ಅನಾವರಣವಾಗಲಿದೆ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಅಮೆರಿಕಾ ಮೂಲದ ಜೀಪ್ ಕಂಪನಿಯು ತನ್ನ ತನ್ನ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಮುಂದಿನ ಜೂನ್ ತಿಂಗಳ 4ರಂದು ಡಿಜಿಟಲ್ ಪತ್ರಿಕಾಗೋಷ್ಠಿ ಕಾರ್ಯಕ್ರಮದಲ್ಲಿ ಅನಾವರಣಗೊಳಿಸಲಿದೆ.

ಅನಾವರಣವಾಗಲಿದೆ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಜೀಪ್ ಕಂಪನಿಯು ತನ್ನ ಕಂಪಾಸ್ ಅನ್ನು ಮೊದಲು ಒಟ್ಟು 19 ಮಾದರಿಗಳಲ್ಲಿ ಮಾರಾಟ ಮಾಡಲಾಗುತ್ತಿತ್ತು. ಆದರೆ ಜೀಪ್ ಕಂಪನಿಯು ಕಂಪಾಸ್‌‌ನ 14 ಮಾದರಿಗಳನ್ನು ಸ್ಥಗಿತಗೊಳಿಸಿದೆ. ಇನ್ನು ಮುಂದೆ ಜೀಪ್ ಕಂಪಾಸ್ ಬಿಎಸ್ 6 ಅನ್ನು ಕೇವಲ 5 ಮಾದರಿಗಳಲ್ಲಿ ಮಾರಾಟ ಮಾಡಲಾಗುವುದು. ಎಂಜಿನ್‌ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ಈ ಎಸ್‌ಯುವಿಯಲ್ಲಿ 1.4 ಲೀಟರ್ ಬಿಎಸ್-6 ಪೆಟ್ರೋಲ್ ಹಾಗೂ 2.0 ಲೀಟರ್ ಬಿಎಸ್-6 ಡೀಸೆಲ್ ಎಂಜಿನ್‌ಗಳನ್ನು ಅಳವಡಿಸಲಾಗಿದೆ.

ಅನಾವರಣವಾಗಲಿದೆ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಜೀಪ್ ಕಂಪಾಸ್ ಬಿಎಸ್-6ನ ಐದು ಮಾದರಿಗಳಲ್ಲಿ ಸ್ಪೋರ್ಟ್, ಲಾಂಗಿಟ್ಯೂಡ್, ಲಾಂಗಿಟ್ಯೂಡ್ ಪ್ಲಸ್, ಲಿಮಿಟೆಡ್ ಪ್ಲಸ್ ಹಾಗೂ ಲಿಮಿಟೆಡ್ ಪ್ಲಸ್ 4 ಎಕ್ಸ್ 4 ಮಾದರಿಗಳು ಸೇರಿವೆ. ಟ್ರೈಲ್‌ಹಾಕ್ ಶ್ರೇಣಿಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

MOST READ: ಭಾರತದಲ್ಲಿ ಬಿಡುಗಡೆಯಾಯ್ತು ಬಹುನಿರೀಕ್ಷಿತ ಸ್ಕೋಡಾ ಕರೋಕ್ ಎಸ್‍ಯುವಿ

ಅನಾವರಣವಾಗಲಿದೆ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಹೊಸ ಜೀಪ್ ಕಂಪಾಸ್ ಎಸ್‍ಯುವಿಯ ಇಂಟಿರಿಯರ್ ಬಗ್ಗೆ ಮತ್ತು ಇತರ ಕೆಲವು ಮಾಹಿತಿಗಳು ಬಹಿರಂಗವಾಗಿವೆ. ಜೀಪ್ ಕಂಪಾಸ್ ಬಿಎಸ್-6 ಎಸ್‌ಯುವಿಯಲ್ಲಿ 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಎಲೆಕ್ಟ್ರಿಕ್ ಆಗಿ ಅಡ್ಜಸ್ಟ್ ಮಾಡಬಹುದಾದ ಒಆರ್‌ವಿಎಂ, ಡ್ಯುಯಲ್ ಜೋನ್ ಕ್ಲೈಮೇಟ್ ಕಂಟ್ರೋಲ್ ಮತ್ತು 16 ಇಂಚಿನ ಅಲಾಯ್ ವ್ಹೀಲ್ ಅನ್ನು ಹೊಂದಿದೆ.

ಅನಾವರಣವಾಗಲಿದೆ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಇದರ ಜೊತೆಗೆ ಜೀಪ್ ಕಂಪಾಸ್ ಬಿಎಸ್ 6 ಟಾಪ್ ವೆರಿಯಂಟ್ ಲಿಮಿಟೆಡ್ ಪ್ಲಸ್ ಎಸ್‌ಯುವಿ ಆಟೋಮ್ಯಾಟಿಕ್ ಹೆಡ್‌ಲ್ಯಾಂಪ್‌, ಎಲ್‌ಇಡಿ ಹೆಡ್‌ಲ್ಯಾಂಪ್‌, 18 ಇಂಚಿನ ಅಲಾಯ್ ವ್ಹೀಲ್‌, ಡ್ಯುಯಲ್ ಟೋನ್ ರೂಫ್, ಪನೋರಾಮಿಕ್ ಸನ್‌ರೂಫ್, ರೇನ್ ಸೆನ್ಸಿಂಗ್ ವೈಪರ್ಸ್, ಲೆದರ್ ಸೀಟುಗಳು, ಲೆದರ್ ಸ್ಟೀಯರಿಂಗ್ ವ್ಹೀಲ್‌ಗಳನ್ನು ಹೊಂದಿದೆ.

MOST READ: ಹೋಂಡಾ ಡಬ್ಲ್ಯು‍ಆರ್-ವಿ ಫೇಸ್‍‍ಲಿಫ್ಟ್ ಕಾರಿನ ಮೈಲೇಜ್ ಮಾಹಿತಿ ಬಹಿರಂಗ

ಅನಾವರಣವಾಗಲಿದೆ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಜೀಪ್ ಕಂಪಾಸ್‌ನಲ್ಲಿರುವ 1.4-ಲೀಟರ್ ಬಿಎಸ್-6 ಪೆಟ್ರೋಲ್ ಎಂಜಿನ್ 160 ಬಿಹೆಚ್‌ಪಿ ಪವರ್ ಹಾಗೂ 260 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 2.0 ಲೀಟರಿನ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಪವರ್ ಹಾಗೂ 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎರಡು ಎಂಜಿನ್ ಗಳೊಂದಿಗೆ 6-ಸ್ಪೀಡ್ ಮ್ಯಾನುವಲ್ ಹಾಗೂ 7-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್‌ಗಳನ್ನು ಅಳವಡಿಸಲಾಗಿದೆ.

ಅನಾವರಣವಾಗಲಿದೆ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ಹೆಚ್ಚಿನ ಸುರಕ್ಷತೆಗಾಗಿ ನಾಲ್ಕು ಡಿಸ್ಕ್ ಬ್ರೇಕ್, ರಿವರ್ಸ್ ಪಾರ್ಕ್ ಅಸಿಸ್ಟ್ ಸೆನ್ಸಾರ್, ಟ್ರಾಕ್ಷನ್ ಕಂಟ್ರೋಲ್, ಎಬಿಎಸ್ ಮತ್ತು ಫ್ರಂಟ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ.

MOST READ: ದಾಖಲೆ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ ಮಾರುತಿ ಸುಜುಕಿ ಎಕ್ಸ್‌ಎಲ್6

ಅನಾವರಣವಾಗಲಿದೆ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಜೀಪ್ ಕಂಪಾಸ್‌ನ 14 ಮಾದರಿಗಳಲ್ಲಿ, 5 ಪೆಟ್ರೋಲ್ ಮಾದರಿಗಳನ್ನು ಹಾಗೂ 9 ಡೀಸೆಲ್ ಮಾದರಿಗಳನ್ನು ಸ್ಥಗಿತಗೊಳಿಸಲಾಗಿದೆ. ಕಂಪನಿಯು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಯಲ್ಲಿ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನ್ನು ಬಿಡುಗಡೆಗೊಳಿಸುಲಿದೆ.

ಅನಾವರಣವಾಗಲಿದೆ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಜೀಪ್ ಕಂಪಾಸ್ ಬ್ರ್ಯಾಂಡ್‍ನ ಹೆಚ್ಚು ಮಾರಾಟವಾಗುವ ಎಸ್‍ಯುವಿಯಾಗಿದೆ. ಮುಂದಿನ ದಿನಗಳಲ್ಲಿ ಇತರ ಹೊಸ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಿ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗುತ್ತಿದೆ. ಈ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತದಲ್ಲಿ ಮುಂದಿನ ವರ್ಷದಲ್ಲಿ ಬಿಡುಗಡೆಯಾಗಲಿದೆ.

Most Read Articles

Kannada
Read more on ಜೀಪ್ jeep
English summary
Jeep Compass facelift unveil on June 4, 2020. Read In Kannada.
Story first published: Wednesday, May 27, 2020, 10:40 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more