Just In
- 2 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 4 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 5 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 5 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies Puttakkana Makkalu: ಮಗಳ ಜೀವನ ಹಾಳಾಗುವ ಆತಂಕದಲ್ಲಿ ಪುಟ್ಟಕ್ಕ; ಬಂಗಾರಮ್ಮ ಬೇಸರ
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಎಫೆಕ್ಟ್- ಆನ್ಲೈನ್ ಮಾರಾಟ ಮಳಿಗೆ ತೆರೆದ ಜೀಪ್ ಇಂಡಿಯಾ
ಮಾಹಾಮಾರಿ ಕರೋನಾ ವೈರಸ್ ಅಟ್ಟಹಾಸದಿಂದಾಗಿ ಇಡೀ ವಿಶ್ವವೇ ಆತಂಕದಲ್ಲಿದ್ದು, ವೈರಸ್ ಹತೋಟಿಗಾಗಿ ಎಲ್ಲಾ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರಿಂದ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ಆಟೋ ಉದ್ಯಮದ ಮೇಲೂ ಭಾರೀ ಪರಿಣಾಮ ಬೀರಿದೆ.
ಸದ್ಯ ವೈರಸ್ ಹೊಡೆದೊಡಿಸಲು ಹಾಕಲಾಗಿರುವ ಲಾಕ್ಡೌನ್ ಅನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದ್ದು, ಹಸಿರು ವಲಯದಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಷರತ್ತುಬದ್ದ ಅವಕಾಶ ನೀಡಲಾಗುತ್ತಿದೆ. ಇದರಿಂದ ಕೆಲವು ಸುರಕ್ಷಾ ಕ್ರಮಗಳೊಂದಿಗೆ ವಾಣಿಜ್ಯ ವ್ಯಾಪಾರವನ್ನು ಪುನಾರಂಭಿಸುತ್ತಿರುವ ಉದ್ಯಮ ಸಂಸ್ಥೆಗಳು ಸೋಂಕು ಹರಡದಂತೆ ಸಾಕಷ್ಟು ಎಚ್ಚರಿಕೆ ವಹಿಸುತ್ತಿದ್ದು, ಜೀಪ್ ಇಂಡಿಯಾ ಕೂಡಾ ಹೊಸ ನಿಯಮ ಅನುಸಾರವಾಗಿ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಆನ್ಲೈನ್ ಕಾರು ಮಾರಾಟ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಡಿಜಿಟಲ್ ಪ್ಲ್ಯಾಟ್ಫಾರ್ಮ್ ಮೂಲಕವೇ ಕಾರು ಮಾರಾಟ ಪ್ರಕ್ರಿಯೆಗಳನ್ನು ಕೈಗೊಳ್ಳಲಿರುವ ಜೀಪ್ ಇಂಡಿಯಾ ಕಂಪನಿಯು ಗ್ರಾಹಕರ ಮನೆ ಬಾಗಿಲಿಗೆ ಹೊಸ ಕಾರು ಉತ್ಪನ್ನಗಳನ್ನು ತಲುಪಿಸಲಿದ್ದು, ಈ ವೇಳೆ ಗರಿಷ್ಠ ಸುರಕ್ಷಾ ಕ್ರಮಗಳನ್ನು ತೆಗದುಕೊಳ್ಳಲಿದೆ.
ಹೊಸ ಸುರಕ್ಷಾ ನಿಯಮದಡಿ ಗ್ರಾಹಕರಿಗೆ ಹೆಚ್ಚಿನ ಸುರಕ್ಷತೆಯೊಂದಿಗೆ ಉತ್ಪನ್ನಗಳನ್ನು ತಲುಪಿಸುವುದರ ಜೊತೆಗೆ ಉದ್ಯೋಗಿಗಳಿಗೂ ಗರಿಷ್ಠ ಸುರಕ್ಷತೆ ಒದಗಿಸಲಿರುವ ಜೀಪ್ ಕಂಪನಿಯು ಆರ್ಥಿಕ ಸಂಕಷ್ಟದಿಂದ ಹೊರಬರಲು ಹಲವಾರು ಹೊಸ ಯೋಜನೆಗಳನ್ನು ರೂಪಿಸುತ್ತಿದೆ.
MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು
ಇನ್ನು ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲೂ ಭಾಗಿಯಾಗಿರುವ ಜೀಪ್ ಕಂಪನಿಯು ತನ್ನ ಗ್ರಾಹಕರಿಗೆ ಹೆಚ್ಚುವರಿ ವಾರಂಟಿ ಅವಧಿಯನ್ನು ಘೋಷಣೆ ಮಾಡಿರುವುದಲ್ಲದೆ ಕಾರ್ಪೋರೆಟ್ ಸಾಮಾಜಿಕ ಹೊಣೆಗಾರಿಕೆಯ ನೀತಿ ಭಾರೀ ಪ್ರಮಾಣದ ದೇಣಿಗೆ ನೀಡಿ ಬದ್ದತೆ ತೊರಿದ್ದು, ಯುಎಸ್ಎನಲ್ಲಿ ವೆಂಟಿಲೆಟರ್ ಮತ್ತು ಅಗತ್ಯ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಸಹಕಾರಿಯಾಗಿದೆ.
ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯದ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡಿ ವಿವಿಧ ರಾಜ್ಯ ಸರ್ಕಾರಗಳಿಗೆ ವಿತರಣೆ ಮಾಡುತ್ತಿವೆ.
MOST READ: ಲಾಕ್ಡೌನ್ ಸಂಕಷ್ಟ- ಆಟೋ ಚಾಲಕರ ಬ್ಯಾಂಕ್ ಖಾತೆ ಸೇರಿದ ರೂ.5 ಸಾವಿರ ಪರಿಹಾರ..
ಆಟೋ ಉತ್ಪಾದನಾ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದ್ದರಿಂದ ವೈದ್ಯಕೀಯ ಉಪಕರಣಗಳ ಉತ್ಪಾದನೆ ಹೆಚ್ಚಿನ ಒತ್ತುನೀಡಿರುವ ಆಟೋ ಉತ್ಪಾದನಾ ಕಂಪನಿಗಳು ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್, ಪ್ರೋಟೆಕ್ವಿಟ್ ಕ್ಲಾಥ್, ರ್ಯಾಪಿಡ್ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಉತ್ಪಾದನೆ ಮಾಡುತ್ತಿವೆ.
ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ವೈದ್ಯಕೀಯ ಉಪಕರಣಗಳ ಕೊರತೆಯು ಸೋಂಕಿತರ ಸಾವಿನ ಪ್ರಮಾಣ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.
MOST READ: ಲಾಕ್ಡೌನ್ ವೇಳೆ ಕಾರು ಚಾಲನೆ ಮಾಡಿ ಸಿಕ್ಕಿಬಿದ್ದ ಮಹಿಳೆಯಿಂದ ಹೈಡ್ರಾಮಾ..
ಈ ಹಿನ್ನಲೆಯಲ್ಲಿ ಸದ್ಯ ವಾಹನಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಗರಿಷ್ಠ ಸಹಾಯ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಕಾರಣವಾಗಿದೆ.