2021ಕ್ಕೆ ಜೀಪ್ ಕಂಪಾಸ್ 7 ಸೀಟರ್ ಎಸ್‌ಯುವಿ ಬಿಡುಗಡೆ ಖಚಿತ
ಜೀಪ್ ಇಂಡಿಯಾ ಕಂಪನಿಯು ಹೊಸ ಕಾರುಗಳ ಬಿಡುಗಡೆಗಾಗಿ ಬೃಹತ್ ಯೋಜನೆ ರೂಪಿಸುತ್ತಿದ್ದು, ಸಾಮಾನ್ಯ ಮಾದರಿಯ ಕಂಪಾಸ್ ಫೇಸ್‌ಲಿಫ್ಟ್ ಬಿಡುಗಡೆಯ ನಂತರ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಜೀಪ್ ಇಂಡಿಯಾ ಕಂಪನಿಯು ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಕಂಪಾಸ್ ಮತ್ತು ರ‍್ಯಾಂಗ್ಲರ್ ಆಫ್ ರೋಡ್ ಎಸ್‌ಯುವಿ ಆವೃತ್ತಿಯನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳ ಮಾರಾಟ ಆರಂಭಿಸುವ ಸಿದ್ದತೆಯಲ್ಲಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕಂಪಾಸ್ ಫೇಸ್‌ಲಿಫ್ಟ್ ಜೊತೆಗೆ ಹೊಸದಾಗಿ 7 ಸೀಟರ್ ಸೌಲಭ್ಯದ ಮಧ್ಯಮ ಕ್ರಮಾಂಕದ ಎಸ್‌ಯುವಿ ಮತ್ತು ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಬಿಡುಗಡೆ ಮಾಡುತ್ತಿದೆ.

ಕರೋನಾದಿಂದಾಗಿ ಉಂಟಾಗಿರುವ ಆರ್ಥಿಕ ಬಿಟ್ಟಕ್ಕಟಿನಿಂದಾಗಿ ಹೊಸ ಕಾರುಗಳ ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದ್ದ ಜೀಪ್ ಕಂಪನಿಯು 2021ರ ಆರಂಭದಲ್ಲಿ ಕಂಪಾಸ್ ಫೇಸ್‌ಲಿಫ್ಟ್‌ನೊಂದಿಗೆ ವಿವಿಧ ಕಾರು ಮಾದರಿಯನ್ನು ರಸ್ತೆಗಿಳಿಸುವ ಸುಳಿವು ನೀಡಿದೆ.

ಹೊಸ ಕಾರುಗಳ ಬಿಡುಗಡೆ ಕುರಿತಂತೆ ಈಗಾಗಲೇ ಮಾಧ್ಯಮ ಸಂವಾದದಲ್ಲಿ ಖಚಿತಪಡಿಸಿರುವ ಜೀಪ್ ಮಾತೃಸಂಸ್ಥೆ ಎಫ್‌ಸಿಎ ಕಂಪನಿಯ ಇಂಡಿಯಾ ವಿಭಾಗದ ಅಧ್ಯಕ್ಷ ಪಾರ್ಥ ದತ್ತು ಅವರು ಅಭಿವೃದ್ಧಿ ಪಥದಲ್ಲಿರುವ ಭಾರತದಲ್ಲಿ ಪ್ರೀಮಿಯಂ ಕಾರುಗಳ ಮಾರಾಟವು ತ್ವರಿತಗತಿಯಲ್ಲಿ ಬೆಳವಣಿಗೆ ಕಾಣುತ್ತಿರುವುದರಿಂದ ಗ್ರಾಹಕರ ಬೇಡಿಕೆಯೆಂತೆ ಕೆಲವು ಹೊಸ ಉತ್ಪನ್ನಗಳನ್ನು ಬಿಡುಗಡೆಗೊಳಿಸಲು ಇದು ಸೂಕ್ತ ಸಮಯ ಎಂದಿದ್ದಾರೆ.

ಆಟೋ ಕಂಪನಿಗಳ ಪ್ರಕಾರ ರೂ.10 ಲಕ್ಷದಿಂದ ರೂ.15 ಲಕ್ಷ ಬೆಲೆಯೊಳಗಿನ ಕಾರುಗಳು ಸಾಕಷ್ಟು ಲಾಭದಾಯಕವಾಗಲಿದ್ದರೆ, ಪ್ರೀಮಿಯಂ ಕಾರುಗಳು ಬ್ರಾಂಡ್ ಮೌಲ್ಯವನ್ನು ಹೆಚ್ಚಿಸಲಿವೆ. ಹೀಗಾಗಿ ಎರಡು ಮಾದರಿಯಲ್ಲೂ ಕಾರುಗಳನ್ನು ಹೊರತರುತ್ತಿರುವ ಜೀಪ್ ಕಂಪನಿಯು ಈಗಾಗಲೇ ಹೊಸ ಕಾರುಗಳ ತಾಂತ್ರಿಕ ಅಂಶಗಳ ಕುರುತು ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಜೀಪ್ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ರೂ.12 ಲಕ್ಷ ಬೆಲೆಯ ಅಂತರದಲ್ಲಿ ಬಿಡುಗಡೆಯಾಗಲಿದ್ದರೆ ಫುಲ್ ಸೈಜ್ ಎಸ್‌ಯುವಿ ಆವೃತ್ತಿಯು ರೂ.26 ಲಕ್ಷದಿಂದ ರೂ.30 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಫಾರ್ಚೂನರ್, ಎಂಡೀವರ್ ಕಾರುಗಳಿಂತಲೂ ಉತ್ತಮ ಒಳಾಂಗಣದೊಂದಿಗೆ 7 ಸೀಟರ್ ಸೌಲಭ್ಯ ಹೊಂದಲಿರುವ ಹೊಸ ಕಾರು 167-ಬಿಎಚ್‌ಪಿ ಮತ್ತು 350-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲ 2.0-ಲೀಟರ್ ಟರ್ಬೋ ಡೀಸೆಲ್ ಎಂಜಿನ್ ಪಡೆದುಕೊಳ್ಳಲಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೊಸ ಕಾರು ಗ್ರ್ಯಾಂಡ್ ಕಂಪಾಸ್ ಹೆಸರಿನಲ್ಲಿ 2021ರ ಮಧ್ಯಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಹೊಸ ಕಾರುನ್ನು ಜೀಪ್ ಕಂಪನಿಯು ಡೀಸೆಲ್ ಎಂಜಿನ್‌ನಲ್ಲಿ ಮಾತ್ರವೇ ಬಿಡುಗಡೆ ಮಾಡಲಿದೆ ಎನ್ನಲಾಗಿದೆ.


Click it and Unblock the Notifications