ಜುಲೈ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರೆನಾಲ್ಟ್

ಫ್ರೆಂಚ್ ವಾಹನ ತಯಾರಕ ಕಂಪನಿಯಾದ ರೆನಾಲ್ಟ್ ತನ್ನ 2020ರ ಜುಲೈ ತಿಂಗಳ ಮಾರಾಟ ವರದಿಯನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ, ಜನಪ್ರಿಯ ರೆನಾಲ್ಟ್ ಕಂಪನಿಯು ಕಳೆದ ತಿಂಗಳು ಶೇ.75 ರಷ್ಟು ಬೆಳವಣಿಗೆಯನ್ನು ಕಂಡಿದೆ.

ಜುಲೈ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರೆನಾಲ್ಟ್

ರೆನಾಲ್ಟ್ ಕಂಪನಿಯು ಕಳೆದ ತಿಂಗಳಲ್ಲಿ ಒಟ್ಟು 6,422 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ಜುಲೈ ತಿಂಗಳಲ್ಲಿ 3660 ಯುನಿಟ್‌ಗಳು ಮಾರಾಟವಾಗಿತ್ತು. ಕಳೆದ ವರ್ಷದ ಜುಲೈ ತಿಂಗಳ ಮಾರಾಟಕ್ಕೆ ಹೊಲಿಸಿದರೆ ರೆನಾಲ್ಟ್ ಕಂಪನಿಯ ಮಾರಾಟವು ಈ ವರ್ಷದ ಜುಲೈ ತಿಂಗಳ ಮಾರಾಟವು ಶೇ.75.5 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ ಎಂದು ಪ್ರಕಟಿಸಿದೆ. ಕ್ವಿಡ್ ಕಾರಿನ ಹೊಸ ರೂಪಾಂತರವು ಮಾರಾಟವನ್ನು ಹೆಚ್ಚಿಸಲು ರೆನಾಲ್ಟ್ ಕಂಪನಿಯ ಮಾರಟವನ್ನು ಹೆಚ್ಚಿಸಲು ಸಹಾಯವಾಯ್ತು.

ಜುಲೈ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರೆನಾಲ್ಟ್

ಎಂಟ್ರಿ ಲೆವಲ್ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಕ್ವಿಡ್ ಹ್ಯಾಚ್‌ಬ್ಯಾಕ್ ರೆನಾಲ್ಟ್ ಕಾರು ಮಾರಾಟದಲ್ಲಿ ಅಗ್ರಸ್ಥಾನದಲ್ಲಿದೆ. ಕ್ವಿಡ್ ಕಾರು ಮಾರಾಟ ಆರಂಭವಾದ ನಂತರ ಇದುವರೆಗೆ ಭಾರತೀಯ ಮಾರುಕಟ್ಟೆಯಲ್ಲಿ 3.50 ಲಕ್ಷ ಮಾರಾಟವಾಗಿದೆ.

MOST READ: ಭಾರತಕ್ಕೆ ಲಗ್ಗೆ ಇಡಲಿದೆ ಹೊಸ ಹೋಂಡಾ ಹೆಚ್‌ಆರ್-ವಿ ಎಸ್‍ಯುವಿ

ಜುಲೈ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರೆನಾಲ್ಟ್

ಇನ್ನು ರೆನಾಲ್ಟ್ ಕಂಪನಿಯ ಇನ್ನೊಂದು ಜನಪ್ರಿಯ ಆವೃತ್ತಿಯಾದ ಟ್ರೈಬರ್ ಕೂಡ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡ ಬಳಿಕ ಇದುವರೆಗೆ 35,000 ಕ್ಕೂ ಹೆಚ್ಚು ಯುನಿಟ್‌ಗಳನ್ನು ಮಾರಾಟ ಮಾಡಿದೆ.

ಜುಲೈ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರೆನಾಲ್ಟ್

ರೆನಾಲ್ಟ್ ತನ್ನ ಹೊಸ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಹೊಸ ರೆನಾಲ್ಟ್ ಡಸ್ಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಪ್ರದರ್ಶಿಸಿದ್ದರು.

MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಜುಲೈ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರೆನಾಲ್ಟ್

ಈ ಹೊಸ ರೆನಾಲ್ಟ್ ಡಸ್ಟರ್ ಆವೃತ್ತಿಯಲ್ಲಿ 1.3-ಲೀಟರ್ ನಾಲ್ಕು ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ. ಈ ಎಂಜಿನ್ 153 ಬಿಹೆಚ್‌ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಫೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದರೊಂದಿಗೆ ಸಿವಿಟಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿರುತ್ತದೆ.

ಜುಲೈ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರೆನಾಲ್ಟ್

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ರೆನಾಲ್ಟ್ ಡಸ್ಟರ್ ಆವೃತ್ತಿಯಲ್ಲಿ 1.5-ಲೀಟರ್ ಪೆಟ್ರೋಲ್ ಎಂಜಿನ್‌ ಅನ್ನು ಹೊಂದಿದೆ. ಈ ಎಂಜಿನ್ 104 ಬಿಹೆಚ್‌ಪಿ ಪವರ್ ಮತ್ತು 142 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಜುಲೈ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರೆನಾಲ್ಟ್

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಡಸ್ಟರ್ 1.3 ಟರ್ಬೊ-ಪೆಟ್ರೋಲ್ ಆವೃತ್ತಿಯ ವಿನ್ಯಾಸದಲ್ಲಿ ಯಾವುದೇ ಹೆಚ್ಚಿನ ಬದಲಾವಣೆಗಳಿರುವುದಿಲ್ಲ. ಹೆಚ್ಚು ಕಡಿಮೆ ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಡಸ್ಟರ್ ಮಾದರಿಯ ವಿನ್ಯಾಸವನ್ನು ಹೊಂದಿರುತ್ತದೆ.

ಜುಲೈ ತಿಂಗಳ ಕಾರು ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ರೆನಾಲ್ಟ್

ಇನ್ನು ರೆನಾಲ್ಟ್ ಕಂಪನಿಯು ತನ್ನ ಕಿಗರ್ ಮಾದರಿಯನ್ನು ಕೂಡ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ರೆನಾಲ್ಟ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೆಳವೆಣೆಯನ್ನು ಸಾಧಿಸಿದೆ. ಇನ್ನು ಹೊಸ ಮಾದರಿಗಳನ್ನು ಬಿಡುಗಡೆಗೊಳಿಸಿದ ಬಳಿಕ ಭಾರತೀಯ ಮಾರುಕಟ್ಟೆಯಲ್ಲಿ ರೆನಾಲ್ಟ್ ಮತ್ತಷ್ಟು ಬೆಳವಣೆಗೆಯನ್ನು ಸಾಧಿಸಬಹುದು.

Most Read Articles

Kannada
English summary
Car Sales July 2020: Renault Registers Growth Of 75.5%. Read In Kannada.
Story first published: Saturday, August 1, 2020, 19:53 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X