ಎಲೆಕ್ಟ್ರಿಕ್ ವಾಹನಗಳ ಕಡ್ಡಾಯ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡ ಜಪಾನ್

ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಮಾಲಿನ್ಯ ಸಮಸ್ಯೆ ಅತಿಯಾಗಿ ಪರಿಣಮಿಸಿದ್ದು, ಮಾಲಿನ್ಯ ಉತ್ಪಾದನೆಗೆ ಇಂಧನ ಆಧರಿತ ವಾಹನಗಳೇ ಪ್ರಮುಖ ಕಾರಣವಾಗಿವೆ. ಹೀಗಾಗಿ ವಿಶ್ವದ ಪ್ರಮುಖ ರಾಷ್ಟ್ರಗಳು 2030ರ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ನಿಷೇಧಿಸಲು ಮುಂದಾಗುತ್ತಿದ್ದು, ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಕಡ್ಡಾಯ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡ ಜಪಾನ್

ಮಾಲಿನ್ಯ ಪ್ರಮಾಣಕ್ಕೆ ಕಡಿವಾಣ ಹಾಕಲು ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಈಗಾಗಲೇ ಹಲವಾರು ಎಲೆಕ್ಟ್ರಿಕ್ ವಾಹನ ನೀತಿ ಮೂಲಕ ಇಂಧನ ಆಧರಿತ ವಾಹನಗಳ ಬಳಕೆಗೆ ಕಡಿವಾಣ ಹಾಕಲಾಗುತ್ತಿದ್ದು, ಯುರೋಪ್ ಒಕ್ಕೂಟದಲ್ಲೂ ಈಗಾಗಲೇ ಹಲವು ರಾಷ್ಟ್ರಗಳಲ್ಲಿ 2030ಕ್ಕೆ ಇಂಧನ ಆಧರಿತ ವಾಹನ ಮಾರಾಟವನ್ನು ನಿಷೇಧಿಸುವುದಾಗಿ ನಿರ್ಣಯ ಪ್ರಕಟಿಸಿವೆ. ಇದಕ್ಕೆ ಪೂರಕವಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಸೆಳೆಯಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ.

ಎಲೆಕ್ಟ್ರಿಕ್ ವಾಹನಗಳ ಕಡ್ಡಾಯ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡ ಜಪಾನ್

ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ಈಗಾಗಲೇ ಡೀಸೆಲ್ ಎಂಜಿನ್ ವಾಹನಗಳ ಮಾರಾಟವು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಪೂರ್ಣಪ್ರಮಾಣದ ಎಲೆಕ್ಟ್ರಿಕ್ ವಾಹನ ಬಳಕೆ ಹೆಚ್ಚಿನ ಪ್ರಮಾಣದಲ್ಲಿದೆ.

ಎಲೆಕ್ಟ್ರಿಕ್ ವಾಹನಗಳ ಕಡ್ಡಾಯ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡ ಜಪಾನ್

ಮುಂಬರುವ ದಿನಗಳಲ್ಲಿ ಡೀಸೆಲ್ ಜೊತೆಗೆ ಪೆಟ್ರೋಲ್ ವಾಹನಗಳ ಬಳಕೆಯನ್ನು ನಿರ್ಬಂಧಿಸುವತ್ತ ಹಲವಾರು ಹೊಸ ನೀತಿಗಳನ್ನು ಜಾರಿಗೆ ತರಲಾಗುತ್ತಿದ್ದು, ಗ್ರೇಟ್ ಬ್ರಿಟನ್, ಐರ್ಲೆಂಡ್‌ನಲ್ಲೂ ಕೂಡಾ 2030ರ ವೇಳೆ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವ ನಿರ್ಣಯ ಪ್ರಕಟಿಸಿವೆ.

ಎಲೆಕ್ಟ್ರಿಕ್ ವಾಹನಗಳ ಕಡ್ಡಾಯ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡ ಜಪಾನ್

ಇದೀಗ ಆಟೋ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಜಪಾನ್ ಕೂಡಾ ಸಾಂಪ್ರದಾಯಿಕ ಇಂಧನ ಚಾಲಿತ ವಾಹನಗಳ ಮಾರಾಟವನ್ನು 2030ರಿಂದಲೇ ಸಂಪೂರ್ಣವಾಗಿ ನಿಷೇಧಿಸುತ್ತಿರುವುದಾಗಿ ಮಾಹಿತಿ ನೀಡಿದ್ದು, ಮಾಲಿನ್ಯ ತಡೆ ಮತ್ತು ಭವಿಷ್ಯದ ದೃಷ್ಠಿಯಿಂದ ಇಂಧನದ ಮೇಲೆ ಅವಂಲನೆಯನ್ನು ತಪ್ಪಿಸಲು ಎಲೆಕ್ಟ್ರಿಕ್ ಬ್ಯಾಟರಿ ಚಾಲಿತ ವಾಹನಗಳ ಬಳಕೆಯತ್ತ ಗಮನಹರಿಸುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಕಡ್ಡಾಯ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡ ಜಪಾನ್

ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳ ಮಾರಾಟವನ್ನು ನಿಷೇಧಿಸುವುದಕ್ಕೂ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೂಡಾ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕ ಬಳಕೆಯ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳು, ಎಲೆಕ್ಟ್ರಿಕ್ ವಾಹನ ಖರೀದಿ ಮೇಲೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಕಡ್ಡಾಯ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡ ಜಪಾನ್

ಹಾಗೆಯೇ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಕಂಪನಿಗಳಿಗೂ ಪ್ರೋತ್ಸಾಹ ಧನ ಮತ್ತು ಚಾರ್ಜಿಂಗ್ ನಿಲ್ದಾಣಗಳನ್ನು ತೆರೆಯಲು ಗರಿಷ್ಠ ಪ್ರಮಾಣದ ಸಬ್ಸಡಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಇದು ಸಹಜವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬದಲಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಪ್ರೋತ್ಸಾಹಿಸಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಎಲೆಕ್ಟ್ರಿಕ್ ವಾಹನಗಳ ಕಡ್ಡಾಯ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡ ಜಪಾನ್

ಭಾರತದಲ್ಲೂ ಈಗಾಗಲೇ ಎಲೆಕ್ಟ್ರಿಕ್ ವಾಹನಗಳನ್ನು ಪ್ರೋತ್ಸಾಹಿಸಲು ಫೇಮ್ 2 ಯೋಜನೆಯನ್ನು ಜಾರಿಗೆ ತರಲಾಗಿದ್ದು, ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಜಿಎಸ್‌ಟಿ ವಿನಾಯ್ತಿ, ಗರಿಷ್ಠ ಸಬ್ಸಡಿ ಮತ್ತು ತೆರಿಗೆ ವಿನಾಯ್ತಿಗಳನ್ನು ನೀಡಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಕಡ್ಡಾಯ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡ ಜಪಾನ್

ಕೇಂದ್ರ ಸರ್ಕಾರದ ಫೇಮ್ 2 ಯೋಜನೆಯನ್ನು ಹೊರತುಪಡಿಸಿ ದೆಹಲಿ ಸರ್ಕಾರವು ತನ್ನದೇ ಆದ ಎಲೆಕ್ಟ್ರಿಕ್ ವಾಹನ ನೀತಿ ಮೂಲಕ ಮಹತ್ವದ ಬದಲಾವಣೆಯತ್ತ ಹೆಜ್ಜೆಯಿರಿಸಿದ್ದು, ಫೇಮ್ 2 ಯೋಜನೆಗಿಂತಲೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಎಲೆಕ್ಟ್ರಿಕ್ ವಾಹನಗಳ ಕಡ್ಡಾಯ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡ ಜಪಾನ್

ದೆಹಲಿ ಸರ್ಕಾರವು ಹೊಸ ಇವಿ ಪಾಲಿಸಿ ಅಡಿ ಎಲೆಕ್ಟ್ರಿಕ್ ವಾಹನ ಖರೀದಿಸುವ ಗ್ರಾಹಕರಿಗೆ ನೋಂದಣಿ ಶುಲ್ಕ ವಿನಾಯ್ತಿ, ರಸ್ತೆ ತೆರಿಗೆ ವಿನಾಯ್ತಿ ಸೇರಿದಂತೆ ಹಲವಾರು ಆಫರ್‌ಗಳನ್ನು ನೀಡುತ್ತಿದ್ದು, ಕೇಂದ್ರ ಸರ್ಕಾರ ಫೇಮ್ 2 ಯೋಜನೆ ಅಡಿಯಲ್ಲಿ ಜಿಎಸ್‌ಟಿ ವಿನಾಯ್ತಿ ಕೂಡಾ ಲಭ್ಯವಿದೆ.

Most Read Articles

Kannada
English summary
Japan to sell only electric and hybrid vehicles by 2030. Read in Kannada.
Story first published: Thursday, December 3, 2020, 15:44 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X