ಲಾಕ್‌ಡೌನ್ ಸಂಕಷ್ಟ: ಅಧಿಕೃತ ಶೋರೂಂನಲ್ಲೇ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಆರಂಭಿಸಿದ ಜೀಪ್

ಕರೋನಾ ವೈರಸ್ ಪರಿಣಾಮ ಹಲವಾರು ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಆಟೋ ಉದ್ಯಮವು ಕೂಡಾ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದೆ. ಲಾಕ್‌ಡೌನ್ ವಿನಾಯ್ತಿ ನಂತರ ಆಟೋ ಉತ್ಪಾದನಾ ಚಟುವಟಿಕೆಗಳಿಗೆ ಅವಕಾಶ ಸಿಕ್ಕಿದ್ದರೂ ಗ್ರಾಹಕರಿಲ್ಲದೆ ಬಹುತೇಕ ಕಾರು ಮಾರಾಟ ಕಂಪನಿಗಳು ಕದಮುಚ್ಚುವ ಸ್ಥಿತಿಗೆ ತಲುಪಿವೆ.

ಅಧಿಕೃತ ಶೋರೂಂನಲ್ಲೇ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಆರಂಭಿಸಿದ ಜೀಪ್

ಸದ್ಯ ಕರೋನಾ ವೈರಸ್ ಪರಿಣಾಮ ದೇಶದಲ್ಲಿ ಆಟೋ ಉದ್ಯಮವು ಮಂದಗತಿಯಲ್ಲಿ ಸಾಗಿದ್ದು, ಹೊಸ ವಾಹನ ಖರೀದಿ ಯೋಜನೆಯಲ್ಲಿದ್ದ ಹಲವು ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿಯತ್ತ ಮುಖ ಮಾಡುತ್ತಿದ್ದಾರೆ. ಈ ಅವಕಾಶವನ್ನು ಬಳಸಿಕೊಳ್ಳಲು ಮುಂದಾಗಿರುವ ಬಹುತೇಕ ಆಟೋ ಕಂಪನಿಗಳು ಹೊಸ ವಾಹನ ಮಾರಾಟದ ಜೊತೆ ತಮ್ಮದೇ ಬ್ರಾಂಡ್ ಕಾರುಗಳ ಸೆಕೆಂಡ್ ಹ್ಯಾಂಡ್ ಮಾದರಿಗಳನ್ನು ಮಾರಾಟ ಮಾಡುವ ಉದ್ಯಮಕ್ಕೆ ಚಾಲನೆ ನೀಡಿದ್ದು, ಜೀಪ್ ಇಂಡಿಯಾ ಕೂಡಾ ಅಧಿಕೃತ ಮಾರಾಟ ಮಳಿಗೆಗಳಲ್ಲೇ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಆರಂಭಿಸಿದೆ.

ಅಧಿಕೃತ ಶೋರೂಂನಲ್ಲೇ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಆರಂಭಿಸಿದ ಜೀಪ್

ಜೀಪ್ ಕಂಪನಿಯ ಸೆಕೆಂಡ್ ಕಾರು ಮಾರಾಟಕ್ಕಾಗಿ ಪ್ರತ್ಯೇಕ ವೆಬ್‌ಸೈಟ್ ತೆರೆಯಲಾಗಿದ್ದು, SELECTEDforYOU ವೆಬ್‌ತಾಣದಲ್ಲಿ ಸೆಕೆಂಡ್ ಕಾರು ಲಭ್ಯತೆ ಮತ್ತು ಬೆಲೆಗಳ ಕುರಿತಾಗಿ ನಿಖರ ಮಾಹಿತಿ ಪಡೆಯಬಹುದಾಗಿದೆ.

ಅಧಿಕೃತ ಶೋರೂಂನಲ್ಲೇ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಆರಂಭಿಸಿದ ಜೀಪ್

ಸೆಲೆಕ್ಟೆಡ್‌ಫಾರ್‌ಯು ವೆಬ್‌ಸೈಟ್‌ನಲ್ಲಿ ಜೀಪ್ ನಿರ್ಮಾಣದ ಬ್ರಾಂಡ್ ಕಾರುಗಳನ್ನು ಮಾತ್ರವೇ ಮಾರಾಟ ಮಾರಾಟಲಿದ್ದು, ಆಯ್ದ ಕಾರು ಮಾದರಿಗಳ ಮೇಲೆ ಕಂಪನಿಯು ಹೆಚ್ಚುವರಿ ವಾರಂಟಿಗಳೊಂದಿಗೆ ಮಾರಾಟ ಮಾಡುತ್ತಿದೆ.

ಅಧಿಕೃತ ಶೋರೂಂನಲ್ಲೇ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಆರಂಭಿಸಿದ ಜೀಪ್

ಜೀಪ್ ಕಂಪನಿಯು ಆಯ್ದ ಕಾರು ಮಾದರಿಗಳ ಖರೀದಿ ಮೇಲೆ 36 ತಿಂಗಳ ಹೆಚ್ಚುವರಿ ವಾರಂಟಿ ಇಲ್ಲವೇ 60 ಸಾವಿರ ಕಿ.ಮೀ ಮೇಲೆ ವಾರಂಟಿ ನೀಡುತ್ತಿದ್ದು, ಸೆಕೆಂಡ್ ಹ್ಯಾಂಡ್ ಕಾರು ಖರೀದಿಯಲ್ಲಾಗುವ ಮೋಸದ ವ್ಯವಹಾರಕ್ಕೆ ಬ್ರೇಕ್ ಹಾಕಲು ನುರಿತ ಸಿಬ್ಬಂದಿ ತಂಡದೊಂದಿಗೆ ಹೊಸ ಉದ್ಯಮ ವ್ಯವಹಾರಕ್ಕೆ ಚಾಲನೆ ನೀಡಿದೆ.

ಅಧಿಕೃತ ಶೋರೂಂನಲ್ಲೇ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಆರಂಭಿಸಿದ ಜೀಪ್

ಆಸಕ್ತ ಗ್ರಾಹಕರ ತಮ್ಮ ಇಷ್ಟದ ವಾಹನಗಳ ಖರೀದಿಗೂ ಮುನ್ನ ಟೆಸ್ಟ್ ಡ್ರೈವ್‌ಗೆ ವೆಬ್‌ಸೈಟ್ ಮೂಲಕವೇ ನೊಂದಣಿ ಮಾಡಿಕೊಳ್ಳಬಹುದಾಗಿದ್ದು, ಆಕರ್ಷಕ ಬೆಲೆಗಳಲ್ಲಿ ಬಳಕೆ ಮಾಡಿದ ಕಾರುಗಳನ್ನು ಮಾರಾಟ ಮಾಡಲಾಗುತ್ತಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಅಧಿಕೃತ ಶೋರೂಂನಲ್ಲೇ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಆರಂಭಿಸಿದ ಜೀಪ್

ಹಾಗೆಯೇ ಬಳಕೆ ಮಾಡಿದ ಜೀಪ್ ಕಾರುಗಳನ್ನು ಮರುಮಾರಾಟಕ್ಕೂ ಇದೊಂದು ಉತ್ತಮ ವೇದಿಕೆಯಾಗಿದ್ದು, ಕರೋನಾ ವೈರಸ್ ಪರಿಣಾಮ ಹೊಸ ವಾಹನಗಳ ಮಾರಾಟ ಪ್ರಮಾಣಕ್ಕಿಂತಲೂ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ಮತ್ತು ಖರೀದಿ ಪ್ರಮಾಣವು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.

ಅಧಿಕೃತ ಶೋರೂಂನಲ್ಲೇ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಆರಂಭಿಸಿದ ಜೀಪ್

ಕರೋನಾ ವೈರಸ್‌ ಪರಿಣಾಮ ಬಹುತೇಕ ಆಟೋ ಕಂಪನಿಗಳಿಗೆ ಭಾರೀ ನಷ್ಟ ಉಂಟಾಗುತ್ತಿದ್ದು , ಲಾಕ್‌ಡೌನ್ ವಿನಾಯ್ತಿ ನಂತರವೂ ಹೊಸ ವಾಹನಗಳ ಮಾರಾಟ ಪ್ರಮಾಣದಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸುತ್ತಿವೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಅಧಿಕೃತ ಶೋರೂಂನಲ್ಲೇ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಆರಂಭಿಸಿದ ಜೀಪ್

ಸದ್ಯ ವೈರಸ್ ಭೀತಿ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಮೇ ಅವಧಿಯಲ್ಲಿ ಕನಿಷ್ಠ ಪ್ರಮಾಣದ ವಾಹನ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ಬಹುತೇಕ ವಾಹನಗಳ ಮಾರಾಟದಲ್ಲಿ ಶೇ.70ರಿಂದ ಶೇ.97ರಷ್ಟು ಕುಸಿತ ಕಂಡುಬಂದಿದೆ. ಹೀಗಾಗಿ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿ ಮತ್ತು ಮಾರಾಟ ಪ್ರಮಾಣವು ತೀವ್ರಗತಿಯಲ್ಲಿ ಹೆಚ್ಚಲಿದೆ ಎನ್ನುವುದು ತಜ್ಞರ ಅಭಿಪ್ರಾಯವಾಗಿದೆ.

Most Read Articles

Kannada
Read more on ಜೀಪ್ jeep
English summary
FCA Launches SELECTEDforYOU Pre-Owned Car Business: Offers New & Used Jeep Compass Against Exchange. Read in Kannada.
Story first published: Friday, June 19, 2020, 18:38 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X