಂಡ್ ರೋವರ್, ಇಂಗ್ಲೆಂಡ್‌ನಲ್ಲಿರುವ ತನ್ನ 1,000 ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾಗಿದೆ. ಕೋವಿಡ್ -19ರ ಕಾರಣದಿಂದ ಉಂಟಾಗಿರುವ ನಷ್ಟವನ್ನು ಸರಿದೂಗಿಸಲು ಕಂಪನಿಯು ತನ್ನ ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವುದಾಗಿ ತಿಳಿಸಿದೆ.

ಕರೋನಾ ವೈರಸ್ ಎಫೆಕ್ಟ್: ಉದ್ಯೋಗ ಕಡಿತಕ್ಕೆ ಮುಂದಾದ ಜಾಗ್ವಾರ್ ಲ್ಯಾಂಡ್ ರೋವರ್

ಮೂಲಗಳ ಪ್ರಕಾರ, ಗುತ್ತಿಗೆ ಹಾಗೂ ಏಜೆನ್ಸಿ ನೌಕರರನ್ನು ವಜಾಗೊಳಿಸಲಾಗುವುದು.

ಜಾಗ್ವಾರ್ ಲ್ಯಾಂಡ್ ರೋವರ್, ಇಂಗ್ಲೆಂಡ್‌ನ ಪ್ರಮುಖ ಕಾರು ತಯಾರಕ ಕಂಪನಿಗಳಲ್ಲಿ ಒಂದಾಗಿದೆ. ಲಾಕ್‌ಡೌನ್‌ನಿಂದಾಗಿ ಮಾರಾಟದಲ್ಲಿ 31%ನಷ್ಟು ಕುಸಿತ ಉಂಟಾಗಿದೆ ಎಂದು ಕಂಪನಿ ಹೇಳಿದೆ. ಕರೋನಾ ವೈರಸ್‌ನಿಂದ ಕಂಪನಿಯ ಜಾಗತಿಕ ವಹಿವಾಟು ಕುಸಿದಿದ್ದು, ಖರ್ಚು ಹೆಚ್ಚಾಗಿದೆ.

ಕರೋನಾ ವೈರಸ್ ಎಫೆಕ್ಟ್: ಉದ್ಯೋಗ ಕಡಿತಕ್ಕೆ ಮುಂದಾದ ಜಾಗ್ವಾರ್ ಲ್ಯಾಂಡ್ ರೋವರ್

ವೆಚ್ಚವನ್ನು ಕಡಿತಗೊಳಿಸಲು ಕಂಪನಿಯು ನೌಕರರನ್ನು ವಜಾಗೊಳಿಸುತ್ತಿದೆ. ಜಾಗ್ವಾರ್ ಲ್ಯಾಂಡ್ ರೋವರ್ ಕಂಪನಿಯು ತನ್ನ ನೌಕರರ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುತ್ತಿದೆ. ಸುಸ್ಥಿರ ಬೆಳವಣಿಗೆಯನ್ನು ದಾಖಲಿಸಲು ಕಂಪನಿಯು ದೀರ್ಘಕಾಲೀನ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಕರೋನಾ ವೈರಸ್ ಎಫೆಕ್ಟ್: ಉದ್ಯೋಗ ಕಡಿತಕ್ಕೆ ಮುಂದಾದ ಜಾಗ್ವಾರ್ ಲ್ಯಾಂಡ್ ರೋವರ್

ಕೋವಿಡ್ -19ರ ಈ ಕಠಿಣ ಸಂದರ್ಭದಲ್ಲಿ ಈ ನಿರ್ಧಾರ ತೆಗೆದುಕೊಳ್ಳುವುದು ಕಷ್ಟಕರವಾಗಿದ್ದರೂ, ಬೇರೆ ದಾರಿಯಿಲ್ಲದೇ ಕಂಪನಿಯು ತನ್ನ ತಾತ್ಕಾಲಿಕ ಉದ್ಯೋಗಿಗಳನ್ನು ಕೆಲಸದಿಂದತೆಗೆದುಹಾಕುವ ಕಠಿಣ ನಿರ್ಧಾರಕ್ಕೆ ಮುಂದಾಗಿದೆ.

ಕರೋನಾ ವೈರಸ್ ಎಫೆಕ್ಟ್: ಉದ್ಯೋಗ ಕಡಿತಕ್ಕೆ ಮುಂದಾದ ಜಾಗ್ವಾರ್ ಲ್ಯಾಂಡ್ ರೋವರ್

ಇಂಗ್ಲೆಂಡ್‌ನಲ್ಲಿರುವ ಕಂಪನಿಯ ಉತ್ಪಾದನಾ ಘಟಕಗಳಿಂದ ಹೆಚ್ಚಿನ ಉದ್ಯೋಗಿಗಳನ್ನು ವಜಾ ಮಾಡಲಾಗುವುದೆಂದು ಕಂಪನಿ ಹೇಳಿದೆ. ಕೆಲಸದಿಂದ ವಜಾ ಮಾಡುವ ಪ್ರಕ್ರಿಯೆಯು ಜುಲೈ ಅಂತ್ಯದಲ್ಲಿ ಆರಂಭವಾಗಿ, ಈ ವರ್ಷದ ಕೊನೆಯವರೆಗೆ ಮುಂದುವರಿಯಲಿದೆ ಎಂದು ಹೇಳಲಾಗಿದೆ.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಕರೋನಾ ವೈರಸ್ ಎಫೆಕ್ಟ್: ಉದ್ಯೋಗ ಕಡಿತಕ್ಕೆ ಮುಂದಾದ ಜಾಗ್ವಾರ್ ಲ್ಯಾಂಡ್ ರೋವರ್

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಯುನೈಟೆಡ್ ಟ್ರೇಡ್ ಯೂನಿಯನ್, ಒಂದು ಕಡೆ ಜನರಿಗೆ ಉದ್ಯೋಗ ಹಾಗೂ ಹಣದ ಅವಶ್ಯಕತೆಯಿದೆ. ಮತ್ತೊಂದೆಡೆ ಉದ್ಯೋಗ ನೀಡಬೇಕಾದ ದೊಡ್ಡ ದೊಡ್ಡ ಕಂಪನಿಗಳು ಉದ್ಯೋಗಿಗಳನ್ನು ಕೆಲಸದಿಂದ ಕಿತ್ತುಹಾಕುತ್ತಿವೆ ಎಂದು ಹೇಳಿದೆ.

ಕರೋನಾ ವೈರಸ್ ಎಫೆಕ್ಟ್: ಉದ್ಯೋಗ ಕಡಿತಕ್ಕೆ ಮುಂದಾದ ಜಾಗ್ವಾರ್ ಲ್ಯಾಂಡ್ ರೋವರ್

ಫ್ರೆಂಚ್ ಹಾಗೂ ಜರ್ಮನ್ ಸರ್ಕಾರಗಳು ತಮ್ಮ ದೇಶದ ಜನರಿಗೆ ನಿಡಿದಂತಹ ಸಹಾಯ ಪ್ಯಾಕೇಜ್ ಅನ್ನು ಇಂಗ್ಲೆಂಡ್‌ನಲ್ಲಿಯೂ ನೀಡುವಂತೆ ಟ್ರೇಡ್ ಯೂನಿಯನ್ ಸರ್ಕಾರವನ್ನು ಒತ್ತಾಯಿಸಿದೆ. ಇದರಿಂದ ನಿರುದ್ಯೋಗಿಗಳ ತೊಂದರೆ ಕಡಿಮೆಯಾಗಲಿದೆ ಎಂದು ಹೇಳಿದೆ.

Article Published On: Tuesday, June 16, 2020, 16:34 [IST]
English summary
Jaguar Land Rover to cut over 1000 jobs in UK. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+