ಭಾರತದಲ್ಲಿ ಬದಲಿ ಹೆಸರಿನೊಂದಿಗೆ ಮಾರಾಟಗೊಳ್ಳಲಿದೆ ಜೀಪ್ 7 ಸೀಟರ್ ಗ್ರಾಂಡ್ ಕಂಪಾಸ್
ಜೀಪ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳ ಬಿಡುಗಡೆಗಾಗಿ ಬೃಹತ್ ಯೋಜನೆ ರೂಪಿಸುತ್ತಿದ್ದು, ಸಾಮಾನ್ಯ ಮಾದರಿಯ ಕಂಪಾಸ್ ಫೇಸ್‌ಲಿಫ್ಟ್ ಬಿಡುಗಡೆಯ ನಂತರ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಜೀಪ್ ಇಂಡಿಯಾ ಕಂಪನಿಯು ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಕಂಪಾಸ್ ಮತ್ತು ರ‍್ಯಾಂಗ್ಲರ್ ಆಫ್ ರೋಡ್ ಎಸ್‌ಯುವಿ ಆವೃತ್ತಿಯನ್ನು ಮಾತ್ರ ಮಾರಾಟ ಮಾಡುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರುಗಳ ಮಾರಾಟ ಆರಂಭಿಸುವ ಸಿದ್ದತೆಯಲ್ಲಿದೆ. ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಕಂಪಾಸ್ ಫೇಸ್‌ಲಿಫ್ಟ್ ಜೊತೆಗೆ ಹೊಸದಾಗಿ 7 ಸೀಟರ್ ಸೌಲಭ್ಯದ ಮಧ್ಯಮ ಕ್ರಮಾಂಕದ ಎಸ್‌ಯುವಿ ಮತ್ತು ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಬಿಡುಗಡೆ ಮಾಡುತ್ತಿದೆ.

ಕರೋನಾದಿಂದಾಗಿ ಉಂಟಾಗಿರುವ ಆರ್ಥಿಕ ಬಿಟ್ಟಕ್ಕಟಿನಿಂದಾಗಿ ಹೊಸ ಕಾರುಗಳ ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದ್ದ ಜೀಪ್ ಕಂಪನಿಯು 2021ರ ಆರಂಭದಲ್ಲಿ ಕಂಪಾಸ್ ಫೇಸ್‌ಲಿಫ್ಟ್‌ನೊಂದಿಗೆ ವಿವಿಧ ಕಾರು ಮಾದರಿಯನ್ನು ರಸ್ತೆಗಿಳಿಸುವ ಸುಳಿವು ನೀಡಿದೆ.

ಹೊಸ ಕಾರುಗಳ ಬಿಡುಗಡೆ ಕುರಿತಂತೆ ಈಗಾಗಲೇ ಮಾಧ್ಯಮ ಸಂವಾದದಲ್ಲಿ ಖಚಿತಪಡಿಸಿರುವ ಜೀಪ್ ಮಾತೃಸಂಸ್ಥೆ ಎಫ್‌ಸಿಎ ಕಂಪನಿಯ ಇಂಡಿಯಾ ವಿಭಾಗದ ಅಧ್ಯಕ್ಷ ಪಾರ್ಥ ದತ್ತು ಅವರು ಅಭಿವೃದ್ಧಿ ಪಥದಲ್ಲಿರುವ ಭಾರತದಲ್ಲಿ ಪ್ರೀಮಿಯಂ ಕಾರುಗಳ ಮಾರಾಟವು ತ್ವರಿತಗತಿಯಲ್ಲಿ ಬೆಳವಣಿಗೆ ಕಾಣುತ್ತಿರುವುದರಿಂದ ಗ್ರಾಹಕರ ಬೇಡಿಕೆಯೆಂತೆ ಕೆಲವು ಹೊಸ ಉತ್ಪನ್ನಗಳನ್ನು ಬಿಡುಗಡೆಗೊಳಿಸಲು ಇದು ಸೂಕ್ತ ಸಮಯ ಎಂದಿದ್ದಾರೆ.

ಆಟೋ ಕಂಪನಿಗಳ ಪ್ರಕಾರ ರೂ.10 ಲಕ್ಷದಿಂದ ರೂ.15 ಲಕ್ಷ ಬೆಲೆಯೊಳಗಿನ ಕಾರುಗಳು ಸಾಕಷ್ಟು ಲಾಭದಾಯಕವಾಗಲಿದ್ದರೆ, ಪ್ರೀಮಿಯಂ ಕಾರುಗಳು ಬ್ರಾಂಡ್ ಮೌಲ್ಯವನ್ನು ಹೆಚ್ಚಿಸುತ್ತವೆ ಎನ್ನುವ ಲೆಕ್ಕಾಚಾರವಿದೆ.

ಹೀಗಾಗಿ ಎರಡು ಮಾದರಿಯಲ್ಲೂ ಕಾರುಗಳನ್ನು ಹೊರತರುತ್ತಿರುವ ಜೀಪ್ ಇಂಡಿಯಾ ಕಂಪನಿಯು ಈಗಾಗಲೇ ಹೊಸ ಕಾರುಗಳ ತಾಂತ್ರಿಕ ಅಂಶಗಳ ಕುರುತು ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, 7 ಸೀಟರ್ ಎಸ್‌ಯುವಿ ಮಾದರಿಯು ಕಂಪಾಸ್ ಫೇಸ್‌ಲಿಫ್ಟ್ ಬಿಡುಗಡೆಯ ನಂತರ ಮಾರುಕಟ್ಟೆ ಪ್ರವೇಶಿಸಲಿದೆ.

ಹೊಸ ಕಾರು ವಿದೇಶಿ ಮಾರುಕಟ್ಟೆಯಲ್ಲಿರುವ ಗ್ರ್ಯಾಂಡ್ ಕಂಪಾಸ್ ಅಥವಾ ಗ್ರಾಂಡ್ ಕಮಾಂಡರ್ ಮಾದರಿಯಲ್ಲೇ ಬಿಡುಗಡೆಯಾಗುತ್ತಿದ್ದರೂ ಹೊಸ ಎಸ್‌ಯುವಿ ಕಾರಿಗೆ ಭಾರತದಲ್ಲಿ ಬದಲಿ ಹೆಸರಿನೊಂದಿಗೆ ಬಿಡುಗಡೆ ಮಾಡಲಾಗುತ್ತಿದೆ ಎನ್ನುವ ಮಾಹಿತಿಗಳಿದ್ದು, 2021ರ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಕಾರುನ್ನು ಜೀಪ್ ಕಂಪನಿಯು ಡೀಸೆಲ್ ಎಂಜಿನ್‌ನಲ್ಲಿ ಮಾತ್ರವೇ ಬಿಡುಗಡೆ ಮಾಡಲಿದೆ ಎನ್ನಲಾಗಿದ್ದು, 2.0-ಲೀಟರ್ ಸಾಮರ್ಥ್ಯದ ನಾಲ್ಕು ಸಿಲಿಂಡರ್ ಪ್ರೇರಣೆಯ ಮಲ್ಟಿಜೆಟ್ ಟರ್ಬೊ-ಡೀಸೆಲ್ ಎಂಜಿನ್ ಅನ್ನು ಹೊಂದಿರಲಿದೆ.

ಹೊಸ ಮಲ್ಟಿ ಜೆಟ್ ಟರ್ಬೊ ಡೀಸೆಲ್ ಮಾದರಿಯು ಗರಿಷ್ಠ 200-ಬಿಎಚ್‌ಪಿ ಉತ್ಪಾದನಾ ಗುಣಹೊಂದಿದ್ದು, ಎಂಜಿ ಗ್ಲೊಸ್ಟರ್, ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರು ಮಾದರಿಗಳಿಗೆ ಹೊಸ ಕಾರು ಪ್ರಬಲ ಪೈಪೋಟಿ ನೀಡಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಫುಲ್ ಸೈಜ್ ಎಸ್‌ಯುವಿ ಆವೃತ್ತಿಯಾಗಿರುವ ಜೀಪ್ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.26 ಲಕ್ಷದಿಂದ ರೂ.30 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಹೊಸ ಕಾರು ಫಾರ್ಚೂನರ್ ಮತ್ತು ಎಂಡೀವರ್ ಕಾರುಗಳಿಂತಲೂ ಹೆಚ್ಚಿನ ಮಟ್ಟದ ಸ್ಥಳಾವಕಾಶದೊಂದಿಗೆ 3 ಸಾಲಿನ ಪ್ರಯಾಣಿಕರಿಗೂ ಆರಾಮದಾಯಕ ಪ್ರಯಾಣ ಒದಗಿಸುತ್ತದೆ.


Click it and Unblock the Notifications








