Just In
- 51 min ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- 1 hr ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- 4 hrs ago ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
- 17 hrs ago ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಲು ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ
Don't Miss!
- News Air India: ಹಾರಾಟ ನಿಲ್ಲಿಸಿದ ಆಕಾಶದ ರಾಣಿ: ಐಶಾರಾಮಿ ವಿಮಾನದ ಬಗ್ಗೆ ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ
- Movies ಕಲರ್ಫುಲ್ ಲೈಟು.. ಡಿಂಪಲ್ ಸ್ಮೈಲು.. 'ಸಂಜು ವೆಡ್ಸ್ ಗೀತಾ 2' ಒಂದು ಹಾಡಿನ ಸೆಟ್ಟಿಗೆ ಬರೋಬ್ಬರಿ ₹50 ಲಕ್ಷ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಮುಂದುವರಿಕೆ: ಆನ್ಲೈನ್ ಕಾರು ಮಾರಾಟ ಆರಂಭಿಸಿದ ಜೀಪ್ ಇಂಡಿಯಾ
ಕರೋನಾ ವೈರಸ್ ಅಟ್ಟಹಾಸದಿಂದಾಗಿ ಇಡೀ ವಿಶ್ವವೇ ಆತಂಕದಲ್ಲಿದ್ದು, ವೈರಸ್ ಹತೋಟಿಗಾಗಿ ಎಲ್ಲಾ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರಿಂದ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ಆಟೋ ಉದ್ಯಮದಕ್ಕೂ ಕೂಡಾ ಭಾರೀ ಪ್ರಮಾಣದ ನಷ್ಟ ಉಂಟುಮಾಡುತ್ತಿದೆ.
ಸದ್ಯ ವೈರಸ್ ಹೊಡೆದೊಡಿಸಲು ವಿಧಿಸಲಾಗಿರುವ ಲಾಕ್ಡೌನ್ ಅನ್ನು ಪರಿಸ್ಥಿತಿಗೆ ಅನುಗುಣವಾಗಿ ತೆರವುಗೊಳಿಸಲಾಗುತ್ತಿದ್ದು, ಹಸಿರು ವಲಯದಲ್ಲಿನ ವಾಣಿಜ್ಯ ಚಟುವಟಿಕೆಗಳಿಗೆ ಷರತ್ತುಬದ್ದ ಅವಕಾಶ ನೀಡಲಾಗಿದೆ. ಇದರಿಂದ ಕೆಲವು ಸುರಕ್ಷಾ ಕ್ರಮಗಳೊಂದಿಗೆ ವಾಣಿಜ್ಯ ವ್ಯಾಪಾರವನ್ನು ಪುನಾರಂಭಿಸುತ್ತಿರುವ ಉದ್ಯಮ ಸಂಸ್ಥೆಗಳು ರೋಗ ಹರಡದಂತೆ ಸಾಕಷ್ಟು ಎಚ್ಚರಿಕೆ ವಹಿಸುತ್ತಿದ್ದು, ಜೀಪ್ ಇಂಡಿಯಾ ಕೂಡಾ ಕಾರು ಮಾರಾಟ ಪುನಾಂಭಿಸಲು ಆನ್ಲೈನ್ ಪ್ಲ್ಯಾಟ್ಫಾರ್ಮ್ ಶುರುಮಾಡಿದೆ.
ಕೇಂದ್ರ ಸರ್ಕಾರವು 3ನೇ ಹಂತದ ಲಾಕ್ಡೌನ್ ವಿಧಿಸುವುರೊಂದಿಗೆ ಹಸಿರು ವಲಯಗಳಿಗೆ ಹಲವು ವಿನಾಯ್ತಿಗಳನ್ನು ನೀಡಿದ್ದು, ರೆಡ್ ಅಲರ್ಟ್ ಪ್ರದೇಶಗಳಲ್ಲಿನ ವಾಣಿಜ್ಯ ಚಟುವಟಿಕೆಗಳಿಗೆ ಸಾಕಷ್ಟು ನಿರ್ಬಂಧಗಳನ್ನು ವಿಧಿಸಿದೆ.
MOST READ: ಲಾಕ್ಡೌನ್ ಎಫೆಕ್ಟ್- ವಿನಾಯ್ತಿ ಸಿಕ್ಕರೂ ವಾಹನ ಉತ್ಪಾದನೆಗೆ ಮುಂದಾಗದ ಆಟೋ ಕಂಪನಿಗಳು
ಹೀಗಾಗಿ ಮೇ 3ರ ನಂತರ ನೇರ ವಾಹನ ಮಾರಾಟವನ್ನು ಪುನಾರಂಭಿಸುವ ತವಕದಲ್ಲಿದ್ದ ಆಟೋ ಕಂಪನಿಗಳಿಗೆ ಇದು ಹಿನ್ನಡೆ ಉಂಟಾಗಿದ್ದು, ಗ್ರಾಹಕರ ಸುರಕ್ಷತೆಯ ದೃಷ್ಠಿಯಿಂದ ಆನ್ಲೈನ್ ವಹಿವಾಟು ಆರಂಭಿಸಿವೆ.
ಡಿಜಿಟಲ್ ಪ್ಲ್ಯಾಟ್ಫಾರ್ಮ್ ಮೂಲಕವೇ ಕಾರು ಮಾರಾಟ ಪ್ರಕ್ರಿಯೆಗಳನ್ನು ಕೈಗೊಳ್ಳಲಿರುವ ಜೀಪ್ ಇಂಡಿಯಾ ಕಂಪನಿಯು ಗ್ರಾಹಕರ ಮನೆ ಬಾಗಿಲಿಗೆ ಕಾರು ಉತ್ಪನ್ನಗಳನ್ನು ತಲುಪಿಸಲಿದ್ದು, ಈ ವೇಳೆ ಗರಿಷ್ಠ ಸುರಕ್ಷಾ ಕ್ರಮಗಳನ್ನು ತೆಗದುಕೊಳ್ಳಲಿದೆ.
MOST READ: ಲಾಕ್ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..
ಹೊಸ ಸುರಕ್ಷಾ ನಿಯಮದಡಿ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆಯೊಂದಿಗೆ ಉತ್ಪನ್ನಗಳನ್ನು ತಲುಪಿಸುವುದರ ಜೊತೆಗೆ ಉದ್ಯೋಗಿಗಳಿಗೂ ಗರಿಷ್ಠ ಸುರಕ್ಷತೆ ಒದಗಿಸಲಿರುವ ಜೀಪ್ ಕಂಪನಿಯು ಆರ್ಥಿಕ ಸಂಕಷ್ಟದಿಂದ ಹೊರಬರಲು ಹಲವಾರು ಹೊಸ ಯೋಜನೆಗಳನ್ನು ರೂಪಿಸಿದೆ.
ಇನ್ನು ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲೂ ಭಾಗಿಯಾಗಿರುವ ಜೀಪ್ ಇಂಡಿಯಾ ಕಂಪನಿಯು ವಿವಿಧ ಮಾದರಿಯ ವೈದ್ಯಕೀಯ ಉಪಕರಣಗಳನ್ನು ಅಗತ್ಯವಿರುವ ರಾಜ್ಯ ಸರ್ಕಾರಗಳಿಗೆ ಒದಗಿಸಿದ್ದು, ಗ್ರಾಹಕರಿಗೆ ಎರಡು ತಿಂಗಳ ಹೆಚ್ಚುವರಿ ವಾರಂಟಿಯನ್ನು ಘೋಷಣೆ ಮಾಡಿದೆ.
MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!
ಇದಲ್ಲದೆ ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡಿ ವಿವಿಧ ರಾಜ್ಯ ಸರ್ಕಾರಗಳಿಗೆ ವಿತರಣೆ ಮಾಡುತ್ತಿವೆ.
ಲಾಕ್ಡೌನ್ ವೇಳೆ ಆಟೋ ಉತ್ಪಾದನಾ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದ್ದರಿಂದ ವೈದ್ಯಕೀಯ ಉಪಕರಣಗಳ ಉತ್ಪಾದನೆ ಹೆಚ್ಚಿನ ಒತ್ತುನೀಡಿರುವ ಆಟೋ ಉತ್ಪಾದನಾ ಕಂಪನಿಗಳು ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್, ಪ್ರೋಟೆಕ್ವಿಟ್ ಕ್ಲಾಥ್, ರ್ಯಾಪಿಡ್ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಉತ್ಪಾದನೆ ಮಾಡುತ್ತಿವೆ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು
ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ವೈದ್ಯಕೀಯ ಉಪಕರಣಗಳ ಕೊರತೆಯು ಸೋಂಕಿತರ ಸಾವಿನ ಪ್ರಮಾಣ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ಸದ್ಯ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಗರಿಷ್ಠ ಸಹಾಯ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಕಾರಣವಾಗಿದೆ.