ಭಾರತದಲ್ಲಿ ಬಿಡುಗಡೆಯಾಗಲಿದೆ ಜೀಪ್ 7 ಸೀಟರ್ ಗ್ರ್ಯಾಂಡ್ ಕಂಪಾಸ್

ಜೀಪ್ ಕಂಪನಿಯು ತನ್ನ ತನ್ನ 2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಅನಾವರಣಗೊಳಿಸಿತ್ತು. ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸ ಮತ್ತು ತಾಂತ್ರಿಕ ಅಂಶಗಳಲ್ಲಿ ಹಲವಾರು ನವೀಕರಣಗಳನ್ನು ನಡೆಸಿ ಅನಾವರಣಗೊಳಿಸಲಾಗಿತ್ತು.

ಭಾರತದಲ್ಲಿ ಬಿಡುಗಡೆಯಾಗಲಿದೆ ಜೀಪ್ 7 ಸೀಟರ್ ಗ್ರ್ಯಾಂಡ್ ಕಂಪಾಸ್

ಭಾರತದಲ್ಲಿ ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಕಂಪಾಸ್ ಫೇಸ್‌ಲಿಫ್ಟ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಿದೆ. ಇದರ ಬಳಿಕ 7 ಸೀಟರ್ ಗ್ರ್ಯಾಂಡ್ ಕಂಪಾಸ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಜೀಪ್ ಗ್ರ್ಯಾಂಡ್ ಕಂಪಾಸ್ 3 ಸಾಲಿನ 7 ಸೀಟುಗಳನ್ನು ಹೊಂದಿರುವ ಎಸ್‍ಯುವಿಯಾಗಿದೆ. ಸಾಮಾನ್ಯ ಕಂಪಾಸ್‌ಗೆ ಹೋಲಿಸಿದರೆ ಜೀಪ್ ಗ್ರ್ಯಾಂಡ್ ಕಂಪಾಸ್ ಮುಂದೆ ವ್ಹೀಲ್ ಬೇಸ್ ನೊಂದಿಗೆ ಬರುವ ನಿರೀಕ್ಷೆಯಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಜೀಪ್ 7 ಸೀಟರ್ ಗ್ರ್ಯಾಂಡ್ ಕಂಪಾಸ್

ಈ ಎಸ್‍ಯುವಿಯ ಸ್ಟೈಲಿಂಗ್ ಸಹ ಕಂಪಾಸ್ ಫೇಸ್‌ಲಿಫ್ಟ್ ಅನ್ನು ಆಧರಿಸಿರಬಹುದು. ಈ ಎಸ್‍ಯುವಿಯಲ್ಲಿ ನವೀಕರಿಸಿದ ಗ್ರಿಲ್, ಹೆಡ್‌ಲ್ಯಾಂಪ್ ಮತ್ತು ಬಂಪರ್ ಅನ್ನು ಹೊಂದಿದೆ. ಈ ಎಸ್‍ಯುವವಿಯ ದೊಡ್ಡ ಮೂರನೇ ವಿಂಡೋ ಮತ್ತು ಎಸ್-ಆಕಾರದ ಟ್ರಿಮ್ ಉದ್ದಕ್ಕೂ ರೂಫ್ ಅನ್ನು ಹೊಂದಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಭಾರತದಲ್ಲಿ ಬಿಡುಗಡೆಯಾಗಲಿದೆ ಜೀಪ್ 7 ಸೀಟರ್ ಗ್ರ್ಯಾಂಡ್ ಕಂಪಾಸ್

ಜೀಪ್ ಗ್ರ್ಯಾಂಡ್ ಕಂಪಾಸ್ 2.0-ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಇತ್ತೀಚೆಗೆ ಜೀಪ್ ಕಂಪಾಸ್ ಸರಣಿಯ ಸ್ಪೋರ್ಟ್ ರೂಪಾಂತರವನ್ನು ಸ್ಥಗಿತಗೊಳಿಸಲಾಗಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಜೀಪ್ 7 ಸೀಟರ್ ಗ್ರ್ಯಾಂಡ್ ಕಂಪಾಸ್

ಬಿಎಸ್-6 ಕಂಪಾಸ್ ಎರಡು ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಇದರಲ್ಲಿ 1.4-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 160 ಬಿಹೆಚ್‍ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಭಾರತದಲ್ಲಿ ಬಿಡುಗಡೆಯಾಗಲಿದೆ ಜೀಪ್ 7 ಸೀಟರ್ ಗ್ರ್ಯಾಂಡ್ ಕಂಪಾಸ್

ಇನ್ನು ಈ ಎಸ್‍ಯುವಿಯಲ್ಲಿ ಆಯಿಲ್ ಬರ್ನರ್ 2.0-ಲೀಟರ್ ಎಂಜಿನ್ ಅನ್ನು ಅಳವಡಿಸಿದ್ದಾರೆ. ಈ ಎಂಜಿನ್ 170 ಬಿಹೆಚ್‍ಪಿ ಪವರ್ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್ ಬಾಕ್ಸ್ ಮತ್ತು 7-ಸ್ಪೀಡ್ ಡ್ಯುಯಲ್-ಕ್ಲಚ್ ಅನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಜೀಪ್ 7 ಸೀಟರ್ ಗ್ರ್ಯಾಂಡ್ ಕಂಪಾಸ್

ಇನ್ನು ಇತ್ತೀಚೆಗೆ ಅನಾವರಣಗೊಳಿಸಿದ 2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‌ಯುವಿಯಲ್ಲಿ ಹೊಸ ಫೀಚರ್ ಗಳನ್ನು ಅಳವಡಿಸಲಾಗಿದೆ. ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದೆ. ಈ ಹೊಸ ಎಸ್‍ಯುವಿಯಲ್ಲಿ ಏಳು-ಸ್ಲ್ಯಾಟ್ ಗ್ರಿಲ್ ಅನ್ನು ಉಳಿಸಿಕೊಂಡು ಮುಂಭಾಗದಲ್ಲಿ ಹೊಸ ಹನಿಕಾಂಬ್ ಮೆಶ್ ಅನ್ನು ಒಳಗೊಂಡಿದೆ.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಭಾರತದಲ್ಲಿ ಬಿಡುಗಡೆಯಾಗಲಿದೆ ಜೀಪ್ 7 ಸೀಟರ್ ಗ್ರ್ಯಾಂಡ್ ಕಂಪಾಸ್

ಈ 2021ರ ಜೀಪ್ ಕಂಪಾಸ್‌ನಲ್ಲಿ ಹೊಸ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ. ಹೊಸದಾಗಿ 1.3-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಇನ್ನು ಹಳೆಯ 1.4-ಲೀಟರ್ ಅನ್ನು ಬದಲಾಯಿಸಲಾಗುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿದೆ ಜೀಪ್ 7 ಸೀಟರ್ ಗ್ರ್ಯಾಂಡ್ ಕಂಪಾಸ್

ಜೀಪ್ ಕಂಪಾಸ್ ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಜೀಪ್ 7 ಸೀಟರ್ ಗ್ರ್ಯಾಂಡ್ ಭಾರತೀಯ ಮಾರುಕಟ್ಟೆಯಲ್ಲಿ ಫೋಕ್ಸ್‌ವ್ಯಾಗನ್ ಟಿಗುವಾನ್ ಆಲ್‌ಸ್ಪೇಸ್, ಹ್ಯುಂಡೈ ಟಕ್ಸನ್, ಸ್ಕೋಡಾ ಕೊಡಿಯಾಕ್ ಮತ್ತು ಟೊಯೊಟಾ ಫಾರ್ಚೂನರ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.

Article Published On: Tuesday, June 16, 2020, 16:17 [IST]
English summary
Jeep Is Likely To Introduce The Seven-Seater Jeep After The Compass Facelift Launches In India. Read In Kananda.
Read more on ಜೀಪ್ jeep
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+