ಜೀಪ್ ಕಂಪಾಸ್ ಎಸ್‍ಯುವಿಯ ಮೇಲೆ ರೂ.2 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಜೀಪ್ ಇಂಡಿಯಾ ಕಂಪನಿಯು ತನ್ನ ಬಿಎಸ್-6 ಕಂಪಾಸ್ ಎಸ್‍ಯುವಿಯ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿದೆ. ಜೀಪ್ ಕಂಪನಿಯು ಮಾರಾಟವನ್ನು ಹೆಚ್ಚಿಸಲು ತನ್ನ ಕಂಪಾಸ್ ಎಸ್‍ಯುವಿಯ ರೂಪಾಂತರವನ್ನು ಅವಲಂಬಿಸಿ ವರ್ಷಾಂತ್ಯದಲ್ಲಿ ರೂ.2.0 ಲಕ್ಷ ಗಳವರೆಗೆ ರಿಯಾಯಿತಿಯನ್ನು ನೀಡಿದೆ.

ಜೀಪ್ ಕಂಪಾಸ್ ಎಸ್‍ಯುವಿಯ ಮೇಲೆ ರೂ.2 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಪ್ರಸ್ತುತ ಭಾರತೀಯ ಮಾರುಕಟ್ಟೆಯಲ್ಲಿ ಜೀಪ್ ಕಂಪಾಸ್ ಸ್ಪೋರ್ಟ್ ಪ್ಲಸ್, ಲಾಂಗಿಟ್ಯೂಡ್, ಲಾಂಗಿಟ್ಯೂಡ್ ಪ್ಲಸ್, ಲಿಮಿಟೆಡ್ ಪ್ಲಸ್, ನೈಟ್ ಈಗಲ್ ಮತ್ತು ಹಾರ್ಡ್‌ಕೋರ್ ಟ್ರೈಲ್‌ಹಾಕ್. ಟ್ರೈಲ್‌ಹಾಕ್ ಎಂಬ ಆರು ರೂಪಾಂತರಗಳಲ್ಲಿ ಲಭ್ಯವಿದೆ. ಇದರಲ್ಲಿ ಟಾಪ್-ಸ್ಪೆಕ್ ಜೀಪ್ ಕಂಪಾಸ್ ಟ್ರೈಲ್‌ಹಾಕ್‌ಗೆ ರೂ,2.0 ಲಕ್ಷ ಗಳವರೆಗೆ ರಿಯಾಯಿತಿಯನ್ನು ಘೋಷಿಸಲಾಗಿದೆ. ಇದರಲ್ಲಿ ನಗದು ರಿಯಾಯಿತಿ, ವಿನಿಮಯ ಬೋನಸ್, ಲಾಯಲ್ಟಿ ಬೋನಸ್ ಮತ್ತು ಅಕ್ಸೆಸರೀಸ್ ಸೇರಿವೆ.

ಜೀಪ್ ಕಂಪಾಸ್ ಎಸ್‍ಯುವಿಯ ಮೇಲೆ ರೂ.2 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಇನ್ನು ಉಳಿದ ಐದು ರೂಪಾಂತರಗಳಿಗೆ ರೂ.1.5 ಲಕ್ಷಗಳರೆಗೆ ರಿಯಾಯಿತಿಯನ್ನು ನೀಡಲಾಗಿದೆ. ಈ ತಿಂಗಳಲ್ಲಿ ಜೀಪ್ ಕಂಪಾಸ್ ಎಸ್‍ಯುವಿ ಖರೀದಿಸುವ ಎಲ್ಲಾ ಗ್ರಾಹಕರಿಗೆ ಈ ರಿಯಾಯಿತಿಗಳು ಲಭ್ಯವಿರುತ್ತದೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಜೀಪ್ ಕಂಪಾಸ್ ಎಸ್‍ಯುವಿಯ ಮೇಲೆ ರೂ.2 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಈ ರಿಯಾಯಿತಿಗಳ ಜೊತೆಗೆ ಕಂಪನಿಯು ವಿವಿಧ ಹಣಕಾಸು ಯೋಜನೆಗಳನ್ನು ಸಹ ನೀಡುತ್ತಿದೆ. ಇದು ದೀರ್ಘಕಾಲೀನ ಸಾಲಗಳು, ಸ್ಟೆಪ್-ಅಪ್ ಇಎಂಐ ಯೋಜನೆ, ಕಡಿಮೆ ಡೌನ್ ಪಾವತಿ, ಆರು-ಸುಲಭ ಇಎಂಐ ಮತ್ತು ಹೆಚ್ಚಿನದನ್ನು ಒಳಗೊಂಡಿದೆ.

ಜೀಪ್ ಕಂಪಾಸ್ ಎಸ್‍ಯುವಿಯ ಮೇಲೆ ರೂ.2 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಎಫ್‌ಸಿಎ ಇಂಡಿಯಾ ಕಂಪನಿಯು 2016ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಜೀಪ್ ಬ್ರ್ಯಾಂಡ್ ಅನ್ನು ಪರಿಚಯಿಸಿತು. ಜೀಪ್ ಬ್ರ್ಯಾಂಡ್ ಭಾರತದಲ್ಲಿ ಆರಂಭದಲ್ಲಿ ರ‍್ಯಾಂಗ್ಲರ್ ಮತ್ತು ಗ್ರ್ಯಾಂಡ್ ಚೆರೋಕೀ ಮಾದರಿಗಳನ್ನು ಬಿಡುಗಡೆಗೊಳಿಸಿದರು.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಜೀಪ್ ಕಂಪಾಸ್ ಎಸ್‍ಯುವಿಯ ಮೇಲೆ ರೂ.2 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಜೀಪ್ ರ‍್ಯಾಂಗ್ಲರ್ ಮತ್ತು ಗ್ರ್ಯಾಂಡ್ ಚೆರೋಕೀ ಪ್ರೀಮಿಯಂ ಎಸ್‍ಯುವಿಗಳು ಭಾರತೀಯ ಮಾರುಕಟ್ಟೆಯಲ್ಲಿ ಗ್ರಾಹರನ್ನು ಸೆಳೆಯುವಲ್ಲಿ ಯಶ್ವಸಿಯಾಗಿಲ್ಲ. ನಂತರ 2017ರ ಜುಲೈನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಜೀಪ್ ಬ್ರ್ಯಾಂಡ್ ಕಂಪಾಸ್ ಎಸ್‍ಯುವಿಯನ್ನು ಪರಿಚಯಿಸಿದ್ದರು. ಜೀಪ್ ಕಂಪಾಸ್ ಎಸ್‍ಯುವಿ ಭಾರತೀಯ ಗ್ರಾಹಕರನ್ನು ಸೆಳೆಯುವಲ್ಲಿ ಯಶ್ವಸಿಯಾಗಿತ್ತು.

ಜೀಪ್ ಕಂಪಾಸ್ ಎಸ್‍ಯುವಿಯ ಮೇಲೆ ರೂ.2 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಆದರೆ ಇತ್ತೀಚೆಗೆ ಜೀಪ್ ಕಂಪಾಸ್ ಎಸ್‍ಯುವಿಯ ಮಾರಾಟದಲ್ಲಿ ಕುಸಿತವನ್ನು ಕಂಡಿದೆ. ಜೀಪ್ ಕಂಪಾಸ್ ಪೆಟ್ರೋಲ್ ಆವೃತ್ತಿಯು1.4 ಲೀಟರ್ ಟರ್ಬೊ ಎಂಜಿನ್ ಅನ್ನು ಹೊಂದಿದೆ. ಈ ಪೆಟ್ರೋಲ್ ಎಂಜಿನ್ 161 ಬಿ‍‍ಹೆಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಮ್ಯಾನುವಲ್ ಮತ್ತು 9 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಜೀಪ್ ಕಂಪಾಸ್ ಎಸ್‍ಯುವಿಯ ಮೇಲೆ ರೂ.2 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಜೀಪ್ ಕಂಪಾಸ್‍ನ ಲಾಂಗಿಟ್ಯೂಡ್ ಮತ್ತು ಲಿಮಿಟೆಡ್ ಪ್ಲಸ್ ರೂಪಾಂತದಲ್ಲಿ 2.0 ಲೀಟರ್ ಡೀಸೆಲ್ ಎಂಜಿನ್ ಹೊಂದಿದೆ. ಈ ಎಂಜಿನ್ 173 ಬಿ‍‍ಹೆಚ್‍‍ಪಿ ಪವರ್ ಮತ್ತು 350 ಎನ್‍ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಜೀಪ್ ಕಂಪಾಸ್ ಎಸ್‍ಯುವಿಯ ಮೇಲೆ ರೂ.2 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಎಂಜಿನ್‍‍ನೊಂದಿಗೆ ಆಟೋಮ್ಯಾಟಿಕ್ ಗೇರ್‍‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ ಆಲ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಹೊಸ ಎಂಜಿನ್ ಆಯ್ಕೆಯ ಹೊರತಾಗಿ ಜೀಪ್ ಕಂಪಾಸ್‍ನ ಲಾಂಗಿಟ್ಯೂಡ್ ಮತ್ತು ಲಿಮಿಟೆಡ್ ಪ್ಲಸ್ ಎರಡೂ ರೂಪಾಂತರಗಳು ಬಹುತೇಕ ಒಂದೇ ರೀತಿಯಲ್ಲಿವೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಜೀಪ್ ಕಂಪಾಸ್ ಎಸ್‍ಯುವಿಯ ಮೇಲೆ ರೂ.2 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಬಿಎಸ್-6 ಜೀಪ್ ಕಂಪಾಸ್ ಭಾರತದಲ್ಲಿ ಕಿಯಾ ಸೆಲ್ಟೋಸ್, ಎಂಜಿ ಹೆಕ್ಟರ್, ಟಾಟಾ ಹ್ಯಾರಿಯರ್ ಮತ್ತು ಮಹೀಂದ್ರಾ ಎಕ್ಸ್‌ಯುವಿ 500 ಎಸ್‍‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

ಜೀಪ್ ಕಂಪಾಸ್ ಎಸ್‍ಯುವಿಯ ಮೇಲೆ ರೂ.2 ಲಕ್ಷದವರೆಗೆ ಭರ್ಜರಿ ಡಿಸ್ಕೌಂಟ್

ಜೀಪ್ ಕಂಪನಿಯು ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಹಲವಾರು ಹೊಸ ಅಪ್ದೇಟ್ ಗಳೊಂದಿಗೆ ಭಾರತದಲ್ಲಿ ಬಿಡುಗಡೆಯಾಗಲಿದೆ.

Most Read Articles

Kannada
English summary
Jeep Compass December 2020 Offers & Discounts. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X