Just In
- 30 min ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 1 hr ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 1 hr ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 2 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೀಪ್ ಕಂಪಾಸ್ ಫೇಸ್ಲಿಫ್ಟ್ ಮತ್ತು ಹೊಸ 7 ಸೀಟರ್ ಎಸ್ಯುವಿ ಬಿಡುಗಡೆ ಮಾಹಿತಿ ಬಹಿರಂಗ
ಜೀಪ್ ಇಂಡಿಯಾ ಕಂಪನಿಯು ತನ್ನ ಹೊಸ ಕಾರುಗಳ ಬಿಡುಗಡೆ ಯೋಜನೆ ಕುರಿತಂತೆ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದು, 2021ರ ಆರಂಭದಲ್ಲಿ ಕಂಪಾಸ್ ಫೇಸ್ಲಿಫ್ಟ್ ಬಿಡುಗಡೆಯ ನಂತರ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.
ಜೀಪ್ ಇಂಡಿಯಾ ಕಂಪನಿಯು ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಕಂಪಾಸ್ ಮತ್ತು ರ್ಯಾಂಗ್ಲರ್ ಆಫ್ ರೋಡ್ ಎಸ್ಯುವಿ ಆವೃತ್ತಿಯನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳ ಮಾರಾಟ ಆರಂಭಿಸುವ ಸಿದ್ದತೆಯಲ್ಲಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕಂಪಾಸ್ ಫೇಸ್ಲಿಫ್ಟ್ ಜೊತೆಗೆ ಹೊಸದಾಗಿ 7 ಸೀಟರ್ ಮಧ್ಯಮ ಕ್ರಮಾಂಕದ ಎಸ್ಯುವಿ ಮತ್ತು ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್ಯುವಿ ಕಾರನ್ನು ಮುಂದಿನ ಎರಡು ವರ್ಷದೊಳಗೆ ಬಿಡುಗಡೆ ಮಾಡಲಿದೆ.
ಸದ್ಯ ಕರೋನಾದಿಂದಾಗಿ ಉಂಟಾಗಿರುವ ಆರ್ಥಿಕ ಬಿಟ್ಟಕ್ಕಟಿನ ನಡುವೆ ಹೊಸ ಕಾರುಗಳ ಬಿಡುಗಡೆಯನ್ನು ಮುಂದೂಡಿಕೆ ಮಾಡಿರುವ ಜೀಪ್ ಕಂಪನಿಯು 2021ರ ಆರಂಭದಲ್ಲಿ ಕಂಪಾಸ್ ಫೇಸ್ಲಿಫ್ಟ್ನೊಂದಿಗೆ ವಿವಿಧ ಕಾರು ಮಾದರಿಯನ್ನು ರಸ್ತೆಗಿಳಿಸಲಿದೆ.
ಹೊಸ ಕಾರುಗಳ ಬಿಡುಗಡೆ ಕುರಿತಂತೆ ಈಗಾಗಲೇ ಮಾಧ್ಯಮ ಸಂವಾದದಲ್ಲಿ ಖಚಿತಪಡಿಸಿರುವ ಜೀಪ್ ಮಾತೃಸಂಸ್ಥೆ ಎಫ್ಸಿಎ ಕಂಪನಿಯ ಇಂಡಿಯಾ ವಿಭಾಗದ ಅಧ್ಯಕ್ಷ ಪಾರ್ಥ ದತ್ತು ಅವರು ಅಭಿವೃದ್ಧಿ ಪಥದಲ್ಲಿರುವ ಭಾರತದಲ್ಲಿ ಪ್ರೀಮಿಯಂ ಕಾರುಗಳ ಮಾರಾಟವು ತ್ವರಿತಗತಿಯಲ್ಲಿ ಬೆಳವಣಿಗೆ ಕಾಣುತ್ತಿರುವುದರಿಂದ ಗ್ರಾಹಕರ ಬೇಡಿಕೆಯೆಂತೆ ಕೆಲವು ಹೊಸ ಉತ್ಪನ್ನಗಳನ್ನು ಬಿಡುಗಡೆಗೊಳಿಸಲು ಇದು ಸೂಕ್ತ ಸಮಯ ಎಂದಿದ್ದಾರೆ.
ಆಟೋ ಕಂಪನಿಗಳ ಪ್ರಕಾರ ರೂ.10 ಲಕ್ಷದಿಂದ ರೂ.15 ಲಕ್ಷ ಬೆಲೆಯೊಳಗಿನ ಕಾರುಗಳು ಸಾಕಷ್ಟು ಲಾಭದಾಯಕವಾಗಲಿದ್ದರೆ, ಪ್ರೀಮಿಯಂ ಕಾರುಗಳು ಬ್ರಾಂಡ್ ಮೌಲ್ಯವನ್ನು ಹೆಚ್ಚಿಸಲಿವೆ. ಹೀಗಾಗಿ ಎರಡು ಮಾದರಿಯಲ್ಲೂ ಕಾರುಗಳನ್ನು ಹೊರತರುತ್ತಿರುವ ಜೀಪ್ ಕಂಪನಿಯು ಈಗಾಗಲೇ ಹೊಸ ಕಾರುಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು
ಜೀಪ್ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಂಪ್ಯಾಕ್ಟ್ ಎಸ್ಯುವಿ ಕಾರು ರೂ.12 ಲಕ್ಷ ಬೆಲೆಯ ಅಂತರದಲ್ಲಿ ಬಿಡುಗಡೆಯಾಗಲಿದ್ದರೆ ಫುಲ್ ಸೈಜ್ ಎಸ್ಯುವಿ ಆವೃತ್ತಿಯು ರೂ.26 ಲಕ್ಷದಿಂದ ರೂ.30 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.
ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಫಾರ್ಚೂನರ್, ಎಂಡೀವರ್ ಕಾರುಗಳಿಂತಲೂ ಉತ್ತಮ ಒಳಾಂಗಣದೊಂದಿಗೆ 7 ಸೀಟರ್ ಸೌಲಭ್ಯ ಹೊಂದಲಿರುವ ಹೊಸ ಕಾರು 167-ಬಿಎಚ್ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲ 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಪಡೆದುಕೊಳ್ಳಲಿದೆ.
MOST READ: ಪ್ರತಿ ಚಾರ್ಜ್ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್
ಹೊಸ ಕಾರು ಗ್ರ್ಯಾಂಡ್ ಕಂಪಾಸ್ ಹೆಸರಿನಲ್ಲಿ 2021ರ ಮಧ್ಯಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಹೊಸ ಕಾರುನ್ನು ಜೀಪ್ ಕಂಪನಿಯು ಡೀಸೆಲ್ ಎಂಜಿನ್ನಲ್ಲಿ ಮಾತ್ರವೇ ಬಿಡುಗಡೆ ಮಾಡಲಿದೆ ಎನ್ನಲಾಗಿದೆ.