2022ಕ್ಕೆ ಬಿಡುಗಡೆಯಾಗಲಿದೆ ಜೀಪ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ
ಜೀಪ್ ಇಂಡಿಯಾ ಕಂಪನಿಯು ಹೊಸ ಯೋಜನೆಯೊಂದಿಗೆ ಮುಂಬರುವ ದಿನಗಳಲ್ಲಿ ಹಲವು ಹೊಸ ಕಾರುಗಳ ಬಿಡುಗಡೆಗೆ ಸಜ್ಜಾಗುತ್ತಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಬಿಡುಗಡೆಯಾಗಲಿರುವ ರೆನೆಗಡ್ ಕೂಡಾ ಪ್ರಮುಖ ಕಾರು ಮಾದರಿಯಾಗಿದೆ.

ಪ್ರೀಮಿಯಂ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಜೀಪ್ ಇಂಡಿಯಾ ಕಂಪನಿಯು ಕಂಪಾಸ್ ಎಸ್‌ಯುವಿ ಬಿಡುಗಡೆಯ ಯಶಸ್ವಿ ನಂತರ ಶೀಘ್ರದಲ್ಲೇ ಮತ್ತೆರಡು ಹೊಸ ಕಾರುಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಭಾರತೀಯ ಗ್ರಾಹಕರ ಬೇಡಿಕೆಯೆಂತೆ ಸಣ್ಣ ಗಾತ್ರದ ಎಸ್‌ಯುವಿ ಜೊತೆಗೆ ಡಿ ಸೆಗ್ಮೆಂಟ್‌ನಲ್ಲೂ ಹೊಸ ಮಾದರಿಯ ಎಸ್‌ಯುವಿಯೊಂದನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಹೊಸ ಕಾರುಗಳ ಬಿಡುಗಡೆ ಕುರಿತಂತೆ ಈಗಾಗಲೇ ಮಾತನಾಡಿರುವ ಜೀಪ್ ಮಾತೃಸಂಸ್ಥೆ ಎಫ್‌ಸಿಎ ಕಂಪನಿಯ ಇಂಡಿಯಾ ವಿಭಾಗದ ಅಧ್ಯಕ್ಷ ಪಾರ್ಥ ದತ್ತು ಅವರು, ಪ್ರೀಮಿಯಂ ಕಾರುಗಳ ಜೊತೆಗೆ ಮಧ್ಯಮ ಕ್ರಮಾಂಕದ ಕಾರುಗಳು ಕೂಡಾ ಭಾರತದಲ್ಲಿ ಬಿಡುಗಡೆಯಾಲಿವೆ ಎಂದಿದ್ದಾರೆ.

ಜೊತೆಗೆ ಅಭಿವೃದ್ಧಿ ಪಥದಲ್ಲಿರುವ ಭಾರತದಲ್ಲಿ ಪ್ರೀಮಿಯಂ ಕಾರುಗಳ ಮಾರಾಟವು ತ್ವರಿತಗತಿಯಲ್ಲಿ ಬೆಳವಣಿಗೆ ಕಾಣುತ್ತಿರುವುದರಿಂದ ಗ್ರಾಹಕರ ಬೇಡಿಕೆಯೆಂತೆ ಕೆಲವು ಹೊಸ ಉತ್ಪನ್ನಗಳನ್ನು ಬಿಡುಗಡೆಗೊಳಿಸಲು ಇದು ಸೂಕ್ತ ಸಮಯ ಎಂದಿದ್ದಾರೆ.

ಆಟೋಮೊಬೈಲ್ ತಜ್ಞರ ಪ್ರಕಾರ ರೂ.10 ಲಕ್ಷ ಬೆಲೆಯೊಳಗಿನ ಕಾರುಗಳು ಸಾಕಷ್ಟು ಲಾಭದಾಯಕವಾಗಲಿದ್ದರೆ, ಪ್ರೀಮಿಯಂ ಕಾರುಗಳು ಬ್ರಾಂಡ್ ಮೌಲ್ಯವನ್ನು ಹೆಚ್ಚಿಸಲಿವೆ. ಹೀಗಾಗಿ ಎರಡು ಮಾದರಿಯಲ್ಲೂ ಕಾರುಗಳನ್ನು ಹೊರತರಲು ಸಜ್ಜಾಗುತ್ತಿರುವ ಜೀಪ್ ಕಂಪನಿಯು ಶೀಘ್ರದಲ್ಲೇ ಹೊಸ ರೆನೆಗಡ್ ಮಾದರಿಯನ್ನು ಭಾರತದಲ್ಲಿ ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ.

ರೆನೆಗಡ್ ಕಾರು ಮಾದರಿಯ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಈಗಾಗಲೇ ಚಾಲನೆ ಕೂಡಾ ಸಿಕ್ಕಿದ್ದು, ಹೊಸ ಕಾರು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಮಾದರಿಯಲ್ಲೇ ಹಲವು ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.
MOST READ: ಜುಲೈ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಮಾಹಿತಿಗಳ ಪ್ರಕಾರ ಹೊಸ ಕಾರು ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಹೊಸ ಕಾರು ಬಿಡುಗಡೆಗೊಳಿಸುವ ಸಾಧ್ಯತೆಗಳಿದ್ದು, ಬಿಎಸ್-6 ಎಮಿಷನ್ ಜಾರಿ ನಂತರ ಹಲವು ಕಾರು ಕಂಪನಿಗಳು ವಿವಿಧ ಕಾರು ಮಾದರಿಗಳಲ್ಲಿ ಡೀಸೆಲ್ ಎಂಜಿನ್ ಮಾರಾಟವನ್ನೇ ಸ್ಥಗಿತಗೊಳಿಸಿವೆ.

ಸಬ್ ಫೋರ್ ಮೀಟರ್ ಕಾರು ಆವೃತ್ತಿಯಾಗಿರುವ ರೆನೆಗಡ್ ಕಾರು ಮಾದರಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿದ್ದು, 1.4-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ ಬಿಡುಗಡೆಯಾಗಬಹುದು ಎನ್ನಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಈ ಮೂಲಕ ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಎಸ್-ಕ್ರಾಸ್(ಬಿಡುಗಡೆಯಾಗಲಿರುವ ಪೆಟ್ರೋಲ್ ವರ್ಷನ್) ಕಾರು ಮಾದರಿಗಳಿಗೆ ಪೈಪೋಟಿ ನೀಡಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ರೂ. 12 ಲಕ್ಷದಿಂದ ರೂ.15 ಲಕ್ಷ ಬೆಲೆ ಅಂತರದಲ್ಲಿ 2021ರ ಅಂತ್ಯಕ್ಕೆ ಇಲ್ಲವೇ 2022ರ ಆರಂಭದಲ್ಲಿ ಮಾರುಕಟ್ಟೆಗೆ ಪ್ರವೇಶಿಸಲಿದೆ.


Click it and Unblock the Notifications