ಜೀಪ್ 7 ಸೀಟರ್ ಗ್ರಾಂಡ್ ಕಂಪಾಸ್ ಕಾರಿನ ಎಂಜಿನ್ ಮಾಹಿತಿ ಬಹಿರಂಗ
ಜೀಪ್ ಇಂಡಿಯಾ ಕಂಪನಿ ಕಂಪಾಸ್ ಎಸ್‌ಯುವಿ ಯಶಸ್ವಿ ನಂತರ ಶೀಘ್ರದಲ್ಲೇ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಭಾರತೀಯ ಗ್ರಾಹಕರ ಬೇಡಿಕೆಯೆಂತೆ ಸಣ್ಣ ಗಾತ್ರದ ಎಸ್‌ಯುವಿ ಜೊತೆಗೆ ಡಿ ಸೆಗ್ಮೆಂಟ್‌ನಲ್ಲೂ ಹೊಸ ಮಾದರಿಯ ಎಸ್‌ಯುವಿಯೊಂದನ್ನು ಬಿಡುಗಡೆ ಮಾಡುತ್ತಿದೆ.

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಎಸ್‌ಯುವಿ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಗೆ ಉತ್ತಮ ಬೇಡಿಕೆ ಕಂಡುಬರುತ್ತಿದ್ದು, ಇದೇ ನಿಟ್ಟಿನಲ್ಲಿ ಹೊಸ ಯೋಜನೆ ರೂಪಿಸುತ್ತಿರುವ ಜೀಪ್ ಕಂಪನಿಯು ರೂ.10 ಲಕ್ಷದೊಳಗೆ ಒಂದು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಮತ್ತು 7 ಸೀಟರ್ ಎಸ್‌ಯುವಿ ಕಾರುಗಳಲ್ಲಿ ಜನಪ್ರಿಯವಾಗಿರುವ ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್ ಕಾರುಗಳಿಗೆ ಪ್ರತಿಸ್ಪರ್ಧಿಯಾಗಿ ಹೊಸ ಮಾದರಿಯ ಫುಲ್ ಸೈಜ್ ಎಸ್‌ಯುವಿ ಕಾರು ಮಾದರಿಯೊಂದನ್ನು ಅಭಿವೃದ್ದಿಪಡಿಸುತ್ತಿದೆ.

ಹೊಸ ಕಾರುಗಳ ಬಿಡುಗಡೆ ಕುರಿತಂತೆ ಈಗಾಗಲೇ ಖಚಿತಪಡಿಸಿರುವ ಜೀಪ್ ಮಾತೃಸಂಸ್ಥೆಯಾದ ಎಫ್‌ಸಿಎ ಕಂಪನಿಯ ಇಂಡಿಯಾ ವಿಭಾಗದ ಅಧ್ಯಕ್ಷ ಪಾರ್ಥ ದತ್ತು ಅವರು ಅಭಿವೃದ್ಧಿ ಪಥದಲ್ಲಿರುವ ಭಾರತದಲ್ಲಿ ಪ್ರೀಮಿಯಂ ಕಾರುಗಳ ಮಾರಾಟವು ತ್ವರಿತಗತಿಯಲ್ಲಿ ಬೆಳವಣಿಗೆ ಕಾಣುತ್ತಿರುವುದರಿಂದ ಗ್ರಾಹಕರ ಬೇಡಿಕೆಯೆಂತೆ ಕೆಲವು ಹೊಸ ಉತ್ಪನ್ನಗಳನ್ನು ಬಿಡುಗಡೆಗೊಳಿಸಲು ಇದು ಸೂಕ್ತ ಸಮಯ ಎಂದಿದ್ದಾರೆ.

ಆಟೋ ಕಂಪನಿಗಳ ಪ್ರಕಾರ ರೂ.10 ಲಕ್ಷ ಬೆಲೆಯೊಳಗಿನ ಕಾರುಗಳು ಸಾಕಷ್ಟು ಲಾಭದಾಯಕವಾಗಲಿದ್ದರೆ, ಪ್ರೀಮಿಯಂ ಕಾರುಗಳು ಬ್ರಾಂಡ್ ಮೌಲ್ಯವನ್ನು ಹೆಚ್ಚಿಸಲಿವೆ. ಹೀಗಾಗಿ ಎರಡು ಮಾದರಿಯಲ್ಲೂ ಕಾರುಗಳನ್ನು ಹೊರತರುತ್ತಿರುವ ಜೀಪ್ ಕಂಪನಿಯು ಈಗಾಗಲೇ ಹೊಸ ಕಾರುಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಜೀಪ್ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ರೂ.12 ಲಕ್ಷ ಬೆಲೆಯ ಅಂತರದಲ್ಲಿ ಬಿಡುಗಡೆಯಾಗಲಿದ್ದರೆ ಫುಲ್ ಸೈಜ್ ಎಸ್‌ಯುವಿ ಆವೃತ್ತಿಯು ರೂ.26 ಲಕ್ಷದಿಂದ ರೂ.30 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ಎಸ್‌ಯುವಿ ಕಾರು ಚೀನಿ ಮಾರುಕಟ್ಟೆಯಲ್ಲಿರುವ ಗ್ರ್ಯಾಂಡ್ ಕಮಾಂಡರ್ ಹೋಲಿಕೆ ಪಡೆದುಕೊಂಡಿದ್ದು, ಇದು ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಂಡ್ ಕಂಪಾಸ್ ಹೆಸರಿನೊಂದಿಗೆ ಬಿಡುಗಡೆಯಾಗುವ ಸಾಧ್ಯತೆಗಳಿವೆ.

ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಫಾರ್ಚೂನರ್, ಎಂಡೀವರ್ ಕಾರುಗಳಿಂತಲೂ ಉತ್ತಮ ಒಳಾಂಗಣದೊಂದಿಗೆ 7 ಸೀಟರ್ ಸೌಲಭ್ಯ ಹೊಂದಲಿರುವ ಹೊಸ ಕಾರು 167-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲ 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಪಡೆದುಕೊಳ್ಳಲಿದೆ.
MOST READ: ಲಾಕ್‌ಡೌನ್ ಸಂಕಷ್ಟ: ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಉದ್ಯಮ ಆರಂಭಿಸಿದ ಫೋಕ್ಸ್‌ವ್ಯಾಗನ್

ಹೊಸ ಕಾರು 2021ರ ಮಧ್ಯಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಹೊಸ ಕಾರುನ್ನು ಜೀಪ್ ಕಂಪನಿಯು ಡೀಸೆಲ್ ಎಂಜಿನ್‌ನಲ್ಲಿ ಮಾತ್ರವೇ ಬಿಡುಗಡೆ ಮಾಡಲಿದೆ ಎನ್ನಲಾಗಿದೆ.


Click it and Unblock the Notifications