ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ಕಾರು ಮಾರಾಟ ಪುನಾರಂಭಿಸಿದ ಜೀಪ್

ಮಾಹಾಮಾರಿ ಕರೋನಾ ವೈರಸ್‌ನಿಂದಾಗಿ ಇಡೀ ವಿಶ್ವವೇ ಸಂಕಷ್ಟಕ್ಕೆ ಸಿಲುಕಿದ್ದು, ಬಹುತೇಕ ವಾಣಿಜ್ಯ ವ್ಯಾಪಾರಗಳು ನೆಲಕಚ್ಚಿವೆ. ಆಟೋ ಉದ್ಯಮವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ವೈರಸ್ ಭೀತಿ ನಡುವೆಯೂ ವ್ಯಾಪಾರ ವಹಿವಾಟು ಪುನಾರಂಭಗೊಂಡಿದೆ.

ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ಕಾರು ಮಾರಾಟ ಪುನಾರಂಭಿಸಿದ ಜೀಪ್

ವೈರಸ್ ತಡೆಗಾಗಿ ಲಾಕ್‌ಡೌನ್ ಅನಿವಾರ್ಯವಾಗಿರುವುದರಿಂದ ಭಾರತೀಯ ಆಟೋ ಉದ್ಯಮವು ಇಂದಿಗೂ ಕೂಡಾ ದಿನಂಪ್ರತಿ ನೂರಾರು ಕೋಟಿ ನಷ್ಟ ಅನುಭವಿಸುತ್ತಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಆಟೋ ಕ್ಷೇತ್ರಕ್ಕೆ ವಿನಾಯ್ತಿ ನೀಡಲಾಗಿದೆಯಾದರೂ ಆರ್ಥಿಕ ಮುಗ್ಗಟ್ಟು ತೀವ್ರ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಹೊಸ ಸುರಕ್ಷಾ ಮಾರ್ಗಸೂಚಿಗಳಂತೆ ಆಟೋ ಉದ್ಯಮವು ಮರು ಚಾಲನೆಗೊಂಡರು ನೀರಿಕ್ಷಿತ ಮಟ್ಟದಲ್ಲಿ ಗ್ರಾಹಕರಿಲ್ಲದೆ ಪರದಾಡುತ್ತಿವೆ.

ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ಕಾರು ಮಾರಾಟ ಪುನಾರಂಭಿಸಿದ ಜೀಪ್

ಜೀಪ್ ಇಂಡಿಯಾ ಕಂಪನಿಯು ಸಹ ಲಾಕ್‌ಡೌನ್ ಸಂಕಷ್ಟದಿಂದ ಭಾರೀ ನಷ್ಟ ಅನುಭವಿಸಿದ್ದು, ಮೇ ಅವಧಿಯ ಕಾರು ಮಾರಾಟ ಪಟ್ಟಿಯಲ್ಲಿ ಕೇವಲ 93 ಕಾರುಗಳನ್ನು ಮಾರಾಟ ಮಾಡಿರುವುದು ಬಹಿರಂಗವಾಗಿದೆ.

ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ಕಾರು ಮಾರಾಟ ಪುನಾರಂಭಿಸಿದ ಜೀಪ್

ವೈರಸ್ ಭೀತಿ ನಡುವೆಯೂ ಗರಿಷ್ಠ ಪ್ರಮಾಣದ ಸುರಕ್ಷಾ ಮಾರ್ಗಸೂಚಿಯೊಂದಿಗೆ ಕಾರು ಮಾರಾಟಕ್ಕೆ ಚಾಲನೆ ನೀಡಲಾಗಿದ್ದು, ಆನ್‌ಲೈನ್ ಕಾರು ಮಾರಾಟಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ಕಾರು ಮಾರಾಟ ಪುನಾರಂಭಿಸಿದ ಜೀಪ್

ಜೊತೆಗೆ ಲಾಕ್‌ಡೌನ್‌ಗೂ ಮೊದಲ ಬುಕ್ಕಿಂಗ್ ಮಾಡಿ ವಾಹನ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿದ್ದು, ಮಾರಾಟ ಮಳಿಗೆಗಳು ಪುನಾರಂಭಗೊಂಡ ನಂತರ ವಾಹನ ಖರೀದಿ ಬದಲು ಬುಕ್ಕಿಂಗ್ ಹಣ ವಾಪಸ್ ನೀಡುವಂತೆ ಬೇಡಿಕೆಯಿಡುತ್ತಿದ್ದಾರೆ.

MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ಕಾರು ಮಾರಾಟ ಪುನಾರಂಭಿಸಿದ ಜೀಪ್

ಹೊಸ ವಾಹನ ಖರೀದಿದಾರರಿಗೆ ಇಎಂಐ ತಗ್ಗಿಸಿ ಅತಿ ಸುಲಭವಾದ ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದ್ದರೂ ವಾಹನ ಮಾರಾಟವು ಮಂದಗತಿಯಲ್ಲಿ ಸಾಗಿದ್ದು, ಲಾಕ್‌ಡೌನ್‌ಗೂ ಮೊದಲು ಬುಕ್ಕಿಂಗ್ ಮಾಡಿ ವಾಹನ ಖರೀದಿಯ ಸಂಭ್ರಮದಲ್ಲಿದ್ದ ಗ್ರಾಹಕರು ಇದೀಗ ಖರೀದಿ ಪ್ರಕ್ರಿಯೆಯಿಂದ ಹಿಂದೆ ಸರಿಯುತ್ತಿರುವುದು ಆಟೋ ಕಂಪನಿಗಳನ್ನು ಚಿಂತೆಗೀಡು ಮಾಡಿದೆ.

ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ಕಾರು ಮಾರಾಟ ಪುನಾರಂಭಿಸಿದ ಜೀಪ್

ಮಾರ್ಚ್ 15ರ ಮುನ್ನ ದೇಶಾದ್ಯಂತ ಹೊಸ ವಾಹನಗಳಿಗೆ ಬುಕ್ಕಿಂಗ್ ಮಾಡಿದ್ದ ಗ್ರಾಹಕರಲ್ಲಿ ಸುಮಾರು ಶೇ.60ರಿಂದ ಶೇ.70ರಷ್ಟು ಜನ ಹೊಸ ವಾಹನ ಖರೀದಿಯಿಂದ ಹಿಂದೆ ಸರಿದಿದ್ದು, ಉದ್ಯೋಗದ ಅಭದ್ರತೆ ಮತ್ತು ಆದಾಯಕ್ಕಿಂತ ಖರ್ಚು ಹೆಚ್ಚುತ್ತಿರುವುದರಿಂದ ಹೊಸ ವಾಹನಗಳ ಖರೀದಿಯ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆಯಾಗಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ಕಾರು ಮಾರಾಟ ಪುನಾರಂಭಿಸಿದ ಜೀಪ್

ಮುಂಬರುವ ದಿನಗಳಲ್ಲಿ ಹೊಸ ವಾಹನ ಮಾರಾಟವು ಸರಿದಾರಿಗೆ ಬರುವ ವಿಶ್ವಾಸದಲ್ಲಿರುವ ಆಟೋ ಕಂಪನಿಗಳು ಸಂಕಷ್ಟದಲ್ಲೂ ಉದ್ಯಮ ವ್ಯವಹಾರಗಳನ್ನು ಮುನ್ನಡೆಸುತ್ತಿದ್ದು, ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

Most Read Articles

Kannada
Read more on ಜೀಪ್ jeep
English summary
Jeep Compass Deliveries Resume In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X