ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಕರೋನಾ ವೈರಸ್‌ನಿಂದಾಗಿ ಬಹುತೇಕ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಸಾರಿಗೆ ಸಂಪರ್ಕ ವ್ಯವಸ್ಥೆಯು ಸ್ತಬ್ಧವಾಗಿದೆ. ಇದರಿಂದ ಟ್ಯಾಕ್ಸಿ ಮತ್ತು ಆಟೋ ಚಾಲಕರು ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ಕರ್ನಾಟಕ ಸರ್ಕಾರವು ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದೆ.

ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ವೈರಸ್ ತಡೆಯಲು ಕೇಂದ್ರ ಸರ್ಕಾರವು ದೇಶಾದ್ಯಂತ ಕಳೆದ ಒಂದೂವರೆ ತಿಂಗಳಿನಿಂದ ಲಾಕ್‌ಡೌನ್ ಅನ್ನು ಮುಂದುವರಿಸಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಇದೀಗ ಕೆಲವು ವಿನಾಯ್ತಿಗಳೊಂದಿಗೆ ವಾಣಿಜ್ಯ ಚಟುವಟಿಕೆಗೆ ಅವಕಾಶ ನೀಡಿದೆ. ಹೀಗಿದ್ದರೂ ಆಟೋ ಮತ್ತು ಟ್ಯಾಕ್ಸಿ ಸೇವೆಗಳ ಮೇಲೆ ನಿರ್ಬಂಧವನ್ನು ಮುಂದುವರಿಸಲಾಗಿದ್ದು, ಯಾವುದೇ ರೀತಿಯ ಆದಾಯವಿಲ್ಲದೆ ಬಹುತೇಕ ಆಟೋ ಮತ್ತು ಟ್ಯಾಕ್ಸಿ ಚಾಲಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಕರ್ನಾಟಕವು ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಅಡಿ ತಲಾ ರೂ. 5 ಸಾವಿರ ಧನಸಹಾಯವನ್ನು ಘೋಷಿಸಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ಇದು ಸಹಕಾರಿಯಾಗಲಿದೆ.

ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಕುರಿತು ವಿಧಾನಸೌಧದಲ್ಲಿ ಸುದ್ದಿಗೊಷ್ಠಿ ನಡೆಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು, ಸಂಕಷ್ಟದಲ್ಲಿರುವ ಜನತೆಗೆ ರೂ.1,610 ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.

MOST READ: ಲಾಕ್‌ಡೌನ್ ನಡುವೆಯೂ ಮದುವೆಯಾಗಲು 100 ಕಿ.ಮೀ ಸೈಕಲ್ ತುಳಿದ ಭೂಪ..!

ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ರೂ.1,1610 ಕೋಟಿ ವಿಶೇಷ ಪ್ಯಾಕೇಜ್‌ನಲ್ಲಿ ಸಮಾಜ ವಿವಿಧ ಸ್ತರಗಳಲ್ಲಿ ಸಂಕಷ್ಟಕ್ಕಿಡಾಗಿರುವ ಜನತೆ ಆರ್ಥಿಕ ಸಹಾಯ ದೊರೆಯಲಿದ್ದು, ಸುಮಾರು 7.75 ಲಕ್ಷ ನೋಂದಾಯಿತ ಟ್ಯಾಕ್ಸಿ ಮತ್ತು ಆಟೋ ಚಾಲಕರು ಸಹ ವಿಶೇಷ ಪ್ಯಾಕೇಜ್ ಅಡಿ ಹಣಕಾಸು ನೆರವು ಪಡೆದುಕೊಳ್ಳಲಿದ್ದಾರೆ.

ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಜೊತೆಗೆ ವಿಶೇಷ ಪ್ಯಾಕೇಜ್ ಘೋಷಣೆಯ ನಂತರ ಉದ್ಯೋಗ ಅವಕಾಶಗಳ ಹೆಚ್ಚಿಸುವ ಕುರಿತು ಮಾತನಾಡಿದ ಸಿಎಂ ಬಿಎಸ್‌ವೈ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯವನ್ನು ಉತ್ತೇಜಿಸುವ ಕೆಲವು ಮಹತ್ವದ ತೀರ್ಮಾನಗಳನ್ನು ಪ್ರಕಟಿಸಲಾಗಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಮಾಹಾಮಾರಿ ಕರೋನಾ ವೈರಸ್ ಹೊಡೆದೊಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆಗೆದುಕೊಂಡ ಕೆಲವು ಕಠಿಣ ನಿರ್ಧಾರಗಳಿಂದಾಗಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿಸಿದ್ದು, ಸಂಕಷ್ಟದ ನಡುವೆಯೂ ಇದೀಗ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿರುವುದು ಸ್ವಾಗತಾರ್ಹ.

ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಇನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ಹಣಕಾಸಿನ ನೆರವು ಹರಿದುಬಂದಿದ್ದು, ಆಟೋ ಉತ್ಪಾದನಾ ಕಂಪನಿಗಳು ಕೂಡಾ ಧನಸಹಾಯದ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡುತ್ತಿವೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಲಾಕ್‌ಡೌನ್ ವೇಳೆ ಆಟೋ ಉತ್ಪಾದನಾ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದ್ದರಿಂದ ವೈದ್ಯಕೀಯ ಉಪಕರಣಗಳ ಉತ್ಪಾದನೆ ಹೆಚ್ಚಿನ ಒತ್ತುನೀಡಿರುವ ಆಟೋ ಉತ್ಪಾದನಾ ಕಂಪನಿಗಳು ಸರ್ಕಾರದ ಸೂಚನೆ ಮೇರೆಗೆ ಮಾಸ್ಕ್, ಹ್ಯಾಂಡ್ ಸ್ಯಾನಿಟೈಜರ್, ಪ್ರೋಟೆಕ್ವಿಟ್ ಕ್ಲಾಥ್, ರ‍್ಯಾಪಿಡ್ ಟೆಸ್ಟಿಂಗ್ ಕಿಟ್, ವೆಂಟಿಲೇಟರ್ ಉತ್ಪಾದನೆ ಮಾಡಿ ಕರೋನಾ ವೈರಸ್ ವಿರುದ್ದದ ಹೋರಾಟದಲ್ಲಿ ವಿಶೇಷ ಪಾತ್ರ ವಹಿಸುತ್ತಿವೆ.

Most Read Articles

Kannada
English summary
Karnataka CM Yediyurappa Announces Rs 1610 Crore Relief Package To Auto & Taxi Drivers. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X