ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಟೀಸರ್ ಬಿಡುಗಡೆ

ಅಮೆರಿಕ ಮೂಲದ ವಾಹನ ತಯಾರಕ ಕಂಪನಿಯಾದ ಜೀಪ್ ತನ್ನ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಹೊಸ ಟೀಸರ್ ಅನ್ನು ಬಿಡುಗಡೆಗೊಳಿಸಿದ್ದಾರೆ. ಈ ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು 2020ರ ಗುವಾಂಗಝು ಅಂತರರಾಷ್ಟ್ರೀಯ ಮೋಟಾರ್ ಶೋನಲ್ಲಿ ಅನಾವರಣಗೊಳಿಸಲಿದೆ.

ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಟೀಸರ್ ಬಿಡುಗಡೆ

2021ರ ಜೀಪ್ ಕಂಪಾಸ್ ಮುಂಭಾಗದ ವಿನ್ಯಾಸದಲ್ಲಿ ಕೆಲವು ನವೀಕರಣಗಳನ್ನು ನಡೆಸಿದ್ದಾರೆ. 2021ರ ಕಂಪಾಸ್ ಫೇಸ್‌ಲಿಫ್ಟ್ ಎಸ್‌ಯುವಿಯಲ್ಲಿ ಹೊಸ ಫೀಚರ್ ಗಳನ್ನು ಅಳವಡಿಸಲಾಗಿದೆ. ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುದಾದರೆ ಕೆಲವು ಸೂಕ್ಷ್ಮ ನವೀಕರಣಗಳನ್ನು ಪಡೆದುಕೊಂಡಿದೆ. ಈ ಹೊಸ ಎಸ್‍ಯುವಿಯಲ್ಲಿ ಏಳು-ಸ್ಲ್ಯಾಟ್ ಗ್ರಿಲ್ ಅನ್ನು ಉಳಿಸಿಕೊಂಡು ಮುಂಭಾಗದಲ್ಲಿ ಹೊಸ ಹನಿಕಾಂಬ್ ಮೆಶ್ ಅನ್ನು ಒಳಗೊಂಡಿದೆ.

ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಟೀಸರ್ ಬಿಡುಗಡೆ

ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಹೊಸ ವಿನ್ಯಾಸದ ಮಲ್ಟಿ-ಸ್ಪೋಕ್ ಬ್ಲ್ಯಾಕ್ ಅಲಾಯ್ ವ್ಹೀಲ್ ಅನ್ನು ಹೊಂದಿದೆ. ಅಲ್ಲದೇ ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಆಕರ್ಷಕ ಲುಕ್ ಅನ್ನು ಹೊಂದಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಟೀಸರ್ ಬಿಡುಗಡೆ

ಈ ಹೊಸ ಎಸ್‍ಯುವಿಯ ಇತರ ನವೀಕರಣಗಳಲ್ಲಿ ಇಂಟಿಗ್ರೇಟೆಡ್ ಎಲ್ಇಡಿ ಡಿಆರ್‌ಎಲ್‌ ಗಳೊಂದಿಗೆ ಹೆಡ್ ಲ್ಯಾಂಪ್, ಫಾಗ್ ಲ್ಯಾಂಪ್ ಗಳಿಗಾಗಿ ನವೀಕರಿಸಿದ ಫ್ರಂಟ್ ಬಂಪರ್ ಮತ್ತು ಹಿಂಭಾಗದಲ್ಲಿ ಟೇಲ್ ಲೈಟ್ ಅನ್ನು ಅಳವಡಿಸಲಾಗಿದೆ.

ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಟೀಸರ್ ಬಿಡುಗಡೆ

ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದಲ್ಲಿ ಸೂಕ್ಷ್ಮ ನವೀಕರಣಗಳು ಮತ್ತು ಬದಲಾವಣೆಗಳನ್ನು ಒಳಗೊಂಡಿದೆ. 2021 ಜೀಪ್ ಕಂಪಾಸ್‌ನ ಕ್ಯಾಬಿನ್ ಮೊದಲಿಗಿಂತ ಹೆಚ್ಚು ಪ್ರೀಮಿಯಂ ಆಗಿದೆ.ಎಸ್‍ಯುವಿಯ ಒಳಭಾಗದಲ್ಲಿ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಟೀಸರ್ ಬಿಡುಗಡೆ

ಹೊಸ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಒಳಭಾಗದ ಫೀಚರುಗಳ ಮಾಹಿತಿ ಬಹಿರಂಗವಾಗಿದೆ. ಈ ಹೊಸ ಎಸ್‍ಯುವಿಯಲ್ಲಿ ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಹೊಂದಾಣಿಕೆಯೊಂದಿಗೆ 10.1-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಯುಕನೆಕ್ಟ್ 5 ತಂತ್ರಜ್ಞಾನವನ್ನು ಅಳವಡಿಸಿದೆ.

ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಟೀಸರ್ ಬಿಡುಗಡೆ

2021ರ ಜೀಪ್ ಕಂಪಾಸ್‌ನಲ್ಲಿ ಹೊಸ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ. ಹೊಸದಾಗಿ 1.4 ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಇದರೊಂದಿಗೆ 2.0 ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ಅಳವಡಿಸಲಾಗಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಟೀಸರ್ ಬಿಡುಗಡೆ

ಇದರಲ್ಲಿ 1.4 ಲೀಟರ್ ಟರ್ಬೊ-ಪೆಟ್ರೋಲ್ 160 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಿದರೆ, 2.0 ಲೀಟರ್ ಡೀಸೆಲ್ ಎಂಜಿನ್ 173 ಬಿಹೆಚ್‌ಪಿ ಮತ್ತು 350 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಟೀಸರ್ ಬಿಡುಗಡೆ

2021ರ ಜೀಪ್ ಕಂಪಾಸ್‌ನಲ್ಲಿ ಸುರಕ್ಷತೆಗಾಗಿ ಪಾರ್ಕಿಂಗ್ ಅಸಿಸ್ಟ್, ಗೈಡ್‌ಲೈನ್ ಮತ್ತು ಸೆನ್ಸರ್‌ಗಳನ್ನು ಹೊಂದಿರುವ ರೇರ್ ಕ್ಯಾಮೆರಾ, ಎಬಿಡಿ, ಇಬಿಡಿ, ಇಎಸ್‌ಸಿ, ಹಿಲ್ ಸ್ಟಾರ್ಟ್ ಅಸಿಸ್ಟ್, ಹಿಲ್ ಡಿಸೆಂಟ್ ಕಂಟ್ರೋಲ್ ಮತ್ತು ಮಲ್ಟಿಪಲ್ ಏರ್‌ಬ್ಯಾಗ್‌ಗಳನ್ನು ಒಳಗೊಂಡಿರುತ್ತದೆ

ಹೊಸ ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಎಸ್‍ಯುವಿಯ ಟೀಸರ್ ಬಿಡುಗಡೆ

ಜೀಪ್ ಕಂಪಾಸ್ ಫೇಸ್‌ಲಿಫ್ಟ್ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಫೋಕ್ಸ್‌ವ್ಯಾಗನ್ ಟಿ-ರೋಕ್, ಸ್ಕೋಡಾ ಕರೋಕ್, ನಿಸ್ಸಾನ್ ಕಿಕ್ಸ್, ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

More from DriveSpark

Article Published On: Friday, November 20, 2020, 9:43 [IST]
English summary
2021 Jeep Compass Facelift Exterior, Interior Previewed. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+